Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:4 - ಪರಿಶುದ್ದ ಬೈಬಲ್‌

4 “ನಿಮ್ಮ ನೆರೆಮನೆಯವರ ಬಗ್ಗೆ ಎಚ್ಚರವಹಿಸಿರಿ; ನಿಮ್ಮ ಸ್ವಂತ ಸಹೋದರನನ್ನೂ ನಂಬಬೇಡಿ. ಏಕೆಂದರೆ ಪ್ರತಿಯೊಬ್ಬ ಸಹೋದರನೂ ಮೋಸಗಾರನಾಗಿದ್ದಾನೆ. ಪ್ರತಿಯೊಬ್ಬ ನೆರೆಯವನೂ ನಿಮ್ಮ ಮರೆಯಲ್ಲಿ ನಿಮ್ಮನ್ನು ನಿಂದಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀವೆಲ್ಲರೂ ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ. ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಹೇಳುತ್ತಾ ತಿರುಗಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿಮ್ಮ ನಿಮ್ಮ ಗೆಳೆಯರ ವಿಷಯದಲ್ಲಿ ಎಚ್ಚರಿಕೆಯಾಗಿರಿ ಯಾರೇ ಆಗಲಿ, ತನ್ನ ಸಹೋದರನನ್ನೂ ನಂಬದಿರಲಿ. ಪ್ರತಿಯೊಬ್ಬ ಸೋದರನೂ ವಂಚಿಸುವುದರಲ್ಲಿ ಯಕೋಬನಿಗೆ ಸಮಾನ. ಒಬ್ಬೊಬ್ಬ ಗೆಳೆಯನೂ ತಿರುಗಾಡುತ್ತಾನೆ ಚಾಡಿಹೇಳುತ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀವೆಲ್ಲರೂ ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ, ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ; ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಹೇಳುತ್ತಾ ತಿರುಗಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ. ಯಾವ ಸಹೋದರನಲ್ಲಾದರೂ ನಂಬಿಕೆ ಇಡಬೇಡಿರಿ. ಏಕೆಂದರೆ ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸ ಮಾಡುವರು; ನೆರೆಯವರೆಲ್ಲರೂ ಚಾಡಿ ಹೇಳುತ್ತಾ ತಿರುಗಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:4
28 ತಿಳಿವುಗಳ ಹೋಲಿಕೆ  

ಅವರೆಲ್ಲರು ನನಗೆ ವಿರುದ್ಧವಾಗಿ ದಂಗೆ ಎದ್ದಿದ್ದಾರೆ; ಅವರು ಬಹಳ ಹಟಮಾರಿಗಳಾಗಿದ್ದಾರೆ. ಅವರು ಜನರ ಬಗ್ಗೆ ಅಪಪ್ರಚಾರ ಮಾಡುತ್ತಾ ತಿರುಗಾಡುತ್ತಾರೆ. ಅವರು ಬಣ್ಣಗುಂದಿದ, ತುಕ್ಕುಹಿಡಿದ ಕಂಚಿನಂತೆಯೂ ಕಬ್ಬಿಣದಂತೆಯೂ ಇದ್ದಾರೆ.


“ಸಹೋದರರು ಸ್ವಂತ ಸಹೋದರರಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು. ತಂದೆಯಂದಿರು ತಮ್ಮ ಸ್ವಂತ ಮಕ್ಕಳಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು.


ಬೇರೆ ಜನರ ವಿರುದ್ಧ ಚಾಡಿ ಹೇಳಬಾರದು. ನಿಮ್ಮ ನೆರೆಯವನ ಪ್ರಾಣವನ್ನು ಅಪಾಯಕ್ಕೆ ಈಡುಮಾಡುವ ಯಾವ ಕಾರ್ಯವನ್ನೂ ನೀವು ಮಾಡಬಾರದು. ನಾನೇ ಯೆಹೋವನು!


ಈ ಜನರು ನಿನ್ನ ಸ್ವಂತ ಸಹೋದರರಾಗಿದ್ದಾರೆ. ನಿನ್ನ ಸ್ವಂತ ಕುಟುಂಬದ ಜನರೇ ನಿನ್ನ ವಿರುದ್ಧ ಕೂಗಾಡುತ್ತಾ ಸಂಚು ಮಾಡುತ್ತಿದ್ದಾರೆ. ಅವರು ನಿನ್ನೊಡನೆ ಸ್ನೇಹಿತರಂತೆ ಮಾತನಾಡಿದರೂ ಅವರನ್ನು ನಂಬಬೇಡ.”


ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳುವವನು ಅಪಾಯಕಾರಿ. ಅವನು ದೊಣ್ಣೆಯಂತೆಯೂ ಕತ್ತಿಯಂತೆಯೂ ಚೂಪಾದ ಬಾಣದಂತೆಯೂ ಇದ್ದಾನೆ.


ದ್ವೇಷವನ್ನು ಮರೆಮಾಡಲು ಒಬ್ಬನು ಸುಳ್ಳು ಹೇಳಬೇಕಾಗಬಹುದು. ಆದರೆ ಹರಟೆಗಾರನು ನಿಜವಾಗಿಯೂ ಮೂಢನಾಗಿದ್ದಾನೆ.


ಅವನು ಚಾಡಿ ಹೇಳದವನೂ ನೆರೆಯವರಿಗೆ ಕೇಡನ್ನು ಮಾಡದವನೂ ತನ್ನ ಸ್ವಂತ ಕುಟುಂಬದವರನ್ನು ನಿಂದಿಸದವನೂ ಆಗಿರಬೇಕು.


ಆಗ ಆ ಪುರುಷನು, “ಇನ್ನು ಮೇಲೆ ನಿನ್ನ ಹೆಸರು ‘ಯಾಕೋಬ’ ಎಂದಿರುವುದಿಲ್ಲ. ಇಂದಿನಿಂದ ನಿನ್ನ ಹೆಸರು ‘ಇಸ್ರೇಲ್’ ಎಂದಾಗುವುದು. ನಾನೇ ನಿನಗೆ ಈ ಹೆಸರನ್ನು ಕೊಟ್ಟಿದ್ದೇನೆ; ಯಾಕೆಂದರೆ ನೀನು ದೇವರೊಡನೆಯೂ ಮನುಷ್ಯರೊಡನೆಯೂ ಹೋರಾಡಿದೆ; ಆದರೂ ನೀನು ಸೋಲಲಿಲ್ಲ” ಎಂದು ಹೇಳಿದನು.


ಈ ವಿಷಯದಲ್ಲಿ ನಿಮ್ಮಲ್ಲಿ ಯಾರೂ ಕ್ರಿಸ್ತನಲ್ಲಿ ಸಹೋದರನಾದವನನ್ನು ವಂಚಿಸಿ ಕೇಡುಮಾಡಬಾರದು. ನಾವು ಈಗಾಗಲೇ ನಿಮಗೆ ಹೇಳಿದಂತೆ ಮತ್ತು ಎಚ್ಚರಿಕೆ ನೀಡಿದಂತೆ ಇವೆಲ್ಲವುಗಳ ವಿಷಯದಲ್ಲಿ ದೇವರು ದಂಡಿಸುತ್ತಾನೆ.


ನಿಮ್ಮ ತಂದೆತಾಯಿಗಳು, ಸಹೋದರರು, ಸಂಬಂಧಿಕರು ಮತ್ತು ಸ್ನೇಹಿತರು ಸಹ ನಿಮಗೆ ವಿರುದ್ಧವಾಗುವರು. ನಿಮ್ಮಲ್ಲಿ ಕೆಲವರನ್ನು ಅವರು ಕೊಲ್ಲುವರು.


ಜನರ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ನಿಮ್ಮನ್ನು ಅವರು ಬಂಧಿಸಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವರು. ಅವರು ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.


ಜೆರುಸಲೇಮ್ ನಿವಾಸಿಗಳು ಇತರರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಾರೆ. ಆ ನಿರಪರಾಧಿ ಜನರನ್ನು ಹತ್ಯೆ ಮಾಡಲು ಹಾಗೆ ಮಾಡುತ್ತಾರೆ. ಆ ಜನರು ಬೆಟ್ಟದ ಮೇಲೆ ಹೋಗಿ ಸುಳ್ಳುದೇವರುಗಳನ್ನು ಸನ್ಮಾನಿಸುವುದಕ್ಕಾಗಿ ಊಟಮಾಡುತ್ತಾರೆ. “‘ಜೆರುಸಲೇಮಿನ ಜನರು ಎಲ್ಲಾ ಬಗೆಯ ಲೈಂಗಿಕ ಪಾಪಗಳನ್ನು ಮಾಡುತ್ತಾರೆ.


ಅಸತ್ಯವಾಡುವ ಸುಳ್ಳುಸಾಕ್ಷಿ ಮತ್ತು ಸಹೋದರರಲ್ಲಿ ಜಗಳ ಬಿತ್ತುವ ವ್ಯಕ್ತಿ.


ಯೆಹೋವನು ಈ ಆರು ವಸ್ತುಗಳನ್ನು ದ್ವೇಷಿಸುತ್ತಾನೆ, ಇಲ್ಲ, ಏಳು ವಸ್ತುಗಳನ್ನು ದ್ವೇಷಿಸುತ್ತಾನೆ:


ನೆರೆಯವನ ಕುರಿತು ಗುಟ್ಟಾಗಿ ಚಾಡಿ ಹೇಳುವವನನ್ನು ನಾನು ತಡೆಯುವೆನು. ಗರ್ವಪಡುವುದಕ್ಕಾಗಲಿ ತಮ್ಮನ್ನೇ ಉತ್ತಮರೆಂದು ಭಾವಿಸಿಕೊಳ್ಳುವುದಕ್ಕಾಗಲಿ ನಾನು ಅವರಿಗೆ ಅವಕಾಶ ಕೊಡುವುದಿಲ್ಲ.


ನಾವು ಪಾಪಮಾಡಿ ಯೆಹೋವನಿಂದ ದೂರ ಹೋಗಿದ್ದೇವೆ. ಆತನಿಂದ ದೂರವಾಗಿ ಆತನನ್ನು ತೊರೆದುಬಿಟ್ಟಿದ್ದೇವೆ. ನಾವು ದುಷ್ಟತನವನ್ನೂ ದೇವರಿಗೆ ವಿರುದ್ಧವಾದ ಕಾರ್ಯಗಳನ್ನೂ ಆಲೋಚಿಸಿದ್ದೇವೆ. ನಮ್ಮ ಹೃದಯಗಳಲ್ಲಿ ದುಷ್ಟಯೋಜನೆಗಳನ್ನು ಹಾಕಿರುತ್ತೇವೆ.


ಯೆಹೂದದ ಜನರ ನಾಲಿಗೆಗಳು ಚೂಪಾದ ಬಾಣಗಳಂತಿವೆ. ಅವರ ಬಾಯಿಗಳು ಸುಳ್ಳಾಡುತ್ತವೆ. ಪ್ರತಿಯೊಬ್ಬನು ತನ್ನ ನೆರೆಮನೆಯವನೊಂದಿಗೆ ನಯವಾಗಿ ಮಾತನಾಡುತ್ತಾನೆ. ರಹಸ್ಯವಾಗಿ ತನ್ನ ನೆರೆಮನೆಯವನನ್ನು ಆಕ್ರಮಣಮಾಡಲು ಯುಕ್ತಿ ಮಾಡುತ್ತಿರುತ್ತಾನೆ.


ನಮಗೆಲ್ಲರಿಗೂ ಒಬ್ಬನೇ ತಂದೆಯಾದ ದೇವರು. ಆ ದೇವರೇ ನಮ್ಮೆಲ್ಲರನ್ನು ಉಂಟುಮಾಡಿದನು. ಹೀಗಿರುವಾಗ ಜನರು ತಮ್ಮ ಸಹೋದರರನ್ನು ಯಾಕೆ ಮೋಸಪಡಿಸುತ್ತಾರೆ? ಒಡಂಬಡಿಕೆಯನ್ನು ಅವರು ಮಾನ್ಯತೆ ಮಾಡುವವರೆಂದು ಜನರಿಗೆ ತೋರಿಸುವದಿಲ್ಲ. ತಮ್ಮ ಪೂರ್ವಿಕರು ಯೆಹೋವನೊಂದಿಗೆ ಮಾಡಿದ್ದ ಒಡಂಬಡಿಕೆಯನ್ನು ಅವರು ಮಾನ್ಯತೆ ಮಾಡಲಿಲ್ಲ.


ಏನಾದರೂ ಕೇಡುಮಾಡದಿದ್ದರೆ ಕೆಡುಕರಿಗೆ ನಿದ್ರೆಬಾರದು. ಯಾರಿಗಾದರೂ ನೋವು ಮಾಡದೆ ಅವರು ನಿದ್ರಿಸಲಾರರು.


ಅವರು ಬೇರೆಯವರಿಗೆ ಕೇಡನ್ನಾಗಲಿ ನೋವನ್ನಾಗಲಿ ಮಾಡದೆ ಜೀವಿಸಲಾರರು. ಅದೇ ಅವರ ಆಹಾರ ಮತ್ತು ಪಾನೀಯ.


ಜನರಿಗೆ ಮಾರ್ಗದರ್ಶನ ಮಾಡುವ ನಾಯಕರು ಜನರನ್ನು ತಪ್ಪುದಾರಿಯಲ್ಲಿ ನಡಿಸುತ್ತಿದ್ದಾರೆ. ಅವರನ್ನು ಹಿಂಬಾಲಿಸುವ ಜನರು ನಾಶವಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು