ಯೆರೆಮೀಯ 8:22 - ಪರಿಶುದ್ದ ಬೈಬಲ್22 ಗಿಲ್ಯಾದಿನಲ್ಲಿ ಖಂಡಿತವಾಗಿಯೂ ಔಷಧವಿದೆ. ಖಂಡಿತವಾಗಿಯೂ ಅಲ್ಲಿ ಒಬ್ಬ ವೈದ್ಯನಿದ್ದಾನೆ. ಆದರೆ ನನ್ನ ಜನರ ಗಾಯಗಳು ಗುಣವಾಗಲಿಲ್ಲವೇಕೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಗಿಲ್ಯಾದಿನಲ್ಲಿ ಔಷಧವಿಲ್ಲವೆ? ಅಲ್ಲಿ ವೈದ್ಯನು ಸಿಕ್ಕನೆ? ಮತ್ತೇಕೆ ಗುಣವಾಗಲಿಲ್ಲ ನನ್ನ ಜನತೆಗೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಗಾಯಕ್ಕೆ ಏಕೆ ಸ್ವಸ್ಥತೆ ಇಲ್ಲ? ಅಧ್ಯಾಯವನ್ನು ನೋಡಿ |
ಯೆಹೋವನೇ, ನೀನು ಯೆಹೂದ ಜನಾಂಗವನ್ನು ಸಂಪೂರ್ಣವಾಗಿ ತಿರಸ್ಕರಿಸಿರುವೆಯಾ? ಯೆಹೋವನೇ, ನೀನು ಚೀಯೋನನ್ನು ದ್ವೇಷಿಸುವೆಯಾ? ನಾವು ಪುನಃ ಗುಣಹೊಂದಲಾರದ ಹಾಗೆ ನಮ್ಮನ್ನು ಹೊಡೆದು ಗಾಯಗೊಳಿಸಿರುವೆಯಲ್ಲ. ನೀನು ಹೀಗೇಕೆ ಮಾಡಿದೆ? ನಾವು ನೆಮ್ಮದಿಯನ್ನು ನಿರೀಕ್ಷಿಸಿದೆವು, ಆದರೆ ಒಳ್ಳೆಯದೇನೂ ಆಗಲಿಲ್ಲ. ನಾವು ಕ್ಷೇಮವನ್ನು ಎದುರುನೋಡುತ್ತಿದ್ದೆವು. ಆದರೆ ಕೇವಲ ಭಯ ನಮ್ಮೆದುರಿಗೆ ಬಂದಿತು.