ಯೆರೆಮೀಯ 9:16 - ಪರಿಶುದ್ದ ಬೈಬಲ್16 ನಾನು ಯೆಹೂದದ ಜನರನ್ನು ಬೇರೆ ಜನಾಂಗಗಳಲ್ಲಿ ಚದರಿಸಿಬಿಡುತ್ತೇನೆ. ಅವರು ಮತ್ತು ಅವರ ತಂದೆಗಳು ಎಂದೂ ಅರಿಯದ ಅಪರಿಚಿತ ದೇಶಗಳಲ್ಲಿ ಅವರು ವಾಸಿಸುವರು. ನಾನು ಖಡ್ಗಧಾರಿಗಳಾದ ಜನರನ್ನು ಕಳುಹಿಸುತ್ತೇನೆ. ಅವರು ಯೆಹೂದದ ಜನರನ್ನು ನಿರ್ಮೂಲವಾಗುವವರೆಗೆ ಕೊಲ್ಲುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇವರಿಗಾಗಲಿ ಅಥವಾ ಇವರ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಜನಾಂಗಗಳೊಳಗೆ ಇವರನ್ನು ಚದರಿಸಿಬಿಟ್ಟು, ಇವರು ನಿರ್ಮೂಲವಾಗುವ ತನಕ ಖಡ್ಗವನ್ನು ಇವರ ಹಿಂದೆ ಕಳುಹಿಸುವೆನು” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇವರಿಗಾಗಲಿ ಇವರ ಪೂರ್ವಜರಿಗಾಗಲಿ ಪರಿಚಯವಿಲ್ಲದ ಜನಾಂಗಗಳ ನಡುವೆ ಇವರನ್ನು ಚದರಿಸಿಬಿಡುವೆನು. ಇವರು ಅಳಿದು ಹಾಳಾಗುವ ತನಕ ಇವರ ಹಿಂದೆ ಖಡ್ಗವನ್ನು ಕಳಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇವರಿಗಾಗಲಿ ಇವರ ಪಿತೃಗಳಿಗಾಗಲಿ ಗೊತ್ತಿಲ್ಲದ ಜನಾಂಗಗಳೊಳಗೆ ಇವರನ್ನು ಚದರಿಸಿಬಿಟ್ಟು ಇವರು ನಿರ್ಮೂಲವಾಗುವ ತನಕ ಖಡ್ಗವನ್ನು ಇವರ ಹಿಂದೆ ಕಳುಹಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವರಿಗೂ, ಅವರ ತಂದೆಗಳಿಗೂ ತಿಳಿಯದ ಇತರ ಜನಾಂಗಗಳಲ್ಲಿ ಅವರನ್ನು ಚದರಿಸುವೆನು. ಅವರನ್ನು ತೀರಿಸುವವರೆಗೆ ಖಡ್ಗವನ್ನು ಅವರ ಹಿಂದೆ ಕಳುಹಿಸುವೆನು.” ಅಧ್ಯಾಯವನ್ನು ನೋಡಿ |
ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”
ನೀನು ಎತ್ತರವಾದ ಸ್ಥಳಗಳ ಬಗ್ಗೆ ಭಯದಿಂದಿರುವೆ; ನಿನ್ನ ಹಾದಿಯಲ್ಲಿರುವ ಪ್ರತಿಯೊಂದು ಚಿಕ್ಕ ವಸ್ತುವಿಗೂ ಹೆದರಿಕೊಂಡು ನಡೆದಾಡುವೆ. ನಿನ್ನ ಕೂದಲು ಬಾದಾಮಿ ಮರದ ಹೂವುಗಳಂತೆ ಬಿಳುಪಾಗುವುದು. ನೀನು ನಡೆಯುವಾಗ ಮಿಡತೆಯಂತೆ ನಿನ್ನನ್ನು ಎಳೆದಾಡಿಕೊಂಡು ನಡೆಯುವೆ; ಮಗುವನ್ನು ಪಡೆಯಲಾರದಷ್ಟು ವಯಸ್ಸಾಗುವುದು. ಆಮೇಲೆ ನೀನು ನಿನ್ನ ಹೊಸ ಮನೆಗೆ (ಸಮಾಧಿಗೆ) ಹೋಗುವೆ. ನಿನ್ನ ಶವಸಂಸ್ಕಾರಕ್ಕೆ ಹೋಗಲು ಜನರು ಬೀದಿಗಳಲ್ಲಿ ತುಂಬಿರುವರು.