Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:5 - ಪರಿಶುದ್ದ ಬೈಬಲ್‌

5 ಪ್ರತಿಯೊಬ್ಬನೂ ತನ್ನ ನೆರೆಯವನಿಗೆ ಸುಳ್ಳು ಹೇಳುತ್ತಾನೆ. ಒಬ್ಬನೂ ಸತ್ಯವನ್ನು ನುಡಿಯುವದಿಲ್ಲ. ಯೆಹೂದದ ಜನರು ತಮ್ಮ ನಾಲಿಗೆಗಳಿಗೆ ಸುಳ್ಳು ಹೇಳುವದನ್ನು ಕಲಿಸಿದ್ದಾರೆ. ಅವರು ಹಿಂತಿರುಗಿ ಬರಲು ಆಯಾಸವಾಗುವಷ್ಟು ಪಾಪಗಳನ್ನು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವುದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ. ತಮಗೆ ಆಯಾಸವಾಗುವ ಮಟ್ಟಿಗೆ ಕೆಡುಕನ್ನು ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಎಲ್ಲರು ತಂತಮ್ಮ ಗೆಳೆಯರಿಗೆ ಮೋಸಮಾಡುತ್ತಾರೆ ಸತ್ಯವನ್ನು ನುಡಿವುದೇ ಇಲ್ಲ; ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ ಆಯಾಸವಾಗುವ ಮಟ್ಟಿಗೂ ಕೆಡಕನ್ನು ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ; ತಮಗೆ ಆಯಾಸವಾಗುವ ಮಟ್ಟಿಗೂ ಕೆಡುಕನ್ನು ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತನಾಡರು. ಸುಳ್ಳುಗಳನ್ನು ಹೇಳುವುದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಪಾಪದಿಂದ ತಮ್ಮನ್ನು ಸುಸ್ತಾಗಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:5
32 ತಿಳಿವುಗಳ ಹೋಲಿಕೆ  

ಆ ಜನರು ಕಟ್ಟುವ ಪ್ರತಿಯೊಂದನ್ನೂ ಸರ್ವಶಕ್ತನಾದ ಯೆಹೋವನು ಬೆಂಕಿಯಿಂದ ನಾಶಮಾಡುವ ತೀರ್ಮಾನವನ್ನು ಮಾಡಿರುತ್ತಾನೆ. ಅವರು ಮಾಡಿದ ಕೆಲಸವೆಲ್ಲವೂ ವ್ಯರ್ಥವಾಗುವದು.


ಪಟ್ಟಣದ ಧನಿಕರು ಕ್ರೂರವಾದ ಮತ್ತು ದುಷ್ಟತ್ವದ ಕೃತ್ಯಗಳನ್ನು ಇನ್ನೂ ಮಾಡುತ್ತಿದ್ದಾರೆ. ಆ ಪಟ್ಟಣದಲ್ಲಿರುವ ಜನರು ಇನ್ನೂ ಸುಳ್ಳು ಹೇಳುತ್ತಾರೆ. ಹೌದು, ಆ ಜನರು ತಮ್ಮ ಸುಳ್ಳನ್ನು ಪ್ರದರ್ಶಿಸುತ್ತಾರೆ.


ಇವುಗಳನ್ನೆಲ್ಲಾ ನೀವು ಬಹು ಪ್ರಯಾಸದಿಂದ ಮಾಡಿದರೂ ಆಯಾಸಗೊಂಡಿಲ್ಲ. ಯಾಕೆಂದರೆ ಇವುಗಳನ್ನು ಮಾಡುವುದರಲ್ಲೇ ನಿಮಗೆ ಸಂತೋಷ.


ನಿನ್ನ ಪಾಪವೇ ನಿನ್ನ ಮಾತುಗಳಿಗೆ ಪ್ರೇರಕವಾಗಿವೆ. ನೀನು ಮೋಸಕರವಾದ ಮಾತುಗಳನ್ನು ಬಳಸುತ್ತಿರುವೆ.


ಆ ಬೋಧನೆಗಳು ಸುಳ್ಳು ಹೇಳುವ ಮತ್ತು ವಂಚಿಸುವ ಜನರ ಮೂಲಕ ಬರುತ್ತವೆ. ಅವರು ಸರಿತಪ್ಪುಗಳ ಭೇದವನ್ನು ಗುರುತಿಸುವುದಿಲ್ಲ. ಕಾದ ಕಬ್ಬಿಣದಿಂದ ಸುಟ್ಟು ಬೂದಿಯಾಗುವಂತೆ ಅವರ ವಿವೇಕವು ನಾಶಗೊಂಡಿದೆ.


ಆದ್ದರಿಂದ ನೀವು ಸುಳ್ಳು ಹೇಳದೆ ಒಬ್ಬರಿಗೊಬ್ಬರು ಯಾವಾಗಲೂ ಸತ್ಯವನ್ನೇ ಹೇಳಿರಿ. ಏಕೆಂದರೆ ನಾವೆಲ್ಲರೂ ಒಂದೇ ದೇಹಕ್ಕೆ ಸೇರಿದ ಅಂಗಗಳಾಗಿದ್ದೇವೆ.


ಯೆಹೋವನು ಹೇಳುವುದೇನೆಂದರೆ, “ನನ್ನ ಜನರೇ, ನಾನು ಮಾಡಿದ್ದೇನು ತಿಳಿಸಿರಿ. ನಿಮಗೆ ವಿರೋಧವಾಗಿ ನಾನು ಏನಾದರೂ ಮಾಡಿದ್ದೇನೋ? ನಿಮಗೆ ಜೀವಿಸಲು ಕಷ್ಟವಾಗುವಂತೆ ಮಾಡಿದ್ದೇನೋ?


“‘ತನ್ನ ಕಿಲುಬುಗಳ ಕಲೆಯನ್ನು ತೆಗೆಯಲು ಜೆರುಸಲೇಮ್ ತುಂಬಾ ಕಷ್ಟಪಡಬಹುದು. ಆದರೆ ಆ ಕಿಲುಬು ಹೋಗುವದಿಲ್ಲ. ಬೆಂಕಿಯು ಮಾತ್ರ ಕಿಲುಬನ್ನು ತೆಗೆದುಹಾಕುವುದು.


ಯೆಹೂದದ ಜನರ ನಾಲಿಗೆಗಳು ಚೂಪಾದ ಬಾಣಗಳಂತಿವೆ. ಅವರ ಬಾಯಿಗಳು ಸುಳ್ಳಾಡುತ್ತವೆ. ಪ್ರತಿಯೊಬ್ಬನು ತನ್ನ ನೆರೆಮನೆಯವನೊಂದಿಗೆ ನಯವಾಗಿ ಮಾತನಾಡುತ್ತಾನೆ. ರಹಸ್ಯವಾಗಿ ತನ್ನ ನೆರೆಮನೆಯವನನ್ನು ಆಕ್ರಮಣಮಾಡಲು ಯುಕ್ತಿ ಮಾಡುತ್ತಿರುತ್ತಾನೆ.


“ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಉಪಯೋಗಿಸುತ್ತಿದ್ದಾರೆ. ಅವರ ಬಾಯಿಂದ ಬಾಣಗಳಂತೆ ಸುಳ್ಳುಗಳು ಬರುತ್ತಿವೆ. ಈ ನಾಡಿನಲ್ಲಿ ಸತ್ಯವಲ್ಲ, ‘ಅಸತ್ಯ’ ಪ್ರಬಲವಾಗುತ್ತಿದೆ. ಅವರು ಒಂದು ಪಾಪದಿಂದ ಮತ್ತೊಂದು ಪಾಪಕ್ಕೆ ಹೋಗುತ್ತಿದ್ದಾರೆ. ಅವರು ನನ್ನನ್ನು ಅರಿತಿಲ್ಲ.” ಯೆಹೋವನು ಈ ಮಾತನ್ನು ಹೇಳಿದನು.


ಆ ಜನರನ್ನು ನೋಡಿರಿ. ಜನರು ಹಗ್ಗಗಳಿಂದ ಗಾಡಿಯನ್ನು ಎಳೆದುಕೊಂಡು ಹೋಗುವಂತೆ ಅವರು ತಮ್ಮ ಪಾಪಗಳನ್ನು ಎಳೆದುಕೊಂಡು ಹೋಗುತ್ತಿದ್ದಾರೆ.


ಏನಾದರೂ ಕೇಡುಮಾಡದಿದ್ದರೆ ಕೆಡುಕರಿಗೆ ನಿದ್ರೆಬಾರದು. ಯಾರಿಗಾದರೂ ನೋವು ಮಾಡದೆ ಅವರು ನಿದ್ರಿಸಲಾರರು.


ಅವರ ನಾಲಿಗೆಗಳು ಸರ್ಪಗಳಂತಿವೆ. ಅವರ ನಾಲಿಗೆಯ ಕೆಳಗೆ ಹಾವಿನ ವಿಷವಿದೆ.


ಅವರು ನನ್ನ ಬಗ್ಗೆ ಕಡುಸುಳ್ಳುಗಳನ್ನು ಹೇಳಿದ್ದಾರೆ. ಅವರ ನಾಲಿಗೆಗಳು ಹರಿತವಾದ ಖಡ್ಗಗಳಂತಿವೆ. ಅವರ ಮಾತುಗಳು ವಿಷಬಾಣಗಳಂತಿವೆ.


ನಿಮ್ಮ ಬಾಯಿಂದ ಕೇಡನ್ನು ಕಲ್ಪಿಸುವಿರಿ. ನಿಮ್ಮ ನಾಲಿಗೆಯಿಂದ ಮೋಸವನ್ನು ನೇಯುವಿರಿ.


ಕೆಲವರು ದುಷ್ಕೃತ್ಯಗಳನ್ನು ಮಾಡುವುದಕ್ಕಾಗಿಯೇ ಆಲೋಚಿಸುತ್ತಿರುವರು. ಅವರು ಸಂಚುಗಳನ್ನು ಮಾಡುತ್ತಾ ಸುಳ್ಳಾಡುವರು.


ಯೋಬನೇ, ಅರ್ಥರಹಿತವಾದ ನಿನ್ನ ಮಾತುಗಳಿಗೆ ನಮ್ಮಲ್ಲಿ ಉತ್ತರವೇ ಇಲ್ಲವೆಂದು ಆಲೋಚಿಸಿಕೊಂಡಿರುವೆಯಾ? ನೀನು ದೇವರನ್ನು ಅಪಹಾಸ್ಯ ಮಾಡುವಾಗ ಯಾರೂ ನಿನ್ನನ್ನು ಎಚ್ಚರಿಸುವುದಿಲ್ಲ ಎಂದುಕೊಂಡಿರುವಿಯಾ?


ಆ ಇಬ್ಬರು ಪುರುಷರು ಮನೆಯ ಹೊರಗೆ ಇದ್ದ ಗಂಡಸರನ್ನೆಲ್ಲಾ ಕುರುಡರಾಗುವಂತೆ ಮಾಡಿದ್ದರಿಂದ ಅವರು ಬಾಗಿಲನ್ನು ಗುರುತಿಸಲಾರದೆ ಹೋದರು.


ಒಳ್ಳೆಯದಕ್ಕಿಂತಲೂ ಕೆಟ್ಟದ್ದನ್ನೇ ನೀನು ಹೆಚ್ಚು ಪ್ರೀತಿಸುವೆ. ನಿನಗೆ ಸತ್ಯಕ್ಕಿಂತಲೂ ಸುಳ್ಳೇ ಇಷ್ಟ.


ಆದ್ದರಿಂದ ನೀನು ಅವರಿಗೆ ಹೀಗೆ ಹೇಳಬೇಕು: ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸದ ಜನಾಂಗವಿದು. ಈ ಜನರು ದೇವರ ಧರ್ಮೋಪದೇಶವನ್ನು ಕೇಳಲಿಲ್ಲ. ಈ ಜನರಿಗೆ ನಿಜವಾದ ಧರ್ಮೋಪದೇಶ ಗೊತ್ತಿಲ್ಲ.


ಈ ಜನರು ನಿನ್ನ ಸ್ವಂತ ಸಹೋದರರಾಗಿದ್ದಾರೆ. ನಿನ್ನ ಸ್ವಂತ ಕುಟುಂಬದ ಜನರೇ ನಿನ್ನ ವಿರುದ್ಧ ಕೂಗಾಡುತ್ತಾ ಸಂಚು ಮಾಡುತ್ತಿದ್ದಾರೆ. ಅವರು ನಿನ್ನೊಡನೆ ಸ್ನೇಹಿತರಂತೆ ಮಾತನಾಡಿದರೂ ಅವರನ್ನು ನಂಬಬೇಡ.”


ಜನರು ಗೋಧಿಯನ್ನು ಬಿತ್ತುವರು; ಆದರೆ ಅವರು ಕೇವಲ ಮುಳ್ಳಿನ ರಾಶಿಯನ್ನು ಕೊಯ್ಯುವರು. ಅವರು ತುಂಬ ದಣಿಯುವವರೆಗೆ ಕಷ್ಟಪಟ್ಟು ಕೆಲಸ ಮಾಡುವರು. ಆದರೆ ಆ ಎಲ್ಲಾ ಕೆಲಸದ ಪ್ರತಿಫಲವಾಗಿ ಅವರಿಗೆ ಏನೂ ಸಿಗುವದಿಲ್ಲ. ಅವರು ತಮ್ಮ ಬೆಳೆಗಳಿಂದ ನಾಚಿಕೆಪಟ್ಟುಕೊಳ್ಳುವರು. ಯೆಹೋವನ ರೋಷವು ಹಾಗೆಲ್ಲ ಮಾಡುವುದು.”


ಕಪ್ಪಗಿರುವವನು ತನ್ನ ಚರ್ಮದ ಬಣ್ಣವನ್ನು ಬದಲಿಸಲಾರನು. ಚಿರತೆಯು ತನ್ನ ಮೈಮೇಲಿನ ಚುಕ್ಕೆಗಳನ್ನು ಬದಲಾಯಿಸಲಾರದು. ಅದೇ ರೀತಿ, ಜೆರುಸಲೇಮ್ ನಗರವೇ, ನೀನು ಸಹ ಮಾರ್ಪಾಟು ಹೊಂದಿ ಒಳ್ಳೆಯದನ್ನು ಮಾಡಲಾರೆ. ನೀನು ಯಾವಾಗಲೂ ಕೆಟ್ಟದ್ದನ್ನೇ ಮಾಡುವೆ.


ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಬಾಬಿಲೋನಿನ ಅಗಲವಾದ ಮತ್ತು ಸುಭದ್ರವಾದ ಗೋಡೆಯನ್ನು ಬೀಳಿಸಲಾಗುವುದು. ಅದರ ಎತ್ತರವಾದ ಬಾಗಿಲುಗಳನ್ನು ಸುಟ್ಟುಹಾಕಲಾಗುವುದು. ಬಾಬಿಲೋನಿನ ಜನರು ನಗರವನ್ನು ರಕ್ಷಿಸಲು ಬಹಳ ಕಷ್ಟಪಡುವರು. ಆದರೆ ಅದು ನಿಷ್ಪ್ರಯೋಜಕವಾಗುವುದು. ನಗರವನ್ನು ರಕ್ಷಿಸುವ ಪ್ರಯತ್ನದಲ್ಲಿ ಅವರು ತುಂಬಾ ಶ್ರಮವಹಿಸುವರು. ಆದರೆ ಅವರು ಕೇವಲ ಅಗ್ನಿಗೆ ಆಹುತಿಯಾಗುವರು.”


ಆಮೇಲೆ ‘ಇದೇ ರೀತಿಯಲ್ಲಿ ಬಾಬಿಲೋನ್ ಕೂಡ ಮುಳುಗಿಹೋಗುವುದು. ಬಾಬಿಲೋನ್ ಎಂದಿಗೂ ಮೇಲಕ್ಕೆ ಏಳುವದಿಲ್ಲ. ಅಲ್ಲಿ ನಾನು ಬರಮಾಡುವ ಅನೇಕ ವಿಪತ್ತುಗಳಿಂದಾಗಿ ಬಾಬಿಲೋನ್ ಮುಳುಗಿಹೋಗುವುದು’” ಎಂದು ಹೇಳು. ಯೆರೆಮೀಯನ ಸಂದೇಶ ಇಲ್ಲಿಗೆ ಮುಗಿಯುತ್ತದೆ.


ನಮಗೆಲ್ಲರಿಗೂ ಒಬ್ಬನೇ ತಂದೆಯಾದ ದೇವರು. ಆ ದೇವರೇ ನಮ್ಮೆಲ್ಲರನ್ನು ಉಂಟುಮಾಡಿದನು. ಹೀಗಿರುವಾಗ ಜನರು ತಮ್ಮ ಸಹೋದರರನ್ನು ಯಾಕೆ ಮೋಸಪಡಿಸುತ್ತಾರೆ? ಒಡಂಬಡಿಕೆಯನ್ನು ಅವರು ಮಾನ್ಯತೆ ಮಾಡುವವರೆಂದು ಜನರಿಗೆ ತೋರಿಸುವದಿಲ್ಲ. ತಮ್ಮ ಪೂರ್ವಿಕರು ಯೆಹೋವನೊಂದಿಗೆ ಮಾಡಿದ್ದ ಒಡಂಬಡಿಕೆಯನ್ನು ಅವರು ಮಾನ್ಯತೆ ಮಾಡಲಿಲ್ಲ.


ಈ ಪೀಳಿಗೆಯವರೆಲ್ಲರು ಸತ್ತುಹೋದ ಮೇಲೆ ಮುಂದಿನ ಪೀಳಿಗೆಯು ಬೆಳೆಯಿತು. ಈ ಹೊಸ ಪೀಳಿಗೆಗೆ ಯೆಹೋವನ ಬಗ್ಗೆ ಮತ್ತು ಯೆಹೋವನು ಇಸ್ರೇಲಿನ ಜನರಿಗಾಗಿ ಮಾಡಿದ ಮಹತ್ಕಾರ್ಯಗಳ ಬಗ್ಗೆ ಏನೂ ಗೊತ್ತಿರಲಿಲ್ಲ.


ಶಿಷ್ಟರ ಆಲೋಚನೆ ನ್ಯಾಯವಾಗಿವೆ. ದುಷ್ಟರ ಉಪದೇಶ ಮೋಸಕರ.


ದೇವರು, “ನನ್ನ ಜನರು ಮೂರ್ಖರಾಗಿದ್ದಾರೆ. ಅವರು ನನ್ನನ್ನು ಅರಿಯದವರಾಗಿದ್ದಾರೆ. ಅವರು ಮೂಢ ಮಕ್ಕಳಾಗಿದ್ದಾರೆ. ಅವರು ಅವಿವೇಕಿಗಳಾಗಿದ್ದಾರೆ. ಅವರು ದುಷ್ಕೃತ್ಯದಲ್ಲಿ ನಿಪುಣರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡಲರಿಯದವರಾಗಿದ್ದಾರೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು