ಯೆರೆಮೀಯ 9:7 - ಪರಿಶುದ್ದ ಬೈಬಲ್7 ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಜನರು ಲೋಹವನ್ನು ಪುಟಕ್ಕಿಟ್ಟು ಪರೀಕ್ಷಿಸುವಂತೆ ನಾನು ಯೆಹೂದದ ಜನರನ್ನು ಪರೀಕ್ಷಿಸುತ್ತೇನೆ. ನನಗೆ ಬೇರೆ ಮಾರ್ಗವೇ ಇಲ್ಲ. ನನ್ನ ಜನರು ಪಾಪವನ್ನು ಮಾಡಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹೀಗಿರಲು ಸೇನಾಧೀಶ್ವರನಾದ ಯೆಹೋವನು, “ಆಹಾ, ನಾನು ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಪುಟಕ್ಕೆ ಹಾಕಿ ಶೋಧಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹೀಗಿರಲು ಸರ್ವಶಕ್ತರಾದ ಸರ್ವೇಶ್ವರನ ಮಾತನ್ನು ಕೇಳಿ : “ಅಕಟಾ, ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಶೋಧಿಸುವೆನು ಪುಟಕ್ಕೆ ಹಾಕಿ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಹೀಗಿರಲು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಪುಟಕ್ಕೆ ಹಾಕಿ ಶೋಧಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: “ಇಗೋ, ನಾನು ಅವರನ್ನು ಕರಗಿಸಿ ಪರಿಶೋಧಿಸುತ್ತೇನೆ. ಏಕೆಂದರೆ ನನ್ನ ಜನರ ಪಾಪಗಳಿಗೋಸ್ಕರ ನಾನು ಇನ್ನೇನು ಮಾಡಲಿ? ಅಧ್ಯಾಯವನ್ನು ನೋಡಿ |
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”
ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.