26 ನಾನು ಈಜಿಪ್ಟ್, ಯೆಹೂದ, ಎದೋಮ್, ಅಮ್ಮೋನ್, ಮೋವಾಬ್ ಜನಾಂಗಗಳ ಜನರ ಬಗ್ಗೆ ಮತ್ತು ಮರಳು ಪ್ರದೇಶದಲ್ಲಿ ವಾಸಮಾಡುತ್ತಿರುವ ಎಲ್ಲಾ ಜನಗಳ ಬಗ್ಗೆ ಮಾತನಾಡುತ್ತಿದ್ದೇನೆ. ಈ ಎಲ್ಲಾ ದೇಶಗಳ ಜನರಿಗೆ ದೈಹಿಕವಾಗಿ ಸುನ್ನತಿ ಆಗಿದ್ದಿಲ್ಲ. ಆದರೆ ಇಸ್ರೇಲ್ ವಂಶದವರು ಹೃದಯ ಸುನ್ನತಿಯಿಲ್ಲದವರು” ಎಂದು ಯೆಹೋವನು ಅನ್ನುತ್ತಾನೆ.
ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”
ನಾನು ಅವರಿಗೆ ವಿಮುಖನಾಗಿ ಅವರನ್ನು ಶತ್ರುಗಳ ದೇಶಕ್ಕೆ ಕರೆದುಕೊಂಡು ಬಂದೆನೆಂದು ಅವರು ಅರಿತುಕೊಂಡು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಪಾಪಕ್ಕೆ ಬರತಕ್ಕ ಶಿಕ್ಷೆಯನ್ನು ಸ್ವೀಕರಿಸಲು ಯೋಗ್ಯರೆಂದು ಹೇಳಿಕೊಂಡರೆ
ನೀವು ನನ್ನ ಆಲಯದೊಳಗೆ ಅನ್ಯರನ್ನು ತಂದಿರುತ್ತೀರಿ. ಅವರು ಸುನ್ನತಿಯಾದವರಾಗಿರಲಿಲ್ಲ. ಅವರು ಸಂಪೂರ್ಣವಾಗಿ ನನ್ನನ್ನು ನಂಬಿರಲಿಲ್ಲ. ಈ ರೀತಿಯಾಗಿ ನೀವು ನನ್ನ ಆಲಯವನ್ನು ಹೊಲೆ ಮಾಡಿರುತ್ತೀರಿ. ನೀವು ನಾವು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಬಿಟ್ಟಿರಿ. ಭಯಂಕರ ಕೃತ್ಯಗಳನ್ನು ಮಾಡಿ ಆಮೇಲೆ ನನಗೆ ರೊಟ್ಟಿ, ಕೊಬ್ಬು, ರಕ್ತಗಳ ಕಾಣಿಕೆ ಅರ್ಪಿಸುತ್ತೀರಿ. ಆದರೆ ಇವೆಲ್ಲಾ ನನ್ನ ಆಲಯವನ್ನು ಅಶುದ್ಧಗೊಳಿಸುತ್ತಿವೆ.
ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!
“ವೈರಿಯು ಅವರ ಒಂಟೆಗಳನ್ನು ಮತ್ತು ಅವರ ದನಗಳ ಮಂದೆಗಳನ್ನು ಅಪಹರಿಸುವನು. ವೈರಿಯು ಅವರ ದೊಡ್ಡದೊಡ್ಡ ಮಂದೆಗಳನ್ನು ಅಪಹರಿಸುವನು. ತಮ್ಮ ಗಡ್ಡದ ಕೂದಲಿನ ಮೂಲೆಗಳನ್ನು ಕತ್ತರಿಸಿಕೊಂಡ ಜನರನ್ನು ನಾನು ಭೂಮಂಡಲದ ಎಲ್ಲೆಡೆಗಳಲ್ಲಿ ಚದರಿಸುವೆನು. ಎಲ್ಲಾ ಕಡೆಯಿಂದಲೂ ಅವರ ಮೇಲೆ ವಿಪತ್ತುಗಳನ್ನು ಬರಮಾಡುವೆನು.” ಇದು ಯೆಹೋವನ ನುಡಿ.
ಯೋನಾತಾನನು ತನ್ನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಸಹಾಯಕನಿಗೆ, “ಆ ಹೊರದೇಶಿಯರ ಪಾಳೆಯಕ್ಕೆ ಹೋಗೋಣ ಬಾ. ಈ ಜನರನ್ನು ಸೋಲಿಸಲು ಯೆಹೋವನು ಬಹುಶಃ ನಮ್ಮನ್ನು ಬಳಸಬಹುದು. ಯೆಹೋವನನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ನಮ್ಮಲ್ಲಿ ಅನೇಕ ಸೈನಿಕರಿದ್ದರೂ ಇಲ್ಲವೆ ಕೆಲವೇ ಸೈನಿಕರಿದ್ದರೂ ಅದು ಲೆಕ್ಕಕ್ಕೆ ಬರುವುದಿಲ್ಲ” ಎಂದು ಹೇಳಿದನು.
ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು.
ನಾನು ಯಾರೊಂದಿಗೆ ಮಾತನಾಡಲಿ? ನಾನು ಯಾರಿಗೆ ಎಚ್ಚರಿಕೆಯ ನುಡಿಗಳನ್ನು ಹೇಳಲಿ? ನನ್ನ ಮಾತನ್ನು ಯಾರು ಕೇಳುತ್ತಾರೆ? ಇಸ್ರೇಲಿನ ಜನರು ತಮ್ಮ ಕಿವಿಗಳನ್ನು ಮುಚ್ಚಿಕೊಂಡಿದ್ದಾರೆ. ಅವರು ನನ್ನ ಎಚ್ಚರಿಕೆಯ ನುಡಿಗಳನ್ನು ಕೇಳಲಾರರು. ಜನರಿಗೆ ಯೆಹೋವನ ಉಪದೇಶ ರುಚಿಸುವದಿಲ್ಲ. ಅವರು ಯೆಹೋವನ ನುಡಿಗಳನ್ನು ಕೇಳಬಯಸುವದಿಲ್ಲ.
ಬಾಬಿಲೋನಿನ ರಾಜನು ಕೆಲವು ಜನ ಯೆಹೂದಿಯರನ್ನು ಆ ಪ್ರದೇಶದಲ್ಲಿ ಬಿಟ್ಟುಹೋಗಿದ್ದಾನೆ ಮತ್ತು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರ ಅಧಿಪತಿಯನ್ನಾಗಿ ನೇಮಿಸಿದ್ದಾನೆ ಎಂಬ ಸಮಾಚಾರವನ್ನು ಮೋವಾಬ್, ಎದೋಮ್, ಅಮ್ಮೋನ್ ಮೊದಲಾದ ದೇಶಗಳಲ್ಲಿ ಚದುರಿಹೋಗಿದ್ದ ಯೆಹೂದಿಯರು ಕೇಳಿದರು.
“ಈಜಿಪ್ಟೇ, ಏದೆನಿನಲ್ಲಿ ಎಷ್ಟೋ ದೊಡ್ಡ, ಬಲಶಾಲಿಯಾಗಿರುವ ಮರಗಳಿವೆ. ಅದರ ಯಾವ ಮರಕ್ಕೆ ನಿನ್ನನ್ನು ಹೋಲಿಸಲಿ? ಅವೆಲ್ಲವೂ ಭೂಮಿಯ ಕೆಳಗೆ ಪಾತಾಳವನ್ನು ಸೇರಿದವು. ನೀನು ಕೂಡಾ ಆ ಪರದೇಶಸ್ಥರೊಂದಿಗೆ ಆ ಸ್ಥಳಕ್ಕೆ ಸೇರುವೆ. ರಣರಂಗದಲ್ಲಿ ಸತ್ತವರೊಂದಿಗೆ ನೀನು ಬಿದ್ದುಕೊಳ್ಳುವೆ. “ಹೌದು, ಈ ರೀತಿಯಾಗಿ ಫರೋಹನಿಗೂ ಅವನೊಂದಿಗಿರುವ ಜನರ ಗುಂಪಿಗೂ ಆಗುವದು.” ಇದು ಒಡೆಯನಾದ ಯೆಹೋವನ ನುಡಿ.