Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:21 - ಪರಿಶುದ್ದ ಬೈಬಲ್‌

21 ಮೃತ್ಯುವು ಬಂದು ನಮ್ಮ ಕಿಟಕಿಗಳಿಂದ ಇಳಿದಿದೆ. ಮೃತ್ಯುವು ನಮ್ಮ ಅರಮನೆಗಳಲ್ಲಿ ಪ್ರವೇಶ ಮಾಡಿದೆ. ಬೀದಿಯಲ್ಲಿ ಆಡುವ ನಮ್ಮ ಮಕ್ಕಳಿಗೆ ಮೃತ್ಯುವು ಹಿಡಿದುಕೊಂಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸೇರುವ ನಮ್ಮ ಯುವಕರಿಗೆ ಮೃತ್ಯುವು ಹಿಡಿದುಕೊಂಡಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಏಕೆಂದರೆ ಬೀದಿಗಳಲ್ಲಿ ಮಕ್ಕಳೂ, ಚೌಕಗಳಲ್ಲಿ ಯುವಕರೂ ಇಲ್ಲದ ಹಾಗೆ ಮೃತ್ಯುವು ನಮ್ಮ ಕಿಟಕಿಗಳ ಮೇಲೆ ಹತ್ತಿ ನಮ್ಮ ಅರಮನೆಗಳೊಳಗೆ ನುಗ್ಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಏಕೆಂದರೆ ಮೃತ್ಯು ನಮ್ಮ ಕಿಟಕಿಗಳನ್ನು ಏರಿಬಂದಿದೆ ನಮ್ಮ ಉಪ್ಪರಿಗೆಗಳೊಳಗೆ ನುಗ್ಗಿಬಿಟ್ಟಿದೆ ಬೀದಿಗಳಲ್ಲಿ ಮಕ್ಕಳೂ ಕಡಿದುಬಿದ್ದರು ಚೌಕಗಳಲ್ಲಿ ಯುವಕರೂ ಇಲ್ಲವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಏಕಂದರೆ ಬೀದಿಗಳಲ್ಲಿ ಮಕ್ಕಳೂ ಚೌಕಗಳಲ್ಲಿ ಯುವಕರೂ ಇಲ್ಲದ ಹಾಗೆ ಮೃತ್ಯುವು ನಮ್ಮ ಕಿಟಕಿಗಳ ಮೇಲೆ ಹತ್ತಿ ನಮ್ಮ ಉಪ್ಪರಿಗೆಗಳೊಳಗೆ ನುಗ್ಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಏಕೆಂದರೆ, ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು. ನಮ್ಮ ಕೋಟೆಗಳಲ್ಲಿ ಸೇರಿತು. ಹೊರಗಡೆ ಮಕ್ಕಳನ್ನೂ, ಬೀದಿಗಳಲ್ಲಿ ಯೌವನಸ್ಥರನ್ನೂ ಕಡಿದು ಹಾಕುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:21
17 ತಿಳಿವುಗಳ ಹೋಲಿಕೆ  

ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತಿದೆ, ತಡೆದುತಡೆದು ನನಗೆ ಸಾಕಾಗಿದೆ. “ಬೀದಿಯಲ್ಲಾಡುವ ಮಕ್ಕಳ ಮೇಲೆ ಅದನ್ನು ಹೊಯ್ದುಬಿಡಬೇಕು. ಒಂದೆಡೆ ಸೇರುವ ತರುಣರ ಮೇಲೆ ಅದನ್ನು ಹೊಯ್ದುಬಿಡಬೇಕು. ಗಂಡಹೆಂಡತಿಯರಿಬ್ಬರನ್ನು ಅಪಹರಿಸಲಾಗುವುದು. ಮುದುಕರನ್ನೂ ಮುಪ್ಪಿನ ಮುದುಕರನ್ನೂ ಅಪಹರಿಸಲಾಗುವುದು.


ಯೆಹೂದದ ಜನರನ್ನು ನಾನು ಕವೆಗೋಲಿನಿಂದ ವಿಂಗಡಿಸಿದ ದೇಶದ ಎಲ್ಲಾ ನಗರಗಳ ದ್ವಾರದಲ್ಲಿ ಚದರಿಸುತ್ತೇನೆ. ನನ್ನ ಜನರು ಬದಲಾಗಲಿಲ್ಲ. ನಾನು ಅವರನ್ನು ನಾಶಮಾಡುತ್ತೇನೆ. ನಾನು ಅವರ ಮಕ್ಕಳನ್ನು ಕಸಿದುಕೊಳ್ಳುತ್ತೇನೆ.


ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.


ಯೌವನಸ್ಥರು ಆಯಾಸಗೊಳ್ಳುವರು. ಅವರಿಗೆ ವಿಶ್ರಾಂತಿ ಬೇಕು; ಹುಡುಗರೂ ಮುಗ್ಗರಿಸಿಬೀಳುವರು.


“ನಾನು ಯೆಹೂದದ ಜನರೆದುರಿಗೆ ಸಮಸ್ಯೆಗಳನ್ನು ಒಡ್ಡುವೆನು. ಅವುಗಳು ಜನರು ಎಡವಿಬೀಳುವ ಕಲ್ಲುಗಳಂತಾಗುವವು. ತಂದೆಗಳೂ ಮಕ್ಕಳೂ ಅವುಗಳಿಂದ ಎಡವಿಬೀಳುವರು. ಸ್ನೇಹಿತರು ಮತ್ತು ನೆರೆಹೊರೆಯವರು ಅವುಗಳಿಂದ ನಾಶವಾಗುವರು” ಅಂದನು.


ಆದ್ದರಿಂದ ಈಗ ಅವರ ಮಕ್ಕಳು ಕ್ಷಾಮಪೀಡಿತರಾಗಿ ಉಪವಾಸಬೀಳುವಂತೆ ಮಾಡು. ಅವರ ಶತ್ರುಗಳು ಅವರನ್ನು ಖಡ್ಗದಿಂದ ಸೋಲಿಸುವಂತೆ ಮಾಡು. ಅವರ ಹೆಂಡತಿಯರು ಮಕ್ಕಳನ್ನು ಕಳೆದುಕೊಳ್ಳಲಿ ಮತ್ತು ವಿಧವೆಯರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗದಿಂದ ಹತರಾಗಲಿ.


“ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ವಿಗ್ರಹಗಳ ಪೂಜೆಮಾಡಿ ನಿಮ್ಮನ್ನು ನೀವೇ ಏಕೆ ತೊಂದರೆಗೀಡು ಮಾಡಿಕೊಳ್ಳುವಿರಿ? ಈ ದುರಾಚಾರದ ನಿಮಿತ್ತ ನೀವು ಯೆಹೂದ ಕುಟುಂಬದಿಂದ ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು ಮತ್ತು ಕೂಸುಗಳನ್ನು ಅಗಲಿಸುತ್ತಿದ್ದೀರಿ. ಯೆಹೂದ ಕುಲದಿಂದ ಯಾರೂ ಉಳಿಯದಂತೆ ಮಾಡುತ್ತಿದ್ದೀರಿ.


ಬಾಬಿಲೋನಿನ ತರುಣರನ್ನು ಬೀದಿಗಳಲ್ಲಿ ಕೊಲ್ಲಲಾಗುವುದು. ಅದರ ಎಲ್ಲಾ ಸೈನಿಕರು ಅಂದು ಸಾಯುವರು.” ಯೆಹೋವನು ಹೀಗೆನ್ನುತ್ತಾನೆ:


ಅವರು ಪಟ್ಟಣದ ಕಡೆಗೆ ಓಡಿ ತ್ವರೆಯಾಗಿ ಗೋಡೆ ಹತ್ತುವರು. ಮನೆಯೊಳಗೆ ನುಗ್ಗುವರು; ಕಳ್ಳರಂತೆ ಕಿಟಕಿಯಿಂದ ನುಸುಳುವರು.


ಆ ಸಮಯದಲ್ಲಿ ಒಂದು ಮನೆಯಲ್ಲಿ ಹತ್ತು ಮಂದಿ ಇದ್ದರೂ ಅವರು ಸಾಯುವರು.


ಆಗ ಸತ್ತವರ ದೇಹಗಳು ಭೂಮಿಯ ಮೇಲೆ ಬಿದ್ದಿರುತ್ತವೆ; ಅವು ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ಕಾಡುಪ್ರಾಣಿಗಳಿಗೂ ಆಹಾರವಾಗುತ್ತವೆ. ಆ ಪಕ್ಷಿಗಳನ್ನು ಮತ್ತು ಪ್ರಾಣಿಗಳನ್ನು ಓಡಿಸುವದಕ್ಕೆ ಒಬ್ಬನಾದರೂ ಜೀವಂತವಾಗಿರುವುದಿಲ್ಲ.


ಜೆರುಸಲೇಮಿನ ಜನರು ಸೂರ್ಯನನ್ನು, ಚಂದ್ರನನ್ನು, ನಕ್ಷತ್ರಗಣಗಳನ್ನು ಪ್ರೀತಿಸಿ, ಅನುಸರಿಸಿ, ವಿಚಾರಿಸಿ, ಪೂಜಿಸಿದ್ದರಿಂದ ಅವರ ಎಲುಬುಗಳನ್ನು ಅವುಗಳ ಕೆಳಗೆ ಭೂಮಿಯ ಮೇಲೆ ಹರಡುವರು. ಯಾರೊಬ್ಬರೂ ಆ ಎಲುಬುಗಳನ್ನು ಪುನಃ ಒಂದೆಡೆ ಸೇರಿಸಿ ಹೂಳುವುದಿಲ್ಲ. ಆ ಎಲುಬುಗಳು ಭೂಮಿಯ ಮೇಲೆ ಎಸೆದ ಸಗಣಿಯಂತಾಗುವವು.


ಇಸ್ರೇಲ್ ಕುಮಾರಿಯು ಬಿದ್ದಳು. ಇನ್ನೆಂದಿಗೂ ಆಕೆ ಏಳುವದಿಲ್ಲ. ಆಕೆ ಒಬ್ಬಂಟಿಗಳಾಗಿ ಧೂಳಿನ ಮೇಲೆ ಬಿದ್ದಿದ್ದಾಳೆ. ಆಕೆಯನ್ನು ಎಬ್ಬಿಸಲು ಯಾರೂ ಇಲ್ಲ.


ಯೆಹೋವನು ಹೇಳುವುದೇನೆಂದರೆ, “ಜನರ ಜೀವನವನ್ನು ನಾನು ಬಹು ಕಷ್ಟಕರವಾಗಿ ಮಾಡುವೆನು. ಅವರು ಕುರುಡರಂತೆ ಅತ್ತಿತ್ತ ತೊಳಲಾಡುವರು. ತಾವು ಎಲ್ಲಿಗೆ ಹೋಗುತ್ತಿದ್ದಾರೆಂದು ಅವರಿಗೆ ತಿಳಿಯದು. ಯಾಕೆಂದರೆ ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದಾರೆ. ಅನೇಕ ಮಂದಿ ಕೊಲ್ಲಲ್ಪಡುವರು. ಅವರ ರಕ್ತವು ಭೂಮಿಗೆ ಸುರಿಯಲ್ಪಡುವುದು. ಅವರ ಹೆಣಗಳು ಮಲದ ಹಾಗೆ ನೆಲದಲ್ಲಿ ಬೀಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು