Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:15 - ಪರಿಶುದ್ದ ಬೈಬಲ್‌

15 ಇಸ್ರೇಲಿನ ದೇವರಾದ ಸರ್ವಶಕ್ತನಾದ ಯೆಹೋವನ ಸಂದೇಶವಿದು: “ಯೆಹೂದದ ಜನರು ಕಹಿಯಾದ ಆಹಾರವನ್ನು ತಿನ್ನುವಂತೆ ನಾನು ಬೇಗನೆ ಮಾಡುವೆನು; ಅವರು ವಿಷಮಿಶ್ರಿತ ನೀರನ್ನು ಕುಡಿಯುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದುದರಿಂದ ಆಹಾ, ನಾನು ಈ ಜನರಿಗೆ ವಿಷದ ಆಹಾರವನ್ನು ಮತ್ತು ಕಹಿಯಾದ ಪಾನಗಳನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದುದರಿಂದ ಈ ಜನರು ಕಹಿಯಾದ ಇಟ್ಟಿಕಾಯನ್ನು ತಿನ್ನುವಂತೆ ಮಾಡುವೆನು; ವಿಷ ಬೆರೆತ ನೀರನ್ನು ಕುಡಿಯುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಹಾ, ನಾನು ಈ ಜನರಿಗೆ ಕಹಿಯಾದ ಆಹಾರಪಾನಗಳನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈ ಕಾರಣದಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರಿಗೆ ಹೌದು, ಈ ಜನರಿಗೆ ಮಾಚಿಪತ್ರೆಯನ್ನು ತಿನ್ನುವುದಕ್ಕೆ ಕೊಡುತ್ತೇನೆ. ವಿಷದ ನೀರನ್ನು ಅವರಿಗೆ ಕುಡಿಯಲು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:15
19 ತಿಳಿವುಗಳ ಹೋಲಿಕೆ  

“ನಾವು ಇಲ್ಲಿ ಸುಮ್ಮನೆ ಕುಳಿತುಕೊಂಡಿರುವುದೇಕೆ? ಬನ್ನಿ, ನಾವು ಭದ್ರವಾದ ಪಟ್ಟಣಗಳಿಗೆ ಓಡಿಹೋಗೋಣ. ನಮ್ಮ ದೇವರಾದ ಯೆಹೋವನು ನಮ್ಮನ್ನು ಸಾಯುವಂತೆ ಮಾಡಿದರೆ ಅಲ್ಲಿಯೇ ಸತ್ತುಹೋಗೋಣ. ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ. ಆದ್ದರಿಂದ ಆತನು ನಮಗೆ ಕುಡಿಯಲು ವಿಷಮಿಶ್ರಿತ ನೀರನ್ನು ಕೊಟ್ಟಿದ್ದಾನೆ.


ಯೆಹೋವನು ನನಗೆ ಕುಡಿಯಲು ಈ ವಿಷವನ್ನು (ಶಿಕ್ಷೆಯನ್ನು) ಕೊಟ್ಟನು. ಕಹಿಯಾದ ಈ ಪಾನೀಯದಿಂದ ಆತನು ನನ್ನನ್ನು ತುಂಬಿಸಿದನು.


ನಿನ್ನ ಜನರಿಗೆ ಕಣ್ಣೀರನ್ನು ಆಹಾರವನ್ನಾಗಿ ಮಾಡಿರುವೆ. ನಿನ್ನ ಜನರಿಗೆ ಕಣ್ಣೀರು ತುಂಬಿರುವ ಪಾತ್ರೆಗಳನ್ನು ಕೊಟ್ಟಿರುವೆ. ಕಣ್ಣೀರೇ ಅವರಿಗೆ ಕುಡಿಯುವ ನೀರಾಗಿದೆ.


ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಬಗ್ಗೆ ಹೀಗೆನ್ನುತ್ತಾನೆ, “ನಾನು ಆ ಪ್ರವಾದಿಗಳನ್ನು ದಂಡಿಸುವೆನು. ಆ ಶಿಕ್ಷೆಯು ವಿಷಪೂರಿತ ಆಹಾರದಂತೆಯೂ ನೀರಿನಂತೆಯೂ ಇರುವುದು. ಪ್ರವಾದಿಗಳು ಒಂದು ಆಧ್ಯಾತ್ಮಿಕ ವ್ಯಾಧಿಯನ್ನು ಪ್ರಾರಂಭಿಸಿದರು. ಆ ವ್ಯಾಧಿಯು ಇಡೀ ದೇಶದಲ್ಲೆಲ್ಲ ಪ್ರಸರಿಸಿತು. ಆದ್ದರಿಂದ ನಾನು ಆ ಪ್ರವಾದಿಗಳನ್ನು ಶಿಕ್ಷಿಸುತ್ತೇನೆ. ಆ ವ್ಯಾಧಿಯು ಆ ಪ್ರವಾದಿಗಳಿಂದ ಜೆರುಸಲೇಮಿಗೆ ಬಂದಿತು.”


ಆ ನಕ್ಷತ್ರಕ್ಕೆ “ಕಹಿ ಮರ” ಎಂದು ಹೆಸರು. ನೀರಿನಲ್ಲಿ ಮೂರನೆಯ ಒಂದು ಭಾಗವು ಕಹಿಯಾಯಿತು. ಈ ಕಹಿಯಾದ ನೀರನ್ನು ಕುಡಿದು ಅನೇಕ ಜನರು ಸತ್ತುಹೋದರು.


ನನ್ನ ಸಂಕಟವನ್ನು ಮತ್ತು ಮನೆಯಿಲ್ಲದ ಸ್ಥಿತಿಯನ್ನು ನೆನಸಿಕೊಂಡರೆ ಅದು ಕಹಿ ವಿಷದಂತಿದೆ.


ಇಸ್ರೇಲಿನ ದೇವರಾದ ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಈ ಪಾನಪಾತ್ರೆಯನ್ನು ನನ್ನ ಕೈಯಿಂದ ತೆಗೆದುಕೋ. ಇದು ಕೋಪದ ದ್ರಾಕ್ಷಾರಸ. ನಾನು ನಿನ್ನನ್ನು ವಿವಿಧ ಜನಾಂಗಗಳಲ್ಲಿಗೆ ಕಳುಹಿಸುತ್ತಿದ್ದೇನೆ. ಆ ಜನಾಂಗಗಳಿಗೆಲ್ಲಾ ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಸು.


ನಿಮ್ಮ ರಕ್ಷಣೆಗಾಗಿ ನೀವು ಇತರರ ಮೇಲೆ ನಂಬಿಕೆ ಇಡಕೂಡದು. ಅವರು ಕೇವಲ ಸಾಯುವ ಮನುಷ್ಯರಷ್ಟೇ. ಆದ್ದರಿಂದ ಅವರನ್ನು ನೀವು ದೇವರಂತೆ ಬಲಿಷ್ಠರೆಂದು ನೆನಸಬಾರದು.


ಆ ಸಮಯದಲ್ಲಿ ಜನರು ತಮ್ಮ ಅಹಂಕಾರವನ್ನು ತೋರಿಸುವುದಿಲ್ಲ. ಈಗ ಅಹಂಕಾರಿಗಳಾಗಿರುವವರು ನೆಲದತನಕ ಬಗ್ಗಿಹೋಗುವರು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು.


ಯೆಹೋವನ ಕೈಯಲ್ಲಿ ಪಾತ್ರೆಯಿದೆ. ಆ ಪಾತ್ರೆಯು ವಿಷ ದ್ರಾಕ್ಷಾರಸದಿಂದ ತುಂಬಿದೆ. ಆತನು ದಂಡನೆಯೆಂಬ ಆ ವಿಷ ದ್ರಾಕ್ಷಾರಸವನ್ನು ಸುರಿಯುವನು; ದುಷ್ಟರು ಕೊನೆಯ ತೊಟ್ಟಿನವರೆಗೂ ಅದನ್ನು ಕುಡಿಯುವರು!


ಅವರು ನನಗೆ ಕೊಟ್ಟದ್ದು ವಿಷ, ಆಹಾರವಲ್ಲ. ಅವರು ನನಗೆ ಕೊಟ್ಟದ್ದು ಹುಳಿರಸ, ದ್ರಾಕ್ಷಾರಸವಲ್ಲ.


ನೀನು ನಿನ್ನ ಜನರಿಗೆ ಅನೇಕ ಕಷ್ಟಗಳನ್ನು ಕೊಟ್ಟಿರುವೆ. ನಾವು ಕುಡಿದವರಂತೆ ತೂರಾಡುತ್ತಾ ಬೀಳುತ್ತಿದ್ದೇವೆ.


ಇಲ್ಲಿರುವ ಯಾವ ಪುರುಷನಾಗಲಿ ಸ್ತ್ರೀಯಾಗಲಿ ಯಾವ ಗೋತ್ರದವರಾಗಲಿ ನಿಮ್ಮ ದೇವರಾದ ಯೆಹೋವನನ್ನು ಬಿಟ್ಟುಹೋಗದಂತೆ ನೋಡಿಕೊಳ್ಳಿರಿ. ಯಾವನೂ ಹೋಗಿ ಬೇರೆ ಜನಾಂಗಗಳ ದೇವರುಗಳ ಸೇವೆಮಾಡಬಾರದು. ಅಂಥದ್ದನ್ನು ಮಾಡುವ ಜನರು ಕಹಿಯಾದ ಮತ್ತು ವಿಷಭರಿತವಾದ ಹಣ್ಣನ್ನು ಬಿಡುವ ಗಿಡದಂತಿದ್ದಾರೆ.


“ಯೆಹೋವನು ನಿಮ್ಮನ್ನೂ ನಿಮ್ಮ ಅರಸನನ್ನೂ ನೀವು ಅರಿಯದ ದೇಶಕ್ಕೆ ಅಟ್ಟಿಬಿಡುವನು. ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಆ ದೇಶವನ್ನು ಎಂದೂ ನೋಡಲಿಲ್ಲ. ಅಲ್ಲಿ ಮರ, ಕಲ್ಲುಗಳಿಂದ ಮಾಡಿದ ಸುಳ್ಳುದೇವರನ್ನು ಆರಾಧಿಸುವಿರಿ.


ನಾನು ಖಡ್ಗ, ಕ್ಷಾಮ, ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು. ಅವರೆಲ್ಲರೂ ಸತ್ತುಹೋಗುವವರೆಗೆ ನಾನು ಅವರ ಮೇಲೆ ಧಾಳಿಮಾಡುವೆನು. ನಾನು ಅವರಿಗೆ ಮತ್ತು ಅವರ ಪೂರ್ವಿಕರಿಗೆ ಕೊಟ್ಟ ಭೂಮಿಯ ಮೇಲೆ ಅವರು ವಾಸಿಸಲಾಗುವದಿಲ್ಲ.”


ನಾನು ಯೆಹೂದದ ಜನರನ್ನು ಗಮನಿಸುತ್ತಿರುವುದು ಅವರನ್ನು ಕಾಪಾಡುವುದಕ್ಕಲ್ಲ. ನಾನು ಅವರನ್ನು ಗಮನಿಸುತ್ತಿರುವುದು ಅವರಿಗೆ ಕೇಡುಮಾಡುವುದಕ್ಕಾಗಿ. ಈಜಿಪ್ಟಿನಲ್ಲಿ ವಾಸಿಸುವ ಯೆಹೂದಿಯರು ಹಸಿವಿನಿಂದ ಸತ್ತುಹೋಗುವರು ಮತ್ತು ಖಡ್ಗಕ್ಕೆ ಬಲಿಯಾಗುವರು. ಅವರು ನಿರ್ನಾಮವಾಗುವವರೆಗೆ ಸಾಯುತ್ತಿರುವರು.


ಅವರ ಶತ್ರುಗಳ ಕಣ್ಣೆದುರಿನಲ್ಲಿಯೇ ನಾನು ಏಲಾಮನ್ನು ಚೂರುಚೂರು ಮಾಡುವೆನು. ಏಲಾಮ್ಯರನ್ನು ಕೊಲ್ಲಬೇಕೆಂದಿರುವ ಜನರೆದುರಿಗೆ ನಾನು ಎಲಾಮ್ಯರನ್ನು ಮುರಿದುಬಿಡುವೆನು. ನಾನು ಅವರ ಮೇಲೆ ಭಯಂಕರವಾದ ವಿಪತ್ತುಗಳನ್ನು ತರುವೆನು. ನನಗೆ ಎಷ್ಟು ಕೋಪ ಬಂದಿದೆ ಎಂಬುದನ್ನು ನಾನು ಅವರಿಗೆ ತೋರಿಸುವೆನು.” ಇದು ಯೆಹೋವನ ನುಡಿ. “ಏಲಾಮನ್ನು ಬೆನ್ನಟ್ಟಲು ನಾನೊಂದು ಖಡ್ಗವನ್ನು ಕಳುಹಿಸುವೆನು. ನಾನು ಏಲಾಮ್ಯರನ್ನೆಲ್ಲ ಕೊಂದುಹಾಕುವವರೆಗೆ ಆ ಖಡ್ಗವು ಅವರನ್ನು ಬೆನ್ನಟ್ಟುವುದು.


ನಿನ್ನ ಜನರಲ್ಲಿ ಮೂರನೆ ಒಂದು ಭಾಗ ಪಟ್ಟಣದೊಳಗೆ ರೋಗದಿಂದಲೂ ಹಸಿವಿನಿಂದಲೂ ಸಾಯುವರು. ಮೂರರಲ್ಲಿ ಇನ್ನೊಂದು ಭಾಗ ಪಟ್ಟಣದ ಹೊರಗೆ ರಣರಂಗದಲ್ಲಿ ಸಾಯುವರು. ಅನಂತರ ನಾನು ನನ್ನ ಖಡ್ಗವನ್ನು ಇರಿದು ಉಳಿದವರನ್ನು ಬಹುದೂರದ ದೇಶಕ್ಕೆ ಅಟ್ಟಿಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು