Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:25 - ಪರಿಶುದ್ದ ಬೈಬಲ್‌

25 ಜನರು ಬೆಳ್ಳಿಯನ್ನು ಶುದ್ಧಮಾಡುವದಕ್ಕೆ ದ್ರವವನ್ನು ಉಪಯೋಗಿಸುವರು. ಅದೇರೀತಿಯಲ್ಲಿ ನಿಮ್ಮ ತಪ್ಪುಗಳನ್ನೆಲ್ಲ ನಾನು ಶುದ್ಧಮಾಡುವೆನು. ನಿಮ್ಮಲ್ಲಿರುವ ಎಲ್ಲಾ ಅಯೋಗ್ಯವಾದವುಗಳನ್ನು ತೆಗೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಪುಟಕ್ಕೆ ಹಾಕಿ, ನಿನ್ನ ಹೊಲಸುತನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಿಮ್ಮ ಮೇಲೆ ಕೈಮಾಡುವೆನು. ನಿಮ್ಮ ಲೋಹವನ್ನು ಪುಟಹಾಕಿ ನಿಮ್ಮ ಕಲ್ಮಷವನ್ನು ಪೂರ್ತಿಯಾಗಿ ಕರಗಿಸಿಬಿಡುವೆನು. ಕಂದುಕೆಸರನ್ನೆಲ್ಲ ತೊಡೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಿನ್ನ ಮೇಲೆ ಕೈಮಾಡಿ ಪುಟಹಾಕಿ ನಿನ್ನ ಕಲ್ಮಷವನ್ನು ಸಂಪೂರ್ಣವಾಗಿ ಹೋಗಲಾಡಿಸಿ ನಿನ್ನ ಕಂದುಕಸರನ್ನೆಲ್ಲಾ ತೆಗೆದು ಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ, ನಿನ್ನ ಮಲಿನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:25
18 ತಿಳಿವುಗಳ ಹೋಲಿಕೆ  

ಆತನು ಲೇವಿಯರನ್ನು ಶುದ್ಧಮಾಡುವನು. ಅವರನ್ನು ಬೆಂಕಿಯಿಂದ ಪರಿಶುದ್ಧ ಮಾಡುವನು. ಶುದ್ಧ ಬೆಳ್ಳಿ ಚಿನ್ನದಂತೆ ಆತನು ಅವರನ್ನು ಶುದ್ಧಿಮಾಡುವನು. ಆಗ ಅವರು ಯೆಹೋವನಿಗೆ ಕಾಣಿಕೆಗಳನ್ನು ತರುವರು; ಸರಿಯಾದ ರೀತಿಯಲ್ಲಿ ಕಾಣಿಕೆಗಳನ್ನು ಅರ್ಪಿಸುವರು.


ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಜನರು ಲೋಹವನ್ನು ಪುಟಕ್ಕಿಟ್ಟು ಪರೀಕ್ಷಿಸುವಂತೆ ನಾನು ಯೆಹೂದದ ಜನರನ್ನು ಪರೀಕ್ಷಿಸುತ್ತೇನೆ. ನನಗೆ ಬೇರೆ ಮಾರ್ಗವೇ ಇಲ್ಲ. ನನ್ನ ಜನರು ಪಾಪವನ್ನು ಮಾಡಿದ್ದಾರೆ.


ಚೀಯೋನಿನ ಸ್ತ್ರೀಯರ ಕಲ್ಮಷವನ್ನು ಯೆಹೋವನು ತೊಳೆದುಬಿಡುವನು. ಆತನು ಜೆರುಸಲೇಮಿನ ಮಧ್ಯದಲ್ಲಿರುವ ರಕ್ತವನ್ನು ತೊಳೆದುಬಿಡುವನು. ಆತನು ನ್ಯಾಯನೀತಿಗಳಿಂದ ತೀರ್ಪುನೀಡುವನು; ದಹಿಸುವ ಆತ್ಮನಿಂದ ಎಲ್ಲವನ್ನು ಶುದ್ಧಗೊಳಿಸುವನು.


“ಒಳ್ಳೆಯತನವು ಬೆಳ್ಳಿಯಂತಿದೆ. ಆದರೆ ನಿಮ್ಮ ಬೆಳ್ಳಿಯು ಬೆಲೆಯಿಲ್ಲದ್ದಾಗಿದೆ. ನಿಮ್ಮ ದ್ರಾಕ್ಷಾರಸ (ಒಳ್ಳೆಯತನ) ನೀರಿನೊಂದಿಗೆ ಬೆರತಿದೆ. ಅದು ತೆಳ್ಳಗಾಗಿದೆ.


“ಆಗ ಜೆರುಸಲೇಮೇ, ನಿನ್ನ ಜನರು ನನಗೆ ವಿರುದ್ಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನೀನು ನಾಚಿಕೆಪಡುವುದಿಲ್ಲ. ಯಾಕೆಂದರೆ ನಾನು ಆ ದುಷ್ಟ ಜನರನ್ನೆಲ್ಲಾ ನಿರ್ಮೂಲ ಮಾಡುವೆನು. ಅಹಂಕಾರ ತುಂಬಿದ ಜನರನ್ನು ನಾನು ತೆಗೆದುಬಿಡುವೆನು. ನನ್ನ ಪವಿತ್ರ ಪರ್ವತದಲ್ಲಿ ಗರ್ವವುಳ್ಳವರು ಯಾರೂ ಇರುವದಿಲ್ಲ.


ಬೆಳ್ಳಿಯು ಕುಲುಮೆಯಲ್ಲಿ ಕರಗಿಹೋಗುವಂತೆಯೇ ನೀವು ಪಟ್ಟಣದಲ್ಲಿ ಕರಗಿಹೋಗುವಿರಿ. ಯೆಹೋವನಾದ ನಾನೇ ನನ್ನ ಕೋಪವನ್ನು ನಿಮ್ಮ ಮೇಲೆ ಸುರಿದೆನೆಂದು ಆಗ ನೀವು ಅರ್ಥಮಾಡಿಕೊಳ್ಳುವಿರಿ.’”


ನನಗೆ ವಿರೋಧವಾಗಿ ಎದ್ದು ಪಾಪಮಾಡಿದ ಜನರನ್ನು ಅವರ ಸ್ವದೇಶದಿಂದ ತೆಗೆದುಬಿಡುವೆನು. ಅವರು ಇನ್ನೆಂದಿಗೂ ಇಸ್ರೇಲ್ ದೇಶಕ್ಕೆ ಹಿಂತಿರುಗಿ ಬರುವುದೇ ಇಲ್ಲ. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು.”


ಅವರನ್ನು ತಿದ್ದುವದು ಬೆಳ್ಳಿಯನ್ನು ಪವಿತ್ರಗೊಳಿಸಲು ಪ್ರಯತ್ನ ಮಾಡಿದ ಅಕ್ಕಸಾಲಿಗನಂತಾಗುವುದು. ತಿದಿಗಳು ಭರದಿಂದ ಬೀಸಲು ಬೆಂಕಿಯು ಧಗಧಗಿಸಿತು. ಆದರೆ ಆ ಬೆಂಕಿಯಿಂದ ಕೇವಲ ಸೀಸವು ಹೊರಬಂದಿತು. ಬೆಳ್ಳಿಯನ್ನು ಶುದ್ಧೀಕರಿಸಲು ಮಾಡಿದ ಪ್ರಯತ್ನ ಕೇವಲ ವ್ಯರ್ಥವಾಯಿತು. ಅದರಂತೆಯೇ ನನ್ನ ಜನರಿಂದ ದುಷ್ಟತನವನ್ನು ತೆಗೆಯಲಾಗಲಿಲ್ಲ.


“ನಾನು ಪ್ರೀತಿಸುವ ಜನರನ್ನೇ ನಾನು ತಿದ್ದುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀವು ಆಸಕ್ತಿಯಿಂದಿರಿ! ದೇವರ ಕಡೆಗೆ ತಿರುಗಿಕೊಳ್ಳಿರಿ.


ಆತನು ಕಾಳನ್ನು ಸ್ವಚ್ಛಗೊಳಿಸಲು ಸಿದ್ಧನಾಗಿದ್ದಾನೆ. ಆತನು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ಒಳ್ಳೆಯ ಕಾಳುಗಳನ್ನು ಕಣಜದಲ್ಲಿ ತುಂಬಿಸಿ ಹೊಟ್ಟನ್ನು ನಂದಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವನು” ಎಂದು ಹೇಳಿದನು.


ಕೆಲಸಗಾರರು ಬೆಳ್ಳಿ, ತಾಮ್ರ, ಸೀಸ, ತವರ, ಕಬ್ಬಿಣ ಇವುಗಳನ್ನೆಲ್ಲಾ ಬೆಂಕಿಗೆ ಹಾಕುವರು. ಬೆಂಕಿಯನ್ನೂದಿ ಶಾಖ ಹೆಚ್ಚು ಮಾಡುವರು. ಆಗ ಲೋಹಗಳು ಕರಗಲು ಪ್ರಾರಂಭವಾಗುವವು. ಅದೇ ರೀತಿಯಲ್ಲಿ ನಾನು ನಿಮ್ಮನ್ನು ನನ್ನ ಬೆಂಕಿಯಲ್ಲಿ ಹಾಕಿ ಕರಗಿಸುವೆನು. ನನ್ನ ರೌದ್ರವೇ ಆ ಬೆಂಕಿ.


“ಭೂಲೋಕವೆಲ್ಲಾ ದೇವಜನರಿಗಾಗಿ ಸಂತೋಷಿಸುವದು; ಯಾಕೆಂದರೆ ಆತನು ಅವರನ್ನು ಸಾಯಿಸುವನು; ತನ್ನ ಸೇವಕರನ್ನು ಸಂಹರಿಸುವವರನ್ನು ಶಿಕ್ಷಿಸುವನು; ತನ್ನ ವೈರಿಗಳಿಗೆ ತಕ್ಕ ದಂಡನೆ ಕೊಡುವನು. ತನ್ನ ದೇಶವನ್ನೂ ತನ್ನ ಜನರನ್ನೂ ಶುದ್ಧಿ ಮಾಡುವನು.”


ಭೂಮಿಯ ಮೇಲಿರುವ ದುಷ್ಟರನ್ನು ನೀನು ಕಸದಂತೆ ಕಾಣುವೆ. ಆದ್ದರಿಂದ ನಾನು ನಿನ್ನ ಒಡಂಬಡಿಕೆಯನ್ನು ಸದಾಕಾಲ ಪ್ರೀತಿಸುವೆನು.


ಯಾಕೋಬನ ದೋಷವು ಹೇಗೆ ಕ್ಷಮಿಸಲ್ಪಡುವದು? ಅವನ ಪಾಪಗಳು ನಿವಾರಣೆಯಾಗುವದಕ್ಕೆ ಏನು ಮಾಡಬೇಕಾಗುವದು? ಇತರ ದೇವತೆಗಳ ಪೂಜಾಸ್ಥಳಗಳೂ ವೇದಿಕೆಯ ಕಲ್ಲುಗಳೂ ಪುಡಿಪುಡಿಯಾಗಿ ನಾಶವಾಗುವವು.


ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ. ‘ನೀವೆಲ್ಲರೂ ಪ್ರಯೋಜನವಿಲ್ಲದ ಲೋಹವಾಗಿದ್ದೀರಿ. ಆದ್ದರಿಂದ ನಾನು ನಿಮ್ಮನ್ನು ಜೆರುಸಲೇಮಿನೊಳಗೆ ಒಟ್ಟುಗೂಡಿಸುತ್ತೇನೆ.


ಒಂದು ದುಷ್ಕೃತ್ಯ ಮತ್ತೊಂದು ದುಷ್ಕೃತ್ಯವನ್ನು ಹಿಂಬಾಲಿಸಿ ಬಂದಿತು. ಒಂದು ಸುಳ್ಳು ಇನ್ನೊಂದು ಸುಳ್ಳನ್ನು ಹಿಂಬಾಲಿಸಿತು. ಜನರು ನನ್ನನ್ನು ಅರಿತುಕೊಳ್ಳಲಿಲ್ಲ.” ಯೆಹೋವನು ಆ ಮಾತುಗಳನ್ನು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು