Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:20 - ಪರಿಶುದ್ದ ಬೈಬಲ್‌

20 “ಸುಗ್ಗಿಯ ಕಾಲ ಮುಗಿಯಿತು, ಬೇಸಿಗೆ ಕಾಲ ಹೋಯಿತು, ಆದರೆ ನಮಗಿನ್ನೂ ರಕ್ಷಣೆ ಆಗಲಿಲ್ಲ” ಎಂದು ಜನರು ಅನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಸುಗ್ಗಿ ತೀರಿತು, ಹಣ್ಣಿನ ಕಾಲ ಮುಗಿಯಿತು, ನಮಗೆ ಉದ್ಧಾರವೇ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಜನರು : “ಸುಗ್ಗಿ ಮುಗಿಯಿತು, ಹಣ್ಣಿನಕಾಲ ಕಳೆಯಿತು. ನಮಗಾದರೊ ರಕ್ಷಣೆ ದೊರಕದೆಹೋಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಸುಗ್ಗಿ ತೀರಿತು, ಹಣ್ಣಿನ ಕಾಲ ಮುಗಿಯಿತು, ನಮಗೆ ಉದ್ಧಾರವೇ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಸುಗ್ಗಿ ಮುಗಿಯಿತು. ಬೇಸಿಗೆ ಕಾಲ ತೀರಿತು. ನಾವಾದರೋ ರಕ್ಷಣೆ ಹೊಂದಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:20
7 ತಿಳಿವುಗಳ ಹೋಲಿಕೆ  

ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಬೇಕಷ್ಟೇ, ಆದರೂ ಅವನು ತೆರೆಯುವುದಿಲ್ಲ. ‘ಸ್ವಾಮೀ, ನಮಗೆ ಬಾಗಿಲು ತೆರೆ!’ ಎಂದು ನೀವು ಕೇಳುವಿರಿ. ಅವನು ನಿಮಗೆ, ‘ನೀವು ಯಾರೋ ನನಗೆ ತಿಳಿಯದು. ನೀವು ಎಲ್ಲಿಯವರು?’ ಎಂದು ಉತ್ತರಿಸುವನು.


ಬುದ್ಧಿವಂತನು ತಕ್ಕಕಾಲದಲ್ಲಿ ಬೆಳೆಯನ್ನು ಕೊಯ್ಯುತ್ತಾನೆ. ಸುಗ್ಗೀಕಾಲದಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು.


ನಿನ್ನನ್ನೂ ನಿನ್ನ ಜನರೆಲ್ಲರನ್ನೂ ನಾಶಮಾಡುವರು. ನಿನ್ನ ಕಟ್ಟಡಗಳಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ದೇವರು ನಿನ್ನನ್ನು ರಕ್ಷಿಸುವುದಕ್ಕೆ ಬಂದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ ಇದೆಲ್ಲಾ ನಿನಗೆ ಸಂಭವಿಸುವುದು” ಎಂದು ಹೇಳಿದನು.


ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”


ನನ್ನ ಜನರು ಗಾಯಗೊಂಡಿದ್ದಾರೆ. ಆದ್ದರಿಂದ ನಾನೂ ಗಾಯಗೊಂಡಿದ್ದೇನೆ. ಈಗ ಗಾಯಗೊಂಡ ಜನರ ಬಗ್ಗೆ ಯೋಚಿಸುತ್ತ ನಾನು ದುಃಖದಿಂದ ಮೌನವಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು