Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:31 - ಪರಿಶುದ್ದ ಬೈಬಲ್‌

31 ಬಲಿಷ್ಠರು ಸಣ್ಣಗಿರುವ ಒಣಮರದ ತುಂಡಿನಂತಿರುವರು. ಆ ಜನರು ಮಾಡುವ ಕಾರ್ಯಗಳು ಬೆಂಕಿಯನ್ನು ಪ್ರಾರಂಭಿಸುವ ಕಿಡಿಯಂತಿರುವವು. ಅವರ ಕಾರ್ಯಗಳೆಲ್ಲಾ ಸುಟ್ಟುಹೋಗುವವು; ಆ ಬೆಂಕಿಯನ್ನು ಯಾರೂ ನಿಲ್ಲಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕಾರ್ಯವೇ ಕಿಡಿ, ಎರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಒಣಹುಲ್ಲಿನ ಮೆದೆಗೆ ಬೆಂಕಿಯ ಕಿಡಿಬಿದ್ದು ಸುಟ್ಟುಹೋಗುವಂತೆ ನಿಮ್ಮಲ್ಲಿನ ಬಲಿಷ್ಠರು ತಮ್ಮ ದುಷ್ಕೃತ್ಯಗಳಿಂದಲೇ ನಾಶವಾಗುವರು. ಈ ವಿನಾಶವನ್ನೂ ಯಾರಿಂದಲೂ ತಡೆಗಟ್ಟಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ಗುಂಜು, ಅವನ ಕಾರ್ಯವೇ ಕಿಡಿ, ಎರಡು ಸೇರಿ ಯಾರೂ ನಂದಿಸಲಾಗದಂತೆ ಸುಟ್ಟುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕೆಲಸ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:31
25 ತಿಳಿವುಗಳ ಹೋಲಿಕೆ  

“ಅವರು ನನ್ನ ಪವಿತ್ರ ಪಟ್ಟಣದಲ್ಲಿ ವಾಸಿಸುವರು. ಅವರು ಪಟ್ಟಣದಿಂದ ಹೊರಗೆ ಹೋದರೆ ನನಗೆ ವಿರುದ್ಧವಾಗಿ ಪಾಪಮಾಡಿದವರ ಹೆಣಗಳನ್ನು ನೋಡುವರು. ಅವರ ಹೆಣಗಳೊಳಗೆ ಸಾಯದ ಹುಳಗಳಿರುವವು. ಬೆಂಕಿಯು ಆ ಹೆಣಗಳನ್ನು ಸುಟ್ಟುಬಿಡುವುದು. ಆ ಬೆಂಕಿಯು ಆರುವದೇ ಇಲ್ಲ. ಅವು ಜನರ ಮುಂದೆ ಅಸಹ್ಯವಾಗಿರುವವು.”


“ಆ ನ್ಯಾಯತೀರ್ಪಿನ ದಿನವು ಬರುತ್ತಿದೆ. ಅದು ಕುಲುಮೆಯಂತೆ ತೀಕ್ಷ್ಣವಾಗಿರುವದು. ಅಹಂಕಾರಿಗಳೆಲ್ಲಾ ಶಿಕ್ಷಿಸಲ್ಪಡುವರು. ದುಷ್ಟಜನರೆಲ್ಲಾ ಹುಲ್ಲಿನಂತೆ ಸುಡುವರು. ಆ ಸಮಯದಲ್ಲಿ ಒಂದು ಪೊದೆ ಬೆಂಕಿಯಲ್ಲಿ ಸುಡುವಂತೆ ಸುಡುವರು. ಆದರೆ ಕೊಂಬೆ ಅಥವಾ ಬೇರು ಯಾವದೂ ಉಳಿಯುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


“ಶೂರರು, ಬಲಶಾಲಿಗಳು ಯುದ್ಧದಲ್ಲಿ ಮಡಿದಿದ್ದಾರೆ, ಆ ಪರದೇಶಿಗಳು ಮರಣದ ಸ್ಥಳಕ್ಕೆ ಹೋದರು. ಅವರು ಅಲ್ಲಿದ್ದುಕೊಂಡು ಈಜಿಪ್ಟಿನವರೊಂದಿಗೆ ಮತ್ತು ಅದರ ಸಹಾಯಕರೊಂದಿಗೆ ಮಾತನಾಡುವರು.


ಸೈತಾನನನ್ನು (ಇವನೇ ಜನರನ್ನು ಮೋಸಗೊಳಿಸಿದವನು.) ಬೆಂಕಿಗಂಧಕಗಳು ಉರಿಯುತ್ತಿದ್ದ ಕೆರೆಗೆ ಎಸೆಯಲಾಯಿತು. ಅಲ್ಲಿ ಮೃಗವೂ ಇತ್ತು, ಸುಳ್ಳುಪ್ರವಾದಿಗಳೂ ಇದ್ದರು. ಅಲ್ಲಿ ಅವರು ಹಗಲಿರುಳು ಎಂದೆಂದಿಗೂ ಹಿಂಸೆ ಅನುಭವಿಸುವರು.


ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.


ಮರಗಳನ್ನು ಕಡಿದುಹಾಕಲು ಕೊಡಲಿ ಈಗಲೇ ಸಿದ್ಧವಾಗಿದೆ. ಒಳ್ಳೆಯ ಫಲಬಿಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು.


“ಆದರೆ ನೀವು ನಿಮ್ಮ ದಾರಿಯಲ್ಲಿಯೇ ಜೀವಿಸಬೇಕೆಂದಿದ್ದೀರಿ, ನೀವು ನಿಮ್ಮ ಬೆಂಕಿಗಳನ್ನೂ ದೀವಟಿಗೆಗಳನ್ನೂ ಹಚ್ಚುತ್ತೀರಿ, ನಿಮಗೆ ಇಷ್ಟಬಂದ ರೀತಿಯಲ್ಲಿ ಜೀವಿಸುತ್ತೀರಿ. ಆದ್ದರಿಂದ ನೀವು ಶಿಕ್ಷಿಸಲ್ಪಡುವಿರಿ. ನಿಮ್ಮ ಬೆಂಕಿಯಲ್ಲಿಯೂ ದೀವಟಿಗೆಗಳಲ್ಲಿಯೂ ನೀವೇ ಬಿದ್ದು ಸುಟ್ಟುಹೋಗುವಿರಿ. ಇದನ್ನು ನಾನೇ ನೆರವೇರಿಸುವೆನು.”


“ನನ್ನ ವಿರುದ್ಧವಾಗಿ ಯುದ್ಧಮಾಡುವ ಅಶ್ವದಳ, ರಥಬಲ ಮತ್ತು ಭೂದಳವು ಸೋತುಹೋಗುವವು. ಮತ್ತೆ ಅವರು ಏಳುವದೇ ಇಲ್ಲ. ಅವರೆಲ್ಲರೂ ನಾಶವಾಗುವರು. ಮೇಣದ ಬತ್ತಿಯ ಬೆಂಕಿಯು ಆರಿಸಲ್ಪಡುವಂತೆಯೇ ಅವರು ನಂದಿಸಲ್ಪಡುವರು.


ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಕೆಟ್ಟಕಾರ್ಯಗಳನ್ನು ಮಾಡುವವರು ಹೆದರಿಕೆಯಿಂದ ನಡುಗುವರು. ಜನರು, “ನಮ್ಮಲ್ಲಿ ಯಾರು ನಾಶಮಾಡುವ ಈ ಬೆಂಕಿಯ ಜೊತೆ ಜೀವಿಸಬಲ್ಲರು? ನಿತ್ಯಕಾಲಕ್ಕೂ ಸುಡುವ ಈ ಬೆಂಕಿಯ ಬಳಿಯಲ್ಲಿ ಯಾರು ವಾಸಮಾಡಬಲ್ಲರು?” ಎಂದು ಹೇಳುವರು.


ನಾನು ಕೋಪಗೊಂಡಿಲ್ಲ. ಆದರೆ ಯುದ್ಧ ನಡೆಯುತ್ತಿರುವಾಗ ಯಾರಾದರೂ ಮುಳ್ಳುಬೇಲಿಯನ್ನು ಹಾಕಿದರೆ, ನಾನು ಮುನ್ನುಗ್ಗಿ ಅದನ್ನು ಸುಟ್ಟುಹಾಕುವೆನು.


ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ ಅವರು ಅದನ್ನು ನೋಡುವರು. ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ಆ ದುಷ್ಟಜನರು ನೋಡಲಿ. ಆಗ ಅವರು ಅವಮಾನ ಹೊಂದುವರು. ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು.


ಸರ್ವಶಕ್ತನಾದ ಯೆಹೋವನು ಕೋಪಗೊಂಡಿರುವುದರಿಂದ ದೇಶವೆಲ್ಲಾ ಸುಟ್ಟುಹೋಗುವದು. ಆ ಬೆಂಕಿಯಲ್ಲಿ ಜನರೆಲ್ಲಾ ಸುಟ್ಟುಹೋಗುವರು. ಯಾರೂ ತನ್ನ ಸಹೋದರರನ್ನು ರಕ್ಷಿಸಲು ಪ್ರಯತ್ನಿಸುವದಿಲ್ಲ.


ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.


ಸಂಸೋನನನ್ನು ಲೆಹೀ ಎಂಬ ಸ್ಥಳಕ್ಕೆ ತಂದಾಗ ಫಿಲಿಷ್ಟಿಯರು ಅವನನ್ನು ನೋಡುವದಕ್ಕೆ ಬಂದರು. ಅವರು ಸಂತೋಷದಿಂದ ಆರ್ಭಟಿಸುತ್ತಿದ್ದರು. ಆಗ ಯೆಹೋವನ ಆತ್ಮವು ಪ್ರಬಲವಾಗಿ ಸಂಸೋನನ ಮೇಲೆ ಬಂದಿತು. ಸಂಸೋನನು ಹಗ್ಗಗಳನ್ನು ಸುಟ್ಟದಾರಗಳೊ ಎಂಬಂತೆ ಕಿತ್ತುಹಾಕಿದನು; ಕೈಗೆ ಕಟ್ಟಿದ್ದ ಹಗ್ಗಗಳು ಕಳಚಿಬಿದ್ದವು.


ಆತನು ಕಾಳನ್ನು ಸ್ವಚ್ಛಗೊಳಿಸಲು ಸಿದ್ಧನಾಗಿದ್ದಾನೆ. ಆತನು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ಒಳ್ಳೆಯ ಕಾಳುಗಳನ್ನು ಕಣಜದಲ್ಲಿ ತುಂಬಿಸಿ ಹೊಟ್ಟನ್ನು ನಂದಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವನು” ಎಂದು ಹೇಳಿದನು.


ಚೀಯೋನಿನ ಸ್ತ್ರೀಯರ ಕಲ್ಮಷವನ್ನು ಯೆಹೋವನು ತೊಳೆದುಬಿಡುವನು. ಆತನು ಜೆರುಸಲೇಮಿನ ಮಧ್ಯದಲ್ಲಿರುವ ರಕ್ತವನ್ನು ತೊಳೆದುಬಿಡುವನು. ಆತನು ನ್ಯಾಯನೀತಿಗಳಿಂದ ತೀರ್ಪುನೀಡುವನು; ದಹಿಸುವ ಆತ್ಮನಿಂದ ಎಲ್ಲವನ್ನು ಶುದ್ಧಗೊಳಿಸುವನು.


ಆ ದೇಶದಲ್ಲಿ ವಾಸಿಸುವ ಜನರು ದೇವರಿಗೆ ವಿರುದ್ಧವಾಗಿ ನಡೆದರು. ಆದ್ದರಿಂದ ದೇವರು ಈ ದೇಶವನ್ನು ನಾಶಮಾಡಲು ತೀರ್ಮಾನಿಸಿದನು. ಜನರು ಶಿಕ್ಷಿಸಲ್ಪಡುವರು. ಕೆಲವೇ ಮಂದಿ ಮಾತ್ರ ಉಳಿಯುವರು.


ಜನರೇ, ನೀವು ಪ್ರಯೋಜನವಿಲ್ಲದ ಕಾರ್ಯಗಳನ್ನು ಮಾಡಿದಿರಿ. ಆ ಕೆಲಸಗಳು ಒಣಹುಲ್ಲಿನಂತೆಯೂ ದಂಟಿನಂತೆಯೂ ಇವೆ. ನಿಮ್ಮ ಆತ್ಮವು ನಿಮ್ಮಲ್ಲಿ ಬೆಂಕಿಯಂತಿದ್ದು ನಿಮ್ಮನ್ನು ಸುಡುವದು.


ಅವರು ತಮ್ಮ ವಿಶೇಷವಾದ ತೋಟದೊಳಗೆ ಪೂಜೆಮಾಡಲು ತಮ್ಮನ್ನು ಶುದ್ಧಮಾಡಿಕೊಳ್ಳುವಂತೆ ಸ್ನಾನಮಾಡುವರು. ತಮ್ಮ ವಿಶೇಷ ತೋಟದೊಳಗೆ ಹೋಗಲು ಒಬ್ಬರನ್ನೊಬ್ಬನು ಹಿಂಬಾಲಿಸುವರು. ಅಲ್ಲಿ ಅವರ ವಿಗ್ರಹಗಳನ್ನು ಪೂಜಿಸುವರು. ಆದರೆ ಯೆಹೋವನು ಅವರೆಲ್ಲರನ್ನು ನಾಶಮಾಡುವನು. “ಆ ಜನರು ಹಂದಿ, ಇಲಿ ಮತ್ತು ಇತರ ಅಶುದ್ಧ ಪ್ರಾಣಿಗಳ ಮಾಂಸವನ್ನು ತಿನ್ನುತ್ತಾರೆ. ಆದರೆ ಅವರೆಲ್ಲರೂ ಒಟ್ಟಾಗಿ ನಾಶವಾಗುವರು.” ಇದು ಯೆಹೋವನು ಹೇಳಿದ ಮಾತುಗಳು.


ದಾವೀದನ ಮನೆತನದವರೇ, ಯೆಹೋವನು ಹೀಗೆ ಹೇಳುತ್ತಾನೆ: ನೀವು ಪ್ರತಿದಿನ ನಿಷ್ಪಕ್ಷಪಾತವಾಗಿ ನ್ಯಾಯನಿರ್ಣಯ ಮಾಡಬೇಕು. ಅಪರಾಧಿಗಳಿಂದ ಕಷ್ಟಕ್ಕೊಳಗಾದವರನ್ನು ರಕ್ಷಿಸಬೇಕು. ನೀವು ಹಾಗೆ ಮಾಡದಿದ್ದರೆ ನನಗೆ ಬಹಳ ಕೋಪ ಬರುತ್ತದೆ. ನನ್ನ ಕೋಪವು ಯಾರಿಂದಲೂ ನಂದಿಸಲಾಗದ ಬೆಂಕಿಯಂತಿದೆ. ನೀವು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಹೀಗಾಗುತ್ತದೆ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು