Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:1 - ಪರಿಶುದ್ದ ಬೈಬಲ್‌

1 ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ. ಯೆಹೂದ ಮತ್ತು ಜೆರುಸಲೇಮಿನಲ್ಲಿ ನಡೆಯಲಿದ್ದ ಘಟನೆಗಳ ಬಗ್ಗೆ ದೇವರು ಯೆಶಾಯನಿಗೆ ಈ ದರ್ಶನ ನೀಡಿದನು; ಯೆಹೂದದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ ಮತ್ತು ಹಿಜ್ಕೀಯರ ಕಾಲದಲ್ಲಿ ಯೆಶಾಯನಿಗೆ ಈ ದರ್ಶನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜುದೇಯ ನಾಡಿನ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಜುದೇಯ ಮತ್ತು ಜೆರುಸಲೇಮ್ ನಗರವನ್ನು ಕುರಿತು ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ ಇದು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ ಯೆಹೂದದ ಮತ್ತು ಯೆರೂಸಲೇವಿುನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೂದ ದೇಶದ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದರ್ಶನವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:1
38 ತಿಳಿವುಗಳ ಹೋಲಿಕೆ  

ಆ ಬಳಿಕ ಯೆಹೂದದ ಜನರು ಅಮಚ್ಯನ ಮಗನಾದ ಉಜ್ಜೀಯನನ್ನು ತಮ್ಮ ಅರಸನನ್ನಾಗಿ ಆರಿಸಿಕೊಂಡರು. ಆಗ ಅವನಿಗೆ ಹದಿನಾರು ವರ್ಷ.


ಅಹಾಜನ ಮಗನಾದ ಹಿಜ್ಕೀಯನು ಯೆಹೂದದ ರಾಜನಾದನು. ಏಲನ ಮಗನಾದ ಹೋಶೇಯನು ಇಸ್ರೇಲಿನ ರಾಜನಾಗಿದ್ದ ಮೂರನೆಯ ವರ್ಷದಲ್ಲಿ ಹಿಜ್ಕೀಯನು ಆಳಲಾರಂಭಿಸಿದನು.


ಆಹಾಜನು ಯೋಥಾಮನ ಮಗನು. ಯೋಥಾಮನು ಉಜ್ಜೀಯನ ಮಗನು. ರೆಚೀನ್ ಎಂಬವನು ಅರಾಮ್ಯರ ಅರಸನಾಗಿದ್ದನು. ರೆಮಲ್ಯನ ಮಗನಾದ ಪೆಕಹನು ಇಸ್ರೇಲಿನ ಅರಸನಾಗಿದ್ದನು. ಆಗ ಆಹಾಜನು ಯೆಹೂದದ ಅರಸನಾಗಿದ್ದನು. ರೆಚೀನ್ ಮತ್ತು ಪೆಕಹ ಇವರಿಬ್ಬರೂ ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟರು. ಆದರೆ ಆ ನಗರವನ್ನು ಸೋಲಿಸಲು ಅವರಿಂದಾಗಲಿಲ್ಲ.


ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ನಾನು ನನ್ನ ಒಡೆಯನನ್ನು ಕಂಡೆನು. ಆತನು ಅದ್ಭುತವೂ ಉನ್ನತವೂ ಆಗಿರುವ ಸಿಂಹಾಸನದ ಮೇಲೆ ಕುಳಿತಿದ್ದನು. ಆತನ ಉದ್ದವಾದ ನಿಲುವಂಗಿಯು ಆಲಯವನ್ನು ತುಂಬಿಕೊಂಡಿತ್ತು.


ಆಮೋಚನ ಮಗನಾದ ಯೆಶಾಯನು ಯೆಹೂದ ಮತ್ತು ಜೆರುಸಲೇಮಿನ ಬಗ್ಗೆ ನೋಡಿದ ದರ್ಶನ.


ನೀನು ನಿನ್ನ ಸದ್ಭಕ್ತರೊಂದಿಗೆ ದರ್ಶನದಲ್ಲಿ ಮಾತಾಡಿದ್ದೇನೆಂದರೆ: “ಯುದ್ಧವೀರನೊಬ್ಬನಿಗೆ ಬಲವನ್ನು ಅನುಗ್ರಹಿಸಿದೆ. ಜನಸಮೂಹದಿಂದ ಒಬ್ಬ ಯೌವನಸ್ಥನನ್ನು ಆರಿಸಿಕೊಂಡು ಗಣ್ಯವ್ಯಕ್ತಿಯನ್ನಾಗಿ ಮಾಡಿದೆ.


ನಾನು ದೇವರ ಮುಂದೆ ಅಡ್ಡಬೀಳುತ್ತೇನೆ, ಆದರೆ ನನ್ನ ಕಣ್ಣುಗಳು ಮುಚ್ಚಲ್ಪಟ್ಟಿಲ್ಲ. ನಾನು ದೇವರ ವಾಕ್ಯಗಳನ್ನು ಕೇಳುತ್ತಿದ್ದೇನೆ. ನಾನು ಮಹೋನ್ನತನಾದ ದೇವರಿಂದ ಜ್ಞಾನವನ್ನು ಹೊಂದಿಕೊಳ್ಳುತ್ತಿದ್ದೇನೆ. ಸರ್ವಶಕ್ತನಾದ ದೇವರು ತೋರಿಸುವ ಸಂಗತಿಗಳನ್ನು ನಾನು ನೋಡುತ್ತಿದ್ದೇನೆ.


ಇದು ಆಮೋಸನ ಸಂದೇಶ. ಇವನು ತೆಕೋವ ಎಂಬ ಪಟ್ಟಣದ ಕುರುಬರಲ್ಲೊಬ್ಬನು. ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಸಮಯದಲ್ಲಿ ಮತ್ತು ಅದೇ ಸಮಯದಲ್ಲಿ ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರೇಲನ್ನು ಆಳುತ್ತಿರುವಾಗ ಆಮೋಸನಿಗೆ ದೈವದರ್ಶನಗಳುಂಟಾದವು. ಭೂಕಂಪವಾಗುವುದಕ್ಕಿಂತ ಎರಡು ವರ್ಷಗಳಿಗೆ ಮೊದಲು ಈ ದರ್ಶನಗಳಾದವು.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಪ್ರವಾದಿಗಳು ನಿಮಗೆ ಹೇಳುತ್ತಿರುವ ವಿಷಯಗಳ ಕಡೆಗೆ ಗಮನ ಕೊಡಬೇಡಿರಿ. ಅವರು ನಿಮ್ಮನ್ನು ಮರುಳುಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ದರ್ಶನಗಳ ಬಗ್ಗೆ ಹೇಳುತ್ತಾರೆ. ಅವರ ದರ್ಶನಗಳು ಅವರ ಮನಸ್ಸಿನಿಂದ ಬಂದವುಗಳೇ ಹೊರತು ನನ್ನಿಂದ ಬಂದವುಗಳಲ್ಲ.


ಚೀಯೋನೇ, ಸಾರಿ ತಿಳಿಸಲು ನಿನಗೆ ಒಂದು ಶುಭವಾರ್ತೆಯಿದೆ. ಉನ್ನತ ಪರ್ವತಕ್ಕೆ ಏರಿಹೋಗಿ ಶುಭವಾರ್ತೆಯನ್ನು ಗಟ್ಟಿಯಾಗಿ ಸಾರು! ಜೆರುಸಲೇಮೇ, ನಿನಗೆ ತಿಳಿಸಲು ಒಳ್ಳೆಯ ವಾರ್ತೆ ಇದೆ. ಹೆದರಬೇಡ, ಅದನ್ನು ಗಟ್ಟಿಯಾಗಿ ಸಾರು. ಯೆಹೂದದ ಎಲ್ಲಾ ನಗರಗಳಲ್ಲಿ ತಿಳಿಸು: “ಇಗೋ! ನಿನ್ನ ದೇವರು ಇಲ್ಲಿದ್ದಾನೆ.”


ನಡೆಯಲಿರುವ ಒಂದು ಭಯಂಕರ ಘಟನೆಯನ್ನು ನಾನು ದರ್ಶನದಲ್ಲಿ ನೋಡಿದ್ದೇನೆ. ನಿನಗೆ ವಿರುದ್ಧವಾಗಿ ದ್ರೋಹಿಗಳು ಏಳುತ್ತಿದ್ದಾರೆ. ನಿನ್ನ ಧನೈಶ್ವರ್ಯಗಳನ್ನು ಜನರು ಕಿತ್ತುಕೊಳ್ಳುತ್ತಿದ್ದಾರೆ. ಏಲಾಮೇ, ಹೋಗಿ ಆ ಜನರೊಂದಿಗೆ ಹೋರಾಡು. ಮೇದ್ಯವೇ, ಆ ಪಟ್ಟಣವನ್ನು ನಿನ್ನ ಸೈನ್ಯದಿಂದ ಸೋಲಿಸು. ಆ ನಗರದ ಎಲ್ಲಾ ದುಷ್ಟತನವನ್ನು ನಾನು ಕೊನೆಗಾಣಿಸುವೆನು.


ಆಮೋಚನ ಮಗನಾದ ಯೆಶಾಯನಿಗೆ ಬಾಬಿಲೋನಿನ ಬಗ್ಗೆ ದೊರೆತ ದೈವಸಂದೇಶ:


ಉಜ್ಜೀಯನ ಮಗನಾದ ಯೋತಾಮನು ಯೆಹೂದದ ರಾಜನಾದನು. ರೆಮಲ್ಯನ ಮಗನಾದ ಪೆಕಹನು ಇಸ್ರೇಲಿನ ರಾಜನಾದ ಎರಡನೆಯ ವರ್ಷದಲ್ಲಿ ಹೀಗಾಯಿತು.


ಅಜರ್ಯನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಬಳಿ, ದಾವೀದ ನಗರದಲ್ಲಿ ಸಮಾಧಿಮಾಡಲಾಯಿತು. ಅಜರ್ಯನ ನಂತರ ಅವನ ಮಗನಾದ ಯೋತಾಮನು ಹೊಸ ರಾಜನಾದನು.


ಯಾರೊಬ್ಬಾಮನು ಇಸ್ರೇಲಿನ ರಾಜನಾಗಿದ್ದ ಇಪ್ಪತ್ತೇಳನೆಯ ವರ್ಷದಲ್ಲಿ ಅಮಚ್ಯನ ಮಗನಾದ ಅಜರ್ಯನು ಯೆಹೂದದ ರಾಜನಾದನು.


ಪೌಲನು ಮಾತನ್ನು ಮುಂದುವರಿಸಿ ಹೀಗೆಂದನು: “ರಾಜನಾದ ಅಗ್ರಿಪ್ಪನೇ, ನಾನು ಪರಲೋಕದ ಈ ದರ್ಶನವನ್ನು ಕಂಡ ಮೇಲೆ ಅದಕ್ಕೆ ವಿಧೇಯನಾದೆನು.


ಪೇತ್ರನು ತಾನು ಕಂಡ ಈ ದರ್ಶನದ ಅರ್ಥವೇನಿರಬಹುದೆಂದು ಆಶ್ಚರ್ಯಗೊಂಡನು. ಅಷ್ಟರಲ್ಲಿಯೇ, ಕೊರ್ನೇಲಿಯನು ಕಳುಹಿಸಿದ್ದ ಜನರು ಸೀಮೋನನ ಮನೆಯನ್ನು ಕಂಡುಕೊಂಡಿದ್ದರು. ಅವರು ಬಾಗಿಲ ಬಳಿಯಲ್ಲಿ ನಿಂತುಕೊಂಡು,


ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ತನ್ನ ಶಿಷ್ಯರಿಗೆ, “ನೀವು ಬೆಟ್ಟದ ಮೇಲೆ ಕಂಡ ದರ್ಶನವನ್ನು ಈಗ ಯಾರಿಗೂ ಹೇಳದೆ ಮನುಷ್ಯಕುಮಾರನು ಸತ್ತು ಜೀವಂತವಾಗಿ ಎದ್ದುಬಂದ ಮೇಲೆ ತಿಳಿಸಿರಿ” ಎಂದು ಆಜ್ಞಾಪಿಸಿದನು.


ಯೆಹೋವನು ನನಗೆ ಹೇಳಿದ್ದು: “ನಾನು ನಿನಗೆ ತೋರಿಸುವದನ್ನು ಬರೆ. ಜನರು ಸುಲಭವಾಗಿ ಓದುವಂತೆ ಅದನ್ನು ದೊಡ್ಡ ಹಲಗೆಗಳ ಮೇಲೆ ಬರೆ.


ಎಲ್ಕೋಷ್ ಎಂಬ ಊರಿನವನಾದ ನಹೂಮನಿಗೆ ಆದ ದೇವದರ್ಶನದ ಪುಸ್ತಕ. ನಿನೆವೆ ಪಟ್ಟಣದ ವಿಷಯವಾಗಿ ದುಃಖಕರವಾದ ಸಂದೇಶ.


ಯೆಹೋವನ ಮಾತುಗಳು ಮೀಕನಿಗೆ ಬಂದವು. ಅರಸರಾದ ಯೋಥಾಮ, ಅಹಾಜ ಮತ್ತು ಹಿಜ್ಕೀಯರ ಆಳ್ವಿಕೆಯ ಸಮಯದಲ್ಲಿ ಇದು ನಡೆಯಿತು. ಇವರು ಯೆಹೂದ ರಾಜ್ಯದ ಅರಸರು. ಮೀಕನು ಮೋರೆಷೆತ್‌ನವನು. ಇವನು ಸಮಾರ್ಯ ಮತ್ತು ಜೆರುಸಲೇಮಿನ ವಿಷಯವಾಗಿ ದೇವದರ್ಶನವನ್ನು ಹೊಂದಿದನು.


ಬೆಯೇರಿಯ ಮಗನಾದ ಹೋಶೇಯನಿಗೆ ಯೋಹೋವನಿಂದ ಬಂದ ಸಂದೇಶ: ಈ ಸಂದೇಶವು ಯೆಹೂದ ಪ್ರಾಂತ್ಯದ ಅರಸರಾದ ಉಜ್ಜೀಯ, ಯೋಥಾಮ, ಅಹಾಜ ಮತ್ತು ಹಿಜ್ಕೀಯ ಇವರ ಆಳ್ವಿಕೆಯ ಸಮಯದಲ್ಲಿ ಬಂದಿತು. ಇದು ಇಸ್ರೇಲಿನ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನ ಆಳ್ವಿಕೆಯ ಕಾಲ.


ನಾನು ಈ ಸಂದೇಶವನ್ನು ದೇವರಿಂದ ಕೇಳಿದೆನು. ಸರ್ವಶಕ್ತನಾದ ದೇವರು ತೋರಿಸಿದವುಗಳನ್ನು ನೋಡಿದೆನು. ನಾನು ಸ್ಪಷ್ಟವಾಗಿ ನೋಡುವುದನ್ನು ದೀನತೆಯಿಂದ ತಿಳಿಸುತ್ತೇನೆ.


ಯಾವ ಪ್ರವಾದನೆಯೇ ಆಗಲಿ ಮನುಷ್ಯನ ಚಿತ್ತದಿಂದ ಬಂದಿಲ್ಲ. ಆದರೆ ಜನರು ಪವಿತ್ರಾತ್ಮನಿಂದ ನಡೆಸಲ್ಪಟ್ಟು ದೇವರಿಂದ ಹೊಂದಿದ್ದನ್ನೇ ಮಾತನಾಡಿದರು.


ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ನನಗೆ ಅವಶ್ಯವಾಗಿದೆ. ಆದ್ದರಿಂದ ನನಗೆ ಪ್ರಭುವಿನಿಂದಾದ ದರ್ಶನಗಳ ಮತ್ತು ಪ್ರಕಟಣೆಗಳ ಬಗ್ಗೆ ಹೇಳುತ್ತೇನೆ.


ದೇವರು, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ, ನಾನು ಅವನಿಗೆ ನನ್ನನ್ನು ದರ್ಶನದಲ್ಲಿ ಗೊತ್ತುಪಡಿಸಿಕೊಳ್ಳುವೆನು ಅಥವಾ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು.


ಯೆಹೂದದ ರಾಜನಾದ ಉಜ್ಜೀಯನ ಮೂವತ್ತೊಂಭತ್ತನೆಯ ವರ್ಷದ ಆಳ್ವಿಕೆಯಲ್ಲಿ ಯಾಬೇಷನ ಮಗನಾದ ಶಲ್ಲೂಮನು ಇಸ್ರೇಲಿನ ರಾಜನಾದನು. ಶಲ್ಲೂಮನು ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.


ಹಿಜ್ಕೀಯನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಹಿರಿಯರಾದ ಯಾಜಕರನ್ನು ಆಮೋಚನ ಮಗನೂ ಪ್ರವಾದಿಯೂ ಆಗಿದ್ದ ಯೆಶಾಯನ ಬಳಿಗೆ ಕಳುಹಿಸಿದನು. ಅವರು ತಮ್ಮ ದುಃಖವನ್ನೂ ಕಳವಳವನ್ನೂ ತೋರ್ಪಡಿಸುವಂತೆ ಗೋಣಿತಟ್ಟನ್ನು ಧರಿಸಿದ್ದರು.


ಪ್ರಾರಂಭದಿಂದ ಕೊನೆಯವರೆಗೆ ಉಜ್ಜೀಯನು ಮಾಡಿದ ಕಾರ್ಯಗಳನ್ನೆಲ್ಲಾ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ತನ್ನ ಪುಸ್ತಕದಲ್ಲಿ ಬರೆದಿರುವನು.


ಯೋತಾಮನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಪಟ್ಟಕ್ಕೆ ಬಂದನು. ಅವನು ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನ ತಾಯಿ ಚಾದೋಕನ ಮಗಳಾದ ಯೆರೂಷ.


ಆಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿದ್ದು ಹದಿನಾರು ವರ್ಷ ರಾಜ್ಯಭಾರ ಮಾಡಿದನು. ಆಹಾಜನು ತನ್ನ ಪೂರ್ವಿಕನಾದ ದಾವೀದನಂತೆ ಸರಿಯಾದ ರೀತಿಯಲ್ಲಿ ನಡೆದುಕೊಳ್ಳಲಿಲ್ಲ. ದೇವರ ಚಿತ್ತದ ಪ್ರಕಾರ ಜೀವಿಸಲಿಲ್ಲ.


ಪವಿತ್ರ ಯಜ್ಞಕ್ಕಾಗಿ ಆರುನೂರು ಹೋರಿಗಳನ್ನೂ ಮೂರುಸಾವಿರ ಆಡುಕುರಿಗಳನ್ನೂ ಸಮರ್ಪಿಸಿದರು.


ಆ ಸಮಯದಲ್ಲಿ ಆಮೋಚನ ಮಗನಾದ ಯೆಶಾಯನೊಂದಿಗೆ ಯೆಹೋವನು ಮಾತನಾಡಿದನು. “ನಿನ್ನ ಶೋಕವಸ್ತ್ರಗಳನ್ನು ತೆಗೆದುಹಾಕು. ನಿನ್ನ ಕಾಲುಗಳಿಂದ ಪಾದರಕ್ಷೆಗಳನ್ನು ತೆಗೆದುಬಿಡು” ಎಂದು ಯೆಹೋವನು ಹೇಳಿದಾಗ ಯೆಶಾಯನು ಆತನಿಗೆ ವಿಧೇಯನಾದನು. ಯೆಶಾಯನು ಪಾದರಕ್ಷೆಗಳಿಲ್ಲದೆ, ಬಟ್ಟೆಗಳಿಲ್ಲದೆ ಅಡ್ಡಾಡಿದನು.


ಹಿಜ್ಕೀಯನು ಅರಮನೆಯ ಅಡಳಿತಗಾರನಾದ ಎಲ್ಯಾಕೀಮನನ್ನು, ಕಾರ್ಯದರ್ಶಿಯಾದ ಶೆಬ್ನನನ್ನು ಯಾಜಕರ ಹಿರಿಯರೊಂದಿಗೆ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಕಳುಹಿಸಿದನು. ಇವರು ತಮ್ಮ ಮನಸ್ಸಿನ ದುಗುಡವನ್ನು ಪ್ರದರ್ಶಿಸುವಂತೆ ಶೋಕವಸ್ತ್ರಗಳನ್ನು ಧರಿಸಿದ್ದರು.


ಆ ಸಮಯದಲ್ಲಿ ಹಿಜ್ಕೀಯನು ರೋಗಗ್ರಸ್ತನಾಗಿ ಸಾಯುವ ಸ್ಥಿತಿಯಲ್ಲಿದ್ದನು. ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನನ್ನು ನೋಡಲು ಹೋದನು. ಯೆಶಾಯನು ಅರಸನಿಗೆ, “ಯೆಹೋವನು ಈ ವಿಷಯಗಳನ್ನು ನಿನಗೆ ತಿಳಿಸಲು ಹೇಳಿದ್ದಾನೆ: ‘ನೀನು ಬೇಗನೇ ಸಾಯುವೆ. ಆದ್ದರಿಂದ ನೀನು ಸಾಯುವಾಗ ನಿನ್ನ ಕುಟುಂಬದವರು ಮಾಡಬೇಕಾದದ್ದನ್ನು ಅವರಿಗೆ ತಿಳಿಸು. ನಿನಗೆ ಗುಣವಾಗುವುದಿಲ್ಲ’” ಎಂದು ಹೇಳಿದನು.


ನಾನು ಯಾಜಕನಾಗಿದ್ದೇನೆ. ನಾನು ಬೂಜಿಯ ಮಗನಾದ ಯೆಹೆಜ್ಕೇಲ. ನಾನು ಬಾಬಿಲೋನಿನಲ್ಲಿ ಯೆಹೂದ್ಯರೊಂದಿಗೆ ಸೆರೆಯಲ್ಲಿದ್ದೆ. ನಾನು ಕೆಬಾರ್ ಕಾಲುವೆಯ ಬಳಿಯಲ್ಲಿದ್ದಾಗ ಆಕಾಶ ತೆರೆದಿರುವದನ್ನು ಕಂಡೆನು. ನನಗೆ ದೇವದರ್ಶನವಾಯಿತು. ಇದು ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆ ದಿವಸದಲ್ಲಾಯಿತು. ಒಡೆಯನಾದ ಯೆಹೋಯಾಖೀನನು ಸೆರೆಯಲ್ಲಿದ್ದ ಐದನೆಯ ವರ್ಷದ ನಾಲ್ಕನೆ ತಿಂಗಳಿನ ಐದನೆಯ ದಿನದಲ್ಲಿ ಯೆಹೋವನ ವಾಕ್ಯವು ಯೆಹೆಜ್ಕೇಲನಿಗೆ ಬಂದಿತು. ಆ ಸ್ಥಳದಲ್ಲಿ ಯೆಹೋವನ ಆತ್ಮನಿಂದ ಅವನು ಪರವಶನಾದನು.


ಹುಳಿಹಾಕಿದ ರೊಟ್ಟಿಗಳನ್ನು ಕೃತಜ್ಞತಾ ಹೋಮಮಾಡಿರಿ. ಸ್ವೇಚ್ಚೆಯಿಂದ ಕೊಡುವ ಕಾಣಿಕೆ ಬಗ್ಗೆ ಎಲ್ಲರಿಗೂ ತಿಳಿಸಿರಿ. ಇಸ್ರೇಲರೇ ಅಂಥಾ ಕಾರ್ಯಗಳನ್ನು ಮಾಡಲು ನಿಮಗೆ ಇಷ್ಟ. ಆದ್ದರಿಂದ ಹೋಗಿ ಅದನ್ನು ಮಾಡಿರಿ.” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು