ಯೆಶಾಯ 1:20 - ಪರಿಶುದ್ದ ಬೈಬಲ್20 ನನ್ನ ಮಾತುಗಳನ್ನು ಕೇಳದೆ ಹೋದರೆ ನೀವು ನನಗೆ ವಿರೋಧಿಗಳಾಗಿದ್ದೀರಿ. ನಿಮ್ಮ ವೈರಿಯು ನಿಮ್ಮನ್ನು ನಾಶಮಾಡುವನು.” ಯೋಹೋವನೇ ಇವುಗಳನ್ನು ನುಡಿದಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ” ಈ ಮಾತನ್ನು ಯೆಹೋವನೇ ನುಡಿದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇದಕ್ಕೊಪ್ಪದೆ ಪ್ರತಿಭಟಿಸಿದ್ದೇ ಆದರೆ, ಸಾವಿಗೆ ತುತ್ತಾಗುವಿರಿ. ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಒಪ್ಪದೆ ತಿರುಗಿ ಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಈ ಮಾತು ಯೆಹೋವನೇ ನುಡಿದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೆ ನೀವು ತಿರಸ್ಕರಿಸಿ ತಿರುಗಿಬಿದ್ದರೆ, ಖಡ್ಗದ ಬಾಯಿಗೆ ತುತ್ತಾಗುವಿರಿ,” ಏಕೆಂದರೆ ಯೆಹೋವ ದೇವರೇ ಇದನ್ನು ನುಡಿದಿದ್ದಾರೆ. ಅಧ್ಯಾಯವನ್ನು ನೋಡಿ |
“‘ನೀವು ನನ್ನ ಮಾತನ್ನು ಕೇಳದಿದ್ದರೆ ಮತ್ತು ನನ್ನ ಆಜ್ಞೆಯನ್ನು ಪಾಲಿಸದಿದ್ದರೆ ಕೇಡಾಗುವುದು. ಸಬ್ಬತ್‌ದಿನದಲ್ಲಿ ಹೊರೆಗಳನ್ನು ಹೊತ್ತುಕೊಂಡು ಜೆರುಸಲೇಮಿಗೆ ಹೋದರೆ ನೀವು ಆ ದಿನವನ್ನು ಪವಿತ್ರದಿನವೆಂದು ಆಚರಿಸಿದಂತೆ ಆಗುವುದಿಲ್ಲ. ಆಗ ನಾನು ನಂದಿಸಲಾಗದ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ಜೆರುಸಲೇಮಿನ ದ್ವಾರಗಳಲ್ಲಿ ಪ್ರಾರಂಭವಾಗಿ ಅರಮನೆಗಳನ್ನು ಸುಡುವವರೆಗೂ ಉರಿಯುತ್ತಿರುವುದು.’”