ಯೆರೆಮೀಯ 8:6 - ಪರಿಶುದ್ದ ಬೈಬಲ್6 ನಾನು ಎಚ್ಚರವಹಿಸಿ ಅವರು ಹೇಳುವದನ್ನು ಕೇಳಿದ್ದೇನೆ. ಆದರೆ ಅವರು ಸರಿಯಾದುದನ್ನು ಹೇಳುವದಿಲ್ಲ. ತಾವು ಮಾಡಿದ ಪಾಪಕ್ಕಾಗಿ ಅವರು ಪಶ್ಚಾತ್ತಾಪಪಡುವದಿಲ್ಲ. ಅವರು ಮಾಡಿದ ದುಷ್ಕೃತ್ಯದ ಬಗ್ಗೆ ಅವರು ಯೋಚಿಸುವದಿಲ್ಲ. ಜನರು ವಿಚಾರ ಮಾಡದೆ ಕೆಲಸಮಾಡುತ್ತಾರೆ. ಅವರು ಯುದ್ಧದಲ್ಲಿ ಓಡುವ ಕುದುರೆಯಂತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತನಾಡಿಕೊಳ್ಳುತ್ತಿರಲಿಲ್ಲ; ಯಾರು ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು ‘ಆಹಾ, ನಾನು ಎಂಥಾ ಕೆಲಸ ಮಾಡಿದೆ’ ಎಂದುಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೆ ತ್ವರೆಪಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಾನು ಕಿವಿಗೊಟ್ಟು ಕೇಳಿದೆ. ಅವರು ಸತ್ಯವಾದುದನ್ನು ನುಡಿಯುತ್ತಿರಲಿಲ್ಲ. ಯಾವನೂ ತನ್ನ ಅಕ್ರಮಕ್ಕಾಗಿ ಪಶ್ಚಾತ್ತಾಪಪಟ್ಟು, ‘ಅಯ್ಯೋ ನಾನು ಎಂಥ ಕೆಲಸ ಮಾಡಿಬಿಟ್ಟೆ !’ ಎಂದುಕೊಳ್ಳುತ್ತಿರಲಿಲ್ಲ. ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಗಳಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗದಲ್ಲೆ ದೌಡಾಯಿಸುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತಾಡಿಕೊಳ್ಳುತ್ತಿರಲಿಲ್ಲ; ಯಾವನೂ ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು - ಆಹಾ, ನಾನು ಎಂಥಾ ಕೆಲಸ ಮಾಡಿದೆ ಎಂದು ಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೇ ತ್ವರೆಪಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಾನು ಕಿವಿಗೊಟ್ಟು ಕೇಳಿದೆನು. ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ, “ನಾನು ಎಂಥಾ ಕೆಲಸ ಮಾಡಿದ್ದೇನೆ,” ಎಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ. ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ, ಪ್ರತಿಯೊಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ. ಅಧ್ಯಾಯವನ್ನು ನೋಡಿ |
ಈ ಉಪದ್ರವಗಳಿಂದ ಸಾಯದೆ ಉಳಿದ ಜನರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಲಿಲ್ಲ. ತಮ್ಮ ಸ್ವಂತ ಕೈಗಳಿಂದ ನಿರ್ಮಿಸಿದ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಅವರು ದೆವ್ವಗಳ ಆರಾಧನೆಯನ್ನು ನಿಲ್ಲಿಸಲಿಲ್ಲ. ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಿಂದ ಮಾಡಲ್ಪಟ್ಟು, ನಡೆಯಲಾರದ, ನೋಡಲಾರದ ಮತ್ತು ಕೇಳಲಾರದ ವಿಗ್ರಹಗಳನ್ನು ಪೂಜಿಸುವುದನ್ನು ಅವರು ನಿಲ್ಲಿಸಲಿಲ್ಲ.
ಇಸ್ರೇಲಿನ ಜನರಲ್ಲಿ ಒಬ್ಬರೂ ಸಹ ನಿನ್ನ ಉಪದೇಶವನ್ನು ಪಾಲಿಸಲಿಲ್ಲ. ಅವರೆಲ್ಲರೂ ಅದರಿಂದ ದೂರಾದರು. ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಶಾಪಗಳ ಮತ್ತು ವಾಗ್ದಾನಗಳ ಬಗ್ಗೆ ಹೇಳಲಾಗಿದೆ. (ಮೋಶೆಯು ದೇವರ ಸೇವಕನಾಗಿದ್ದನು) ಆ ಶಾಪಗಳು ಧರ್ಮಶಾಸ್ತ್ರವನ್ನು ಪಾಲಿಸದಿದ್ದವರಿಗೆ ಆಗುವ ಶಿಕ್ಷೆಯಾಗಿದೆ. ಆ ಎಲ್ಲಾ ಶಿಕ್ಷೆಗಳು ನಮಗೆ ಆಗಿವೆ. ನಾವು ಯೆಹೋವನಾದ ನಿನ್ನ ವಿರುದ್ಧ ಪಾಪ ಮಾಡಿದ್ದರಿಂದ ನಮಗೆ ಹೀಗಾಯಿತು.
ನೀವು ಇದರಿಂದ ಪಾಠ ಕಲಿಯಬೇಕೆಂದು ಇದನ್ನೆಲ್ಲಾ ಹೇಳುತ್ತಿದ್ದೇನೆ. ನೀವು ನನ್ನನ್ನು ಗೌರವಿಸಿ ನನಗೆ ಭಯಪಡಬೇಕೆಂದು ನಾನು ಈ ವಿಷಯಗಳನ್ನು ತಿಳಿಸುತ್ತಿದ್ದೇನೆ. ನೀವು ಹೀಗೆ ಮಾಡುವುದಾದರೆ ನಿನ್ನ ಮನೆಯು ನಾಶವಾಗದು. ನೀವು ನನ್ನ ನಿಯಮಗಳನ್ನು ಅನುಸರಿಸುವದಾದರೆ ನಾನು ಆಲೋಚಿಸಿರುವ ಪ್ರಕಾರ ನಿಮ್ಮನ್ನು ಶಿಕ್ಷಿಸುವದಿಲ್ಲ.” ಆದರೆ ಆ ದುಷ್ಟ ಜನರು ತಮ್ಮ ಮಾರ್ಗವನ್ನು ಬಿಡದೆ ದುಷ್ಟತನದಲ್ಲಿಯೇ ಮುಂದುವರಿಯುತ್ತಿದ್ದಾರೆ.