ಅವರು ತಮ್ಮ ವಿಶೇಷವಾದ ತೋಟದೊಳಗೆ ಪೂಜೆಮಾಡಲು ತಮ್ಮನ್ನು ಶುದ್ಧಮಾಡಿಕೊಳ್ಳುವಂತೆ ಸ್ನಾನಮಾಡುವರು. ತಮ್ಮ ವಿಶೇಷ ತೋಟದೊಳಗೆ ಹೋಗಲು ಒಬ್ಬರನ್ನೊಬ್ಬನು ಹಿಂಬಾಲಿಸುವರು. ಅಲ್ಲಿ ಅವರ ವಿಗ್ರಹಗಳನ್ನು ಪೂಜಿಸುವರು. ಆದರೆ ಯೆಹೋವನು ಅವರೆಲ್ಲರನ್ನು ನಾಶಮಾಡುವನು. “ಆ ಜನರು ಹಂದಿ, ಇಲಿ ಮತ್ತು ಇತರ ಅಶುದ್ಧ ಪ್ರಾಣಿಗಳ ಮಾಂಸವನ್ನು ತಿನ್ನುತ್ತಾರೆ. ಆದರೆ ಅವರೆಲ್ಲರೂ ಒಟ್ಟಾಗಿ ನಾಶವಾಗುವರು.” ಇದು ಯೆಹೋವನು ಹೇಳಿದ ಮಾತುಗಳು.