Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:19 - ಪರಿಶುದ್ದ ಬೈಬಲ್‌

19 ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಹಾ, ನನ್ನ ಪ್ರಜೆಯೆಂಬಾಕೆಯು, “ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ?” ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ. ಅದಕ್ಕೆ ಯೆಹೋವನು, “ಇವರು ತಮ್ಮ ವಿಗ್ರಹಗಳಿಂದಲೂ, ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ” ಎಂದು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇದೋ, ದೂರ ನಾಡಿನಿಂದ ಕೇಳಿಬರುತ್ತಿದೆ ನನ್ನ ಪ್ರಜೆಯೆಂಬಾಕೆಯ ಈ ಮೊರೆ : “ಸಿಯೋನಿನಲ್ಲಿ ಇನ್ನು ಸರ್ವೇಶ್ವರನಿಲ್ಲವೊ? ಅದರ ರಾಜನು ಅಲ್ಲಿ ವಾಸವಾಗಿಲ್ಲವೊ?” ಅದಕ್ಕೆ ಸರ್ವೇಶ್ವರ : “ಇವರು ತಮ್ಮ ವಿಗ್ರಹಾರಾಧನೆಯಿಂದ ಅನ್ಯದೇವತೆಗಳ ಶೂನ್ಯರೂಪಗಳಿಂದ ನನ್ನನ್ನು ಕೆಣಕಿದ್ದೇಕೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಹಾ, ನನ್ನ ಪ್ರಜೆಯೆಂಬಾಕೆಯು - ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ. [ಅದಕ್ಕೆ ಯೆಹೋವನು - ] ಇವರು ತಮ್ಮ ವಿಗ್ರಹಗಳಿಂದಲೂ ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ [ಅನ್ನುತ್ತಾನೆ].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದೂರದೇಶದಿಂದ ನನ್ನ ಜನರು ಕೂಗುವ ಮೊರೆಯಿದು: “ಯೆಹೋವ ದೇವರು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ?” ಎಂಬುದೇ ಆದರೂ ಅವರು ತಮ್ಮ ವಿಗ್ರಹಗಳಿಂದಲೂ, ವಿಚಿತ್ರವಾದ ವ್ಯರ್ಥತ್ವಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:19
35 ತಿಳಿವುಗಳ ಹೋಲಿಕೆ  

ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಹೋಗಿ, “ನಿನ್ನ ಬಳಿಗೆ ಬಂದವರು ಎಲ್ಲಿಯವರು? ಅವರು ಏನನ್ನು ಹೇಳಿದರು?” ಎಂದು ವಿಚಾರಿಸಿದನು. ಅದಕ್ಕೆ ಹಿಜ್ಕೀಯನು, “ಇವರು ಬಹುದೂರ ದೇಶದಿಂದ ನನ್ನನ್ನು ಸಂಧಿಸಲು ಬಂದಿದ್ದಾರೆ. ಅವರ ದೇಶ ಬಾಬಿಲೋನ್” ಎಂದನು.


ಯೆಹೋವನೂ ಆ ಸೈನ್ಯವೂ ದೂರದಿಂದ ಬರುತ್ತಿದ್ದಾರೆ. ದಿಗಂತದ ಆಚೆಯಿಂದ ಅವರು ಬರುತ್ತಿದ್ದಾರೆ. ತನ್ನ ಸಿಟ್ಟನ್ನು ಪ್ರದರ್ಶಿಸುವದಕೋಸ್ಕರ ಯೆಹೋವನು ಈ ಸೈನ್ಯವನ್ನು ಉಪಯೋಗಿಸುವನು. ಈ ಸೈನ್ಯವು ಇಡೀ ಭೂಮಿಯನ್ನು ಹಾಳು ಮಾಡುವುದು.”


“ಎಫೆಸದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿರುವಾತನು ಮತ್ತು ಏಳು ದೀಪಸ್ತಂಭಗಳ ನಡುವೆ ತಿರುಗಾಡುವಾತನು ನಿನಗೆ ಇವುಗಳನ್ನು ಹೇಳುತ್ತಾನೆ.


ಆದರೆ ಚೀಯೋನ್ ಬೆಟ್ಟದಲ್ಲಿ ಅಳಿದುಳಿದವರು ಇರುವರು. ಅವರು ನನ್ನ ವಿಶೇಷ ಜನರಾಗಿರುವರು. ಯಾಕೋಬನ ಜನರು ತಮಗೆ ಸೇರಿರುವದನ್ನು ಹಿಂದಕ್ಕೆ ಪಡೆದುಕೊಳ್ಳುವರು.


ಆ ಜನರು ನನ್ನ ಜನರನ್ನು ಕೊಂದರು. ಆದ್ದರಿಂದ ನಾನು ನಿಜವಾಗಿಯೂ ಅವರನ್ನು ಶಿಕ್ಷಿಸುವೆನು.” ಯಾಕೆಂದರೆ ದೇವರಾದ ಯೆಹೋವನು ಚೀಯೋನಿನಲ್ಲಿ ವಾಸಿಸುವನು.


ಆಗ ಯೆಹೋವನ ಹೆಸರನ್ನು ಹೇಳಿಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು. ಚೀಯೋನ್ ಪರ್ವತದಲ್ಲಿಯೂ ಜೆರುಸಲೇಮಿನಲ್ಲಿಯೂ ರಕ್ಷಿಸಲ್ಪಟ್ಟ ಜನರಿರುವರು. ಯೆಹೋವನು ಹೇಳಿದ ಪ್ರಕಾರವೇ ಇದು ಆಗುವುದು. ಉಳಿದ ಜನರಲ್ಲಿ ಯೆಹೋವನು ಕರೆದಿರುವ ಜನರು ಸೇರಿಕೊಂಡಿರುವರು.


ಒಂದು ಕಾಲ ಬರುವುದು, ಆಗ ಕಾವಲುಗಾರರು, ‘ಬನ್ನಿ, ನಮ್ಮ ದೇವರಾದ ಯೆಹೋವನನ್ನು ಆರಾಧಿಸಲು ಚೀಯೋನಿಗೆ ಹೋಗೋಣ’ ಎಂದು ಕೂಗುವರು. ಎಫ್ರಾಯೀಮಿನ ಬೆಟ್ಟಪ್ರದೇಶದ ಕಾವಲುಗಾರರು ಸಹ ಹೀಗೆಯೇ ಕೂಗುವರು.”


ಯೆಹೋವನೇ, ನೀನು ಯೆಹೂದ ಜನಾಂಗವನ್ನು ಸಂಪೂರ್ಣವಾಗಿ ತಿರಸ್ಕರಿಸಿರುವೆಯಾ? ಯೆಹೋವನೇ, ನೀನು ಚೀಯೋನನ್ನು ದ್ವೇಷಿಸುವೆಯಾ? ನಾವು ಪುನಃ ಗುಣಹೊಂದಲಾರದ ಹಾಗೆ ನಮ್ಮನ್ನು ಹೊಡೆದು ಗಾಯಗೊಳಿಸಿರುವೆಯಲ್ಲ. ನೀನು ಹೀಗೇಕೆ ಮಾಡಿದೆ? ನಾವು ನೆಮ್ಮದಿಯನ್ನು ನಿರೀಕ್ಷಿಸಿದೆವು, ಆದರೆ ಒಳ್ಳೆಯದೇನೂ ಆಗಲಿಲ್ಲ. ನಾವು ಕ್ಷೇಮವನ್ನು ಎದುರುನೋಡುತ್ತಿದ್ದೆವು. ಆದರೆ ಕೇವಲ ಭಯ ನಮ್ಮೆದುರಿಗೆ ಬಂದಿತು.


ಚೀಯೋನೇ, ಎಚ್ಚರಗೊಳ್ಳು, ಎದ್ದೇಳು! ನಿನ್ನ ಉಡುಪನ್ನು ಹಾಕಿಕೊ; ನಿನ್ನ ಪ್ರತಾಪವನ್ನು ಧರಿಸಿಕೊ. ಪರಿಶುದ್ಧ ಜೆರುಸಲೇಮೇ, ಎದ್ದುನಿಲ್ಲು. ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನಲ್ಲಿಗೆ ಮತ್ತೇ ಪ್ರವೇಶಿಸರು.


ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ.


ಇಸ್ರೇಲ್ ದೇಶವು ಪಾಪದಿಂದ ತುಂಬಿಹೋಗಿದೆ; ಅವರ ಪಾಪವೇ ಅವರಿಗೆ ಭಾರವಾದ ಹೊರೆಯಾಗಿದೆ; ಅವರು ದುಷ್ಟಕುಟುಂಬಗಳ ಕೆಟ್ಟಮಕ್ಕಳಂತಿದ್ದಾರೆ. ಅವರು ಯೆಹೋವನನ್ನು ತ್ಯಜಿಸಿದ್ದಾರೆ; ಇಸ್ರೇಲಿನ ಪರಿಶುದ್ಧ ದೇವರನ್ನು ಅವಮಾನಪಡಿಸಿದ್ದಾರೆ; ಅವರು ಆತನನ್ನು ತೊರೆದು ಅಪರಿಚಿತನೋ ಎಂಬಂತೆ ಪರಿಗಣಿಸಿದ್ದಾರೆ.


ಇಸ್ರೇಲರು ತಮ್ಮ ಸೃಷ್ಟಿಕರ್ತನಲ್ಲಿ ಉಲ್ಲಾಸಿಸಲಿ! ಚೀಯೋನಿನ ಜನರು ತಮ್ಮ ರಾಜನಲ್ಲಿ ಹರ್ಷಿಸಲಿ.


ಯೆಹೋವನು ಸದಾಕಾಲ ಆಳುವನು! ಚೀಯೋನೇ, ನಿನ್ನ ದೇವರು ಶಾಶ್ವತವಾಗಿ ಆಳುವನು! ಯೆಹೋವನಿಗೆ ಸ್ತೋತ್ರವಾಗಲಿ!


ಯೆಹೋವನಿಗೆ ಚೀಯೋನಿನಿಂದಲೂ ಆತನ ವಾಸಸ್ಥಾನವಾದ ಜೆರುಸಲೇಮಿನಿಂದಲೂ ಸ್ತೋತ್ರವಾಗಲಿ! ಯೆಹೋವನಿಗೆ ಸ್ತೋತ್ರವಾಗಲಿ!


ನಾನು ಯೆಹೂದದ ಜನರನ್ನು ಬೇರೆ ಜನಾಂಗಗಳಲ್ಲಿ ಚದರಿಸಿಬಿಡುತ್ತೇನೆ. ಅವರು ಮತ್ತು ಅವರ ತಂದೆಗಳು ಎಂದೂ ಅರಿಯದ ಅಪರಿಚಿತ ದೇಶಗಳಲ್ಲಿ ಅವರು ವಾಸಿಸುವರು. ನಾನು ಖಡ್ಗಧಾರಿಗಳಾದ ಜನರನ್ನು ಕಳುಹಿಸುತ್ತೇನೆ. ಅವರು ಯೆಹೂದದ ಜನರನ್ನು ನಿರ್ಮೂಲವಾಗುವವರೆಗೆ ಕೊಲ್ಲುವರು.”


“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.


ಸುಳ್ಳುದೇವರುಗಳನ್ನು ಪೂಜಿಸುವವರನ್ನು ನಾನು ದ್ವೇಷಿಸುವೆನು. ನಾನು ಯೆಹೋವನಲ್ಲಿಯೇ ಭರವಸವಿಡುವೆನು.


ಯೆಹೋವನು ಹೀಗೆನ್ನುತ್ತಾನೆ: “ನಾನು ನಿಮ್ಮ ಪೂರ್ವಿಕರಿಗೆ ಅನ್ಯಾಯ ಮಾಡಿದೆನೇ? ಅದಕ್ಕಾಗಿ ಅವರು ನನ್ನನ್ನು ತಿರಸ್ಕರಿಸಿದರೇ? ನಿಮ್ಮ ಪೂರ್ವಿಕರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಪೂಜಿಸಿ ತಾವು ಸಹ ನಿಷ್ಪ್ರಯೋಜಕರಾದರು.


ನಿಜವಾಗಿ ಹೇಳುವುದಾದರೆ, ಯೆಹೂದದ ಜನರು ನನಗೆ ಕೇಡುಮಾಡುತ್ತಿಲ್ಲ, ಅವರು ತಮಗೇ ಕೇಡುಮಾಡಿಕೊಳ್ಳುತ್ತಿದ್ದಾರೆ. ಅವರು ತಮಗೆ ನಾಚಿಕೆಯಾಗುವಂತೆ ಮಾಡುತ್ತಿದ್ದಾರೆ” ಎಂದು ಯೆಹೋವನು ಹೇಳಿದನು.


“ಸುಗ್ಗಿಯ ಕಾಲ ಮುಗಿಯಿತು, ಬೇಸಿಗೆ ಕಾಲ ಹೋಯಿತು, ಆದರೆ ನಮಗಿನ್ನೂ ರಕ್ಷಣೆ ಆಗಲಿಲ್ಲ” ಎಂದು ಜನರು ಅನ್ನುತ್ತಾರೆ.


ಆ ವಿಗ್ರಹಗಳು ನಿಷ್ಪ್ರಯೋಜಕ ವಸ್ತುಗಳಾಗಿವೆ. ಅವು ಅಪಹಾಸ್ಯಕ್ಕೆ ಯೋಗ್ಯವಾದವುಗಳಾಗಿವೆ. ನ್ಯಾಯನಿರ್ಣಯದ ಸಮಯದಲ್ಲಿ ಆ ವಿಗ್ರಹಗಳನ್ನು ನಾಶಪಡಿಸಲಾಗುವುದು.


ನೀನು ಸ್ತಬ್ಧನಾಗಿರುವೆ; ಯಾರನ್ನೂ ರಕ್ಷಿಸಲಾಗದ ಸೈನಿಕನಂತಾಗಿರುವೆ. ಯೆಹೋವನೇ, ನೀನಾದರೋ ನಮ್ಮ ಜೊತೆಯಲ್ಲಿರುವೆ. ನಾವು ನಿನ್ನ ಹೆಸರಿನವರಾಗಿದ್ದೇವೆ. ಆದ್ದರಿಂದ ನಮ್ಮನ್ನು ಕೈಬಿಡಬೇಡ.”


ಆದರೆ ಅವರು ನಿಮಗೆ ಹೇಳುವುದು ಸುಳ್ಳುಗಳೇ. ಅವರು ನಿಮ್ಮನ್ನು ನಿಮ್ಮ ದೇಶದಿಂದ ಬಹುದೂರ ತೆಗೆದುಕೊಂಡು ಹೋಗುವರು. ನಾನು ನಿಮ್ಮನ್ನು ನಿಮ್ಮ ದೇಶದಿಂದ ಬಲವಂತವಾಗಿ ಹೊರಗಟ್ಟುವೆನು. ನೀವು ಅನ್ಯ ದೇಶದಲ್ಲಿ ಸಾಯುವಿರಿ.


ನಾನು ಇಸ್ರೇಲಿನ ಜನರನ್ನು ಮತ್ತು ಯೆಹೂದದ ಜನರನ್ನು ಗಮನಿಸಿದ್ದೇನೆ. ಅವರು ಮಾಡುವದೆಲ್ಲ ಕೆಟ್ಟದ್ದೆ. ಅವರು ಚಿಕ್ಕಂದಿನಿಂದ ಕೆಟ್ಟದ್ದನ್ನೇ ಮಾಡಿದ್ದಾರೆ. ಇಸ್ರೇಲಿನ ಜನರು ತಮ್ಮ ಕೈಗಳಿಂದ ಮಾಡಿದ ವಿಗ್ರಹಗಳನ್ನು ಪೂಜಿಸಿ ನನಗೆ ಬಹುಕೋಪ ಬರುವಂತೆ ಮಾಡಿದರು.” ಇದು ಯೆಹೋವನ ನುಡಿ.


“ನಗರದ ಸುತ್ತಳತೆಯು ಹದಿನೆಂಟು ಸಾವಿರ ಮೊಳ. ಇಂದಿನಿಂದ ಈ ನಗರದ ಹೆಸರು ‘ಯೆಹೋವನು ಅಲ್ಲಿದ್ದಾನೆ.’”


ಯಾಕೆ ನೀನು ಗಟ್ಟಿಯಾಗಿ ಅರಚಿಕೊಳ್ಳುವೆ? ನೀನು ನಿನ್ನ ನಾಯಕನನ್ನು ಕಳೆದುಕೊಂಡೆಯಾ? ನಿನ್ನ ರಾಜನು ನಿನ್ನನ್ನು ಬಿಟ್ಟುಹೋದನೋ? ಈ ಕಾರಣದಿಂದ ನೀನು ಪ್ರಸವವೇದನೆಯನ್ನು ಅನುಭವಿಸುವ ಸ್ತ್ರೀಯಂತೆ ಶ್ರಮೆಯನ್ನು ಅನುಭವಿಸುತ್ತಿರುವೆಯೋ?


ಆಗ ನಾನು ಅವರ ಮೇಲೆ ತುಂಬಾ ಕೋಪವುಳ್ಳವನಾಗಿರುವೆನು. ಅವರಿಗೆ ಸಹಾಯ ಮಾಡದೆ ಅವರನ್ನು ಬಿಟ್ಟುಬಿಡುವೆನು; ಅವರು ನಾಶವಾಗುವರು; ಅವರಿಗೆ ಭಯಂಕರ ಸಂಗತಿಗಳು ಸಂಭವಿಸುವವು; ಅನೇಕ ಕೇಡುಗಳಾಗುವುವು; ಆಗ, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದಿರುವ ಕಾರಣ ಇವೆಲ್ಲಾ ನಮಗೆ ಸಂಭವಿಸುತ್ತವೆ’ ಎಂದು ಅವರು ಹೇಳುವರು.


ನಾವು ಬಾಬಿಲೋನ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು ಚೀಯೋನನ್ನು ನೆನಸಿಕೊಳ್ಳುತ್ತಾ ಅತ್ತೆವು.


ಯಾಕೆಂದರೆ ನಿನ್ನ ಯೆಹೋವನು ನಿನ್ನ ಶಿಕ್ಷೆಯನ್ನು ನಿಲ್ಲಿಸಿದ್ದಾನೆ. ನಿನ್ನ ವೈರಿಗಳ ಬಲವಾದ ಬುರುಜುಗಳನ್ನು ನಾಶಮಾಡಿದ್ದಾನೆ. ಇಸ್ರೇಲಿನ ರಾಜನೇ, ನಿನ್ನ ದೇವರು ನಿನ್ನೊಂದಿಗಿದ್ದಾನೆ. ನಿನಗೆ ಕೆಟ್ಟದ್ದು ಸಂಭವಿಸುತ್ತದೆಂದು ನೀನು ಚಿಂತಿಸದಿರು.


ಬಾಬಿಲೋನಿನ ಜನರು ನನ್ನ ಜನರನ್ನು ತೆಗೆದುಕೊಂಡು ಹೋಗಿ ತಮ್ಮ ಗುಲಾಮರನ್ನಾಗಿ ಮಾಡಿದರು. ಆದರೆ ನಾನು ಅವರನ್ನು ಹೊಡೆಯುವೆನು. ಅವರನ್ನು ನನ್ನ ಜನರ ಗುಲಾಮರನ್ನಾಗಿ ಮಾಡುವೆನು.” ಆಗ ಯೆಹೋವ ದೇವರು ನನ್ನನ್ನು ಕಳುಹಿಸಿದನೆಂಬುದು ನಿಮಗೆ ಗೊತ್ತಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು