ಯೆಶಾಯ 1:22 - ಪರಿಶುದ್ದ ಬೈಬಲ್22 “ಒಳ್ಳೆಯತನವು ಬೆಳ್ಳಿಯಂತಿದೆ. ಆದರೆ ನಿಮ್ಮ ಬೆಳ್ಳಿಯು ಬೆಲೆಯಿಲ್ಲದ್ದಾಗಿದೆ. ನಿಮ್ಮ ದ್ರಾಕ್ಷಾರಸ (ಒಳ್ಳೆಯತನ) ನೀರಿನೊಂದಿಗೆ ಬೆರತಿದೆ. ಅದು ತೆಳ್ಳಗಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನಿನ್ನ ಬೆಳ್ಳಿಯು ಅಶುದ್ಧವಾಯಿತು. ನಿನ್ನ ದ್ರಾಕ್ಷಾರಸವು ನೀರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಎಲೌ ನಗರಿಯೇ, ನಿನ್ನ ಬೆಳ್ಳಿ ಕಪ್ಪಾಗಿದೆ. ನಿನ್ನ ದ್ರಾಕ್ಷಾರಸ ನೀರಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನಿನ್ನ ಬೆಳ್ಳಿಯು ಕಂದಾಯಿತು, ನಿನ್ನ ದ್ರಾಕ್ಷಾರಸವು ನೀರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನಿನ್ನ ಬೆಳ್ಳಿಯು ಕಂದಾಯಿತು. ನಿನ್ನ ದ್ರಾಕ್ಷಾರಸವು ನೀರಿನಿಂದ ಬೆರಕೆಯಾಯಿತು. ಅಧ್ಯಾಯವನ್ನು ನೋಡಿ |
ದೇವರು ಹೇಳುವುದೇನೆಂದರೆ: “ಜೆರುಸಲೇಮಿನ ಕಡೆಗೆ ನೋಡಿರಿ. ಆಕೆ ನನ್ನ ಮೇಲೆ ನಂಬಿಕೆ ಇಟ್ಟು ಹಿಂಬಾಲಿಸಿದಂಥ ನಗರಿಯಾಗಿದ್ದಳು. ಆದರೆ ಈಗ ಆಕೆ ಸೂಳೆಯಾಗಲು ಕಾರಣವೇನು? ಈಗ ಆಕೆ ನನ್ನನ್ನು ಹಿಂಬಾಲಿಸುತ್ತಿಲ್ಲ. ಜೆರುಸಲೇಮು ನ್ಯಾಯನೀತಿಗಳಿಂದ ತುಂಬಿರಬೇಕಿತ್ತು. ಅಲ್ಲಿ ವಾಸಿಸುವ ಜನರು ದೇವರ ಇಚ್ಛೆಯಂತೆ ನಡೆಯಬೇಕಿತ್ತು. ಆದರೆ ಈಗ ಕೊಲೆಗಡುಕರು ಅಲ್ಲಿ ವಾಸಿಸುತ್ತಿದ್ದಾರೆ.