ಯೆಶಾಯ 1:26 - ಪರಿಶುದ್ದ ಬೈಬಲ್26 ಆರಂಭದಲ್ಲಿ ನಿಮಗಿದ್ದಂತಹ ನ್ಯಾಯಾಧೀಶರನ್ನು ನಾನು ತಿರುಗಿ ಬರಮಾಡುವೆನು. ನಿಮ್ಮ ಸಲಹೆಗಾರರು ಹಿಂದಿನ ಕಾಲದ ಸಲಹೆಗಾರರಂತೆ ಇರುವರು. ಆಗ ನೀನು ‘ನ್ಯಾಯವಾದ ಮತ್ತು ನಂಬಿಗಸ್ತಿಕೆಯುಳ್ಳ ಪಟ್ಟಣ’ವೆಂದು ಕರೆಯಲ್ಪಡುವೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಪೂರ್ವದಲ್ಲಿ ನಿನಗಿದ್ದ ನ್ಯಾಯಾಧಿಪತಿಗಳನ್ನು, ಮಂತ್ರಾಲೋಚಕರನ್ನು ಪುನಃ ಒದಗಿಸಿಕೊಡುವೆನು. ಆ ಮೇಲೆ ನೀನು ಸದಾಚಾರದ ನಗರಿ ಎಂತಲೂ, ಸ್ವಾಮಿ ನಿಷ್ಠೆಯುಳ್ಳ ನಗರಿ ಎಂತಲೂ ಕರೆಯಲ್ಪಡುವಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಪೂರ್ವದಲ್ಲಿದ್ದಂತೆ ನಿಮಗೆ ನ್ಯಾಯಾಧಿಪತಿಗಳನ್ನೂ ಮಂತ್ರಿಗಳನ್ನೂ ಮತ್ತೆ ನೇಮಿಸುವೆನು. ಆಗ ಜೆರುಸಲೇಮ್ ‘ಧರ್ಮಪುರಿ’, ‘ಸುವ್ರತನಗರಿ’ ಎನಿಸಿಕೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಪೂರ್ವದಲ್ಲಿ ನಿನಗಿದ್ದಂಥ ನ್ಯಾಯಾಧಿಪತಿಗಳನ್ನೂ ಮಂತ್ರಾಲೋಚಕರನ್ನೂ ಪುನಃ ಒದಗಿಸಿಕೊಡುವೆನು; ಆಮೇಲೆ ನೀನು ಧರ್ಮಪುರಿ ಎಂತಲೂ ಸುವ್ರತನಗರಿ ಎಂತಲೂ ಅನ್ನಿಸಿಕೊಳ್ಳುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ, ನಿನ್ನ ಆಲೋಚನಾಪರರನ್ನು ಪ್ರಾರಂಭದಲ್ಲಿದ್ದ ಹಾಗೆಯೂ ತಿರುಗಿ ಒದಗಿಸಿ ಕೊಡುವೆನು. ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ, ನಂಬಿಗಸ್ತಿಕೆಯ ಪಟ್ಟಣವೆಂದೂ ಎನಿಸಿಕೊಳ್ಳುವೆ.” ಅಧ್ಯಾಯವನ್ನು ನೋಡಿ |
ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.
ದೇವರು ಹೇಳುವುದೇನೆಂದರೆ: “ಜೆರುಸಲೇಮಿನ ಕಡೆಗೆ ನೋಡಿರಿ. ಆಕೆ ನನ್ನ ಮೇಲೆ ನಂಬಿಕೆ ಇಟ್ಟು ಹಿಂಬಾಲಿಸಿದಂಥ ನಗರಿಯಾಗಿದ್ದಳು. ಆದರೆ ಈಗ ಆಕೆ ಸೂಳೆಯಾಗಲು ಕಾರಣವೇನು? ಈಗ ಆಕೆ ನನ್ನನ್ನು ಹಿಂಬಾಲಿಸುತ್ತಿಲ್ಲ. ಜೆರುಸಲೇಮು ನ್ಯಾಯನೀತಿಗಳಿಂದ ತುಂಬಿರಬೇಕಿತ್ತು. ಅಲ್ಲಿ ವಾಸಿಸುವ ಜನರು ದೇವರ ಇಚ್ಛೆಯಂತೆ ನಡೆಯಬೇಕಿತ್ತು. ಆದರೆ ಈಗ ಕೊಲೆಗಡುಕರು ಅಲ್ಲಿ ವಾಸಿಸುತ್ತಿದ್ದಾರೆ.
ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.