ಯೆರೆಮೀಯ 8:1 - ಪರಿಶುದ್ದ ಬೈಬಲ್1 ಯೆಹೋವನು ಹೀಗೆನ್ನುತ್ತಾನೆ: “ಆಗ ಜನರು ಯೆಹೂದದ ರಾಜರ ಮತ್ತು ಪ್ರಮುಖ ಅಧಿಪತಿಗಳ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಯಾಜಕರ ಮತ್ತು ಪ್ರವಾದಿಗಳ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಜೆರುಸಲೇಮಿನ ಎಲ್ಲಾ ಜನರ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಹೀಗೆನ್ನುತ್ತಾನೆ, “ಆ ಕಾಲದಲ್ಲಿ ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಯೆರೂಸಲೇಮಿನ ನಿವಾಸಿಗಳು, ಇವರೆಲ್ಲರ ಎಲುಬುಗಳನ್ನು ಸಮಾಧಿಗಳೊಳಗಿಂದ ತೆಗೆದುಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಆ ಕಾಲ ಬಂದಾಗ ಜುದೇಯದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ಹಾಗು ಜೆರುಸಲೇಮಿನ ನಿವಾಸಿಗಳು ಇವರೆಲ್ಲರ ಎಲುಬುಗಳನ್ನು ಗೋರಿಯಿಂದ ಅಗೆದು ತೆಗೆದುಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ಹೀಗನ್ನುತ್ತಾನೆ - ಆ ಕಾಲದಲ್ಲಿ ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಯೆರೂಸಲೇವಿುನ ನಿವಾಸಿಗಳು, ಇವರೆಲ್ಲರ ಎಲುಬುಗಳನ್ನು ಗೋರಿಗಳೊಳಗಿಂದ ತೆಗೆದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ ‘ಯೆಹೋವ ದೇವರು ಹೇಳುವುದೇನೆಂದರೆ, ಆ ಕಾಲದಲ್ಲಿ ಅವರು ಯೆಹೂದದ ಅರಸರ ಎಲುಬುಗಳನ್ನೂ, ಅದರ ಪ್ರಧಾನರ ಎಲುಬುಗಳನ್ನೂ, ಯಾಜಕರ ಎಲುಬುಗಳನ್ನೂ, ಪ್ರವಾದಿಗಳ ಎಲುಬುಗಳನ್ನೂ, ಯೆರೂಸಲೇಮಿನ ನಿವಾಸಿಗಳ ಎಲುಬುಗಳನ್ನೂ ಅವರ ಸಮಾಧಿಗಳೊಳಗಿಂದ ಹೊರಗೆ ತರುವರು. ಅಧ್ಯಾಯವನ್ನು ನೋಡಿ |
ಯೋಷೀಯನು ಸುತ್ತಲೂ ನೋಡಿದಾಗ ಬೆಟ್ಟದ ಮೇಲಿದ್ದ ಸ್ಮಶಾನಗಳನ್ನು ಕಂಡನು. ಅವನು ಜನರನ್ನು ಕಳುಹಿಸಿ ಆ ಸ್ಮಶಾನಗಳಿಂದ ಎಲುಬುಗಳನ್ನು ತರಿಸಿ ಆ ಎಲುಬುಗಳನ್ನು ಯಜ್ಞವೇದಿಕೆಯ ಮೇಲೆ ಸುಟ್ಟನು. ಈ ರೀತಿಯಲ್ಲಿ, ಯೋಷೀಯನು ಯಜ್ಞವೇದಿಕೆಯನ್ನು ಹೊಲಸು ಮಾಡಿದನು. ಇದು ಪ್ರವಾದಿಯು ಘೋಷಿಸಿದ್ದ ಯೆಹೋವನ ಸಂದೇಶದಂತೆ ಸಂಭವಿಸಿತು. ಯಾರೊಬ್ಬಾಮನು ಯಜ್ಞವೇದಿಕೆಯ ಪಕ್ಕದಲ್ಲಿ ನಿಂತಿದ್ದಾಗ ಪ್ರವಾದಿಯು ಈ ಸಂಗತಿಗಳನ್ನು ಪ್ರಕಟಿಸಿದ್ದನು. ನಂತರ ಯೋಷೀಯನು ಸುತ್ತಲೂ ನೋಡಿದಾಗ, ದೇವಮನುಷ್ಯನ ಸಮಾಧಿಯನ್ನು ಕಂಡನು.
ಯಜ್ಞವೇದಿಕೆಯ ವಿರುದ್ಧ ಮಾತನಾಡುವಂತೆ ಆ ದೇವಮನುಷ್ಯನಿಗೆ ಯೆಹೋವನು ಆಜ್ಞಾಪಿಸಿದನು. ಆಗ ಅವನು ಹೇಳಿದ್ದೇನೆಂದರೆ: “ಯಜ್ಞವೇದಿಕೆಯೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ: ‘ದಾವೀದನ ವಂಶದಲ್ಲಿ ಯೋಷೀಯನೆಂಬ ಮಗನು ಹುಟ್ಟುವನು. ಈಗ ಈ ಪೂಜಾಸ್ಥಳಗಳಲ್ಲಿ ಧೂಪಸುಡುತ್ತಿರುವ ಈ ಯಾಜಕರನ್ನು ಅವನು ಹಿಡಿದು ಅವರನ್ನು ನಿನ್ನ ಮೇಲೆಯೇ ಕೊಲ್ಲುವನು; ಈಗ ನಿನ್ನ ಮೇಲೆ ಧೂಪಸುಡುತ್ತಿರುವ ಯಾಜಕರನ್ನು ಅವನು ಹಿಡಿದು ಅವರ ಮೂಳೆಗಳನ್ನು ನಿನ್ನ ಮೇಲೆ ಸುಡುವನು.’”