Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:3 - ಪರಿಶುದ್ದ ಬೈಬಲ್‌

3 “ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಉಪಯೋಗಿಸುತ್ತಿದ್ದಾರೆ. ಅವರ ಬಾಯಿಂದ ಬಾಣಗಳಂತೆ ಸುಳ್ಳುಗಳು ಬರುತ್ತಿವೆ. ಈ ನಾಡಿನಲ್ಲಿ ಸತ್ಯವಲ್ಲ, ‘ಅಸತ್ಯ’ ಪ್ರಬಲವಾಗುತ್ತಿದೆ. ಅವರು ಒಂದು ಪಾಪದಿಂದ ಮತ್ತೊಂದು ಪಾಪಕ್ಕೆ ಹೋಗುತ್ತಿದ್ದಾರೆ. ಅವರು ನನ್ನನ್ನು ಅರಿತಿಲ್ಲ.” ಯೆಹೋವನು ಈ ಮಾತನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರ : “ಸುಳ್ಳಾಡಲು ಬಿಲ್ಲಿನಂತೆ ನಾಲಿಗೆ ಬಗ್ಗಿಸುತ್ತಾರೆ ಸತ್ಯಕ್ಕೆ ಪ್ರತಿಕೂಲವಾಗಿಯೆ ನಾಡಿನಲ್ಲಿ ಪ್ರಬಲಿಸಿದ್ದಾರೆ ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನಾದರೊ ಅರಿಯದೆ ಇದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸುಳ್ಳಾಡುವದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬೊಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ; ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವುದಿಲ್ಲ. ಏಕೆಂದರೆ ಅವರು ಒಂದು ಪಾಪದಿಂದ ಇನ್ನೊಂದು ಪಾಪಕ್ಕೆ ಹೋಗುತ್ತಾ, ನನ್ನನ್ನು ಅರಿಯದೆ ಇದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:3
43 ತಿಳಿವುಗಳ ಹೋಲಿಕೆ  

ಯೆಹೂದದ ಜನರ ನಾಲಿಗೆಗಳು ಚೂಪಾದ ಬಾಣಗಳಂತಿವೆ. ಅವರ ಬಾಯಿಗಳು ಸುಳ್ಳಾಡುತ್ತವೆ. ಪ್ರತಿಯೊಬ್ಬನು ತನ್ನ ನೆರೆಮನೆಯವನೊಂದಿಗೆ ನಯವಾಗಿ ಮಾತನಾಡುತ್ತಾನೆ. ರಹಸ್ಯವಾಗಿ ತನ್ನ ನೆರೆಮನೆಯವನನ್ನು ಆಕ್ರಮಣಮಾಡಲು ಯುಕ್ತಿ ಮಾಡುತ್ತಿರುತ್ತಾನೆ.


“ಜನರ ಬಾಯಿಗಳು ತೆರೆದ ಸಮಾಧಿಗಳಂತಿವೆ. ಅವರು ಸುಳ್ಳು ಹೇಳಲು ತಮ್ಮ ನಾಲಿಗೆಗಳನ್ನು ಬಳಸುತ್ತಾರೆ.” “ಅವರು ಹೇಳುವ ಸಂಗತಿಗಳು ವಿಷಪೂರಿತವಾದ ಹಾವುಗಳಂತಿವೆ.”


ದೇವರು, “ನನ್ನ ಜನರು ಮೂರ್ಖರಾಗಿದ್ದಾರೆ. ಅವರು ನನ್ನನ್ನು ಅರಿಯದವರಾಗಿದ್ದಾರೆ. ಅವರು ಮೂಢ ಮಕ್ಕಳಾಗಿದ್ದಾರೆ. ಅವರು ಅವಿವೇಕಿಗಳಾಗಿದ್ದಾರೆ. ಅವರು ದುಷ್ಕೃತ್ಯದಲ್ಲಿ ನಿಪುಣರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡಲರಿಯದವರಾಗಿದ್ದಾರೆ” ಎಂದನು.


ಈ ಪೀಳಿಗೆಯವರೆಲ್ಲರು ಸತ್ತುಹೋದ ಮೇಲೆ ಮುಂದಿನ ಪೀಳಿಗೆಯು ಬೆಳೆಯಿತು. ಈ ಹೊಸ ಪೀಳಿಗೆಗೆ ಯೆಹೋವನ ಬಗ್ಗೆ ಮತ್ತು ಯೆಹೋವನು ಇಸ್ರೇಲಿನ ಜನರಿಗಾಗಿ ಮಾಡಿದ ಮಹತ್ಕಾರ್ಯಗಳ ಬಗ್ಗೆ ಏನೂ ಗೊತ್ತಿರಲಿಲ್ಲ.


ತಮ್ಮ ನೆರೆಮನೆಯವರಿಗೂ ತಮ್ಮ ಬಂಧುಬಳಗದವರಿಗೂ ಯಾರೂ ಯೆಹೋವನ ಬಗ್ಗೆ ಹೇಳಿಕೊಡಬೇಕಾಗಿಲ್ಲ. ಯಾಕೆಂದರೆ ಅತಿ ಕನಿಷ್ಠರಿಂದ ಅತಿ ಪ್ರಮುಖರವರೆಗೆ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಕ್ಷಮಿಸುವೆನು. ನಾನು ಅವರ ಪಾಪಗಳನ್ನು ಮರೆತುಬಿಡುವೆನು.” ಇದು ಯೆಹೋವನ ನುಡಿ.


ಏಲಿಯ ಮಕ್ಕಳು ದುಷ್ಟರಾಗಿದ್ದರು. ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.


ನಮ್ಮ ಸಹೋದರರು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಸೋಲಿಸಿದರು. ಅವರು ತಮ್ಮ ಜೀವಗಳನ್ನು ಪ್ರೀತಿಸಲಿಲ್ಲ. ಅವರು ಮರಣಕ್ಕೆ ಭಯಪಡಲಿಲ್ಲ.


ಪ್ರಿಯ ಸ್ನೇಹಿತರೇ, ನಾವೆಲ್ಲರೂ ಹಂಚಿಕೊಳ್ಳುವ ರಕ್ಷಣೆಯನ್ನು ಕುರಿತು ನಿಮಗೆ ಬರೆಯಬೇಕೆಂದು ನಾನು ಬಹಳವಾಗಿ ಇಚ್ಛಿಸಿದ್ದೆನು. ಆದರೆ ಮತ್ತೊಂದು ವಿಷಯದ ಬಗ್ಗೆ ನಾನು ನಿಮಗೆ ಬರೆಯುವುದು ಅಗತ್ಯವೆನಿಸಿತು. ದೇವರು ತನ್ನ ಪರಿಶುದ್ಧ ಜನರಿಗೆ ದಯಪಾಲಿಸಿರುವ ನಂಬಿಕೆಗಾಗಿ ನೀವು ಪ್ರಯಾಸಪಟ್ಟು ಹೋರಾಡುವಂತೆ ನಾನು ನಿಮ್ಮನ್ನು ಪ್ರೋತ್ಸಾಹಿಸಲು ಇಚ್ಛಿಸುತ್ತೇನೆ. ದೇವರು ನಮಗೆ ಈ ನಂಬಿಕೆಯನ್ನು ಒಂದೇಸಲ ದಯಪಾಲಿಸಿದನು. ಅದು ಸರ್ವಕಾಲಗಳಲ್ಲಿಯೂ ಒಳ್ಳೆಯದಾಗಿದೆ.


ದುಷ್ಟರು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನದಿಂದ ದಿನಕ್ಕೆ ಕೀಳುಮಟ್ಟಕ್ಕೆ ಇಳಿಯುತ್ತಿದ್ದಾರೆ.


ಅಲ್ಲದೆ ನಿಮ್ಮನ್ನು ವಿರೋಧಿಸುವ ಜನರಿಗೆ ನೀವು ಹೆದರಿಕೊಳ್ಳುವುದಿಲ್ಲ. ನಿಮ್ಮ ರಕ್ಷಣೆಗೂ ನಿಮ್ಮ ವೈರಿಗಳ ನಾಶಕ್ಕೂ ಇವುಗಳು ದೇವರಿಂದಾದ ಪ್ರಮಾಣಗಳಾಗಿವೆ.


ದೇವರ ನಿಜ ಜ್ಞಾನವನ್ನು ಹೊಂದಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ದೇವರು ಅವರನ್ನು ಅವರ ಅಯೋಗ್ಯ ಭಾವಕ್ಕೆ ಒಪ್ಪಿಸಿಕೊಟ್ಟನು. ಆದ್ದರಿಂದ ಅವರು ತಾವು ಮಾಡಬಾರದ ಕೆಲಸಗಳನ್ನು ಮಾಡುತ್ತಾರೆ.


ನಾನು ಸುವಾರ್ತೆಯ ವಿಷಯದಲ್ಲಿ ಹೆಮ್ಮೆಪಡುತ್ತೇನೆ. ನಂಬುವ ಪ್ರತಿಯೊಬ್ಬರನ್ನು ರಕ್ಷಿಸುವುದಕ್ಕಾಗಿ ಅಂದರೆ ಮೊದಲನೆಯದಾಗಿ, ಯೆಹೂದ್ಯರನ್ನು ಅನಂತರ ಯೆಹೂದ್ಯರಲ್ಲದವರನ್ನು ಸಹ ರಕ್ಷಿಸುವುದಕ್ಕಾಗಿ ದೇವರು ಸುವಾರ್ತೆ ಎಂಬ ಶಕ್ತಿಯನ್ನು ಉಪಯೋಗಿಸುತ್ತಾನೆ.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನು ಮತ್ತು ನೀನು ಕಳುಹಿಸಿದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ನಿತ್ಯಜೀವ.


ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯವರಲ್ಲಿ ಯಾವನಾದರೂ ನನಗೂ ನನ್ನ ಉಪದೇಶಕ್ಕೂ ನಾಚಿಕೊಂಡರೆ, ಮನುಷ್ಯಕುಮಾರನಾದ ನಾನು ನನ್ನ ತಂದೆಯ ಮಹಿಮೆಯೊಂದಿಗೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವ ಸಮಯದಲ್ಲಿ ಅವನ ಬಗ್ಗೆ ನಾಚಿಕೆಪಡುವೆನು” ಎಂದು ಹೇಳಿದನು.


ಯೋಷೀಯನು ದೀನದರಿದ್ರರಿಗೆ ಸಹಾಯ ಮಾಡುತ್ತಿದ್ದನು. ಯೋಷೀಯನು ಹಾಗೆ ಮಾಡಿದ್ದರಿಂದ ಎಲ್ಲವೂ ಸರಿಹೋಯಿತು. ಯೆಹೋಯಾಕೀಮನೇ, ‘ದೇವರನ್ನು ಅರಿತುಕೊಳ್ಳುವುದು ಎಂದರೇನು?’ ನ್ಯಾಯ ಮತ್ತು ನೀತಿಯಿಂದ ನಡೆದುಕೊಳ್ಳುವುದು, ನನ್ನನ್ನು ಅರಿತುಕೊಳ್ಳಲು ಬೇಕಾದದ್ದು ಅದೇ. ಇದು ಯೆಹೋವನಿಂದ ಬಂದ ಸಂದೇಶ:


ಪ್ರತಿಯೊಬ್ಬನೂ ತನ್ನ ನೆರೆಯವನಿಗೆ ಸುಳ್ಳು ಹೇಳುತ್ತಾನೆ. ಒಬ್ಬನೂ ಸತ್ಯವನ್ನು ನುಡಿಯುವದಿಲ್ಲ. ಯೆಹೂದದ ಜನರು ತಮ್ಮ ನಾಲಿಗೆಗಳಿಗೆ ಸುಳ್ಳು ಹೇಳುವದನ್ನು ಕಲಿಸಿದ್ದಾರೆ. ಅವರು ಹಿಂತಿರುಗಿ ಬರಲು ಆಯಾಸವಾಗುವಷ್ಟು ಪಾಪಗಳನ್ನು ಮಾಡಿದ್ದಾರೆ.


ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಅತಿ ಮೊಂಡರಾಗಿದ್ದು ಅವರ ತಂದೆಗಳಿಗಿಂತ ಹೆಚ್ಚಿನ ದುಷ್ಕೃತ್ಯಗಳನ್ನು ಮಾಡಿದರು.


ಸ್ವಸ್ಥಚಿತ್ತರಾಗಿರಿ ಮತ್ತು ಪಾಪಮಾಡುವುದನ್ನು ನಿಲ್ಲಿಸಿರಿ. ನಿಮ್ಮಲ್ಲಿ ಕೆಲವರು ದೇವರನ್ನು ಅರಿತುಕೊಂಡಿಲ್ಲ. ನಿಮಗೆ ನಾಚಿಕೆ ಆಗಲೆಂದು ಇದನ್ನು ಹೇಳುತ್ತಿದ್ದೇನೆ.


“ನೀವು ಕದಿಯಬಾರದು; ಮೋಸಮಾಡಬಾರದು; ಒಬ್ಬರಿಗೊಬ್ಬರು ಸುಳ್ಳಾಡಬಾರದು.


ಎತ್ತು ತನ್ನ ದಣಿಯನ್ನು ತಿಳಿದದೆ; ಕತ್ತೆಯು ತನ್ನ ದಣಿಯ ಕೊಟ್ಟಿಗೆಯನ್ನು ತಿಳಿದದೆ. ಆದರೆ ಇಸ್ರೇಲರು ನನ್ನನ್ನು ತಿಳಿದೇ ಇಲ್ಲ. ನನ್ನ ಜನರು ನನ್ನನ್ನು ಅರ್ಥಮಾಡಿಕೊಳ್ಳುವುದೇ ಇಲ್ಲ.”


ಪ್ರಜೆಗಳು ಒಬ್ಬರಿಗೊಬ್ಬರು ವಿರೋಧಿಗಳಾಗುವರು; ಬಾಲಕರು ಹಿರಿಯರನ್ನು ಗೌರವಿಸರು. ಸಾಮಾನ್ಯರು ಗಣ್ಯವ್ಯಕ್ತಿಗಳನ್ನು ಸನ್ಮಾನಿಸರು.”


ಆಗ ನಾನು ಬಹು ಭಯಗೊಂಡು, “ಅಯ್ಯೋ, ನಾನು ನಾಶವಾಗುತ್ತಿದ್ದೇನೆ. ನಾನು ದೇವರೊಂದಿಗೆ ಮಾತನಾಡುವಷ್ಟು ಯೋಗ್ಯನಲ್ಲ. ದೇವರೊಂದಿಗೆ ಮಾತಾಡಲು ಯೋಗ್ಯರಲ್ಲದ ಜನರೊಂದಿಗೆ ನಾನು ಜೀವಿಸುತ್ತಿದ್ದೇನೆ. ಆದರೂ ನಾನು ಸರ್ವಶಕ್ತನಾದ ಯೆಹೋವನನ್ನು, ರಾಜಾಧಿರಾಜನನ್ನು ನೋಡಿದೆನು” ಎಂದೆನು.


ಆದರೆ ನಾನು ನನ್ನೊಳಗೆ, “ಕೇವಲ ಸಾಮಾನ್ಯ ಜನರು ಇಷ್ಟು ಮೂರ್ಖರಾಗಿರಬಹುದು. ಅವರು ಯೆಹೋವನ ಮಾರ್ಗವನ್ನು ತಿಳಿದುಕೊಂಡಿಲ್ಲ. ಸಾಮಾನ್ಯ ಜನರಿಗೆ ತಮ್ಮ ದೇವರ ಉಪದೇಶ ತಿಳಿದಿಲ್ಲ.


ನಾನು ಯೆಹೂದದ ಜನನಾಯಕರ ಹತ್ತಿರ ಹೋಗಿ ಅವರೊಂದಿಗೆ ಮಾತನಾಡುವೆನು. ಜನನಾಯಕರು ಯೆಹೋವನ ಮಾರ್ಗಗಳನ್ನು ನಿಶ್ಚಯವಾಗಿ ತಿಳಿದುಕೊಂಡಿರುವರು. ಅವರು ತಮ್ಮ ಯೆಹೋವನ ನ್ಯಾಯವಿಧಿಗಳನ್ನು ಅರಿತುಕೊಂಡಿರುತ್ತಾರೆ” ಅಂದುಕೊಂಡೆನು. ಆದರೆ ಈ ಜನನಾಯಕರುಗಳೆಲ್ಲಾ ದೇವರ ಸೇವೆಯನ್ನು ತೊರೆದುಬಿಟ್ಟಿದ್ದರು. ಅವರು ದೇವರಿಗೆ ವಿರೋಧಿಗಳಾದರು.


ಆ ಇಬ್ಬರು ಅರಸರು ಒಬ್ಬರಿಗೊಬ್ಬರು ಕೇಡುಮಾಡಬೇಕೆಂದು ನಿಶ್ಚಯಿಸುವರು. ಅವರಿಬ್ಬರೂ ಒಂದೇ ಮೇಜಿನಲ್ಲಿ ಕುಳಿತುಕೊಳ್ಳುವರು ಮತ್ತು ಒಬ್ಬರಿಗೊಬ್ಬರು ಸುಳ್ಳು ಹೇಳುವರು. ಆದರೆ ಇದರಿಂದ ಅವರಿಬ್ಬರಲ್ಲಿ ಯಾರಿಗೂ ಒಳ್ಳೆಯದಾಗುವದಿಲ್ಲ. ಏಕೆಂದರೆ ದೇವರು ಅವರ ಅಂತ್ಯಕಾಲವನ್ನು ನಿರ್ಧರಿಸಿದ್ದಾನೆ.


ಆಕೆ ಆ ಮೇಲಂಗಿಯನ್ನು ತನ್ನ ಗಂಡನೂ ಯೋಸೇಫನಿಗೆ ಧಣಿಯೂ ಆಗಿದ್ದ ಪೋಟೀಫರನು ಬರುವ ತನಕ ಇಟ್ಟುಕೊಂಡಿದ್ದಳು.


ಸಂಸೋನನ ಹೆಂಡತಿಯು ಔತಣದ ಏಳು ದಿನಗಳೆಲ್ಲಾ ಅಳುತ್ತಿದ್ದಳು. ಆದ್ದರಿಂದ ಏಳನೆಯ ದಿನ ಅವನು ಒಗಟಿನ ಅರ್ಥವನ್ನು ಅವಳಿಗೆ ಹೇಳಿದನು. ಅವಳು ಪೀಡಿಸಿದ್ದರಿಂದ ಅವನು ಹೇಳಿದನು. ಆಗ ಅವಳು ತನ್ನ ಜನರಲ್ಲಿಗೆ ಹೋಗಿ ಆ ಒಗಟಿನ ಅರ್ಥವನ್ನು ತಿಳಿಸಿದಳು.


ಶಿಷ್ಟರ ಆಲೋಚನೆ ನ್ಯಾಯವಾಗಿವೆ. ದುಷ್ಟರ ಉಪದೇಶ ಮೋಸಕರ.


ದುಷ್ಟತನವು ಒಂದು ಚಿಕ್ಕ ಬೆಂಕಿಯಂತಿದೆ. ಮೊಟ್ಟ ಮೊದಲು ಬೆಂಕಿಯು ಹಣಜಿಗಳನ್ನು ಮತ್ತು ಮುಳ್ಳುಗಿಡಗಳನ್ನು ಸುಡುವುದು. ಅನಂತರ ಬೆಂಕಿಯು ಕಾಡಿನ ದೊಡ್ಡ ಪೊದೆಗಳನ್ನು ಸುಡುವುದು. ಕೊನೆಗದು ದೊಡ್ಡ ಗಾತ್ರದ ಬೆಂಕಿಯಾಗಿ ಎಲ್ಲವನ್ನೂ ಸುಟ್ಟುಬಿಟ್ಟು ಎಲ್ಲವೂ ಹೊಗೆಯಾಗಿ ಪರಿಣಮಿಸುವದು.


ಅವರೆಲ್ಲರು ನನಗೆ ವಿರುದ್ಧವಾಗಿ ದಂಗೆ ಎದ್ದಿದ್ದಾರೆ; ಅವರು ಬಹಳ ಹಟಮಾರಿಗಳಾಗಿದ್ದಾರೆ. ಅವರು ಜನರ ಬಗ್ಗೆ ಅಪಪ್ರಚಾರ ಮಾಡುತ್ತಾ ತಿರುಗಾಡುತ್ತಾರೆ. ಅವರು ಬಣ್ಣಗುಂದಿದ, ತುಕ್ಕುಹಿಡಿದ ಕಂಚಿನಂತೆಯೂ ಕಬ್ಬಿಣದಂತೆಯೂ ಇದ್ದಾರೆ.


ಈ ಜನರು ನಿನ್ನ ಸ್ವಂತ ಸಹೋದರರಾಗಿದ್ದಾರೆ. ನಿನ್ನ ಸ್ವಂತ ಕುಟುಂಬದ ಜನರೇ ನಿನ್ನ ವಿರುದ್ಧ ಕೂಗಾಡುತ್ತಾ ಸಂಚು ಮಾಡುತ್ತಿದ್ದಾರೆ. ಅವರು ನಿನ್ನೊಡನೆ ಸ್ನೇಹಿತರಂತೆ ಮಾತನಾಡಿದರೂ ಅವರನ್ನು ನಂಬಬೇಡ.”


ಬಳಿಕ ದೇವರು ನನಗೆ, “ನೀನು ನನ್ನೊಂದಿಗೆ ಬಂದರೆ, ಜನರು ಮಾಡುವ ಇನ್ನೂ ಭಯಂಕರ ಸಂಗತಿಗಳನ್ನು ನೀನು ನೋಡುವೆ” ಎಂದು ಹೇಳಿದನು.


ಉಳಿದ ಯೆಹೂದ್ಯರು, “ಈ ಸಂಗತಿಗಳು ನಿಜವಾಗಿಯೂ ಸತ್ಯವಾದುವುಗಳು!” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು