Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:24 - ಪರಿಶುದ್ದ ಬೈಬಲ್‌

24 ಇವೆಲ್ಲವುಗಳ ಕುರಿತಾಗಿ ಒಡೆಯನೂ ಇಸ್ರೇಲಿನ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುವುದೇನೆಂದರೆ: “ನನ್ನ ಶತ್ರುಗಳೇ, ನಾನು ನಿಮ್ಮನ್ನು ಶಿಕ್ಷಿಸುವೆನು. ಇನ್ನು ಮುಂದೆ ನೀವು ನನಗೆ ಯಾವ ಕೇಡನ್ನೂ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, “ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇಂತಿರಲು ಒಡೆಯರು, ಸೇನಾಧೀಶ್ವರರು, ಇಸ್ರಯೇಲರ ಪರಾಕ್ರಮಿಯು ಆದ ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ನನ್ನ ಶತ್ರುಗಳಾದ ನಿಮ್ಮ ಮೇಲೆ ಸೇಡು ತೀರಿಸುವೆನು. ನನ್ನ ವಿರೋಧಿಗಳಾದ ನಿಮ್ಮನ್ನು ಸದೆಬಡಿದು ಶಾಂತನಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇಂತಿರಲು ಕರ್ತನೂ ಸೇನಾಧೀಶ್ವರನೂ ಇಸ್ರಾಯೇಲ್ಯರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ - ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದ್ದರಿಂದ ಸರ್ವಶಕ್ತರಾದ ದೇವರೂ, ಇಸ್ರಾಯೇಲಿನ ಪರಾಕ್ರಮಿಯೂ ಆದ ಯೆಹೋವ ದೇವರು ಹೇಳುವುದೇನೆಂದರೆ, “ಆಹಾ! ನನ್ನ ವೈರಿಗಳ ಮೇಲೆ ನನ್ನ ಕೋಪವನ್ನು ಹೊರಹಾಕುತ್ತೇನೆ ಮತ್ತು ನನ್ನ ಶತ್ರುಗಳ ಮೇಲೆ ಸೇಡು ತೀರಿಸಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:24
22 ತಿಳಿವುಗಳ ಹೋಲಿಕೆ  

ಜನಾಂಗಗಳು ನಿನಗೆ ಬೇಕಾದದ್ದೆಲ್ಲವನ್ನು ಕೊಡುವರು. ಒಂದು ಮಗು ಹೇಗೆ ತಾಯಿಯ ಹಾಲನ್ನು ಕುಡಿಯುವದೋ ಅದೇ ರೀತಿಯಲ್ಲಿ ಅರಸರುಗಳಿಂದ ನೀನು ಧನವನ್ನು ಕುಡಿಯುವಿ. ಆಗ ಯೆಹೋವನಾದ ನಾನೇ ನಿನ್ನನ್ನು ರಕ್ಷಿಸಿದೆನೆಂದು ತಿಳಿದುಕೊಳ್ಳುವಿ. ಆಗ ಯಾಕೋಬ್ಯರ ಮಹಾದೇವರು ನಿಮ್ಮನ್ನು ಕಾಪಾಡುವನೆಂದು ತಿಳಿದುಕೊಳ್ಳುವಿರಿ.


ಯೆಹೋವನು ತಾನು ಕರುಣೆ ತೋರುವ ಸಮಯದ ಕುರಿತಾಗಿ ಸಾರುವಂತೆ ನನ್ನನ್ನು ಕಳುಹಿಸಿದನು. ದುಷ್ಟರನ್ನು ಶಿಕ್ಷಿಸುವ ಸಮಯವನ್ನು ಸಾರಲು ದೇವರು ನನ್ನನ್ನು ಕಳುಹಿಸಿದನು. ದುಃಖಪಡುವ ಜನರನ್ನು ಸಂತೈಸಲು ದೇವರು ನನ್ನನ್ನು ಕಳುಹಿಸಿದನು.


ನಿನ್ನನ್ನು ಹಿಂಸಿಸುವವರು ತಮ್ಮ ದೇಹದ ಮಾಂಸವನ್ನೇ ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವಂತೆ ತಮ್ಮ ಸ್ವಂತ ರಕ್ತವನ್ನೇ ಕುಡಿಸಿ ಅಮಲೇರಿಸುವೆನು; ಆಗ ಯೆಹೋವನೇ ನಿನ್ನನ್ನು ರಕ್ಷಿಸಿದನೆಂದು ಜನರೆಲ್ಲರೂ ತಿಳಿದುಕೊಳ್ಳುವರು. ಯಾಕೋಬ್ಯರ ಸರ್ವಶಕ್ತನಾದ ದೇವರು ನಿಮ್ಮನ್ನು ರಕ್ಷಿಸಿದನೆಂದು ಎಲ್ಲರೂ ತಿಳಿಯುವರು.”


ಜನರು ಭಯದಿಂದ ಗಲಿಬಿಲಿಗೊಂಡಿದ್ದಾರೆ. ಅವರಿಗೆ ಹೀಗೆ ಹೇಳು, “ಧೈರ್ಯಗೊಳ್ಳಿರಿ, ಭಯಪಡಬೇಡಿ.” ಇಗೋ, ನಿಮ್ಮ ದೇವರು ಬಂದು ನಿಮ್ಮ ವೈರಿಗಳನ್ನು ಶಿಕ್ಷಿಸುವನು. ಆತನು ಬಂದು ನಿಮಗೆ ಪ್ರತಿಫಲವನ್ನು ಕೊಡುವನು. ಯೆಹೋವನು ನಿಮ್ಮನ್ನು ಕಾಪಾಡುತ್ತಾನೆ.


“ಯೆಹೋವನು ನಿಮ್ಮ ಅಭಿವೃದ್ದಿಯಲ್ಲಿ ಸಂತೋಷಪಡುವಂತೆ ನಿಮ್ಮ ಅವನತಿಯಲ್ಲಿಯೂ ನಿಮ್ಮ ನಾಶನದಲ್ಲಿಯೂ ಸಂತೋಷಪಡುವನು. ನೀವು ಆ ದೇಶವನ್ನು ನಿಮ್ಮದನ್ನಾಗಿಸಿಕೊಳ್ಳಲು ಹೋಗುವಿರಿ. ಆದರೆ ಜನರು ನಿಮ್ಮನ್ನು ದೇಶದಿಂದ ಹೊರಡಿಸಿ ಅಟ್ಟಿಬಿಡುವರು.


ಆದ್ದರಿಂದ ಅವಳಿಗೆ ಮರಣ, ಗೋಳಾಟ, ಭೀಕರ ಕ್ಷಾಮ ಎಂಬ ಉಪದ್ರವಗಳು ಒಂದೇ ದಿನದಲ್ಲಿ ಬರುತ್ತವೆ. ಅವಳಿಗೆ ತೀರ್ಪು ನೀಡಿದ ದೇವರಾಗಿರುವ ಪ್ರಭುವು ಬಲಿಷ್ಠನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುತ್ತಾಳೆ.”


ಶತ್ರುಗಳನ್ನು ತನ್ನ ಪಾದಪೀಠವನ್ನಾಗಿ ಮಾಡುವ ತನಕ ಕ್ರಿಸ್ತನು ಕಾಯುತ್ತಿದ್ದಾನೆ.


“ಆಗ ನಾನೂ ಚಪ್ಪಾಳೆ ಬಡಿದು ನನ್ನ ಕೋಪವನ್ನು ನಿಲ್ಲಿಸುವೆನು. ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.”


ಬಳಿಕ ನಿನ್ನ ಮೇಲೆ ನನಗಿರುವ ಕೋಪವನ್ನು ತೊಲಗಿಸುವೆನು; ನಾನು ಶಾಂತನಾಗುವೆನು; ಆ ಬಳಿಕ ನಾನು ಸಿಟ್ಟುಗೊಳ್ಳುವುದೇ ಇಲ್ಲ.


ಆಗಲೇ ನನ್ನ ಕೋಪವು ಶಮನವಾಗುವುದು. ನಾನು ಅವರ ವಿರುದ್ಧವಾಗಿ ನನ್ನ ಕೋಪವನ್ನು ಬಳಸಿ ತೃಪ್ತನಾಗುವೆನು. ನನ್ನ ಕೋಪವನ್ನು ಸುರಿದಾಗ ಯೆಹೋವನಾದ ನಾನೇ ಅವರೊಂದಿಗೆ ಕೋಪದಿಂದ ಮಾತಾಡಿದೆನೆಂದು ಅವರಿಗೆ ಗೊತ್ತಾಗುವುದು.”


ಆ ಸಮಯದಲ್ಲಿ ನೀವು ಹರ್ಷಗಾನ ಹಾಡುವಿರಿ. ಅದು ಹಬ್ಬದ ರಾತ್ರಿಯ ಸಮಯದಂತಿರುವದು. ದೇವರ ಪರ್ವತದಲ್ಲಿ ನಡೆಯುತ್ತಿರುವಾಗ ನೀವು ಅತ್ಯಂತ ಸಂತೋಷಪಡುವಿರಿ. ಇಸ್ರೇಲಿನ ಬಂಡೆಯಾಗಿರುವ ಯೆಹೋವನನ್ನು ಆರಾಧಿಸಲು ಹೋಗುವಾಗ ಕೊಳಲಿನ ಗಾನವನ್ನು ಕೇಳಿ ಸಂತೋಷಿಸುವಿರಿ.


ದಾವೀದನು ಯೆಹೋವನಿಗೆ ವಿಶೇಷವಾದ ವಾಗ್ದಾನವನ್ನು ಮಾಡಿದನು; ಇಸ್ರೇಲರ ಶೂರನಾದ ದೇವರಿಗೆ ಆತನು ವಿಶೇಷವಾದ ಹರಕೆಯೊಂದನ್ನು ಮಾಡಿಕೊಂಡನು.


“ಭೂಲೋಕವೆಲ್ಲಾ ದೇವಜನರಿಗಾಗಿ ಸಂತೋಷಿಸುವದು; ಯಾಕೆಂದರೆ ಆತನು ಅವರನ್ನು ಸಾಯಿಸುವನು; ತನ್ನ ಸೇವಕರನ್ನು ಸಂಹರಿಸುವವರನ್ನು ಶಿಕ್ಷಿಸುವನು; ತನ್ನ ವೈರಿಗಳಿಗೆ ತಕ್ಕ ದಂಡನೆ ಕೊಡುವನು. ತನ್ನ ದೇಶವನ್ನೂ ತನ್ನ ಜನರನ್ನೂ ಶುದ್ಧಿ ಮಾಡುವನು.”


ಆದರೆ ದೇವರು ಅವರನ್ನು ಹಿಂದಕ್ಕೆ ಕರೆತರುವನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಆ ಜನರನ್ನು ನಿಶ್ಚಯವಾಗಿ ಕಾಪಾಡುವನು. ಭೂಮಿಗೆ ವಿಶ್ರಾಂತಿಯನ್ನು ಕೊಡುವ ಉದ್ದೇಶದಿಂದ ಆತನು ಅವರನ್ನು ಕಾಪಾಡುವನು. ಆದರೆ ಬಾಬಿಲೋನಿನಲ್ಲಿ ವಾಸಿಸುವ ಜನರಿಗೆ ಆತನು ವಿಶ್ರಾಂತಿಯನ್ನು ಕೊಡುವದಿಲ್ಲ.”


ಜನರನ್ನು ಶಿಕ್ಷಿಸಲು ನಾನೊಂದು ಸಮಯವನ್ನು ನಿಗದಿ ಮಾಡಿರುತ್ತೇನೆ. ಈಗ ನನ್ನ ಜನರನ್ನು ರಕ್ಷಿಸಿ ಕಾಪಾಡುವ ಸಮಯ ಬಂದಿದೆ.


ಆದರೆ ಅವನು ತನ್ನ ಹೋರಾಟದಲ್ಲಿ ಬಲಿಷ್ಠವಾದ ಬಿಲ್ಲಿನಿಂದಲೂ ತನ್ನ ನಿಪುಣವಾದ ತೋಳುಗಳಿಂದಲೂ ಗೆದ್ದನು. ಅವನು ಶಕ್ತಿಯನ್ನು ಯಾಕೋಬನ ಪರಾಕ್ರಮಿಯಿಂದಲೂ ಇಸ್ರೇಲನ ಬಂಡೆಯಾದಾತನಿಂದಲೂ ಕುರುಬನಿಂದಲೂ


ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ.


ಯೆಹೋವನು ತನ್ನ ಶತ್ರುಗಳ ಮೇಲೆ ಕೋಪಗೊಂಡಿರುವುದರಿಂದ ಅವರಿಗೆ ಸರಿಯಾದ ದಂಡನೆಯನ್ನು ಕೊಡುವನು. ಯೆಹೋವನು ತನ್ನ ಶತ್ರುಗಳ ಮೇಲೆ ಕೋಪಗೊಂಡಿರುವುದರಿಂದ ದೂರದೇಶಗಳಲ್ಲಿರುವ ಜನರನ್ನೆಲ್ಲಾ ಸರಿಯಾಗಿ ದಂಡಿಸುವನು.


ಹೀಗಿರಲು ನಾನು ಯೆಹೂದದ ಜನರನ್ನು ಶಿಕ್ಷಿಸಬಾರದೇ?” ಇದು ದೇವರಿಂದ ಬಂದ ಮಾತು. “ಅಂಥಾ ಜನರನ್ನು ನಾನು ಶಿಕ್ಷಿಸಬೇಕೆಂಬುದು ನಿನಗೆ ಗೊತ್ತು. ಅವರಿಗೆ ತಕ್ಕ ಶಿಕ್ಷೆಯನ್ನು ನಾನು ಕೊಡಬೇಕು.”


ಕೆಲವು ಜನಾಂಗಗಳು ನನ್ನ ಮಾತಿಗೆ ಕಿವಿಗೊಡುವುದಿಲ್ಲ. ಆಗ ನಾನು ನನ್ನ ಕೋಪವನ್ನು ಪ್ರದರ್ಶಿಸಿ ಮುಯ್ಯಿತೀರಿಸುವೆನು.”


ನಿನ್ನ ಜನರಲ್ಲಿ ಮೂರನೆ ಒಂದು ಭಾಗ ಪಟ್ಟಣದೊಳಗೆ ರೋಗದಿಂದಲೂ ಹಸಿವಿನಿಂದಲೂ ಸಾಯುವರು. ಮೂರರಲ್ಲಿ ಇನ್ನೊಂದು ಭಾಗ ಪಟ್ಟಣದ ಹೊರಗೆ ರಣರಂಗದಲ್ಲಿ ಸಾಯುವರು. ಅನಂತರ ನಾನು ನನ್ನ ಖಡ್ಗವನ್ನು ಇರಿದು ಉಳಿದವರನ್ನು ಬಹುದೂರದ ದೇಶಕ್ಕೆ ಅಟ್ಟಿಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು