ಯೆರೆಮೀಯ 9:25 - ಪರಿಶುದ್ದ ಬೈಬಲ್25 “ಕೇವಲ ದೈಹಿಕವಾಗಿ ಸುನ್ನತಿಯನ್ನು ಮಾಡಿಕೊಂಡ ಜನರನ್ನು ನಾನು ಶಿಕ್ಷಿಸುವ ಕಾಲ ಬರಲಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 “ಆಹಾ, ಐಗುಪ್ತರು, ಯೆಹೂದ್ಯರು, ಎದೋಮ್ಯರು, ಅಮ್ಮೋನ್ಯರು, ಮೋವಾಬ್ಯರು, ಚಂಡಿಕೆಯನ್ನು ಬಿಟ್ಟುಕೊಂಡಿರುವ ಅರಣ್ಯದ ನಿವಾಸಿಗಳು, ಅಂತು ಸುನ್ನತಿಯುಳ್ಳವರಾದರೂ ಸುನ್ನತಿಯಿಲ್ಲದ ಇವರೆಲ್ಲರನ್ನೂ ನಾನು ದಂಡಿಸುವ ದಿನಗಳು ಬರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 “ಈಜಿಪ್ಟರು, ಯೆಹೂದ್ಯರು, ಎದೋಮ್ಯರು, ಅಮ್ಮೋನ್ಯರು, ಮೊವಾಬ್ಯರು, ಮುಂದಲೆ ಕೂದಲನ್ನು ಕತ್ತರಿಸಿಕೊಳ್ಳುವ ಅರಣ್ಯವಾಸಿಗಳು, ಅಂತು ದೇಹದಲ್ಲಿ ಮಾತ್ರ ಸುನ್ನತಿಯುಳ್ಳವರು, ಇವರೆಲ್ಲರನ್ನು ದಂಡಿಸುವ ದಿನಗಳು ಬರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆಹಾ, ಐಗುಪ್ತ್ಯರು ಯೆಹೂದ್ಯರು ಎದೋಮ್ಯರು ಅಮ್ಮೋನ್ಯರು ಮೋವಾಬ್ಯರು ಚಂಡಿಕೆಬಿಟ್ಟುಕೊಂಡಿರುವ ಅರಣ್ಯನಿವಾಸಿಗಳು, ಅಂತು ಸುನ್ನತಿಯುಳ್ಳವರಾದರೂ ಸುನ್ನತಿಯಿಲ್ಲದ ಇವರೆಲ್ಲರನ್ನೂ ನಾನು ದಂಡಿಸುವ ದಿನಗಳು ಬರುತ್ತವೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25-26 “ಇಗೋ, ನಾನು ಸುನ್ನತಿ ಇಲ್ಲದವರ ಸಂಗಡ ಸುನ್ನತಿ ಉಳ್ಳವರೆಲ್ಲರನ್ನೂ, ಈಜಿಪ್ಟನ್ನೂ, ಯೆಹೂದವನ್ನೂ, ಎದೋಮನ್ನೂ, ಅಮ್ಮೋನನ ಮಕ್ಕಳನ್ನೂ, ಮೋವಾಬನ್ನೂ, ಮರುಭೂಮಿಯ ನಿವಾಸಿಗಳಾಗಿರುವ ಕಟ್ಟಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿವಸಗಳು ಬರುತ್ತವೆ. ಏಕೆಂದರೆ ಈ ಜನಾಂಗಗಳವರು ಸುನ್ನತಿಯಿಲ್ಲದವರು. ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿ ಇಲ್ಲದವರಾಗಿದ್ದಾರೆ,” ಎಂದು ಯೆಹೋವ ದೇವರು ಅನ್ನುತ್ತಾರೆ. ಅಧ್ಯಾಯವನ್ನು ನೋಡಿ |
ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು.
ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”
“ಈಜಿಪ್ಟೇ, ಏದೆನಿನಲ್ಲಿ ಎಷ್ಟೋ ದೊಡ್ಡ, ಬಲಶಾಲಿಯಾಗಿರುವ ಮರಗಳಿವೆ. ಅದರ ಯಾವ ಮರಕ್ಕೆ ನಿನ್ನನ್ನು ಹೋಲಿಸಲಿ? ಅವೆಲ್ಲವೂ ಭೂಮಿಯ ಕೆಳಗೆ ಪಾತಾಳವನ್ನು ಸೇರಿದವು. ನೀನು ಕೂಡಾ ಆ ಪರದೇಶಸ್ಥರೊಂದಿಗೆ ಆ ಸ್ಥಳಕ್ಕೆ ಸೇರುವೆ. ರಣರಂಗದಲ್ಲಿ ಸತ್ತವರೊಂದಿಗೆ ನೀನು ಬಿದ್ದುಕೊಳ್ಳುವೆ. “ಹೌದು, ಈ ರೀತಿಯಾಗಿ ಫರೋಹನಿಗೂ ಅವನೊಂದಿಗಿರುವ ಜನರ ಗುಂಪಿಗೂ ಆಗುವದು.” ಇದು ಒಡೆಯನಾದ ಯೆಹೋವನ ನುಡಿ.
ನೀವು ನನ್ನ ಆಲಯದೊಳಗೆ ಅನ್ಯರನ್ನು ತಂದಿರುತ್ತೀರಿ. ಅವರು ಸುನ್ನತಿಯಾದವರಾಗಿರಲಿಲ್ಲ. ಅವರು ಸಂಪೂರ್ಣವಾಗಿ ನನ್ನನ್ನು ನಂಬಿರಲಿಲ್ಲ. ಈ ರೀತಿಯಾಗಿ ನೀವು ನನ್ನ ಆಲಯವನ್ನು ಹೊಲೆ ಮಾಡಿರುತ್ತೀರಿ. ನೀವು ನಾವು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಬಿಟ್ಟಿರಿ. ಭಯಂಕರ ಕೃತ್ಯಗಳನ್ನು ಮಾಡಿ ಆಮೇಲೆ ನನಗೆ ರೊಟ್ಟಿ, ಕೊಬ್ಬು, ರಕ್ತಗಳ ಕಾಣಿಕೆ ಅರ್ಪಿಸುತ್ತೀರಿ. ಆದರೆ ಇವೆಲ್ಲಾ ನನ್ನ ಆಲಯವನ್ನು ಅಶುದ್ಧಗೊಳಿಸುತ್ತಿವೆ.