ಯೆರೆಮೀಯ 8:5 - ಪರಿಶುದ್ದ ಬೈಬಲ್5 ಯೆಹೂದದ ಜನರು ತಪ್ಪುದಾರಿಯನ್ನು ಹಿಡಿದಿದ್ದಾರೆ. ಆದರೆ ಜೆರುಸಲೇಮಿನ ಜನರು ಆ ತಪ್ಪು ದಾರಿಯ ಮೇಲೆ ನಡೆಯುವದನ್ನು ಏಕೆ ಮುಂದುವರಿಸಿದ್ದಾರೆ? ತಮ್ಮ ಸುಳ್ಳುಗಳನ್ನೇ ಅವರು ನಂಬಿದ್ದಾರೆ, ಅವರು ಹಿಂತಿರುಗಿ ಬರಲು ಸಿದ್ಧರಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಈ ಜನರು, ಯೆರೂಸಲೇಮ್ ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರುಗಿ ಬರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಈ ಜೆರುಸಲೇಮಿನವರು ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ. ಹಿಂತಿರುಗಿ ಬರಲೊಲ್ಲರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಈ ಯೆರೂಸಲೇವಿುನವರು ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರಿಗಿ ಬರಲೊಲ್ಲರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಹಾಗಾದರೆ ಈ ಯೆರೂಸಲೇಮಿನ ಜನರು ಎಂದಿಗೂ ಹಿಂದಿರುಗದಂತೆ ಏಕೆ ಬಿಟ್ಟು ಹೋಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವುದಕ್ಕೆ ನಿರಾಕರಿಸುತ್ತಾರೆ. ಅಧ್ಯಾಯವನ್ನು ನೋಡಿ |
ಇಸ್ರೇಲಿನ ಜನರಲ್ಲಿ ಒಬ್ಬರೂ ಸಹ ನಿನ್ನ ಉಪದೇಶವನ್ನು ಪಾಲಿಸಲಿಲ್ಲ. ಅವರೆಲ್ಲರೂ ಅದರಿಂದ ದೂರಾದರು. ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಶಾಪಗಳ ಮತ್ತು ವಾಗ್ದಾನಗಳ ಬಗ್ಗೆ ಹೇಳಲಾಗಿದೆ. (ಮೋಶೆಯು ದೇವರ ಸೇವಕನಾಗಿದ್ದನು) ಆ ಶಾಪಗಳು ಧರ್ಮಶಾಸ್ತ್ರವನ್ನು ಪಾಲಿಸದಿದ್ದವರಿಗೆ ಆಗುವ ಶಿಕ್ಷೆಯಾಗಿದೆ. ಆ ಎಲ್ಲಾ ಶಿಕ್ಷೆಗಳು ನಮಗೆ ಆಗಿವೆ. ನಾವು ಯೆಹೋವನಾದ ನಿನ್ನ ವಿರುದ್ಧ ಪಾಪ ಮಾಡಿದ್ದರಿಂದ ನಮಗೆ ಹೀಗಾಯಿತು.