Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:19 - ಪರಿಶುದ್ದ ಬೈಬಲ್‌

19 “ಚೀಯೋನಿನಿಂದ ಮಹಾಗೋಳಾಟವು ಕೇಳಿಸುತ್ತಿದೆ: ‘ನಿಜವಾಗಿಯೂ ನಾವು ಹಾಳಾಗಿಹೋದೆವು. ನಿಜವಾಗಿಯೂ ನಾವು ನಾಚಿಕೆಪಡುವಂತಾಗಿದೆ. ನಾವು ನಮ್ಮ ನಾಡನ್ನು ಬಿಡಬೇಕು, ಏಕೆಂದರೆ ನಮ್ಮ ಮನೆಗಳನ್ನು ನಾಶಪಡಿಸಲಾಗಿದೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ‘ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, ಶತ್ರುಗಳು ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ’” ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸಿಯೋನಿನಿಂದ ಕೇಳಿಬಂದ ಪ್ರಲಾಪನೆ : “ಅಯ್ಯೋ ಹಾಳಾದೆವು, ನಮ್ಮ ಮಾನಮರ್ಯಾದೆ ಕಳೆದುಹೋಯಿತು ! ನಾವು ನಮ್ಮ ನಾಡನ್ನೇ ಬಿಟ್ಟು ತೊಲಗಬೇಕಾಗಿ ಬಂದಿತು. (ಶತ್ರುಗಳಿಂದ) ನಮ್ಮ ಮನೆಮಠಗಳು ನೆಲಸಮವಾದವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, [ಶತ್ರುಗಳು] ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ‘ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ, ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆ ಪಡುತ್ತೇವೆ, ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿಬಂತು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:19
20 ತಿಳಿವುಗಳ ಹೋಲಿಕೆ  

ಇಗೋ, ಆ ಶತ್ರುವು ಮೇಘಮಾಲೆಯಂತೆ ಬರುತ್ತಿದ್ದಾನೆ. ಅವನ ರಥಗಳು ಬಿರುಗಾಳಿಯಂತೆ ಕಾಣುತ್ತಿವೆ. ಅವನ ಕುದುರೆಗಳು ಹದ್ದುಗಳಿಗಿಂತ ವೇಗವಾಗಿ ಓಡುತ್ತಿವೆ. ಇದು ನಮಗೆ ತುಂಬ ಅಪಾಯಕಾರಿಯಾಗಿದೆ; ನಾವು ಹಾಳಾಗಿಹೋದೆವು.


ಹಗಲಿನಲ್ಲೂ ಕುರುಡರಂತೆ ನೀವು ತಡವರಿಸುವಿರಿ. ನೀವು ಮಾಡುವ ಕಾರ್ಯವೆಲ್ಲವೂ ನಿಷ್ಫಲವಾಗುವವು. ಜನರು ನಿಮ್ಮನ್ನು ಬಾಧಿಸಿ ನಿಮ್ಮಲ್ಲಿರುವದನ್ನೆಲ್ಲಾ ದೋಚಿಕೊಂಡು ಹೋಗುವರು. ನಿಮ್ಮನ್ನು ರಕ್ಷಿಸಲು ಯಾರೂ ಬರುವುದಿಲ್ಲ.


ಎದ್ದು ಈ ಸ್ಥಳವನ್ನು ಬಿಟ್ಟುಹೋಗು. ಇದು ನಿನ್ನ ವಿಶ್ರಾಂತಿಯ ಸ್ಥಳವಲ್ಲ, ಯಾಕೆಂದರೆ ನೀನು ಇದನ್ನು ಹಾಳು ಮಾಡಿರುವೆ. ನೀನು ಇದನ್ನು ಹೊಲಸು ಮಾಡಿರುವೆ, ಆದ್ದರಿಂದ ಇದು ನಾಶವಾಗುವದು; ಭಯಂಕರ ರೀತಿಯಲ್ಲಿ ಕೆಡವಲ್ಪಡುವದು.


ಆಗ ಜನರು ನಿಮ್ಮ ಬಗ್ಗೆ ಹಾಡನ್ನು ಹಾಡುವರು. ಜನರು ಶೋಕಗೀತೆಯನ್ನು ಹಾಡುವರು. ‘ನಾವು ನಾಶವಾದೆವು! ಯೆಹೋವನು ನಮ್ಮ ದೇಶವನ್ನು ನಮ್ಮಿಂದ ತೆಗೆದುಕೊಂಡು ಇತರ ಜನರಿಗೆ ಕೊಟ್ಟನು. ಹೌದು, ಆತನು ನಮ್ಮ ಭೂಮಿಯನ್ನು ನಮ್ಮಿಂದ ತೆಗೆದುಕೊಂಡುಬಿಟ್ಟನು, ನಮ್ಮ ಗದ್ದೆಗಳನ್ನು ಯೆಹೋವನು ನಮ್ಮ ವೈರಿಗಳಿಗೆ ಪಾಲು ಮಾಡಿಕೊಟ್ಟನು.


ನಮ್ಮ ದೇಶವು ಬೇರೆ ಜನಾಂಗಗಳವರ ಪಾಲಾಗಿದೆ. ನಮ್ಮ ಮನೆಗಳು ಪರದೇಶಿಗಳಿಗೆ ಕೊಡಲ್ಪಟ್ಟಿವೆ.


“ತೊಲಗಿಹೋಗಿ! ತೊಲಗಿಹೋಗಿ! ನಮ್ಮನ್ನು ಮುಟ್ಟಬೇಡಿ” ಎಂದು ಜನರು ಕೂಗಿಕೊಂಡರು. ಆ ಜನರು ಅಲೆದಾಡುತ್ತಿದ್ದರು. ಅವರಿಗೆ ಸ್ಥಳವಿರಲಿಲ್ಲ. ಬೇರೆ ಜನಾಂಗಗಳ ಜನರು, “ಅವರು ನಮ್ಮೊಂದಿಗೆ ವಾಸಿಸುವುದು ನಮಗೆ ಬೇಕಿಲ್ಲ” ಎಂದು ಹೇಳಿದರು.


ವಿನಾಶನದ ಮೇಲೆ ವಿನಾಶವು ಬಂದು ಇಡೀ ದೇಶವೇ ಹಾಳಾಗಿದೆ. ಫಕ್ಕನೆ ನನ್ನ ಗುಡಾರಗಳು ಹಾಳಾದವು. ನನ್ನ ಪರದೆಗಳು ಹರಿದುಹೋದವು.


“ಇಸ್ರೇಲಿನ ಜನರು ಗುಲಾಮರಾಗಿರುವರೇ? ಅವರು ಗುಲಾಮರಾಗಿ ಹುಟ್ಟಿದ ಮನುಷ್ಯನಂತಿರುವರೇ? ಬೇರೆಯವರು ಇಸ್ರೇಲರ ಸಂಪತ್ತನ್ನು ಏಕೆ ತೆಗೆದುಕೊಂಡರು?


“ನೀವು ನನ್ನ ಕಟ್ಟಳೆ ಮತ್ತು ನಿಯಮಗಳನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು. ನೀವು ಅವುಗಳಿಗೆ ವಿಧೇಯರಾಗಬೇಕು. ನಾನು ನಿಮ್ಮನ್ನು ನಿಮ್ಮ ದೇಶಕ್ಕೆ ನಡಿಸುತ್ತಿದ್ದೇನೆ. ನೀವು ಆ ದೇಶದಲ್ಲಿ ವಾಸಿಸುವಿರಿ. ನೀವು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯರಾದರೆ, ಆಗ ಆ ದೇಶವು ನಿಮ್ಮನ್ನು ಕಾರಿಬಿಡುವುದಿಲ್ಲ.


ನೀವು ಈ ಕಾರ್ಯಗಳನ್ನು ಮಾಡಿದರೆ, ನೀವು ಆ ದೇಶವನ್ನು ಹೊಲೆಮಾಡುವಿರಿ. ಅದು ಮೊದಲು ವಾಸಿಸಿದ ಜನಾಂಗಗಳನ್ನು ಕಾರಿಬಿಟ್ಟಂತೆ ನಿಮ್ಮನ್ನೂ ಕಾರಿಬಿಡುವುದು.


ಆದ್ದರಿಂದ ದೇಶವು ಸಹ ಅಶುದ್ಧವಾಯಿತು. ಆದ್ದರಿಂದ ನಾನು ಅದನ್ನು ಅದರ ಪಾಪಗಳಿಗಾಗಿ ದಂಡಿಸಿದೆನು. ಆ ದೇಶವು ತನ್ನಲ್ಲಿ ವಾಸಿಸಿದ ಜನರನ್ನು ಕಾರಿಬಿಟ್ಟಿತು.


ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ಎಸೆದುಬಿಟ್ಟ ಹಾಗೆ ನಿಮ್ಮನ್ನೂ ನನ್ನಿಂದ ದೂರ ಎಸೆದುಬಿಡುವೆನು.”


ನಿಜವಾಗಿ ಹೇಳುವುದಾದರೆ, ಯೆಹೂದದ ಜನರು ನನಗೆ ಕೇಡುಮಾಡುತ್ತಿಲ್ಲ, ಅವರು ತಮಗೇ ಕೇಡುಮಾಡಿಕೊಳ್ಳುತ್ತಿದ್ದಾರೆ. ಅವರು ತಮಗೆ ನಾಚಿಕೆಯಾಗುವಂತೆ ಮಾಡುತ್ತಿದ್ದಾರೆ” ಎಂದು ಯೆಹೋವನು ಹೇಳಿದನು.


“ಯೆರೆಮೀಯನೇ, ನಿನ್ನ ಕೂದಲನ್ನು ಕತ್ತರಿಸಿ ಎಸೆದುಬಿಡು. ಬೋಳುಶಿಖರಕ್ಕೆ ಹೋಗಿ ರೋಧಿಸು. ಏಕೆಂದರೆ ಯೆಹೋವನು ಈ ತಲೆಮಾರಿನ ಜನರನ್ನು ತಿರಸ್ಕರಿಸಿದ್ದಾನೆ; ಆತನು ಇವರಿಗೆ ವಿಮುಖನಾಗಿದ್ದಾನೆ. ಆತನು ಕೋಪದಿಂದ ಅವರನ್ನು ದಂಡಿಸುವನು.


ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.


ಹೆಂಗಸರಲ್ಲಿ ಕೆಲವರು ಈಗ ಶಾಂತರಾಗಿದ್ದಾರೆ. ಈಗ ನೀವು ಸುರಕ್ಷಿತರಾಗಿದ್ದೀರಿ ಎಂದು ನಿಮಗೆ ಅನ್ನಿಸುತ್ತದೆ. ಆದರೆ ನೀವು ಸುಮ್ಮನಿದ್ದು ನಾನು ಹೇಳುವ ಮಾತುಗಳನ್ನು ಕೇಳಬೇಕು.


“ನರಪುತ್ರನೇ, ತೂರಿನ ವಿಷಯವಾದ ಶೋಕಗೀತೆಯನ್ನು ಹಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು