Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:21 - ಪರಿಶುದ್ದ ಬೈಬಲ್‌

21 ದೇವರು ಹೇಳುವುದೇನೆಂದರೆ: “ಜೆರುಸಲೇಮಿನ ಕಡೆಗೆ ನೋಡಿರಿ. ಆಕೆ ನನ್ನ ಮೇಲೆ ನಂಬಿಕೆ ಇಟ್ಟು ಹಿಂಬಾಲಿಸಿದಂಥ ನಗರಿಯಾಗಿದ್ದಳು. ಆದರೆ ಈಗ ಆಕೆ ಸೂಳೆಯಾಗಲು ಕಾರಣವೇನು? ಈಗ ಆಕೆ ನನ್ನನ್ನು ಹಿಂಬಾಲಿಸುತ್ತಿಲ್ಲ. ಜೆರುಸಲೇಮು ನ್ಯಾಯನೀತಿಗಳಿಂದ ತುಂಬಿರಬೇಕಿತ್ತು. ಅಲ್ಲಿ ವಾಸಿಸುವ ಜನರು ದೇವರ ಇಚ್ಛೆಯಂತೆ ನಡೆಯಬೇಕಿತ್ತು. ಆದರೆ ಈಗ ಕೊಲೆಗಡುಕರು ಅಲ್ಲಿ ವಾಸಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ ಈಗ ಕೊಲೆಪಾತಕರಿಗೆ ನೆಲೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅಯ್ಯೋ, ಸುವ್ರತೆಯಂತಿದ್ದ ನಗರಿ ಈಗ ಸೂಳೆಯಂತಿದ್ದಾಳಲ್ಲ! ನ್ಯಾಯನೀತಿವಂತರಿಗೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ಬೀಡಾಗಿದ್ದಾಳಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅಯ್ಯೋ, ಸುವ್ರತೆಯಾಗಿದ್ದ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ನೆಲೆಯಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಂಬಿಗಸ್ತಿಕೆಯ ಪಟ್ಟಣವು ವ್ಯಭಿಚಾರದ ಪಟ್ಟಣವಾಗಿದೆಯಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆಯಾಗಿತ್ತು. ಆದರೆ ಈಗ ಕೊಲೆಗಾರರಿಂದ ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:21
31 ತಿಳಿವುಗಳ ಹೋಲಿಕೆ  

ಈ ಸಾಕ್ಷಿಗಳ ಎರಡು ಶವಗಳು ಮಹಾನಗರದ ಬೀದಿಯಲ್ಲಿ ಬಿದ್ದಿರುತ್ತವೆ. ಈ ನಗರಕ್ಕೆ ಸೊದೋಮ್ ಮತ್ತು ಈಜಿಪ್ಟ್ ಎಂದು ಹೆಸರಾಗುತ್ತದೆ. ಆ ನಗರದ ಹೆಸರುಗಳಿಗೆ ವಿಶೇಷ ಅರ್ಥವಿದೆ. ಪ್ರಭುವು ಈ ನಗರದಲ್ಲಿಯೇ ಶಿಲುಬೆಗೇರಿಸಲ್ಪಟ್ಟನು.


ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳತೆ ಮಾಡದೆ ಬಿಟ್ಟುಬಿಡು. ಅದನ್ನು ಯೆಹೂದ್ಯರಲ್ಲದ ಜನರಿಗೆ ಬಿಟ್ಟಿದೆ. ಆ ಜನರು ಪವಿತ್ರ ನಗರದ ಮೇಲೆ ನಲವತ್ತೆರಡು ತಿಂಗಳ ಕಾಲ ತುಳಿದಾಡುವರು.


ಆದರೆ ನೀವು ಅಂಥ ಸ್ಥಳಕ್ಕೆ ಬಂದಿಲ್ಲ. ನೀವು ಬಂದಿರುವ ಹೊಸ ಸ್ಥಳ ಚೀಯೋನ್ ಬೆಟ್ಟ, ಜೀವಸ್ವರೂಪನಾದ ದೇವರು ವಾಸವಾಗಿರುವ ಪರಲೋಕದ ಜೆರುಸಲೇಮಿಗೂ ಸಹಸ್ರಾರು ದೇವದೂತರು ಸಂತೋಷದಿಂದ ಒಟ್ಟುಗೂಡಿರುವ ಸ್ಥಳಕ್ಕೂ ಬಂದಿರುವಿರಿ.


ಜೀವಸಿದ್ದ ಪ್ರವಾದಿಗಳಲ್ಲಿ ಪ್ರತಿಯೊಬ್ಬರನ್ನೂ ನಿಮ್ಮ ಪಿತೃಗಳು ಹಿಂಸಿಸಿದರು. ನೀತಿವಂತನೊಬ್ಬನು (ಕ್ರಿಸ್ತನು) ಬರುತ್ತಾನೆಂದು ಬಹುಕಾಲದ ಹಿಂದೆಯೇ ಆ ಪ್ರವಾದಿಗಳು ತಿಳಿಸಿದ್ದರು. ಆದರೆ ನಿಮ್ಮ ಪಿತೃಗಳು ಆ ಪ್ರವಾದಿಗಳನ್ನು ಕೊಂದುಹಾಕಿದರು. ಈಗ ನೀವು ನೀತಿವಂತನಿಗೆ ವಿರುದ್ಧವಾಗಿ ತಿರುಗಿ ಆತನನ್ನು ಕೊಂದುಹಾಕಿದಿರಿ.


“ಜೆರುಸಲೇಮೇ, ಜೆರುಸಲೇಮೇ! ನೀನು ಪ್ರವಾದಿಗಳನ್ನು ಕೊಲ್ಲುವವಳು. ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ನೀನು ಕಲ್ಲೆಸೆದು ಕೊಲ್ಲುವೆ. ಕೋಳಿ ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಾನು ನಿನ್ನ ಜನರಿಗೆ ಸಹಾಯ ಮಾಡಲು ಎಷ್ಟೋ ಸಲ ಅಪೇಕ್ಷಿಸಿದೆ. ಆದರೆ ನೀನು ನನಗೆ ಆಸ್ಪದವನ್ನು ಕೊಡಲಿಲ್ಲ.


ಯೆಹೋವನು ಹೇಳುವುದೇನೆಂದರೆ, “ನಾನು ಚೀಯೋನಿಗೆ ಹಿಂದಿರುಗಿ ಬಂದಿದ್ದೇನೆ. ನಾನು ಜೆರುಸಲೇಮಿನಲ್ಲಿ ವಾಸಿಸುತ್ತೇನೆ. ಜೆರುಸಲೇಮ್ ನಂಬಿಗಸ್ತನಗರವೆಂದು ಕರೆಯಲ್ಪಡುವುದು. ಸರ್ವಶಕ್ತನ ಪರ್ವತವು ಪವಿತ್ರ ಪರ್ವತವೆಂದು ಕರೆಯಲ್ಪಡುವುದು.”


“ಎಫ್ರಾಯೀಮನು ಸುಳ್ಳುದೇವರುಗಳಿಂದ ನನ್ನನ್ನು ಸುತ್ತುವರಿದನು. ಇಸ್ರೇಲಿನ ಜನರು ನನಗೆ ವಿರುದ್ಧವಾಗಿ ಎದ್ದರು. ಆದರೆ ಅವರು ನಾಶವಾದರು. ಯೆಹೂದನು ಈಗಲೂ ದೇವರ ಜೊತೆಯಲ್ಲಿ ನಡೆಯುತ್ತಿದ್ದಾನೆ. ಯೆಹೂದನು ಪರಿಶುದ್ಧರಿಗೆ ನಿಷ್ಠೆಯಿಂದಿದ್ದಾನೆ.”


ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.


“ಹೌದು, ಅವರು ಪರಿಶುದ್ಧ ಪಟ್ಟಣದ ನಿವಾಸಿಗಳಾಗಿದ್ದಾರೆ. ಅವರು ಇಸ್ರೇಲಿನ ದೇವರನ್ನು ಅವಲಂಬಿಸಿಕೊಂಡಿದ್ದಾರೆ. ಸರ್ವಶಕ್ತನಾದ ಯೆಹೋವನು ಎಂಬುದೇ ಆತನ ಹೆಸರು.


ಸರ್ವಶಕ್ತನಾದ ಯೆಹೋವನ ದ್ರಾಕ್ಷಿತೋಟವೇ ಇಸ್ರೇಲ್ ದೇಶ. ಯೆಹೋವನು ಪ್ರೀತಿಸುವ ದ್ರಾಕ್ಷಿಬಳ್ಳಿಯೇ ಯೆಹೂದದ ಪ್ರಜೆ. ಯೆಹೋವನು ನ್ಯಾಯವನ್ನು ಅಪೇಕ್ಷಿಸಿದರೂ ಸಿಕ್ಕಿದ್ದು ನರಹತ್ಯವೇ. ಯೆಹೋವನು ಧರ್ಮವನ್ನು ಅಪೇಕ್ಷಿಸಿದರೂ ದೊರಕಿದ್ದು ಗೋಳಾಟವೇ.


ಹೌದು, ಆ ರಾಜರುಗಳಿಗೆ ಸಂಭವಿಸಿದ್ದನ್ನು ನಾವು ಕಿವಿಯಾರೆ ಕೇಳಿದಂತೆಯೇ ಕಣ್ಣಾರೆಯೂ ಕಂಡೆವು. ನಮ್ಮ ದೇವರೂ ಸೇನಾಧೀಶ್ವರನೂ ಆಗಿರುವ ಯೆಹೋವನ ಪಟ್ಟಣದಲ್ಲಿ ನಾವು ಅದನ್ನು ನೋಡಿದ್ದೇವೆ. ದೇವರು ಆ ಪಟ್ಟಣವನ್ನು ಶಾಶ್ವತವಾಗಿ ಭದ್ರಗೊಳಿಸುವನು.


ಯೆಹೋವನೇ ಮಹೋನ್ನತನು. ನಮ್ಮ ದೇವರನ್ನು ಆತನ ಪವಿತ್ರ ಪರ್ವತ ಪಟ್ಟಣದಲ್ಲಿ ಜನರು ಬಹಳವಾಗಿ ಕೊಂಡಾಡುವರು.


ಒಂದು ನದಿ ಅದೆ; ಅದರ ಕಾಲುವೆಗಳು ಮಹೋನ್ನತನಾದ ದೇವರ ಪವಿತ್ರ ಪಟ್ಟಣವಾಗಿರುವ ದೇವನಗರವನ್ನು ಸಂತೋಷಪಡಿಸುತ್ತದೆ.


ಇಸ್ರೇಲರ ನಾಯಕರುಗಳು ಜೆರುಸಲೇಮ್ ನಗರದೊಳಗೆ ಬಂದು ನೆಲೆಸಿದ್ದರು. ಬೇರೆ ಯಾರು ಪಟ್ಟಣದೊಳಗೆ ನೆಲೆಸಬಹುದೆಂಬುದನ್ನು ಉಳಿದ ಇಸ್ರೇಲರು ತೀರ್ಮಾನ ಮಾಡಬೇಕಿತ್ತು. ಆದ್ದರಿಂದ ಚೀಟು ಹಾಕಿದರು. ಹತ್ತು ಮಂದಿಯಲ್ಲಿ ಒಬ್ಬನು ಪರಿಶುದ್ಧ ನಗರವಾದ ಜೆರುಸಲೇಮಿನಲ್ಲಿ ವಾಸಿಸಬೇಕೆಂದೂ ಉಳಿದ ಒಂಭತ್ತು ಮಂದಿ ತಮ್ಮ ಸ್ವಂತ ಊರುಗಳಲ್ಲಿ ವಾಸಿಸಬಹುದೆಂದೂ ಇದರಿಂದ ತಿಳಿದುಬಂತು.


ಯೆಹೋಷಾಫಾಟನು ಅವರಿಗೆ, “ನೀವು ಹೃದಯಪೂರ್ವಕವಾಗಿ ನಿಮ್ಮ ಕೆಲಸ ನಡಿಸಬೇಕು. ನೀವು ಯೆಹೋವನಿಗೆ ಭಯಪಡುವವರಾಗಿರಬೇಕು.


ದಾವೀದನು ಸಮಸ್ತ ಇಸ್ರೇಲರನ್ನು ಆಳಿದನು. ದಾವೀದನು ಜನರಿಗೆ ನ್ಯಾಯವಾದ ಮತ್ತು ಸರಿಯಾದ ತೀರ್ಪುಗಳನ್ನು ಕೊಡುತ್ತಿದ್ದನು.


ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿದನು. ಏಳು ಪಾತ್ರೆಗಳನ್ನು ಹೊಂದಿದ್ದವರಲ್ಲಿ ಇವನೂ ಒಬ್ಬನಾಗಿದ್ದನು. ಆ ದೇವದೂತನು, “ಬಾ, ಪ್ರಸಿದ್ಧಳಾದ ವೇಶ್ಯಾಸ್ತ್ರೀಗೆ ನೀಡುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಬಹಳ ನೀರುಗಳ ಮೇಲೆ ಕುಳಿತುಕೊಂಡಿರುವವಳು ಅವಳೇ.


“ಒಳ್ಳೆಯತನವು ಬೆಳ್ಳಿಯಂತಿದೆ. ಆದರೆ ನಿಮ್ಮ ಬೆಳ್ಳಿಯು ಬೆಲೆಯಿಲ್ಲದ್ದಾಗಿದೆ. ನಿಮ್ಮ ದ್ರಾಕ್ಷಾರಸ (ಒಳ್ಳೆಯತನ) ನೀರಿನೊಂದಿಗೆ ಬೆರತಿದೆ. ಅದು ತೆಳ್ಳಗಾಗಿದೆ.


ನಿಮ್ಮ ಕೈಗಳು ಮಲಿನವಾಗಿವೆ; ಅವು ರಕ್ತಮಯವಾಗಿವೆ. ನಿಮ್ಮ ಬೆರಳುಗಳು ಅಪರಾಧಗಳಿಂದ ಅಶುದ್ಧವಾಗಿವೆ. ನಿಮ್ಮ ಬಾಯಿಗಳಿಂದ ನೀವು ಸುಳ್ಳಾಡುತ್ತೀರಿ. ನಿಮ್ಮ ನಾಲಿಗೆಯು ಕೆಟ್ಟ ಮಾತುಗಳನ್ನಾಡುತ್ತದೆ.


ನ್ಯಾಯವು ನಮ್ಮಿಂದ ತೊಲಗಿಹೋಗಿದೆ. ಸತ್ಯವು ಬೀದಿ ಪಾಲಾಗಿದೆ. ನೀತಿಯು ಪಟ್ಟಣದೊಳಕ್ಕೆ ಪ್ರವೇಶಿಸಲಾರದು.


ಸತ್ಯವು ಹೊರಟುಹೋಯಿತು. ಒಳ್ಳೆಯದನ್ನು ಮಾಡುವವರು ಲೂಟಿಗೆ ಗುರಿಯಾಗಿದ್ದಾರೆ. ಒಳ್ಳೆಯವರು ಇಲ್ಲದೆ ಇರುವುದನ್ನು ಕಂಡು ಯೆಹೋವನು ಬೇಸರಗೊಂಡಿದ್ದಾನೆ.


ಅವರ ತಾಯಿಯು ವೇಶ್ಯೆಯಂತೆ ವರ್ತಿಸಿದಳು. ತಾನು ನಡಿಸಿದ ಕೃತ್ಯಗಳಿಗಾಗಿ ಆಕೆ ನಾಚಿಕೆಪಡಬೇಕು. ಆಕೆಯು ಹೀಗೆಂದುಕೊಳ್ಳುತ್ತಿದ್ದಾಳೆ, ‘ನಾನು ನನ್ನ ಪ್ರಿಯತಮರ ಬಳಿಗೆ ಹೋಗುವೆನು. ಅವರು ನನಗೆ ಅನ್ನ ನೀರನ್ನು ಕೊಡುವರು. ನನಗೆ ಉಣ್ಣೆಯನ್ನೂ, ನಾರುಮಡಿಯನ್ನೂ ಕೊಡುವರು. ದ್ರಾಕ್ಷಾರಸ ಮತ್ತು ಆಲೀವ್ ಎಣ್ಣೆಯನ್ನೂ ಕೊಡುವರು.’


ಕಾನೂನು ಬಲಹೀನವಾಗಿದೆ. ಅದು ಸರಿಯಾದ ನ್ಯಾಯಕೊಡುವದಿಲ್ಲ. ದುಷ್ಚರು ಶಿಷ್ಟರ ಮೇಲೆ ವ್ಯಾಜ್ಯವಾಡಿ ಗೆಲ್ಲುತ್ತಿದ್ದಾರೆ. ಆದ್ದರಿಂದ ಕಾನೂನು ನ್ಯಾಯವಾಗಿಯೇ ಇಲ್ಲ. ನ್ಯಾಯಕ್ಕೆ ಜಯವಿಲ್ಲ.


ದುಷ್ಟರಿಗೆ ದಯೆತೋರಿಸಿದರೆ ಅವರು ಸುಕಾರ್ಯಗಳನ್ನು ಮಾಡಲು ಕಲಿಯುವುದಿಲ್ಲ. ದುಷ್ಟರು ಯಥಾರ್ಥರ ಲೋಕದಲ್ಲಿ ಜೀವಿಸಿದರೂ ಅವರು ದುಷ್ಕೃತ್ಯಗಳನ್ನೇ ಮಾಡುವರು. ಆ ದುಷ್ಟರು ಯೆಹೋವನ ಮಹತ್ವವನ್ನು ಎಂದೂ ಗಮನಿಸಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು