ಯೆರೆಮೀಯ 9:12 - ಪರಿಶುದ್ದ ಬೈಬಲ್12 ಈ ಭೂಮಿಯನ್ನು ಏಕೆ ಹಾಳು ಮಾಡಲಾಯಿತು? ಇದನ್ನು ಯಾರೂ ಹೋಗದ ಬರಿದಾದ ಮರಳುಗಾಡನ್ನಾಗಿ ಏಕೆ ಮಾಡಲಾಯಿತು? ಇದನ್ನರಿತ ಜ್ಞಾನಿಯೊಬ್ಬನಿದ್ದಾನೆಯೇ? ಯೆಹೋವನಿಂದ ತಿಳಿದುಕೊಂಡ ಜ್ಞಾನಿಯೊಬ್ಬನಿದ್ದಾನೆಯೇ? ಯೆಹೋವನ ಸಂದೇಶವನ್ನು ವಿವರಿಸಬಲ್ಲವನೊಬ್ಬನಿದ್ದಾನೆಯೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯಾರೂ ದಾಟದ ಹಾಗೆ ದೇಶವು ಹಾಳಾಗಿ ಕಾಡಿನಂತೆ ಸುಟ್ಟು ಹೋದದ್ದು ಏಕೆ? ಈ ವಿಚಾರವನ್ನು ಗ್ರಹಿಸತಕ್ಕ ಜ್ಞಾನಿಯು ಯಾರು? ಅದನ್ನು ಯೆಹೋವನ ಬಾಯಿಂದಲೇ ಕೇಳಿ ತಿಳಿಸಬಲ್ಲವನು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾನು : “ಈ ನಾಡು ಯಾರೂ ಹಾದುಹೋಗದಷ್ಟು ಹಾಳಾಗಿ ಕಾಡಿನಂತೆ ಸುಟ್ಟುಹೋದದ್ದು ಏಕೆ? ಈ ವಿಷಯವನ್ನು ಗ್ರಹಿಸತಕ್ಕ ಜ್ಞಾನಿ ಯಾರು? ಅದನ್ನು ಸರ್ವೇಶ್ವರನ ಬಾಯಿಂದಲೆ ಕೇಳಿ ತಿಳಿಸಬಲ್ಲವನಾರು?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯಾರೂ ದಾಟದ ಹಾಗೆ ದೇಶವು ಹಾಳಾಗಿ ಕಾಡಿನಂತೆ ಸುಟ್ಟುಹೋದದ್ದು ಏಕೆ? ಈ ವಿಚಾರವನ್ನು ಗ್ರಹಿಸತಕ್ಕ ಜ್ಞಾನಿಯು ಯಾರು? ಅದನ್ನು ಯೆಹೋವನ ಬಾಯಿಂದಲೇ ಕೇಳಿ ತಿಳಿಸಬಲ್ಲವನು ಯಾರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇದನ್ನು ಗ್ರಹಿಸುವ ಜ್ಞಾನಿಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಯೆಹೋವ ದೇವರ ಬಾಯಿ ಯಾರ ಸಂಗಡ ಮಾತನಾಡಿತು? ದೇಶವು ಯಾವುದಕ್ಕಾಗಿ ನಾಶವಾಗಿ ಹಾದು ಹೋಗುವವನಿಲ್ಲದೆ ಮರುಭೂಮಿಯ ಹಾಗೆ ಹಾಳಾಯಿತು? ಅಧ್ಯಾಯವನ್ನು ನೋಡಿ |
ಯೆಹೂದ ದೇಶವು ವ್ಯಭಿಚಾರಿಗಳಿಂದ ತುಂಬಿಹೋಗಿದೆ. ಅವರು ಅನೇಕ ರೀತಿಯಲ್ಲಿ ಅಪನಂಬಿಗಸ್ತರಾಗಿದ್ದಾರೆ. ಯೆಹೋವನು ನಾಡನ್ನು ಶಪಿಸಿದ್ದರಿಂದ ಅದು ಬರಡು ಭೂಮಿಯಾಯಿತು. ಹುಲ್ಲುಗಾವಲಿನ ಸಸಿಗಳು ಒಣಗಿ ಸತ್ತುಹೋಗುತ್ತಲಿವೆ. ಹೊಲಗಳು ಮರುಭೂಮಿಯಂತಾಗಿವೆ. ಪ್ರವಾದಿಗಳು ಸೆರೆ ಒಯ್ಯಲ್ಪಟ್ಟಿದ್ದಾರೆ. ಆ ಪ್ರವಾದಿಗಳು ತಮ್ಮ ಪ್ರಭಾವವನ್ನೂ ಶಕ್ತಿಯನ್ನೂ ತಪ್ಪಾಗಿ ಬಳಸಿಕೊಳ್ಳುತ್ತಿದ್ದಾರೆ.