Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:3 - ಪರಿಶುದ್ದ ಬೈಬಲ್‌

3 “ಯೆಹೂದದ ಜನರು ತಮ್ಮ ಮನೆಗಳನ್ನು ಮತ್ತು ಪ್ರದೇಶವನ್ನು ಬಿಡುವಂತೆ ಮಾಡುತ್ತೇನೆ. ಆ ಜನರನ್ನು ಪರದೇಶಕ್ಕೆ ಒಯ್ಯಲಾಗುವುದು. ಯುದ್ಧದಲ್ಲಿ ಮರಣ ಹೊಂದದೆ ಅಳಿದುಳಿದ ಕೆಲವು ಮಂದಿ ಯೆಹೂದಿಯರು ತಾವು ಸತ್ತುಹೋಗಿದ್ದರೆ ಚೆನ್ನಾಗಿತ್ತು ಎಂದುಕೊಳ್ಳುವರು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಯಾವ ಸ್ಥಳಗಳಿಗೆ ಈ ದುಷ್ಟ ವಂಶದವರನ್ನು ಅಟ್ಟಿಬಿಟ್ಟಿದ್ದೆನೋ ಅಲ್ಲಿ ಉಳಿದವರೆಲ್ಲರೂ ಜೀವಿಸುವುದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಈ ಕೆಟ್ಟ ವಂಶದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನು ಯಾವಾವ ಸ್ಥಳಗಳಿಗೆ ಈ ದುರ್ವಂಶದವರನ್ನು ಅಟ್ಟಿಬಿಟ್ಟಿದ್ದೇನೋ ಅಲ್ಲೆಲ್ಲಾ ಉಳಿದವರೆಲ್ಲರೂ ಜೀವಿಸುವದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಈ ಕೆಟ್ಟ ಮನೆತನದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು ಎಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:3
22 ತಿಳಿವುಗಳ ಹೋಲಿಕೆ  

ಆ ದಿನಗಳಲ್ಲಿ ಜನರು ಸಾಯುವುದಕ್ಕೆ ಮಾರ್ಗವನ್ನು ಹುಡುಕಿದರೂ ಅವರಿಗೆ ಸಿಕ್ಕುವುದಿಲ್ಲ. ಅವರು ಮರಣವನ್ನು ಬಯಸಿದರೂ ಮರಣವು ಅವರಿಗೆ ಮರೆಯಾಗುತ್ತದೆ.


ನಾನು ನಿಮಗೆ ದೊರೆಯುವೆನು.” ಇದು ಯೆಹೋವನ ನುಡಿ. “ನಾನು ನಿಮ್ಮನ್ನು ನಿಮ್ಮ ಬಂಧನದಿಂದ ಬಿಡಿಸಿ ಕರೆದುತರುವೆನು. ನಾನು ಈ ಸ್ಥಳವನ್ನು ಬಿಡಲು ನಿಮಗೆ ಒತ್ತಾಯಿಸಿದೆ. ಆದರೆ ನಾನು ನಿಮ್ಮನ್ನು ಕಳುಹಿಸಿದ್ದ ಎಲ್ಲಾ ಜನಾಂಗಗಳಿಂದ ಮತ್ತು ಎಲ್ಲಾ ಸ್ಥಳಗಳಿಂದ ನಿಮ್ಮನ್ನು ಒಟ್ಟುಗೂಡಿಸಿ ಈ ಸ್ಥಳಕ್ಕೆ ಕರೆದು ತರುವೆನು.” ಇದು ಯೆಹೋವನ ನುಡಿ.


ಆದರೆ ಹೊಸ ಕಾಲ ಬರಲಿದೆ. ಆಗ, ‘ಇಸ್ರೇಲರನ್ನು ಉತ್ತರದ ನಾಡಿನಿಂದಲೂ ಅವರನ್ನು ಚದರಿಸಿಬಿಟ್ಟಿದ್ದ ಎಲ್ಲ ದೇಶಗಳಿಂದಲೂ ಹೊರತಂದ ಯೆಹೋವನಾಣೆ’ ಎಂದು ಹೇಳುವರು. ಆಗ ಇಸ್ರೇಲರು ಸ್ವದೇಶದಲ್ಲಿ ನೆಲಸುವರು.”


“ನಾನು ನನ್ನ ಕುರಿಗಳನ್ನು ಬೇರೆ ದೇಶಗಳಿಗೆ ಕಳುಹಿಸಿದೆ. ಆದರೆ ಉಳಿದ ನನ್ನ ಕುರಿಗಳನ್ನು ಒಂದೆಡೆ ಸೇರಿಸುವೆನು. ಅವುಗಳನ್ನು ಅವುಗಳ ಹುಲ್ಲುಗಾವಲಿಗೆ ತರುವೆನು. ಅವುಗಳಿಗೆ ಅನೇಕ ಮಕ್ಕಳಾಗಿ ಅವುಗಳ ಸಂಖ್ಯೆ ಬೆಳೆಯುವುದು.


ಲೋಕದ ಕಟ್ಟಕಡೆಯ ಸ್ಥಳಕ್ಕೆ ನೀವು ಚದರಿಹೋದರೂ ಅಲ್ಲಿಂದ ನಿಮ್ಮನ್ನು ಹಿಂದಕ್ಕೆ ತರುವನು.


ಆದ್ದರಿಂದ ನಾನು ಹೇಳುವುದೇನೆಂದರೆ ನನ್ನ ದೇವರೇ ನೀನು ನನ್ನನ್ನು ಕೊಂದುಬಿಡು. ನಾನು ಬದುಕುವದಕ್ಕಿಂತ ಸಾಯುವುದೇ ಮೇಲು.”


“ಯೆಹೋವನೇ, ನೀನು ಒಳ್ಳೆಯವನು, ಒಳ್ಳೆಯತನ ನಿನ್ನ ಪಾಲಾಗಿದೆ. ಆದರೆ ಈಗ ನಮ್ಮದು ನಾಚಿಕೆಪಡುವ ಸ್ಥಿತಿಯಾಗಿದೆ. ಯೆಹೂದ ಮತ್ತು ಜೆರುಸಲೇಮಿನ ಜನರು ನಾಚಿಕೆಪಡುವಂತಾಗಿದೆ. ಹತ್ತಿರದಲ್ಲಿದ್ದವರು ಹಾಗೂ ದೂರದಲ್ಲಿದ್ದವರು, ಒಟ್ಟಿನಲ್ಲಿ ಇಸ್ರೇಲಿನ ಎಲ್ಲ ಜನರು ನಾಚಿಕೆಪಡುವಂತಾಗಿದೆ. ಯೆಹೋವನೇ, ನೀನು ಆ ಜನರನ್ನು ಎಲ್ಲಾ ದೇಶಗಳಲ್ಲಿ ಚದರಿಸಿಬಿಟ್ಟಿರುವೆ. ಆ ಎಲ್ಲಾ ದೇಶಗಳಲ್ಲಿರುವ ಇಸ್ರೇಲರು ನಾಚಿಕೆಪಡಬೇಕಾಗಿದೆ. ಯೆಹೋವನೇ, ನಿನ್ನ ವಿರುದ್ಧ ಮಾಡಿದ ಎಲ್ಲಾ ಹೀನಕೃತ್ಯಗಳಿಗಾಗಿ ಅವರು ನಾಚಿಕೆಪಡಬೇಕಾಗಿದೆ.


“ನಾನು ಈಗ ಹೇಳಿದ್ದೆಲ್ಲವೂ ನಿಮಗೆ ಸಂಭವಿಸುವುದು. ಆಶೀರ್ವಾದದ ಮೂಲಕ ನಿಮಗೆ ಶುಭವಾಗುವದು; ಶಾಪದಿಂದ ನಿಮಗೆ ಅಶುಭವಾಗುವುದು. ನಮ್ಮ ದೇವರಾದ ಯೆಹೋವನು ಇತರ ದೇಶಗಳಿಗೆ ನಿಮ್ಮನ್ನು ಕಳುಹಿಸಿ ಬಿಡುವನು. ಆಗ ನೀವು ಇವುಗಳನ್ನೆಲ್ಲಾ ನೆನಸುವಿರಿ.


ಆ ಜನರು ಬೆಟ್ಟಗಳಿಗೆ ಮತ್ತು ಬಂಡೆಗಳಿಗೆ, “ನಮ್ಮ ಮೇಲೆ ಬೀಳಿರಿ. ಸಿಂಹಾಸನದ ಮೇಲೆ ಕುಳಿತಿರುವಾತನ ದೃಷ್ಟಿಯಿಂದ ನಮ್ಮನ್ನು ಮರೆಮಾಡಿ; ಕುರಿಮರಿಯಾದಾತನ ಕೋಪದಿಂದ ನಮ್ಮನ್ನು ಮರೆಮಾಡಿ;


ಯೆಹೂದದ ಆ ಜನರು ಈ ಸಮಾಚಾರವನ್ನು ಕೇಳಿದ ಕೂಡಲೆ ತಾವು ಚದುರಿಹೋಗಿದ್ದ ಎಲ್ಲಾ ದೇಶಗಳಿಂದ ಯೆಹೂದ ಪ್ರದೇಶಕ್ಕೆ ಹಿಂತಿರುಗಿ ಮಿಚ್ಫದಲ್ಲಿ ಗೆದಲ್ಯನ ಬಳಿಗೆ ಬಂದರು. ಅವರು ದ್ರಾಕ್ಷಾರಸವನ್ನು ಮತ್ತು ಹಣ್ಣುಗಳನ್ನು ಸಮೃದ್ಧಿಯಾಗಿ ಸಂಗ್ರಹಿಸಿದರು.


ಯೆರೆಮೀಯನು ಬಾಬಿಲೋನಿನಲ್ಲಿದ್ದ ನಮಗೆ ಈ ಸಂದೇಶವನ್ನು ಕಳುಹಿಸಿದ್ದಾನೆ: ಬಾಬಿಲೋನಿನಲ್ಲಿರುವ ನೀವು ಅಲ್ಲಿ ಬಹಳ ಕಾಲದವರೆಗೆ ಇರುವಿರಿ. ಆದ್ದರಿಂದ ಮನೆಗಳನ್ನು ಕಟ್ಟಿಕೊಂಡು ಅಲ್ಲಿ ನೆಲೆಸಿರಿ; ತೋಟಗಳನ್ನು ಬೆಳೆಸಿರಿ; ಮತ್ತು ನೀವು ಬೆಳೆದದ್ದನ್ನು ಆಹಾರವನ್ನಾಗಿ ಬಳಸಿರಿ.’”


ನಂತರ ಎಲೀಯನು ಮರಳುಗಾಡಿನಲ್ಲಿ ದಿನವೆಲ್ಲ ನಡೆದನು. ಎಲೀಯನು ಒಂದು ಪೊದೆಯ ಕೆಳಗೆ ಕುಳಿತುಕೊಂಡನು. ಅವನು ಸಾಯಲು ಇಚ್ಛಿಸಿ, “ಯೆಹೋವನೇ, ನನಗೆ ಜೀವನ ಸಾಕಾಗಿದೆ! ಸಾಯಲು ನನಗೆ ಅವಕಾಶ ಮಾಡು. ನಾನು ನನ್ನ ಪೂರ್ವಿಕರಿಗಿಂತಲೂ ಉತ್ತಮನೇನಲ್ಲ” ಎಂದು ಹೇಳಿದನು.


ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: “ದೇಶದಲ್ಲಿ ಅಳಿದುಳಿದ ಇಸ್ರೇಲಿಯರನ್ನು ಒಟ್ಟಾಗಿ ಸೇರಿಸಿರಿ. ದ್ರಾಕ್ಷಿತೋಟದಲ್ಲಿ ಕೊನೆಯ ದ್ರಾಕ್ಷಿಯನ್ನು ಕೀಳುವಂತೆ ಅವರನ್ನು ಒಟ್ಟಾಗಿ ಸೇರಿಸಿ. ಕೊಯ್ಲುಗಾರನು ಪ್ರತಿಯೊಂದು ಬಳ್ಳಿಯನ್ನು ನೋಡಿ ದ್ರಾಕ್ಷಿಕೀಳುವಂತೆ ನೀವು ಸೂಕ್ಷ್ಮವಾಗಿ ಗಮನಿಸಿ ಅವರನ್ನು ಒಟ್ಟಾಗಿ ಸೇರಿಸಿರಿ.”


ಇಸ್ರೇಲಿನ ಜನರೇ, ಈ ಸಂದೇಶಕ್ಕೆ ಕಿವಿಗೊಡಿರಿ! ನಿಮ್ಮ ವಿಷಯವಾಗಿ ಯೆಹೋವನು ಹೀಗೆ ಹೇಳಿದ್ದಾನೆ. ಇಸ್ರೇಲೇ, ಇದು ನಾನು ಈಜಿಪ್ಟ್‌ನಿಂದ ಬಿಡಿಸಿಕೊಂಡು ಬಂದ ಎಲ್ಲಾ ಕುಟುಂಬಗಳವರ (ಇಸ್ರೇಲ್) ವಿಷಯವಾದ ಸಂದೇಶ.


ಅದಕ್ಕಾಗಿಯೇ ಯೆಹೋವನು ಹೀಗೆ ಹೇಳುತ್ತಾನೆ: “ನೋಡಿ, ನಾನು ಈ ಕುಟುಂಬದ ವಿರುದ್ಧವಾಗಿ ಸಂಕಟ ತರಲು ಯೋಚಿಸುತ್ತಿದ್ದೇನೆ. ನಿನ್ನನ್ನು ನೀನು ರಕ್ಷಿಸಲು ಸಾಧ್ಯವಿರುವುದಿಲ್ಲ. ಭಯಂಕರ ದಿವಸಗಳು ಬರುವದರಿಂದ ನೀನು ಉಬ್ಬಿಕೊಳ್ಳುವುದನ್ನು ನಿಲ್ಲಿಸುವೆ.


ನಾನು ನಿಮ್ಮನ್ನು ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಡುವೆನು. ಕತ್ತಿಯನ್ನು ಇರಿದು ನಿಮ್ಮನ್ನು ನಾಶಮಾಡುವೆ. ನಿಮ್ಮ ಭೂಮಿ ಬರಿದಾಗುವುದು ಮತ್ತು ನಿಮ್ಮ ಪಟ್ಟಣಗಳು ನಾಶವಾಗುವವು.


ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುತ್ತಾನೆ, “ನಾನು ಜೆರುಸಲೇಮ್ ನಗರಕ್ಕೂ ಮತ್ತು ಯೆಹೂದದ ಎಲ್ಲಾ ಪಟ್ಟಣಗಳಿಗೂ ತಂದ ಭಯಂಕರವಾದ ಕೇಡನ್ನು ನೀವು ನೋಡಿದ್ದೀರಿ. ಆ ಪಟ್ಟಣಗಳು ಇಂದು ಕೇವಲ ಕಲ್ಲಿನ ಗುಡ್ಡೆಗಳಾಗಿವೆ.


ಆದ್ದರಿಂದ ಆ ಜನರ ಮೇಲೆ ನಾನು ನನ್ನ ಕೋಪವನ್ನು ವ್ಯಕ್ತಪಡಿಸಿದೆ. ನಾನು ಯೆಹೂದದ ಪಟ್ಟಣಗಳನ್ನು ಮತ್ತು ಜೆರುಸಲೇಮಿನ ಬೀದಿಗಳನ್ನು ದಂಡಿಸಿದೆ. ನನ್ನ ಕೋಪವು ಜೆರುಸಲೇಮ್ ನಗರವನ್ನು ಮತ್ತು ಯೆಹೂದದ ಪಟ್ಟಣಗಳನ್ನು ಈಗಿದ್ದ ಕಲ್ಲಿನ ದಿಬ್ಬಗಳನ್ನಾಗಿ ಮಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು