ಯೆರೆಮೀಯ 8:4 - ಪರಿಶುದ್ದ ಬೈಬಲ್4 “ಯೆರೆಮೀಯನೇ, ಯೆಹೂದದ ಜನರಿಗೆ ಹೀಗೆ ಹೇಳು: ‘ಯೆಹೋವನು ಈ ಮಾತನ್ನು ಹೇಳುತ್ತಾನೆ. “‘ಒಬ್ಬ ಮನುಷ್ಯನು ಕೆಳಗೆ ಬಿದ್ದರೆ ಪುನಃ ಅವನು ಮೇಲಕ್ಕೆ ಏಳುತ್ತಾನೆ; ಒಬ್ಬ ಮನುಷ್ಯನು ತಪ್ಪುದಾರಿ ಹಿಡಿದರೆ ಅವನು ಹಿಂತಿರುಗಿ ಬರುತ್ತಾನೆಂಬುದು ನಿಮಗೆ ಗೊತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀನು ಅವರಿಗೆ ಹೀಗೆ ಹೇಳಬೇಕು, “ಯೆಹೋವನು ಇಂತೆನ್ನುತ್ತಾನೆ, ಬಿದ್ದವರು ಏಳದಿರುವರೋ? ಬಿಟ್ಟುಹೋದವನು ತಿರುಗಿ ಬರುವುದಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನೀನು ಅವರಿಗೆ ಹೀಗೆ ಹೇಳಬೇಕು : “ಸರ್ವೇಶ್ವರ ಇಂತೆನ್ನುತ್ತಾರೆ : ಬಿದ್ದವರು ಮತ್ತೆ ಏಳುತ್ತಾರಲ್ಲವೆ? ಬಿಟ್ಟುಹೋದವನು ತಿರುಗಿಬರುತ್ತಾನಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮತ್ತು ನೀನು ಅವರಿಗೆ ಹೀಗೆ ಹೇಳಬೇಕು - ಯೆಹೋವನು ಇಂತೆನ್ನುತ್ತಾನೆ - ಬಿದ್ದವರು ಏಳದಿರುವರೋ? ಬಿಟ್ಟು ಹೋದವನು ತಿರಿಗಿ ಬರುವದಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಅವರು ಬಿದ್ದು ಮತ್ತೆ ಏಳರೋ? ಹಿಂದಿರುಗಿದವನು ಮತ್ತೆ ಬರುವುದಿಲ್ಲವೋ? ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.
ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”