ಯೆಶಾಯ 1:28 - ಪರಿಶುದ್ದ ಬೈಬಲ್28 ಆದರೆ ಎಲ್ಲಾ ಕೊಲೆಗಾರರೂ ದುಷ್ಟರೂ ನಾಶಮಾಡಲ್ಪಡುವರು. ಅವರು ಯೆಹೋವನನ್ನು ಹಿಂಬಾಲಿಸುವವರಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆದರೆ ದ್ರೋಹಿಗಳೂ ಮತ್ತು ಪಾಪಿಗಳೂ ಒಟ್ಟಾಗಿ ನಾಶವಾಗುವರು. ಹೌದು, ಯೆಹೋವನನ್ನು ತೊರೆದವರು ನಾಶವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನಾಶವಾಗುವರು ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ; ನಿರ್ಮೂಲವಾಗುವರು ಸ್ವಾಮಿಯನ್ನು ತೊರೆದವರು ನಿಶ್ಚಯವಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶನವಾಗುವರು; ಹೌದು, ಯೆಹೋವನನ್ನು ತೊರೆದವರು ನಿರ್ಮೂಲರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆದರೆ ದ್ರೋಹಿಗಳೂ, ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಯೆಹೋವ ದೇವರನ್ನು ತೊರೆದವರು ನಿರ್ಮೂಲವಾಗುವರು. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.
ಅವರು ತಮ್ಮ ವಿಶೇಷವಾದ ತೋಟದೊಳಗೆ ಪೂಜೆಮಾಡಲು ತಮ್ಮನ್ನು ಶುದ್ಧಮಾಡಿಕೊಳ್ಳುವಂತೆ ಸ್ನಾನಮಾಡುವರು. ತಮ್ಮ ವಿಶೇಷ ತೋಟದೊಳಗೆ ಹೋಗಲು ಒಬ್ಬರನ್ನೊಬ್ಬನು ಹಿಂಬಾಲಿಸುವರು. ಅಲ್ಲಿ ಅವರ ವಿಗ್ರಹಗಳನ್ನು ಪೂಜಿಸುವರು. ಆದರೆ ಯೆಹೋವನು ಅವರೆಲ್ಲರನ್ನು ನಾಶಮಾಡುವನು. “ಆ ಜನರು ಹಂದಿ, ಇಲಿ ಮತ್ತು ಇತರ ಅಶುದ್ಧ ಪ್ರಾಣಿಗಳ ಮಾಂಸವನ್ನು ತಿನ್ನುತ್ತಾರೆ. ಆದರೆ ಅವರೆಲ್ಲರೂ ಒಟ್ಟಾಗಿ ನಾಶವಾಗುವರು.” ಇದು ಯೆಹೋವನು ಹೇಳಿದ ಮಾತುಗಳು.
ಯೆಹೂದದಲ್ಲಿ ಅಳಿದುಳಿದ ಕೆಲವು ಜನರಿದ್ದರು. ಆ ಜನರು ಈಜಿಪ್ಟಿನಲ್ಲಿ ನೆಲೆಸಲು ಬಂದರು. ಆದರೆ ನಾನು ಯೆಹೂದಕುಲದ ಆ ಕೆಲವು ಅಳಿದುಳಿದವರನ್ನು ನಾಶಮಾಡುವೆನು. ಅವರು ಕತ್ತಿಗಳಿಂದ ಕೊಲ್ಲಲ್ಪಡುವರು; ಹಸಿವಿನಿಂದ ಸತ್ತುಹೋಗುವರು. ಬೇರೆ ಜನಾಂಗಗಳ ಜನರು ಅವರ ಬಗ್ಗೆ ನಿಂದಿಸುವಂತೆ ಅವರ ಸ್ಥಿತಿ ಆಗುವುದು. ಅವರಿಗೆ ಉಂಟಾದ ದುರ್ಗತಿಯನ್ನು ನೋಡಿ ಬೇರೆ ಜನಾಂಗದ ಜನರು ಭಯಪಡುವರು. ಆ ಜನರು ಶಾಪದ ಶಬ್ಧವಾಗುವರು. ಬೇರೆ ಜನಾಂಗದವರು ಯೆಹೂದದ ಆ ಜನರಿಗೆ ಅಪಮಾನ ಮಾಡುವರು.
ದಮಸ್ಕದ ಜನರು ಆರಾಧಿಸುವ ಆ ದೇವರುಗಳಿಗೆ ಆಹಾಜನು ಯಜ್ಞಗಳನ್ನರ್ಪಿಸಿದನು. ದಮಸ್ಕದ ಜನರು ಆಹಾಜನನ್ನು ಸೋಲಿಸಿದ್ದರು. ಆಗ ಆಹಾಜನು, “ಅರಾಮ್ಯರು ಪೂಜಿಸುವ ದೇವರು ಅವರಿಗೆ ಸಹಾಯ ಮಾಡಿದನು. ಆದ್ದರಿಂದ ನಾನು ಆ ದೇವರಿಗೆ ಯಜ್ಞವನ್ನರ್ಪಿಸಿ ಆರಾಧಿಸಿದರೆ ಆ ದೇವರು ನನಗೂ ಸಹಾಯ ಮಾಡುವನು” ಎಂದುಕೊಂಡನು. ಆಹಾಜನು ಆ ದೇವರುಗಳನ್ನು ಪೂಜಿಸುವುದರ ಮೂಲಕ ತಾನೂ ಪಾಪಮಾಡಿ ತನ್ನ ಪ್ರಜೆಗಳನ್ನೂ ಪಾಪಮಾಡುವದಕ್ಕೆ ಪ್ರೋತ್ಸಾಹಿಸಿದನು.