ಯೆರೆಮೀಯ 7:9 - ಪರಿಶುದ್ದ ಬೈಬಲ್9 ನೀವು ಕದಿಯುವುದಿಲ್ಲವೇ? ಕೊಲೆಗಳನ್ನು ಮಾಡುವುದಿಲ್ಲವೇ? ನೀವು ವ್ಯಭಿಚಾರ ಮಾಡುವುದಿಲ್ಲವೇ? ನೀವು ಅನ್ಯರ ಮೇಲೆ ಸುಳ್ಳು ದೋಷಾರೋಪಣೆ ಮಾಡುವುದಿಲ್ಲವೇ? ನೀವು ಸುಳ್ಳುದೇವರಾದ ಬಾಳನನ್ನು ಪೂಜಿಸಿ ಅನ್ಯದೇವರುಗಳ ಅನುಯಾಯಿಗಳಾಗಿಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀವು ಕಳ್ಳತನ, ಕೊಲೆ ಮತ್ತು ವ್ಯಭಿಚಾರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ, ಬಾಳನಿಗೆ ಹೋಮವನ್ನರ್ಪಿಸಿ, ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಕಳವು, ಕೊಲೆ, ವ್ಯಭಿಚಾರಗಳನ್ನು ಮಾಡುತ್ತೀರಿ. ಸುಳ್ಳುಸಾಕ್ಷಿ ಹೇಳುತ್ತೀರಿ. ಬಾಳನಿಗೆ ಧೂಪಾರತಿ ಎತ್ತುತ್ತೀರಿ. ಕಂಡು ಕೇಳದ ಅನ್ಯದೇವತೆಗಳನ್ನು ಆರಾಧಿಸುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀವು ಕಳವು ಕೊಲೆ ಹಾದರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ ಬಾಳನಿಗೆ ಹೋಮವನ್ನರ್ಪಿಸಿ ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ ‘ಕಳ್ಳತನ, ಹತ್ಯೆ, ವ್ಯಭಿಚಾರಗಳನ್ನು ನೀವು ನಡೆಸುವಿರೋ? ಸುಳ್ಳು ಪ್ರಮಾಣವನ್ನು ಮಾಡಿ, ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿ, ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ಬಾಬಿಲೋನಿನ ಸೈನ್ಯವು ಈಗಾಗಲೇ ಜೆರುಸಲೇಮ್ ನಗರದ ಮೇಲೆ ಧಾಳಿ ಮಾಡುತ್ತಿದೆ. ಸೈನಿಕರು ಬೇಗನೆ ನಗರವನ್ನು ಪ್ರವೇಶಿಸಿ ಅದಕ್ಕೆ ಬೆಂಕಿಹಚ್ಚಿ ಸುಟ್ಟುಹಾಕುವರು. ಜೆರುಸಲೇಮಿನ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರಾದ ಬಾಳನಿಗೆ ನೈವೇದ್ಯವನ್ನು ಅರ್ಪಿಸಿ ನಾನು ಕೋಪಿಸಿಕೊಳ್ಳುವಂತೆ ಮಾಡಿದ ಕೆಲವು ಮನೆಗಳು ಈ ನಗರದಲ್ಲಿವೆ. ಅದಲ್ಲದೆ ಕೆಲವು ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸಿರುವರು. ಬಾಬಿಲೋನಿನ ಸೈನ್ಯವು ಆ ಮನೆಗಳನ್ನು ಸುಟ್ಟುಹಾಕುವುದು.
ಯೆಹೂದದ ಜನರು ನನ್ನ ಅನುಸರಣೆಯನ್ನು ಬಿಟ್ಟಿದ್ದರಿಂದ ನಾನು ಹೀಗೆ ಮಾಡುವೆನು. ಇದನ್ನು ಅವರು ಅನ್ಯದೇವರುಗಳ ಸ್ಥಳವನ್ನಾಗಿ ಮಾಡಿದ್ದಾರೆ. ಯೆಹೂದದ ಜನರು ಈ ಸ್ಥಳದಲ್ಲಿ ಅನ್ಯದೇವರುಗಳಿಗಾಗಿ ಧೂಪವನ್ನು ಹಾಕಿದ್ದಾರೆ. ಬಹಳ ಹಿಂದೆ ಈ ಜನರು ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಅವರ ಹಿರಿಯರೂ ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಇವುಗಳು ಅನ್ಯದೇಶದ ಹೊಸ ದೇವರುಗಳು. ಯೆಹೂದದ ರಾಜರು ಈ ಸ್ಥಳವನ್ನು ಮುಗ್ಧಮಕ್ಕಳ ರಕ್ತದಿಂದ ತುಂಬಿದರು.
ನೀವು ವಿಗ್ರಹಗಳನ್ನು ಮಾಡಿ ನನ್ನನ್ನು ಏಕೆ ಸಿಟ್ಟಿಗೆಬ್ಬಿಸುವಿರಿ? ಈಗ ನೀವು ಈಜಿಪ್ಟಿನಲ್ಲಿ ವಾಸಮಾಡುತ್ತಿರುವಿರಿ. ಈಗ ಈಜಿಪ್ಟಿನ ಸುಳ್ಳುದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿ ನನಗೆ ಕೋಪ ಬರುವಂತೆ ಮಾಡುತ್ತಿರುವಿರಿ. ನೀವೇ ನಿಮ್ಮನ್ನು ನಾಶಮಾಡಿಕೊಳ್ಳುವಿರಿ. ಅದು ನಿಮ್ಮ ತಪ್ಪೇ ಆಗುವುದು. ಬೇರೆ ಜನಾಂಗದವರು ನಿಂದಿಸುವಂತೆ ನಿಮ್ಮನ್ನು ನೀವು ಮಾಡಿಕೊಳ್ಳುತ್ತಿದ್ದೀರಿ. ಭೂಮಂಡಲದ ಎಲ್ಲಾ ಜನಾಂಗಗಳು ನಿಮ್ಮನ್ನು ತಮಾಷೆ ಮಾಡುವಂತಾಗುವುದು.
ದೇವರು ಹೇಳಿದ್ದೇನೆಂದರೆ, “ಇಸ್ರೇಲ್ ಜನರು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಆದ್ದರಿಂದ ನೀನು ಹೋಗಿ ಅವರಿಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಿಮ್ಮ ಪೂರ್ವಿಕರು ಮಾಡಿದಂತೆಯೇ ನೀವು ನಿಮ್ಮನ್ನು ಅಪವಿತ್ರರನ್ನಾಗಿ ಮಾಡಿಕೊಳ್ಳುತ್ತಿದ್ದೀರಿ. ನೀವು ಸೂಳೆಯರ ಹಾಗೆ ವರ್ತಿಸಿರುತ್ತೀರಿ. ನಿಮ್ಮ ಪೂರ್ವಿಕರು ಪೂಜಿಸಿದ ಆ ಭಯಂಕರವಾದ ವಿಗ್ರಹಗಳೊಂದಿಗೆ ಇರುವದಕ್ಕಾಗಿ ನನ್ನನ್ನು ನೀವು ತೊರೆದುಬಿಟ್ಟಿರಿ.