Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:9 - ಪರಿಶುದ್ದ ಬೈಬಲ್‌

9 ಆ “ಜ್ಞಾನಿಗಳು” ಯೆಹೋವನ ಉಪದೇಶವನ್ನು ಕೇಳಲು ಒಪ್ಪಲಿಲ್ಲ. ಆದ್ದರಿಂದ ಅವರು ನಿಜವಾದ ಜ್ಞಾನಿಗಳಲ್ಲವೇ ಅಲ್ಲ. ಆ “ಜ್ಞಾನಿಗಳು” ಸಿಕ್ಕಿಹಾಕಿಕೊಂಡಿದ್ದಾರೆ. ಅವರು ಗಾಬರಿಪಟ್ಟಿದ್ದಾರೆ ಮತ್ತು ನಾಚಿಕೆಪಟ್ಟಿದ್ದಾರೆ. ಅವರ ಜ್ಞಾನವು ಅಪ್ರಯೋಜಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಜ್ಞಾನಿಗಳು ನಾಚಿಕೆಪಡುವರು, ನಿಬ್ಬೆರಗಾಗಿ ಬೋನಿಗೆ ಸಿಕ್ಕಿಬೀಳುವರು. ಏಕೆಂದರೆ ಸರ್ವೇಶ್ವರನಾದ ನನ್ನ ಮಾತನ್ನು ಅವರು ನಿರಾಕರಿಸಿದ್ದಾರೆ. ಇದು ತಾನೋ ಅವರ ಜ್ಞಾನ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಜ್ಞಾನಿಗಳು ಆಶಾಭಂಗಪಟ್ಟು ಬೆಬ್ಬರಬಿದ್ದು ಸಿಕ್ಕಿಕೊಂಡಿದ್ದಾರೆ; ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಜ್ಞಾನಿಗಳು ನಾಚಿಕೊಂಡಿದ್ದಾರೆ. ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವ ದೇವರ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಯಾವ ಜ್ಞಾನವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:9
21 ತಿಳಿವುಗಳ ಹೋಲಿಕೆ  

ಪ್ರವಾದಿಗಳು ಮತ್ತು ಯಾಜಕರು ತಾವು ಮಾಡುವ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ನಾಚಿಕೆಪಡುವದೇ ಇಲ್ಲ. ತಮ್ಮ ಪಾಪಕಾರ್ಯಗಳಿಗಾಗಿ ಸಂಕೋಚಪಡುವುದು ಸಹ ಅವರಿಗೆ ಗೊತ್ತಿಲ್ಲ. ಆದ್ದರಿಂದ ಬೇರೆಯವರಂತೆ ಅವರನ್ನೂ ಶಿಕ್ಷಿಸಲಾಗುವುದು. ನಾನು ಅವರನ್ನು ಶಿಕ್ಷಿಸಿದಾಗ ಅವರನ್ನು ನೆಲಕ್ಕೆ ಎಸೆಯಲಾಗುವದು” ಎಂದು ಯೆಹೋವನು ಅನ್ನುತ್ತಾನೆ.


ದೇವರು ಯುಕ್ತಿವಂತರ ಕುತಂತ್ರಗಳನ್ನು ವಿಫಲಗೊಳಿಸಿ ಭಂಗಪಡಿಸುವನು.


ಭೂಲೋಕದ ಜನರೇ, ಕೇಳಿರಿ, ಆ ಜನರು ಮಾಡಿದ ಎಲ್ಲಾ ಕುಯುಕ್ತಿಗಳಿಗಾಗಿ ನಾನು ಯೆಹೂದ ಜನರಿಗೆ ವಿನಾಶವನ್ನು ತರುವೆನು. ಅವರು ನನ್ನ ಸಂದೇಶಗಳಿಗೆ ಗಮನ ಕೊಡದೆ ಇದ್ದುದರಿಂದ, ಅವರು ನನ್ನ ಧರ್ಮಶಾಸ್ತ್ರವನ್ನು ಅಸಡ್ಡೆ ಮಾಡಿದ್ದರಿಂದ ಇದೆಲ್ಲ ನಡೆಯುವುದು.”


ಚೋಯನಿನ ನಗರದ ಪ್ರಮುಖರು ಮೂರ್ಖರಾಗಿದ್ದಾರೆ. ಫರೋಹನ “ಜ್ಞಾನಿಗಳಾದ ಸಲಹೆಗಾರರು” ತಪ್ಪು ಸಲಹೆ ಕೊಡುತ್ತಾರೆ. ಅವರು ತಾವೇ ಬುದ್ಧಿವಂತರೆಂದೂ ರಾಜವಂಶದವರೆಂದೂ ಹೇಳಿಕೊಳ್ಳುವರು. ಆದರೆ ತಾವು ನೆನಸುವಷ್ಟರ ಮಟ್ಟಿಗೆ ಅವರು ಬುದ್ಧಿವಂತರಲ್ಲ.


ಯೆಹೋವನ ಉಪದೇಶಗಳು ನಿಷ್ಕಳಂಕವಾಗಿವೆ. ಅವು ದೇವಜನರಿಗೆ ಬಲವನ್ನು ಕೊಡುತ್ತವೆ. ಯೆಹೋವನ ಕಟ್ಟಳೆಯು ಭರವಸೆಗೆ ಯೋಗ್ಯವಾಗಿದೆ. ಅದು ಮೂಢರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.


ಆ ನಿಯಮಗಳನ್ನು ಪರಿಪೂರ್ಣವಾಗಿ ಅಭ್ಯಾಸಿಸಿರಿ, ‘ಆಗ ಅನ್ಯಜನರು ನಿಮ್ಮನ್ನು ನೋಡಿ ನೀವು ಜ್ಞಾನಿಗಳು’ ಎಂದು ತಿಳಿದುಕೊಳ್ಳುವರು. ಆ ದೇಶದ ಜನರು ನಿಮ್ಮ ವಿಧಿನಿಯಮಗಳನ್ನು ಕೇಳಿ, ‘ನಿಜವಾಗಿಯೂ ಈ ಮಹಾ ಜನಾಂಗದ ಜನರು ಬುದ್ಧಿಯುಳ್ಳವರು ಮತ್ತು ಜ್ಞಾನಿಗಳು’ ಎಂದು ಹೇಳುವರು


ಚಿಕ್ಕಂದಿನಿಂದಲೂ ನಿನಗೆ ಪವಿತ್ರ ಗ್ರಂಥದ ಪರಿಚಯವಿದೆ. ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಆ ಪವಿತ್ರ ಗ್ರಂಥವು ಶಕ್ತವಾಗಿದೆ. ಕ್ರಿಸ್ತ ಯೇಸುವಿನಲ್ಲಿನ ನಂಬಿಕೆಯ ಮೂಲಕ ಆ ಜ್ಞಾನವು ರಕ್ಷಣೆಯ ಕಡೆಗೆ ನಡೆಸುತ್ತದೆ.


ಒಂದರ ಮೇಲೊಂದು ಆಪತ್ತು ಸಂಭವಿಸುವುದು. ಸುಳ್ಳುಸುದ್ದಿಗೊಂದು ಸುಳ್ಳುಸುದ್ದಿ ಸೇರಿಕೊಳ್ಳುವುದು. ಅವರು ಪ್ರವಾದಿಯಿಂದ ದರ್ಶನಕ್ಕಾಗಿ ಹುಡುಕುತ್ತಲೇ ಇರುವರು. ಆದರೆ ಯಾವ ದರ್ಶನಗಳೂ ಆಗುವದಿಲ್ಲ. ಜನರಿಗೆ ಉಪದೇಶಿಸಲು ಯಾಜಕರಲ್ಲಿ ಏನೂ ಇರುವುದಿಲ್ಲ. ಜನರಿಗೆ ಕೊಡಲು ಹಿರಿಯರಲ್ಲಿ ಯಾವ ಬುದ್ಧಿವಾದವೂ ಇರುವುದಿಲ್ಲ.


ಈ ಸಂದೇಶ ಎದೋಮನ್ನು ಕುರಿತದ್ದು. ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ತೇಮಾನ್ ಪಟ್ಟಣನಿವಾಸಿಗಳಲ್ಲಿ ಈಗ ಬುದ್ಧಿ ಉಳಿದಿಲ್ಲವೇ? ಎದೋಮಿನ ವಿವೇಕಿಗಳು ಒಳ್ಳೆಯ ಸಲಹೆಗಳನ್ನು ಕೊಡಲು ಸಮರ್ಥರಾಗಿಲ್ಲವೇ? ಅವರು ತಮ್ಮ ಜ್ಞಾನವನ್ನು ಕಳೆದುಕೊಂಡರೇ?


ನೀವು ಉಪದೇಶಗಳಿಗೂ ಒಡಂಬಡಿಕೆಗೂ ವಿಧೇಯರಾಗಿರಬೇಕು. ನೀವು ಈ ಆಜ್ಞೆಗಳನ್ನು ಅನುಸರಿಸದಿದ್ದರೆ, ತಪ್ಪು ಆಜ್ಞೆಗಳನ್ನು ಹಿಂಬಾಲಿಸುವಿರಿ. ಬೇತಾಳಿಕರಿಂದ, ಕಣಿಹೇಳುವವರಿಂದ ಬರುವ ಆಜ್ಞೆಗಳೇ ತಪ್ಪು ಆಜ್ಞೆಗಳು. ಅವುಗಳಿಗೆ ಯಾವ ಬೆಲೆಯೂ ಇಲ್ಲ. ಅವುಗಳನ್ನು ಅನುಸರಿಸುವುದರಿಂದ ನಿಮಗೆ ಯಾವ ಪ್ರಯೋಜನವೂ ಇಲ್ಲ.


ಯೆಹೋವನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಮತ್ತು ಆತನ ನಿಯಮಗಳನ್ನು ಅವರು ಒಪ್ಪಲಿಲ್ಲ. ಅವರು ಯೆಹೋವನ ಎಚ್ಚರಿಕೆಗೆ ಗಮನವನ್ನೂ ನೀಡಲಿಲ್ಲ. ಅವರು ನಿರರ್ಥಕವಾದ ವಿಗ್ರಹಗಳನ್ನು ಅನುಸರಿಸಿ ನಿಷ್ಪ್ರಯೋಜಕರಾದರು, ಅವರು ತಮ್ಮ ಸುತ್ತಮುತ್ತಲಿನ ಜನಾಂಗಗಳನ್ನು ಅನುಸರಿಸಿದರು. ಯೆಹೋವನು ಇಸ್ರೇಲಿನ ಜನರಿಗೆ ಮಾಡಬಾರದೆಂದು ಎಚ್ಚರಿಸಿ ಹೇಳಿದ್ದನ್ನು ಈ ಜನಾಂಗಗಳು ಮಾಡಿದವು.


ನಾನು ಅದ್ಭುತಕಾರ್ಯಗಳಿಂದ ಅವರನ್ನು ಆಶ್ಚರ್ಯಗೊಳಿಸುತ್ತಾ ಇರುವೆನು. ಅವರ ಜ್ಞಾನಿಗಳು ತಮ್ಮ ಜ್ಞಾನವನ್ನು ಕಳೆದುಕೊಳ್ಳುವರು. ಅವರು ಅರ್ಥಮಾಡಿಕೊಳ್ಳಲಾರರು.”


ಜೆರುಸಲೇಮೇ, ನೀನು ನನ್ನನ್ನು ತ್ಯಜಿಸಿದೆ” ಇದು ಯೆಹೋವನ ನುಡಿ. “ಮತ್ತೆಮತ್ತೆ ನೀನು ನನ್ನನ್ನು ತ್ಯಜಿಸಿದೆ. ಆದ್ದರಿಂದ ನಾನು ನಿನ್ನನ್ನು ದಂಡಿಸುತ್ತೇನೆ ಮತ್ತು ನಾಶಮಾಡುತ್ತೇನೆ. ನಿನಗೆ ಸಲ್ಲಬೇಕಾದ ಶಿಕ್ಷೆಯನ್ನು ಪುನಃ ತಡೆಹಿಡಿದು ನಾನು ದಣಿದಿದ್ದೇನೆ.


ಈ ಸ್ಥಳದಲ್ಲಿ ನಾನು ಯೆಹೂದದ ಮತ್ತು ಜೆರುಸಲೇಮಿನ ಜನರ ಯೋಜನೆಗಳನ್ನು ಹಾಳು ಮಾಡುತ್ತೇನೆ. ಶತ್ರುವು ಈ ಜನರನ್ನು ಬೆನ್ನಟ್ಟಿ ಬರುವನು. ನಾನು ಈ ಸ್ಥಳದಲ್ಲಿ ಖಡ್ಗದಿಂದ ಯೆಹೂದದ ಜನರ ಕೊಲೆಯಾಗುವಂತೆ ಮಾಡುವೆನು. ಅವರ ಹೆಣಗಳು ಪಕ್ಷಿಗಳಿಗೆ ಮತ್ತು ಕಾಡುಪ್ರಾಣಿಗಳಿಗೆ ಆಹಾರವಾಗುವಂತೆ ಮಾಡುವೆನು.


ಯೆಹೋವನು ಹೇಳುವುದೇನೆಂದರೆ, “ಯೆಹೂದ ಜನರ ಅನೇಕ ಅಪರಾಧಗಳಿಗಾಗಿ ಅವರನ್ನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ. ನನ್ನ ಕಟ್ಟಳೆಗಳಿಗೆ ವಿಧೇಯರಾಗಲಿಲ್ಲ. ಅವರ ಪೂರ್ವಿಕರು ಸುಳ್ಳನ್ನು ನಂಬಿದರು. ಆ ಸುಳ್ಳುಗಳಿಂದ ಅವರು ನನ್ನನ್ನು ಹಿಂಬಾಲಿಸಲಿಲ್ಲ.


ಆ ಸಮಯದಲ್ಲಿ ಪ್ರವಾದಿಗಳು ತಮ್ಮ ದರ್ಶನ, ಪ್ರವಾದನೆಗಳಿಗಾಗಿ ನಾಚಿಕೊಳ್ಳುವರು. ತಾವು ಪ್ರವಾದಿಗಳೆಂದು ತೋರಿಸಿಕೊಳ್ಳಲು ಧರಿಸುವ ಗಡುಸಾದ ಬಟ್ಟೆಗಳನ್ನು ಧರಿಸಿಕೊಳ್ಳುವದಿಲ್ಲ. ಅವರು ಪ್ರವಾದನೆಗಳೆಂದು ಹೇಳುವ ತಮ್ಮ ಸುಳ್ಳುಗಳಿಂದ ಜನರನ್ನು ಮೋಸಪಡಿಸುವದಿಲ್ಲ.


ದೇವರು ಜ್ಞಾನಿಗಳನ್ನು ಅವರ ತಂತ್ರಗಳಲ್ಲೇ ಹಿಡಿದುಕೊಳ್ಳುವನು; ಮೋಸಗಾರರ ಆಲೋಚನೆಗಳನ್ನು ವಿಫಲಗೊಳಿಸುವನು.


ನಿನ್ನ ಮೊದಲನೆ ತಂದೆಯು ಪಾಪದಲ್ಲಿ ಬಿದ್ದನು. ನಿನ್ನ ವಕೀಲರು ನನಗೆ ವಿರುದ್ಧವಾಗಿ ಕಾರ್ಯ ಮಾಡಿದರು.


“‘ಯೆಹೋವನು ಎಲ್ಲಿ?’ ಎಂದು ಯಾಜಕರು ಕೇಳಲಿಲ್ಲ. ಧರ್ಮಶಾಸ್ತ್ರವನ್ನು ಬಲ್ಲವರು ನನ್ನನ್ನು ತಿಳಿಯಬಯಸಲಿಲ್ಲ. ಇಸ್ರೇಲರ ಜನನಾಯಕರು ನನ್ನ ವಿರೋಧಿಗಳಾದರು. ಪ್ರವಾದಿಗಳು ಸುಳ್ಳುದೇವರಾದ ಬಾಳನ ಹೆಸರಿನಿಂದ ಭವಿಷ್ಯವಾಣಿಯನ್ನು ನುಡಿದರು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಪೂಜಿಸಿದರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು