Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:3 - ಪರಿಶುದ್ದ ಬೈಬಲ್‌

3 ಎತ್ತು ತನ್ನ ದಣಿಯನ್ನು ತಿಳಿದದೆ; ಕತ್ತೆಯು ತನ್ನ ದಣಿಯ ಕೊಟ್ಟಿಗೆಯನ್ನು ತಿಳಿದದೆ. ಆದರೆ ಇಸ್ರೇಲರು ನನ್ನನ್ನು ತಿಳಿದೇ ಇಲ್ಲ. ನನ್ನ ಜನರು ನನ್ನನ್ನು ಅರ್ಥಮಾಡಿಕೊಳ್ಳುವುದೇ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ಬಲ್ಲವು. ಆದರೆ ನನ್ನ ಪ್ರಜೆಗಳಾದ ಇಸ್ರಯೇಲರಿಗೆ ಅಷ್ಟೂ ತಿಳಿದಿಲ್ಲ. ಅವರಿಗೆ ಏನೂ ತಿಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಎತ್ತು ಯಜಮಾನನನ್ನು, ಕತ್ತೆ ಒಡೆಯನ [ಕೊಟ್ಟಿಗೆಯ] ಗೋದಲಿಯನ್ನು ತಿಳಿದಿರುವವು; ಇಸ್ರಾಯೇಲ್ ಜನರಿಗೋ ತಿಳುವಳಿಕೆಯಿಲ್ಲ, ನನ್ನ ಪ್ರಜೆಯು ಆಲೋಚಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಎತ್ತು ತನ್ನ ಯಜಮಾನನನ್ನು, ಕತ್ತೆಯು ತನ್ನ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುವು. ಆದರೆ ಇಸ್ರಾಯೇಲಿಗೆ ತಿಳಿದಿಲ್ಲ. ನನ್ನ ಜನರಿಗೂ ತಿಳಿಯುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:3
24 ತಿಳಿವುಗಳ ಹೋಲಿಕೆ  

ಆಕಾಶದಲ್ಲಿ ಹಾರಾಡುವ ಬಕಪಕ್ಷಿಗಳಿಗೂ ಸಹ ಆಯಾ ಕೆಲಸ ಮಾಡುವ ಸರಿಯಾದ ಸಮಯ ಗೊತ್ತಿದೆ. ಬೆಳವಕ್ಕಿಯೂ ಬಾನಕ್ಕಿಯೂ ಕೊಕ್ಕರೆಯೂ ಹೊಸ ಮನೆಗೆ ಹೋಗಬೇಕಾದ ಕಾಲವನ್ನು ಬಲ್ಲವು. ಆದರೆ ನನ್ನ ಜನರಿಗೆ ತಮ್ಮ ಯೆಹೋವನು ಅವರಿಂದ ಏನನ್ನು ಬಯಸುತ್ತಾನೆ ಎಂಬುದು ಗೊತ್ತಿಲ್ಲ.


ದೇವರು, “ನನ್ನ ಜನರು ಮೂರ್ಖರಾಗಿದ್ದಾರೆ. ಅವರು ನನ್ನನ್ನು ಅರಿಯದವರಾಗಿದ್ದಾರೆ. ಅವರು ಮೂಢ ಮಕ್ಕಳಾಗಿದ್ದಾರೆ. ಅವರು ಅವಿವೇಕಿಗಳಾಗಿದ್ದಾರೆ. ಅವರು ದುಷ್ಕೃತ್ಯದಲ್ಲಿ ನಿಪುಣರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡಲರಿಯದವರಾಗಿದ್ದಾರೆ” ಎಂದನು.


ಅವರಿಗೆ ತಾವು ಮಾಡುವುದು ಗೊತ್ತಿಲ್ಲ. ಅವರು ಅರ್ಥಮಾಡಿಕೊಳ್ಳುವುದಿಲ್ಲ. ಅವರು ಕಾಣಲಾರದಂತೆ ಅವರ ಕಣ್ಣುಗಳು ಮುಚ್ಚಲ್ಪಟ್ಟಿವೆಯೋ ಎಂಬಂತಿವೆ. ಅವರ ಹೃದಯಗಳು ಅರ್ಥಮಾಡಿಕೊಳ್ಳಲು ಪ್ರಯತ್ನಿಸುವುದಿಲ್ಲ.


ನೀವು ಕುಡಿಯುತ್ತಾ ಹಾರ್ಪ್‌ವಾದ್ಯಗಳನ್ನೂ ದಮ್ಮಡಿಗಳನ್ನೂ ಕೊಳಲುಗಳನ್ನೂ ಬಾರಿಸುತ್ತಾ ನೃತ್ಯಮಾಡುವಿರಿ. ಆದರೆ ಯೆಹೋವನು ಮಾಡಿದ ಕಾರ್ಯಗಳನ್ನು ನೀವು ಗಮನಿಸುವುದಿಲ್ಲ. ಯೆಹೋವನ ಹಸ್ತವು ಅನೇಕಾನೇಕ ಕಾರ್ಯಗಳನ್ನು ಮಾಡಿದೆ. ಆದರೆ ನೀವು ಅವುಗಳನ್ನು ಲಕ್ಷಿಸುವುದಿಲ್ಲ. ಆದ್ದರಿಂದ ನಿಮಗೆ ಕೇಡಾಗುವುದು.


ದೇವರ ನಿಜ ಜ್ಞಾನವನ್ನು ಹೊಂದಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ದೇವರು ಅವರನ್ನು ಅವರ ಅಯೋಗ್ಯ ಭಾವಕ್ಕೆ ಒಪ್ಪಿಸಿಕೊಟ್ಟನು. ಆದ್ದರಿಂದ ಅವರು ತಾವು ಮಾಡಬಾರದ ಕೆಲಸಗಳನ್ನು ಮಾಡುತ್ತಾರೆ.


ದುಷ್ಟರೇ, ನೀವು ಮೂಢರಾಗಿದ್ದೀರಿ! ನೀವು ಪಾಠವನ್ನು ಕಲಿತುಕೊಳ್ಳುವುದು ಯಾವಾಗ? ದುಷ್ಟರೇ, ನೀವು ಬಹು ದಡ್ಡರಾಗಿದ್ದೀರಿ! ಅರ್ಥಮಾಡಿಕೊಳ್ಳಲು ನೀವು ಪ್ರಯತ್ನಿಸಬೇಕು.


ದ್ರಾಕ್ಷಿಬಳ್ಳಿ ಒಣಗಿಹೋಗುವದು. ಅದರ ಕೊಂಬೆಗಳು ಮುರಿದುಬೀಳುವವು. ಹೆಂಗಸರು ಆ ಕೊಂಬೆಗಳನ್ನು ಸೌದೆಯಾಗಿ ಉಪಯೋಗಿಸುವರು. ಜನರು ತಿಳಿದುಕೊಳ್ಳುವದಕ್ಕೆ ಮನಸ್ಸು ಕೊಡುವದಿಲ್ಲ. ಆದ್ದರಿಂದ ಅವರ ನಿರ್ಮಾಣಿಕನಾದ ದೇವರು ಅವರನ್ನು ಸಂತೈಸುವದಿಲ್ಲ. ಅವರ ನಿರ್ಮಾಣಿಕನು ಅವರಿಗೆ ದಯೆ ತೋರುವದಿಲ್ಲ.


ಆದರೆ ಬಹಕಾಲದ ಹಿಂದೆ ಏನು ನಡೆಯಿತೆಂಬುದನ್ನು ನೆನಪು ಮಾಡಿಕೊಳ್ಳಲು ಅವರಿಗೆ ಇಷ್ಟವಿಲ್ಲ. ಆದಿಯಲ್ಲಿ ದೇವರು ಆಕಾಶವನ್ನು ಸೃಷ್ಟಿಸಿದನು. ದೇವರು ಲೋಕವನ್ನು ನೀರೊಳಗಿಂದ ಮತ್ತು ನೀರಿನಿಂದ ಸೃಷ್ಟಿಸಿದನು. ದೇವರ ವಾಕ್ಯದಿಂದ ಇವೆಲ್ಲಾ ಸಂಭವಿಸಿದವು.


ಸೋಮಾರಿಯೇ, ನೀನು ಇರುವೆಯಂತೆ ಚುರುಕಾಗಿರಬೇಕು. ಇರುವೆಯನ್ನು ನೋಡಿ ಕಲಿತುಕೋ.


ಜನರು ಬುದ್ಧಿಗೇಡಿಗಳಾಗಿದ್ದಾರೆ. ತಾವು ಕೆತ್ತಿದ ವಿಗ್ರಹಗಳಿಂದ ಅಕ್ಕಸಾಲಿಗರು ಮೋಸಹೋಗುತ್ತಾರೆ. ಆ ವಿಗ್ರಹಗಳು ಕೇವಲ ಸುಳ್ಳಿನ ಕಂತೆಗಳು. ಅವುಗಳಲ್ಲಿ ಜೀವವಿಲ್ಲ.


ಬೇರೆ ಜನಾಂಗಗಳ ಎಲ್ಲಾ ಜನರು ಮಂದಬುದ್ಧಿಯವರಾಗಿದ್ದಾರೆ ಮತ್ತು ಮೂರ್ಖರಾಗಿದ್ದಾರೆ; ಅವರ ಉಪದೇಶಗಳು ನಿಷ್ಪ್ರಯೋಜಕವಾದ ಮರದ ಬೊಂಬೆಗಳಿಂದ ಬಂದವುಗಳಾಗಿವೆ.


“ಮಗ್ಗುಲಲ್ಲಿ ಬಿದ್ದ ಬೀಜ ಅಂದರೇನು? ಪರಲೋಕರಾಜ್ಯವನ್ನು ಕುರಿತು ಬೋಧಿಸಿದ್ದನ್ನು ಕೇಳಿ ಅದನ್ನು ಅರ್ಥಮಾಡಿಕೊಳ್ಳದೆ ಇರುವ ಮನುಷ್ಯನೇ ಬೀಜ ಬಿದ್ದ ದಾರಿ ಮಗ್ಗುಲಾಗಿರುವನು. ಕೆಡುಕನು (ಸೈತಾನನು) ಬಂದು ಆ ಮನುಷ್ಯನ ಹೃದಯದಲ್ಲಿ ಬಿತ್ತಿದ್ದ ಬೀಜಗಳನ್ನು ತೆಗೆದುಹಾಕುತ್ತಾನೆ.


ಯೆಹೋವನು ಹೇಳುವುದೇನೆಂದರೆ: “ನನ್ನ ಜನರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು. ಯಾಕೆಂದರೆ ಅವರು ನಿಜವಾಗಿಯೂ ನನ್ನನ್ನು ಅರಿತಿಲ್ಲ. ಇಸ್ರೇಲಿನಲ್ಲಿ ವಾಸಿಸುವ ಕೆಲವು ಜನರು ಈಗ ಪ್ರಮುಖರಾಗಿದ್ದಾರೆ. ತಮ್ಮ ಸುಖಜೀವಿತದಲ್ಲಿ ಆನಂದಿಸುತ್ತಾರೆ. ಆದರೆ ಆ ಗಣ್ಯವ್ಯಕ್ತಿಗಳೆಲ್ಲಾ ಬಾಯಾರಿಕೆಯಿಂದಲೂ ಹಸಿವೆಯಿಂದಲೂ ನರಳುವರು.


ಅವರು ಹಸಿದ ನಾಯಿಗಳಂತಿದ್ದಾರೆ. ಅವರು ಎಂದಿಗೂ ತೃಪ್ತಿ ಹೊಂದುವವರಲ್ಲ. ಕುರುಬರಿಗೆ ತಾವು ಮಾಡುವುದೇ ತಿಳಿಯದು. ಅವರು ತಮ್ಮ ಕುರಿಗಳ ಹಾಗೆ ದಾರಿತಪ್ಪಿದ್ದಾರೆ. ಅವರೆಲ್ಲಾ ಅತ್ಯಾಶೆಯುಳ್ಳವರು; ತಮ್ಮನ್ನು ತೃಪ್ತಿಪಡಿಸುವದೇ ಅವರ ಕೆಲಸ.


ನಾಚಿಕೆಯಿಲ್ಲದ ಸೂಳೆಯಂತೆ ನೀನು ಮಾಡಿದ ಈ ಎಲ್ಲಾ ಕಾರ್ಯಗಳಿಂದ ನಾನು ನಿನ್ನ ವಿರುದ್ಧ ಕೋಪದಿಂದ ತುಂಬಿರುವೆ.” ನನ್ನ ಒಡೆಯನಾದ ಯೆಹೋವನು ಈ ಸಂಗತಿಗಳನ್ನು ಹೇಳಿದನು.


ಇಸ್ರೇಲಿನ ಜನರಲ್ಲಿ ಒಬ್ಬರೂ ಸಹ ನಿನ್ನ ಉಪದೇಶವನ್ನು ಪಾಲಿಸಲಿಲ್ಲ. ಅವರೆಲ್ಲರೂ ಅದರಿಂದ ದೂರಾದರು. ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಶಾಪಗಳ ಮತ್ತು ವಾಗ್ದಾನಗಳ ಬಗ್ಗೆ ಹೇಳಲಾಗಿದೆ. (ಮೋಶೆಯು ದೇವರ ಸೇವಕನಾಗಿದ್ದನು) ಆ ಶಾಪಗಳು ಧರ್ಮಶಾಸ್ತ್ರವನ್ನು ಪಾಲಿಸದಿದ್ದವರಿಗೆ ಆಗುವ ಶಿಕ್ಷೆಯಾಗಿದೆ. ಆ ಎಲ್ಲಾ ಶಿಕ್ಷೆಗಳು ನಮಗೆ ಆಗಿವೆ. ನಾವು ಯೆಹೋವನಾದ ನಿನ್ನ ವಿರುದ್ಧ ಪಾಪ ಮಾಡಿದ್ದರಿಂದ ನಮಗೆ ಹೀಗಾಯಿತು.


“ಆಕೆಗೆ (ಇಸ್ರೇಲಿಗೆ) ನಾನು (ಯೆಹೋವನು) ಧಾನ್ಯ, ಎಣ್ಣೆ, ದ್ರಾಕ್ಷಾರಸವನ್ನು ಕೊಟ್ಟವನೆಂದು ತಿಳಿದಿಲ್ಲ. ಆಕೆಗೆ ಹೆಚ್ಚೆಚ್ಚಾಗಿ ಬೆಳ್ಳಿಬಂಗಾರಗಳನ್ನು ಕೊಡುತ್ತಾ ಬಂದೆನು. ಆದರೆ ಆ ಬೆಳ್ಳಿಬಂಗಾರವನ್ನು ಇಸ್ರೇಲ್ ಬಾಳನ ವಿಗ್ರಹಗಳನ್ನು ತಯಾರಿಸಲು ಉಪಯೋಗಿಸಿದಳು.


ಕೆಡುಕರು ನ್ಯಾಯವನ್ನು ಅರ್ಥಮಾಡಿಕೊಳ್ಳಲಾರರು; ಯೆಹೋವನನ್ನು ಪ್ರೀತಿಸುವ ಜನರಾದರೋ ಅದನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವರು.


ತಾನು ಮಾಡತಕ್ಕದ್ದನ್ನು ಕಣ್ಣಾರೆ ಕಂಡರೂ ಅವನು ನನಗೆ ವಿಧೇಯನಾಗುವುದಿಲ್ಲ. ಅವನು ಕಿವಿಯಾರೆ ಕೇಳಿದರೂ ನನ್ನ ಮಾತುಗಳಿಗೆ ವಿಧೇಯನಾಗುವದಿಲ್ಲ; ಅದನ್ನು ಕೇಳಿಸಿಕೊಳ್ಳುವದೂ ಇಲ್ಲ.”


ಯೋನಾದಾಬನ ಸಂತಾನದವರು ತಮ್ಮ ಪೂರ್ವಿಕರು ವಿಧಿಸಿದ ಆಜ್ಞೆಗಳನ್ನು ಪಾಲಿಸಿದರು. ಆದರೆ ಯೆಹೂದದ ಜನರು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ.’


“ನನ್ನ ಜನರು ತಪ್ಪಿಸಿಕೊಂಡ ಕುರಿಗಳಂತಿದ್ದಾರೆ. ಅವರ ಕುರುಬರು ಅವರನ್ನು ತಪ್ಪು ದಾರಿಗೆ ಎಳೆದಿದ್ದಾರೆ. ಅವರ ನಾಯಕರುಗಳು ಅವರನ್ನು ಬೆಟ್ಟಗಳಲ್ಲಿ ಅಲೆಯುವಂತೆ ಮಾಡಿದ್ದಾರೆ. ಅವರ ವಿಶ್ರಾಂತಿಸ್ಥಾನವನ್ನು ಅವರು ಮರೆತುಬಿಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು