13 “ನಿಮ್ಮ ಅಯೋಗ್ಯವಾದ ಯಜ್ಞಗಳನ್ನು ನನ್ನ ಬಳಿಗೆ ತರಬೇಡಿ; ನಿಮ್ಮ ಧೂಪವು ನನಗೆ ಅಸಹ್ಯ; ನಿಮ್ಮ ಅಮಾವಾಸ್ಯೆಯನ್ನಾಗಲಿ ಹಬ್ಬವನ್ನಾಗಲಿ ಸಬ್ಬತ್ತನ್ನಾಗಲಿ ನಾನು ಸಹಿಸಲಾರೆ. ನಿಮ್ಮ ಪವಿತ್ರಕೂಟಗಳಲ್ಲಿ ನೀವು ಮಾಡುವ ದುಷ್ಟತನವನ್ನು ನಾನು ಸಹಿಸಲಾರೆ.
13 ವ್ಯರ್ಥವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಣೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.
13 ನಿಮ್ಮ ನೈವೇದ್ಯಗಳನ್ನು ಇನ್ನು ತರಬೇಡಿ, ಅವು ವ್ಯರ್ಥ. ನಿಮ್ಮ ಧೂಪಾರತಿ ನನಗೆ ಅಸಹ್ಯ. ನೀವು ಆಚರಿಸುವ ಹಬ್ಬ ಹುಣ್ಣಿಮೆ, ಸಬ್ಬತ್ ವಿಶ್ರಾಂತಿ, ನಿಮ್ಮ ಸಭೆಕೂಟಗಳು ನನಗೆ ಬೇಡ. ಅಧರ್ಮದಿಂದ ಕೂಡಿದ ಇಂಥ ಸಮಾರಂಭಗಳು ನನಗೆ ಇಷ್ಟವಿಲ್ಲ.
13 ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತರಬೇಡಿರಿ! ನಿಮ್ಮ ಧೂಪವು ನನಗೆ ಅಸಹ್ಯ. ಅಮಾವಾಸ್ಯೆಗಳು, ಸಬ್ಬತ್ ದಿನಗಳು, ಸಭೆಗಳು ಕೂಡುವುದು ಇವು ಬೇಡ. ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ಸಹಿಸಲಾರೆನು.
ಕೆಲವರು ಒಂದು ಕಡೆಯಲ್ಲಿ ಹೋರಿಯನ್ನು ಯಜ್ಞಮಾಡುವರು. ಇನ್ನೊಂದು ಕಡೆಯಲ್ಲಿ ಜನರಿಗೆ ಹಿಂಸೆ ಕೊಡುವರು. ಅವರು ಬಲಿಯರ್ಪಿಸಲು ಕುರಿಗಳನ್ನು ಕೊಯ್ಯುವರು, ಅದೇ ಸಮಯದಲ್ಲಿ ನಾಯಿಗಳ ಕುತ್ತಿಗೆಗಳನ್ನು ಮುರಿಯುವರು. ಅವರು ನನಗೆ ಹಂದಿಗಳ ರಕ್ತವನ್ನು ಅರ್ಪಿಸುವರು. ನನಗೆ ಧೂಪವನ್ನು ಹಾಕಲು ಯಾವಾಗಲೂ ತಯಾರಿರುವರು. ಅದೇ ಸಮಯದಲ್ಲಿ ಅಯೋಗ್ಯವಾದ ತಮ್ಮ ವಿಗ್ರಹಗಳನ್ನು ಪ್ರೀತಿಸುವರು. ಅವರು ನನ್ನ ಮಾರ್ಗವನ್ನು ಅನುಸರಿಸದೆ ತಮ್ಮ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ. ಅವರು ತಮ್ಮ ಭಯಂಕರವಾದ ವಿಗ್ರಹಗಳನ್ನು ಪೂಜಿಸುತ್ತಾರೆ.
“ನಿಮ್ಮಲ್ಲಿ ಕೆಲವು ಯಾಜಕರು ಆಲಯದ ಬಾಗಿಲುಗಳನ್ನು ಮುಚ್ಚಿ ಬೆಂಕಿಯನ್ನು ಸರಿಯಾದ ರೀತಿಯಲ್ಲಿ ಹಚ್ಚುವರು. ಆದರೆ ನಾನು ನಿಮ್ಮನ್ನು ಮೆಚ್ಚುವದಿಲ್ಲ. ನಿಮ್ಮ ಕಾಣಿಕೆಗಳನ್ನು ಸ್ವೀಕರಿಸುವದಿಲ್ಲ” ಇದು ಸರ್ವಶಕ್ತನಾದ ಯೆಹೋವನ ನುಡಿ.
ಇಸ್ರೇಲ್ ಜನರೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆ ಹೊಲಸು ವಿಗ್ರಹಗಳನ್ನು ಆರಾಧಿಸಬೇಕೆನ್ನುವವನು ಹೋಗಿ ಆರಾಧಿಸಲಿ. ಮುಂದಿನ ಕಾಲದಲ್ಲಂತೂ ನೀವು ನನ್ನ ಬುದ್ಧಿಮಾತನ್ನು ಕೇಳೇ ಕೇಳುವಿರಿ. ನನ್ನ ಪರಿಶುದ್ಧ ಹೆಸರನ್ನು ನೀವು ನಿಮ್ಮ ಬಲಿಗಳಿಂದಲೂ ಬೊಂಬೆಗಳಿಂದಲೂ ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”
“ಫರಿಸಾಯರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದೇವರಿಗೆ ನಿಮ್ಮಲ್ಲಿರುವ ಪ್ರತಿಯೊಂದರಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ನಿಮ್ಮ ತೋಟದಲ್ಲಿ ಬೆಳೆಯುವ ಮರುಗ, ಸದಾಪು ಮುಂತಾದ ಚಿಕ್ಕ ಸಸಿಗಳಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ಆದರೆ ಬೇರೆಯವರಿಗೆ ನ್ಯಾಯತೋರಿಸುವುದನ್ನೂ ದೇವರನ್ನು ಪ್ರೀತಿಸುವುದನ್ನೂ ಮರೆತುಬಿಟ್ಟಿದ್ದೀರಿ. ನೀವು ಮೊದಲು ಇವುಗಳನ್ನು ಮಾಡಬೇಕು ಮತ್ತು ಉಳಿದವುಗಳನ್ನು ಕಡೆಗಣಿಸಬಾರದು.
ಯೆಹೋವನು ತನ್ನ ಸ್ವಂತ ಗುಡಾರವನ್ನು ಒಂದು ತೋಟವೋ ಎಂಬಂತೆ ಹಾಳುಮಾಡಿದ್ದಾನೆ. ಜನರು ಆತನನ್ನು ಆರಾಧಿಸಲು ಸೇರಿಬರುತ್ತಿದ್ದ ಸ್ಥಳವನ್ನು ನಾಶಪಡಿಸಿದ್ದಾನೆ. ಚೀಯೋನಿನಲ್ಲಿ ಜನರು ಮಹೋತ್ಸವಗಳನ್ನು ಮತ್ತು ವಿಶೇಷ ವಿಶ್ರಾಂತಿ ದಿನಗಳನ್ನು ಮರೆಯುವಂತೆ ಯೆಹೋವನು ಮಾಡಿದ್ದಾನೆ. ಯೆಹೋವನು ರಾಜನನ್ನು ಮತ್ತು ಯಾಜಕರನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಕಡುಕೋಪದಿಂದ ಅವರನ್ನು ತಿರಸ್ಕರಿಸಿದ್ದಾನೆ.
ಪವಿತ್ರಾತ್ಮನನ್ನು ದುಃಖಪಡಿಸಬೇಡಿ. ನೀವು ದೇವರಿಗೆ ಸೇರಿದವರೆಂಬುದಕ್ಕೆ ಆತನೇ ದೇವರ ಪ್ರಮಾಣವಾಗಿದ್ದಾನೆ. ಸೂಕ್ತ ಸಮಯದಲ್ಲಿ ನಿಮ್ಮನ್ನು ಬಿಡುಗಡೆ ಮಾಡುತ್ತೇನೆ ಎಂಬುದನ್ನು ತೋರಿಸುವುದಕ್ಕಾಗಿಯೇ ದೇವರು ನಿಮಗೆ ಆತನನ್ನು ಕೊಟ್ಟನು.
ಉಪವಾಸ ದಿನವನ್ನು ಗೊತ್ತುಪಡಿಸಿರಿ. ಆ ದಿನಕ್ಕಾಗಿ ಜನರನ್ನು ಒಟ್ಟುಗೂಡಿಸಿರಿ. ದೇಶದಲ್ಲಿ ವಾಸವಾಗಿರುವ ನಾಯಕರುಗಳೆಲ್ಲರನ್ನೂ ಜನರನ್ನೂ ಒಟ್ಟುಗೂಡಿಸಿರಿ; ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಅವರನ್ನೆಲ್ಲ ಪ್ರಾರ್ಥನೆಗಾಗಿ ಕರೆದುಕೊಂಡು ಬನ್ನಿರಿ.
ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಬೇರೆ ವಿಶೇಷ ದಿನಗಳಲ್ಲಿಯೂ ದೇವರಿಗೆ ಸಮರ್ಪಿಸುವ ಸರ್ವಾಂಗಹೋಮವನ್ನು ತಯಾರು ಮಾಡುತ್ತಿದ್ದರು. ಪ್ರತಿದಿನ ಎಷ್ಟು ಮಂದಿ ಲೇವಿಯರು ಸೇವೆಮಾಡಬೇಕೆಂಬುದನ್ನು ಮೊದಲೇ ಗೊತ್ತುಪಡಿಸಲಾಗಿತ್ತು.
ಈ ಹಬ್ಬದ ಪ್ರಥಮ ಮತ್ತು ಕೊನೆಯ ದಿನಗಳಲ್ಲಿ ಪವಿತ್ರ ಸಭೆಯಾಗಿ ಕೂಡಿಬರಬೇಕು. ಈ ಹಬ್ಬದ ದಿನಗಳಲ್ಲಿ ನೀವು ಯಾವ ಕೆಲಸವನ್ನೂ ಮಾಡಬಾರದು. ಆದರೆ ನಿಮ್ಮ ಭೋಜನಕ್ಕಾಗಿ ಆಹಾರ ಸಿದ್ಧಪಡಿಸಬಹುದು.
ಆ ಸ್ತ್ರೀಯ ಗಂಡನು, “ಈ ದಿನ ದೇವಮನುಷ್ಯನ ಬಳಿಹೋಗಲು ನೀನೇಕೆ ಅಪೇಕ್ಷೆಪಡುವೆ? ಇಂದು ಅಮಾವಾಸ್ಯೆಯೂ ಅಲ್ಲ, ಸಬ್ಬತ್ ದಿನವೂ ಅಲ್ಲ” ಎಂದು ಹೇಳಿದನು. ಅವಳು, “ಚಿಂತಿಸಬೇಡ, ಎಲ್ಲವೂ ಸರಿಹೋಗುತ್ತದೆ” ಎಂದು ಹೇಳಿದಳು.