14 “ನಾವು ಇಲ್ಲಿ ಸುಮ್ಮನೆ ಕುಳಿತುಕೊಂಡಿರುವುದೇಕೆ? ಬನ್ನಿ, ನಾವು ಭದ್ರವಾದ ಪಟ್ಟಣಗಳಿಗೆ ಓಡಿಹೋಗೋಣ. ನಮ್ಮ ದೇವರಾದ ಯೆಹೋವನು ನಮ್ಮನ್ನು ಸಾಯುವಂತೆ ಮಾಡಿದರೆ ಅಲ್ಲಿಯೇ ಸತ್ತುಹೋಗೋಣ. ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ. ಆದ್ದರಿಂದ ಆತನು ನಮಗೆ ಕುಡಿಯಲು ವಿಷಮಿಶ್ರಿತ ನೀರನ್ನು ಕೊಟ್ಟಿದ್ದಾನೆ.
14 ಆ ಕಾಲದಲ್ಲಿ ಜನರು, “ಸುಮ್ಮನೆ ಕುಳಿತಿರುವುದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ. ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.
14 ಜನರು : “ನಾವು ಸುಮ್ಮನೆ ಕುಳಿತಿರುವುದೇಕೆ? ಕೂಡಿಬನ್ನಿ, ಕೋಟೆಕೊತ್ತಲುಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ. ಅಲ್ಲೆ ನಾಶವಾಗೋಣ. ನಮ್ಮ ದೇವರಾದ ಸರ್ವೇಶ್ವರನಿಗೆ ನಾವು ಪಾಪಮಾಡಿದ್ದರಿಂದ ಅವರು ನಮ್ಮನ್ನು ನಾಶಕ್ಕೆ ಗುರಿಮಾಡಿದ್ದಾರೆ. ವಿಷಬೆರೆತ ನೀರನ್ನು ಕುಡಿಯಲು ಕೊಟ್ಟಿದ್ದಾರೆ.
14 [ಆ ಕಾಲದಲ್ಲಿ ಜನರು ಹೀಗನ್ನುವರು - ] ಸುಮ್ಮನೆ ಕೂತಿರುವದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ; ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.
14 ನಾವು ಏಕೆ ಸುಮ್ಮನೆ ಕೂತುಕೊಳ್ಳುತ್ತೇವೆ? ನೀವು ಕೂಡಿಕೊಳ್ಳಿರಿ, ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ನಾಶವಾಗೋಣ. ಏಕೆಂದರೆ, ನಾವು ನಮ್ಮ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ ಕಾರಣ, ನಮ್ಮ ದೇವರಾದ ಯೆಹೋವ ದೇವರು ನಮ್ಮನ್ನು ನಾಶಮಾಡಿ, ನಮಗೆ ವಿಷದ ನೀರನ್ನು ಕುಡಿಯಲು ಕೊಟ್ಟಿದ್ದಾರೆ.
ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಬಗ್ಗೆ ಹೀಗೆನ್ನುತ್ತಾನೆ, “ನಾನು ಆ ಪ್ರವಾದಿಗಳನ್ನು ದಂಡಿಸುವೆನು. ಆ ಶಿಕ್ಷೆಯು ವಿಷಪೂರಿತ ಆಹಾರದಂತೆಯೂ ನೀರಿನಂತೆಯೂ ಇರುವುದು. ಪ್ರವಾದಿಗಳು ಒಂದು ಆಧ್ಯಾತ್ಮಿಕ ವ್ಯಾಧಿಯನ್ನು ಪ್ರಾರಂಭಿಸಿದರು. ಆ ವ್ಯಾಧಿಯು ಇಡೀ ದೇಶದಲ್ಲೆಲ್ಲ ಪ್ರಸರಿಸಿತು. ಆದ್ದರಿಂದ ನಾನು ಆ ಪ್ರವಾದಿಗಳನ್ನು ಶಿಕ್ಷಿಸುತ್ತೇನೆ. ಆ ವ್ಯಾಧಿಯು ಆ ಪ್ರವಾದಿಗಳಿಂದ ಜೆರುಸಲೇಮಿಗೆ ಬಂದಿತು.”
ಇಸ್ರೇಲಿನ ದೇವರಾದ ಸರ್ವಶಕ್ತನಾದ ಯೆಹೋವನ ಸಂದೇಶವಿದು: “ಯೆಹೂದದ ಜನರು ಕಹಿಯಾದ ಆಹಾರವನ್ನು ತಿನ್ನುವಂತೆ ನಾನು ಬೇಗನೆ ಮಾಡುವೆನು; ಅವರು ವಿಷಮಿಶ್ರಿತ ನೀರನ್ನು ಕುಡಿಯುವಂತೆ ಮಾಡುವೆನು.
ಆದರೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶದ ಮೇಲೆ ಧಾಳಿ ಮಾಡಿದಾಗ ನಾವು ಜೆರುಸಲೇಮ್ ನಗರದಲ್ಲಿ ಪ್ರವೇಶ ಮಾಡಿ ಹೀಗೆ ಮಾತನಾಡಿಕೊಂಡೆವು, ‘ಬನ್ನಿ, ನಾವು ಬಾಬಿಲೋನಿನ ಸೈನ್ಯದಿಂದ ಮತ್ತು ಅರಾಮ್ಯರ ಸೈನ್ಯದಿಂದ ತಪ್ಪಿಸಿಕೊಳ್ಳುವದಕ್ಕಾಗಿ ಜೆರುಸಲೇಮ್ ನಗರವನ್ನು ಪ್ರವೇಶಿಸೋಣ.’ ಹೀಗಾಗಿ ನಾವು ಜೆರುಸಲೇಮ್ ನಗರದಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದರು.
ಗೊಲ್ಗೊಥಾದಲ್ಲಿ ಸೈನಿಕರು ಆತನಿಗೆ ಕುಡಿಯಲು ದ್ರಾಕ್ಷಾರಸವನ್ನು ಕೊಟ್ಟರು. ಈ ದ್ರಾಕ್ಷಾರಸಕ್ಕೆ ನೋವು ನಿವಾರಕ ಔಷಧಿಯನ್ನು ಬೆರೆಸಿದ್ದರು. ಆತನು ದ್ರಾಕ್ಷಾರಸದ ರುಚಿ ನೋಡಿ ಅದನ್ನು ಕುಡಿಯಲಿಲ್ಲ.
ದಾವೀದನು ಅಬೀಷೈಯನಿಗೆ, “ಬಿಕ್ರೀಯ ಮಗನಾದ ಶೆಬನು ಅಬ್ಷಾಲೋಮನಿಗಿಂತ ನಮಗೆ ಹೆಚ್ಚು ಅಪಾಯಕಾರಿಯಾಗಿದ್ದಾನೆ. ಆದ್ದರಿಂದ ನನ್ನ ಸೇವಕರನ್ನು ಕರೆದುಕೊಂಡು, ಶೆಬನನ್ನು ಅಟ್ಟಿಸಿಕೊಂಡು ಹೋಗು. ಶೆಬನು ಕೋಟೆಗಳಿರುವ ನಗರಗಳಲ್ಲಿ ಸೇರಿಕೊಳ್ಳುವುದಕ್ಕಿಂತ ಮುಂಚೆಯೇ ತ್ವರಿತವಾಗಿ ಹೋಗು. ಶೆಬನು ಕೋಟೆಗಳಿರುವ ನಗರಗಳಲ್ಲಿ ಸೇರಿಕೊಂಡರೆ, ಅವನು ನಮ್ಮಿಂದ ತಪ್ಪಿಸಿಕೊಂಡು ಬಿಡುತ್ತಾನೆ” ಎಂದು ಹೇಳಿದನು.
ಇಲ್ಲಿರುವ ಯಾವ ಪುರುಷನಾಗಲಿ ಸ್ತ್ರೀಯಾಗಲಿ ಯಾವ ಗೋತ್ರದವರಾಗಲಿ ನಿಮ್ಮ ದೇವರಾದ ಯೆಹೋವನನ್ನು ಬಿಟ್ಟುಹೋಗದಂತೆ ನೋಡಿಕೊಳ್ಳಿರಿ. ಯಾವನೂ ಹೋಗಿ ಬೇರೆ ಜನಾಂಗಗಳ ದೇವರುಗಳ ಸೇವೆಮಾಡಬಾರದು. ಅಂಥದ್ದನ್ನು ಮಾಡುವ ಜನರು ಕಹಿಯಾದ ಮತ್ತು ವಿಷಭರಿತವಾದ ಹಣ್ಣನ್ನು ಬಿಡುವ ಗಿಡದಂತಿದ್ದಾರೆ.
ಒಬ್ಬ ವ್ಯಕ್ತಿಯು ಸತ್ತಾಗ ಅವನ ಸಂಬಂಧಿಕರಲ್ಲಿ ಒಬ್ಬನು ಬಂದು ಶವವನ್ನು ಸುಡಲು ತೆಗೆದುಕೊಂಡು ಹೋಗುವನು. ಸಂಬಂಧಿಕನು ಬಂದು ಎಲುಬುಗಳನ್ನು ಕೊಂಡೊಯ್ಯುವನು. ಮನೆಯೊಳಗೆ ಅವಿತುಕೊಂಡಿರುವವರನ್ನು ಕರೆಯುವನು. “ಇನ್ನೂ ಸತ್ತ ಹೆಣಗಳು ಒಳಗಿವೆಯೋ?” ಎಂದು ವಿಚಾರಿಸುವನು. ಒಳಗಿದ್ದವರು “ಇಲ್ಲ” ಎಂದು ಉತ್ತರಿಸುವರು. ಆಗ ಆ ಸಂಬಂಧಿಕನು ಅವರನ್ನು ತಡೆದು, “ಯೆಹೋವನ ನಾಮವನ್ನು ನಾವು ಉಚ್ಚರಿಸಬಾರದು” ಎಂದು ಹೇಳುವನು.
ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳುವುದೇನೆಂದರೆ, ‘ನನ್ನ ಬಳಿಗೆ ಬರುವ ಯಾಜಕರು ನನ್ನನ್ನು ಗೌರವಿಸಬೇಕು. ಯಾಕೆಂದರೆ ನಾನು ಅವರ ಮೂಲಕ ಜನರಿಗೆ ಪ್ರಕಟಿಸಿಕೊಳ್ಳುವೆನು. ನಾನು ಪರಿಶುದ್ಧನೆಂದು ಅವರು ಮತ್ತು ಎಲ್ಲಾ ಜನರು ತಿಳಿದುಕೊಂಡು ನನ್ನನ್ನು ಘನಪಡಿಸಬೇಕು’” ಎಂದು ಹೇಳಿದನು. ಆದ್ದರಿಂದ ಆರೋನನು ತನ್ನ ಪುತ್ರರು ಸತ್ತಿದ್ದರ ಬಗ್ಗೆ ಏನೂ ಹೇಳದೆ ಸುಮ್ಮನಿದ್ದನು.
ನಾವು ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ. ನಮ್ಮ ನಾಚಿಕೆಯು ಕಂಬಳಿಯು ಹೊದಿಸಿದಂತೆ ನಮ್ಮನ್ನು ಮುಚ್ಚಿಬಿಡಲಿ. ನಾವು ನಮ್ಮ ದೇವರಾದ ಯೆಹೋವನ ವಿಷಯದಲ್ಲಿ ಪಾಪಮಾಡಿದ್ದೇವೆ. ನಾವು ಮತ್ತು ನಮ್ಮ ಪೂರ್ವಿಕರು ಪಾಪಮಾಡಿದ್ದೇವೆ. ನಮ್ಮ ಬಾಲ್ಯದಿಂದ ಇಂದಿನವರೆಗೆ ನಾವು ನಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸಲಿಲ್ಲ’” ಎಂದು ಮೊರೆಯಿಟ್ಟರು.
“ಯೆಹೋವನೇ, ಅದು ನಮ್ಮ ಪಾಪಗಳ ಫಲವೆಂಬುದು ನಮಗೆ ತಿಳಿದಿದೆ. ನಮ್ಮ ಪಾಪಗಳಿಂದಾಗಿ ನಾವು ಈಗ ತೊಂದರೆಗಳನ್ನು ಅನುಭವಿಸುತ್ತಿದ್ದೇವೆ. ಯೆಹೋವನೇ, ನಿನ್ನ ಒಳ್ಳೆಯ ಹೆಸರಿಗಾಗಿ ನಮಗೇನಾದರೂ ಸಹಾಯಮಾಡು. ನಾವು ನಿನ್ನನ್ನು ಅನೇಕ ಸಲ ತ್ಯಜಿಸಿದ್ದೇವೆಂದು ಒಪ್ಪಿಕೊಳ್ಳುತ್ತೇವೆ. ನಾವು ನಿನ್ನ ವಿರುದ್ಧ ಪಾಪಮಾಡಿದ್ದೇವೆ.
ಯೆಹೂದದ ಜನರು ತಮ್ಮದೇ ಆದ ರೀತಿಯಲ್ಲಿ ಜೀವಿಸಿದರು. ಅವರು ಹಟಮಾರಿಗಳಾಗಿದ್ದರು. ಅವರು ಸುಳ್ಳುದೇವರಾದ ಬಾಳನನ್ನು ಅನುಸರಿಸಿದರು. ಅವರ ಪೂರ್ವಿಕರು ಸುಳ್ಳುದೇವರುಗಳ ಸೇವೆ ಮಾಡುವದನ್ನು ಅವರಿಗೆ ಕಲಿಸಿದರು.”