Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:11 - ಪರಿಶುದ್ದ ಬೈಬಲ್‌

11 ಯೆಹೋವನು ಹೇಳುವುದೇನೆಂದರೆ, “ಈ ಯಜ್ಞಗಳನ್ನೆಲ್ಲ ನೀವು ನನಗೆ ಕೊಡುತ್ತಲೇ ಇರುವುದೇಕೆ? ನಿಮ್ಮ ಆಡುಗಳ ಯಜ್ಞಗಳೂ, ಹೋರಿಗಳ, ಕುರಿಗಳ, ಆಡುಗಳ ಕೊಬ್ಬೂ ನನಗೆ ಬೇಕಿಲ್ಲ. ಅವುಗಳ ರಕ್ತಕ್ಕೆ ನಾನು ಪ್ರಸನ್ನನಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸ್ವಾಮಿ ಇಂತೆನ್ನುತ್ತಾರೆ : “ನೀವು ಅರ್ಪಿಸುವ ಅಸಂಖ್ಯಾತ ಬಲಿದಾನಗಳಿಂದ ನನಗೇನು ಪ್ರಯೋಜನ? ಟಗರುಗಳು, ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು ಇವೆಲ್ಲ ನನಗೆ ಬೇಸರ. ಹೋತಹೋರಿಗಳ, ಕುರಿಮರಿಗಳ ರಕ್ತ ನನಗೆ ತಾತ್ಸಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಹೀಗೆನ್ನುತ್ತಾನೆ - ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿಕುರಿಹೋತಗಳ ರಕ್ತಕ್ಕೆ ನಾನು ಒಲಿಯೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು?” ಎಂದು ಯೆಹೋವ ದೇವರು ನುಡಿಯುತ್ತಾರೆ. “ಟಗರುಗಳ ದಹನಬಲಿಗಳು, ಪುಷ್ಟಪಶುಗಳ ಕೊಬ್ಬು ಇದೆಲ್ಲಾ ನನಗೆ ಬೇಸರ. ಹೋರಿ, ಕುರಿ, ಹೋತಗಳ ರಕ್ತಕ್ಕೆ, ನಾನು ಸಂತೋಷಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:11
23 ತಿಳಿವುಗಳ ಹೋಲಿಕೆ  

“ನಿಮ್ಮ ಆರಾಧನಾ ದಿವಸಗಳನ್ನು ನಾನು ದ್ವೇಷಿಸುತ್ತೇನೆ. ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ನಿಮ್ಮ ಧಾರ್ಮಿಕ ಕೂಟಗಳಲ್ಲಿ ನಾನು ಸಂತೋಷಿಸುವದಿಲ್ಲ.


ಆದಕ್ಕೆ ಸಮುವೇಲನು, “ಯೆಹೋವನಿಗೆ ಯಾವುದು ಹೆಚ್ಚು ಮೆಚ್ಚಿಗೆಯಾಗಿದೆ? ಸರ್ವಾಂಗಹೋಮಗಳೇ? ಯಜ್ಞಗಳೇ? ಇಲ್ಲವೆ ಯೆಹೋವನ ಆಜ್ಞೆಗಳಿಗೆ ವಿಧೇಯರಾಗುವುದೇ? ದೇವರಿಗೆ ಯಜ್ಞವನ್ನು ಸಮರ್ಪಿಸುವುದಕ್ಕಿಂತ ಆತನ ಆಜ್ಞೆಗಳಿಗೆ ವಿಧೇಯರಾಗಿರುವುದೇ ಉತ್ತಮ. ಟಗರುಗಳ ಕೊಬ್ಬನ್ನು ಅರ್ಪಿಸುವುದಕ್ಕಿಂತ ಆತನ ಮಾತುಗಳನ್ನು ಆಲಿಸುವುದು ಉತ್ತಮ.


ಯೆಹೋವನು ಹೇಳುವುದೇನೆಂದರೆ, “ನೀವು ನನ್ನ ಸಲುವಾಗಿ ಶೆಬ ದೇಶದಿಂದ ಧೂಪವನ್ನು ಏಕೆ ತರುವಿರಿ? ನೀವು ದೂರದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವದರಿಂದ ಪ್ರಯೋಜನವೇನು? ನಿಮ್ಮ ಹೋಮಗಳಿಂದ ನನಗೆ ಸಂತೋಷವಾಗುವದಿಲ್ಲ. ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.”


ಕೆಲವರು ಒಂದು ಕಡೆಯಲ್ಲಿ ಹೋರಿಯನ್ನು ಯಜ್ಞಮಾಡುವರು. ಇನ್ನೊಂದು ಕಡೆಯಲ್ಲಿ ಜನರಿಗೆ ಹಿಂಸೆ ಕೊಡುವರು. ಅವರು ಬಲಿಯರ್ಪಿಸಲು ಕುರಿಗಳನ್ನು ಕೊಯ್ಯುವರು, ಅದೇ ಸಮಯದಲ್ಲಿ ನಾಯಿಗಳ ಕುತ್ತಿಗೆಗಳನ್ನು ಮುರಿಯುವರು. ಅವರು ನನಗೆ ಹಂದಿಗಳ ರಕ್ತವನ್ನು ಅರ್ಪಿಸುವರು. ನನಗೆ ಧೂಪವನ್ನು ಹಾಕಲು ಯಾವಾಗಲೂ ತಯಾರಿರುವರು. ಅದೇ ಸಮಯದಲ್ಲಿ ಅಯೋಗ್ಯವಾದ ತಮ್ಮ ವಿಗ್ರಹಗಳನ್ನು ಪ್ರೀತಿಸುವರು. ಅವರು ನನ್ನ ಮಾರ್ಗವನ್ನು ಅನುಸರಿಸದೆ ತಮ್ಮ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ. ಅವರು ತಮ್ಮ ಭಯಂಕರವಾದ ವಿಗ್ರಹಗಳನ್ನು ಪೂಜಿಸುತ್ತಾರೆ.


ದೇವರಾದ ಯೆಹೋವನು ಒಂದು ಸಾವಿರ ಟಗರು, ಹತ್ತುಸಾವಿರ ಎಣ್ಣೆಯ ಹೊಳೆಗಳಲ್ಲಿ ಸಂತೋಷಿಸುವನೋ? ನಾನು ಮಾಡಿದ ತಪ್ಪಿನ ಪರಿಹಾರಕ್ಕಾಗಿ ನನ್ನ ಚೊಚ್ಚಲ ಮಗನನ್ನು ಸಮರ್ಪಿಸಲೋ? ನನ್ನ ಶರೀರದಿಂದ ಬಂದ ಮಗನನ್ನು ನನ್ನ ಪಾಪಗಳಿಗಾಗಿ ಸಮರ್ಪಿಸಲೋ?


“ನಿಮ್ಮಲ್ಲಿ ಕೆಲವು ಯಾಜಕರು ಆಲಯದ ಬಾಗಿಲುಗಳನ್ನು ಮುಚ್ಚಿ ಬೆಂಕಿಯನ್ನು ಸರಿಯಾದ ರೀತಿಯಲ್ಲಿ ಹಚ್ಚುವರು. ಆದರೆ ನಾನು ನಿಮ್ಮನ್ನು ಮೆಚ್ಚುವದಿಲ್ಲ. ನಿಮ್ಮ ಕಾಣಿಕೆಗಳನ್ನು ಸ್ವೀಕರಿಸುವದಿಲ್ಲ” ಇದು ಸರ್ವಶಕ್ತನಾದ ಯೆಹೋವನ ನುಡಿ.


ಕೆಡುಕರ ಕಾಣಿಕೆಯನ್ನು ಯೆಹೋವನು ದ್ವೇಷಿಸುವನು; ಒಳ್ಳೆಯವರ ಪ್ರಾರ್ಥನೆಯನ್ನು ಸಂತೋಷದಿಂದ ಕೇಳುವನು.


ನಿಮ್ಮ ಯಜ್ಞಗಳ ಬಗ್ಗೆ ನಾನು ದೂರು ಹೇಳುತ್ತಿಲ್ಲ. ಇಸ್ರೇಲರಾದ ನೀವು ನನಗೆ ಸರ್ವಾಂಗಹೋಮಗಳನ್ನು ನಿತ್ಯವೂ ಅರ್ಪಿಸುತ್ತಲೇ ಇದ್ದೀರಿ.


ಕೆಡುಕನ ಯಜ್ಞಗಳು ಯೆಹೋವನಿಗೆ ಅಸಹ್ಯ. ಯಾಕೆಂದರೆ ಅವು ದುರುದ್ದೇಶದಿಂದ ಕೂಡಿವೆ.


ನೀವು ಹೋಗಿ, ‘ನನಗೆ ಯಜ್ಞ ಬೇಡ, ದಯೆ ಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.


ನಿನಗೆ ನಿಜವಾಗಿಯೂ ಬೇಕಾದದ್ದು ಯಜ್ಞಗಳಲ್ಲ. ಹೀಗಿರಲು ನಿನಗೆ ಇಷ್ಟವೇ ಇಲ್ಲದ ಯಜ್ಞಗಳನ್ನು ನಾನೇಕೆ ಅರ್ಪಿಸಲಿ!


ಸರ್ವಶಕ್ತನೂ ಇಸ್ರೇಲಿನ ದೇವರೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: “ಹೋಗಿರಿ, ನಿಮ್ಮ ಮನಸ್ಸಿಗೆ ಬಂದಷ್ಟು ಸರ್ವಾಂಗಹೋಮಗಳನ್ನು ಮತ್ತು ಯಜ್ಞಗಳನ್ನು ಅರ್ಪಿಸಿರಿ. ಆ ಯಜ್ಞಗಳ ಮಾಂಸವನ್ನು ನೀವೇ ತಿನ್ನಿರಿ.


“ಆಮೇಲೆ ರಾಜನು ಇನ್ನೂ ಕೆಲವು ಸೇವಕರನ್ನು ಕರೆದು, ‘ಈ ಜನರನ್ನು ನಾನು ಆಗಲೇ ಆಹ್ವಾನಿಸಿದ್ದೇನೆ. ಆದ್ದರಿಂದ ಈಗ ಔತಣವು ಸಿದ್ಧವಾಗಿದೆ. ಅಡಿಗೆಗಾಗಿ ಕೊಬ್ಬಿದ ಎತ್ತುಗಳನ್ನು ಮತ್ತು ಕರುಗಳನ್ನು ಕೊಯ್ಸಿದ್ದೇನೆ. ಎಲ್ಲವೂ ಸಿದ್ಧವಾಗಿದೆ. ಮದುವೆ ಔತಣಕ್ಕೆ ಬನ್ನಿ ಎಂದು ಅವರಿಗೆ ತಿಳಿಸಿ’ ಎಂದು ಹೇಳಿ ಕಳುಹಿಸಿದನು.


ನಾನು ಗ್ರಹಿಸಿಕೊಂಡಿದ್ದೇನೆಂದರೆ, ಯಜ್ಞಗಳಾಗಲಿ ಧಾನ್ಯಸಮರ್ಪಣೆಗಳಾಗಲಿ ಸರ್ವಾಂಗಹೋಮಗಳಾಗಲಿ ಪಾಪಪರಿಹಾರಕ ಯಜ್ಞಗಳಾಗಲಿ ನಿನಗೆ ಬೇಕಿಲ್ಲ.


ಸರಿಯಾದ ಮತ್ತು ನ್ಯಾಯವಾದ ಕಾರ್ಯಗಳನ್ನು ಮಾಡು. ಯೆಹೋವನು ಅವುಗಳನ್ನು ಯಜ್ಞಗಳಿಗಿಂತಲೂ ಹೆಚ್ಚಾಗಿ ಪ್ರೀತಿಸುವನು.


ಆಗ ಅವರು ದಿನನಿತ್ಯ ನನ್ನನ್ನು ಆರಾಧಿಸಲು ಬರುವರು. ಜನರು ನನ್ನ ವಿಧಿಗಳನ್ನು ಕಲಿತುಕೊಳ್ಳಲು ಇಷ್ಟಪಡುವರು. ಆಗ ಅವರು ಸರಿಯಾಗಿ ಜೀವಿಸುವ ಜನಾಂಗವಾಗುವರು. ಅವರು ದೇವರ ಒಳ್ಳೆಯ ಆಜ್ಞೆಗಳನ್ನು ಬಿಡದೆ ಅನುಸರಿಸುವರು. ಅವರು ಪಕ್ಷಪಾತವಿಲ್ಲದೆ ನ್ಯಾಯತೀರಿಸಲು ನನ್ನನ್ನು ಕೇಳುವರು. ದೇವರ ನಿರ್ಧಾರವನ್ನು ಕೇಳಲು ಆತನ ಬಳಿಗೆ ಹೋಗಲು ಇಚ್ಛಿಸುವರು.


ಯಾಕೆಂದರೆ ನನಗೆ ವಿಧೇಯತೆಯಿಂದ ಕೂಡಿದ ಪ್ರೀತಿಯು ಬೇಕೇ ಹೊರತು ಯಜ್ಞವಲ್ಲ. ಜನರು ತರುವ ಸರ್ವಾಂಗಹೋಮಗಳಿಗಿಂತಲೂ ಅವರು ನನ್ನನ್ನು (ದೇವರನ್ನು) ತಿಳಿದುಕೊಳ್ಳಬೇಕೆಂಬುದೇ ನನಗೆ ಇಷ್ಟ.


ನೀವು ಸರ್ವಾಂಗಹೋಮವನ್ನಾಗಲಿ ಧಾನ್ಯದ ಹೋಮವನ್ನಾಗಲಿ ಅರ್ಪಿಸಿದರೆ ನಾನು ಅದನ್ನು ಸ್ವೀಕರಿಸುವುದಿಲ್ಲ. ಸಮಾಧಾನಯಜ್ಞದಲ್ಲಿ ಕೊಬ್ಬಿದ ಪ್ರಾಣಿಗಳನ್ನು ಬಲಿಯರ್ಪಿಸಿದರೂ ನಾನು ಅದನ್ನು ಕಣ್ಣೆತ್ತಿ ನೋಡುವದಿಲ್ಲ.


ಆಗ ಹಗ್ಗಾಯನು, “ನಿಮ್ಮ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಈ ಜನಾಂಗದ ಜನರ ವಿಷಯದಲ್ಲಿಯೂ ಅದು ಸತ್ಯವಾಗಿದೆ. ಅವರು ನನ್ನ ಮುಂದೆ ಪವಿತ್ರರಲ್ಲ. ಆದ್ದರಿಂದ ಅವರು ಯಾವ ವಸ್ತುವನ್ನಾದರೂ ಮುಟ್ಟಿದರೆ ಅದು ಅಶುದ್ಧವಾಗುವುದು ಮತ್ತು ಅವರು ಯಜ್ಞವೇದಿಕೆಯ ಮೇಲೆ ಅರ್ಪಿಸುವುದೆಲ್ಲಾ ಅಶುದ್ಧವಾಗಿರುವುದು.


“ಯಾಜಕರಿಗೂ, ದೇಶದ ಇತರ ಜನರಿಗೂ ಇದನ್ನು ಹೇಳು, ಎಪ್ಪತ್ತು ವರ್ಷಗಳ ತನಕ ನೀವು ಐದನೇ ಮತ್ತು ಏಳನೇ ತಿಂಗಳಿನಲ್ಲಿ ನಿಮ್ಮ ದುಃಖವನ್ನು ಉಪವಾಸ ಮಾಡವದರಲ್ಲಿ ತೋರಿಸಿದಿರಿ. ಆದರೆ ಮಾಡಿದ ಆ ಉಪವಾಸವು ನಿಜವಾಗಿಯೂ ನನಗಾಗಿಯೋ? ಇಲ್ಲ!


ಇಸ್ರೇಲರು ಯಜ್ಞವನ್ನು ಪ್ರೀತಿಸುತ್ತಾರೆ. ಅವರು ಮಾಂಸವನ್ನು ಯಜ್ಞಮಾಡಿ ತಿನ್ನುತ್ತಾರೆ. ಯೆಹೋವನು ಅವರ ಯಜ್ಞವನ್ನು ಸ್ವೀಕರಿಸುವುದಿಲ್ಲ. ಅವರ ಪಾಪಗಳನ್ನು ತನ್ನ ನೆನಪಿಗೆ ತಂದು ಅವರನ್ನು ಶಿಕ್ಷಿಸುವನು. ಅವರು ಈಜಿಪ್ಟಿಗೆ ಸೆರೆಯಾಳುಗಳಾಗಿ ಒಯ್ಯಲ್ಪಡುವರು.


ಹುಳಿಹಾಕಿದ ರೊಟ್ಟಿಗಳನ್ನು ಕೃತಜ್ಞತಾ ಹೋಮಮಾಡಿರಿ. ಸ್ವೇಚ್ಚೆಯಿಂದ ಕೊಡುವ ಕಾಣಿಕೆ ಬಗ್ಗೆ ಎಲ್ಲರಿಗೂ ತಿಳಿಸಿರಿ. ಇಸ್ರೇಲರೇ ಅಂಥಾ ಕಾರ್ಯಗಳನ್ನು ಮಾಡಲು ನಿಮಗೆ ಇಷ್ಟ. ಆದ್ದರಿಂದ ಹೋಗಿ ಅದನ್ನು ಮಾಡಿರಿ.” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು