Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:5 - ಪರಿಶುದ್ದ ಬೈಬಲ್‌

5 ನಾನು ನಿಮ್ಮನ್ನು ಯಾಕೆ ಶಿಕ್ಷಿಸುತ್ತಲೇ ಇರಬೇಕು? ನಾನು ನಿಮ್ಮನ್ನು ಶಿಕ್ಷಿಸಿದೆನು, ಆದರೆ ನೀವು ಬದಲಾಗಲಿಲ್ಲ. ನೀವು ನನಗೆ ವಿರುದ್ಧವಾಗಿ ಏಳುತ್ತಲೇ ಇದ್ದೀರಿ. ಈಗ ಪ್ರತಿಯೊಂದು ತಲೆಯೂ ಪ್ರತಿಯೊಂದು ಹೃದಯವೂ ರೋಗಕ್ಕೆ ಬಲಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಏಕೆ ಹೆಚ್ಚು ಹೆಚ್ಚಾಗಿ ದ್ರೋಹಗೈದು ದಂಡನೆಗೆ ಗುರಿ ಆಗುತ್ತೀರಿ? ನಿಮ್ಮ ತಲೆತುಂಬ ಗಾಯ, ನಿಮ್ಮ ಹೃದಯವೆಲ್ಲ ದುರ್ಬಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಏಕೆ ದ್ರೋಹವನ್ನು ಹೆಚ್ಚಿಸಿ ಹೆಚ್ಚಿಸಿ ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಏಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ? ತಲೆಯೆಲ್ಲಾ ಗಾಯವಾಗಿದೆ, ಹೃದಯವೆಲ್ಲಾ ಬಾಧಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:5
25 ತಿಳಿವುಗಳ ಹೋಲಿಕೆ  

“‘ನಿನ್ನ ವಿರುದ್ಧ ನನಗಿರುವ ಕೋಪ ತೃಪ್ತಿಗೊಳ್ಳುವ ತನಕ ನೀನು ಮತ್ತೆಂದಿಗೂ ಶುದ್ಧಳಾಗುವುದಿಲ್ಲ. ನಿನ್ನನ್ನು ತೊಳೆದು ಕಲೆಗಳನ್ನು ತೆಗೆಯಲು ನನಗೆ ಮನಸ್ಸಿತ್ತು. ಆದರೆ ಕಲೆಗಳು ಹೋಗಲಿಲ್ಲ. ಆದ್ದರಿಂದ ನಿನ್ನ ಮೇಲಿನ ನನ್ನ ಕೋಪವು ತಣ್ಣಗಾಗುವ ತನಕ ನಾನು ನಿನ್ನನ್ನು ತೊಳೆಯುವುದೇ ಇಲ್ಲ.


ಯೆಹೋವನೇ, ನೀನು ನಂಬಿಗಸ್ತರಾದ ಜನರನ್ನು ಹುಡುಕುವೆ. ನೀನು ಯೆಹೂದದ ಜನರಿಗೆ ಹೊಡೆದೆ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನ್ನು ಹಾಳುಮಾಡಿದೆ, ಆದರೆ ಅದರಿಂದ ಅವರು ಪಾಠವನ್ನೂ ಕಲಿಯಲಿಲ್ಲ. ಅವರು ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಡಲಿಲ್ಲ. ಅವರು ಬಹಳ ಹಟಮಾರಿಗಳಾದರು.


ದೇವರಿಗೆ ವಿರುದ್ಧವಾಗಿರುವ ಇಸ್ರೇಲಿನ ಮಕ್ಕಳೇ, ನೀವು ದೇವರ ಬಳಿಗೆ ಹಿಂತಿರುಗಿ ಬನ್ನಿರಿ.


ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.


“ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಉಪಯೋಗಿಸುತ್ತಿದ್ದಾರೆ. ಅವರ ಬಾಯಿಂದ ಬಾಣಗಳಂತೆ ಸುಳ್ಳುಗಳು ಬರುತ್ತಿವೆ. ಈ ನಾಡಿನಲ್ಲಿ ಸತ್ಯವಲ್ಲ, ‘ಅಸತ್ಯ’ ಪ್ರಬಲವಾಗುತ್ತಿದೆ. ಅವರು ಒಂದು ಪಾಪದಿಂದ ಮತ್ತೊಂದು ಪಾಪಕ್ಕೆ ಹೋಗುತ್ತಿದ್ದಾರೆ. ಅವರು ನನ್ನನ್ನು ಅರಿತಿಲ್ಲ.” ಯೆಹೋವನು ಈ ಮಾತನ್ನು ಹೇಳಿದನು.


“ಯೆಹೂದದ ಜನರೇ ನಾನು ನಿಮ್ಮನ್ನು ಶಿಕ್ಷಿಸಿದೆ, ಆದರೆ ಅದರಿಂದ ಪ್ರಯೋಜನವಾಗಲಿಲ್ಲ. ಶಿಕ್ಷಿಸಿದರೂ ನೀವು ಹಿಂತಿರುಗಿ ಬರಲಿಲ್ಲ. ನಿಮ್ಮಲ್ಲಿಗೆ ಬಂದ ಪ್ರವಾದಿಗಳನ್ನು ನೀವು ಕತ್ತಿಯಿಂದ ಕೊಂದುಹಾಕಿದಿರಿ. ನೀವು ಅಪಾಯಕಾರಿಯಾದ ಸಿಂಹದಂತಿದ್ದು ಪ್ರವಾದಿಗಳನ್ನು ಕೊಂದುಹಾಕಿದಿರಿ.”


ನಮ್ಮ ರಾಜರುಗಳು, ನಾಯಕರು, ಯಾಜಕರು ಮತ್ತು ನಮ್ಮ ಪೂರ್ವಿಕರು ನಿನ್ನ ಆಜ್ಞೆಯನ್ನು ಅನುಸರಿಸಲಿಲ್ಲ. ನಿನ್ನ ಎಚ್ಚರಿಕೆಯನ್ನು ಲಕ್ಷ್ಯಕ್ಕೆ ತರಲಿಲ್ಲ.


ನಾನು ಯೆಹೂದದ ಜನನಾಯಕರ ಹತ್ತಿರ ಹೋಗಿ ಅವರೊಂದಿಗೆ ಮಾತನಾಡುವೆನು. ಜನನಾಯಕರು ಯೆಹೋವನ ಮಾರ್ಗಗಳನ್ನು ನಿಶ್ಚಯವಾಗಿ ತಿಳಿದುಕೊಂಡಿರುವರು. ಅವರು ತಮ್ಮ ಯೆಹೋವನ ನ್ಯಾಯವಿಧಿಗಳನ್ನು ಅರಿತುಕೊಂಡಿರುತ್ತಾರೆ” ಅಂದುಕೊಂಡೆನು. ಆದರೆ ಈ ಜನನಾಯಕರುಗಳೆಲ್ಲಾ ದೇವರ ಸೇವೆಯನ್ನು ತೊರೆದುಬಿಟ್ಟಿದ್ದರು. ಅವರು ದೇವರಿಗೆ ವಿರೋಧಿಗಳಾದರು.


ಅಲ್ಲಿ ವಾಸಿಸುವವರಲ್ಲಿ ಯಾರೂ “ನನಗೆ ಸೌಖ್ಯವಿಲ್ಲ” ಎಂದು ಹೇಳುವುದಿಲ್ಲ. ಅಲ್ಲಿ ವಾಸಿಸುವವರೆಲ್ಲಾ ತಮ್ಮ ಪಾಪಗಳಿಗೆ ಕ್ಷಮೆಹೊಂದಿದವರಾಗಿದ್ದಾರೆ.


ಇದರರ್ಥವೇನೆಂದರೆ ಮನಸ್ಸೆಯು ಎಫ್ರಾಯೀಮನೊಡನೆ ಯುದ್ಧ ಮಾಡುವನು ಮತ್ತು ಎಫ್ರಾಯೀಮನು ಮನಸ್ಸೆಯೊಂದಿಗೆ ಯುದ್ಧಮಾಡುವನು. ಆಮೇಲೆ ಅವರಿಬ್ಬರೂ ಸೇರಿ ಯೆಹೂದದೊಂದಿಗೆ ಯುದ್ಧ ಮಾಡುವರು. ಯೆಹೋವನು ಇಸ್ರೇಲರ ಮೇಲೆ ಇನ್ನೂ ಕೋಪದಿಂದಿದ್ದಾನೆ; ತನ್ನ ಜನರನ್ನು ಇನ್ನೂ ಶಿಕ್ಷಿಸಲು ಸಿದ್ಧನಾಗಿದ್ದಾನೆ.


ದೇವರು ಜನರನ್ನು ಶಿಕ್ಷಿಸಿದರೂ ಅವರು ಪಾಪ ಮಾಡುವದನ್ನು ನಿಲ್ಲಿಸುವದಿಲ್ಲ. ಅವರು ಆತನ ಬಳಿಗೆ ಹಿಂದಿರುಗಿಬರುವದಿಲ್ಲ. ಸರ್ವಶಕ್ತನಾದ ಯೆಹೋವನನ್ನು ಅವರು ಹಿಂಬಾಲಿಸುವುದಿಲ್ಲ.


ನಿಮ್ಮನ್ನಾಳುವವರು ದಂಗೆಕೋರರಾಗಿದ್ದಾರೆ; ಕಳ್ಳರ ಮಿತ್ರರಾಗಿದ್ದಾರೆ; ಲಂಚಕೋರರಾಗಿದ್ದಾರೆ; ಹಣಕ್ಕಾಗಿ ಕೆಟ್ಟದ್ದನ್ನು ಮಾಡುತ್ತಾರೆ; ಹಣಕ್ಕಾಗಿ ಮೋಸ ಮಾಡುತ್ತಾರೆ. ಅನಾಥರಿಗೆ ಸಹಾಯ ಮಾಡದವರಾಗಿದ್ದಾರೆ; ವಿಧವೆಯರ ಅಗತ್ಯತೆಗಳಿಗೆ ಲಕ್ಷ್ಯ ಕೊಡದವರಾಗಿದ್ದಾರೆ.”


ಆಹಾಜನಿಗೆ ಸಂಕಟ ಬಂದಾಗಲೂ ಇನ್ನೂ ಹೆಚ್ಚಾಗಿ ಪಾಪ ಮಾಡುತ್ತಾ ಯೆಹೋವನಿಗೆ ಇನ್ನೂ ಹೆಚ್ಚಾಗಿ ದ್ರೋಹಿಯಾದನು.


ಅಹಜ್ಯನು ಮೂರನೆಯ ಸೇನಾಧಿಪತಿಯನ್ನು ಐವತ್ತು ಜನರೊಂದಿಗೆ ಕಳುಹಿಸಿದನು. ಐವತ್ತು ಮಂದಿಯ ಮೂರನೆಯ ಸೇನಾಧಿಪತಿಯು ಎಲೀಯನ ಬಳಿಗೆ ಬಂದನು. ಸೇನಾಧಿಪತಿಯು ತನ್ನ ಮೊಣಕಾಲುಗಳ ಮೇಲೆ ಬಿದ್ದು ನಮಸ್ಕರಿಸಿದನು. ಸೇನಾಧಿಪತಿಯು ಎಲೀಯನನ್ನು ಬೇಡಿಕೊಳ್ಳುತ್ತಾ ಅವನಿಗೆ, “ದೇವ ಮನುಷ್ಯನೇ, ನನ್ನ ಮತ್ತು ಈ ಐವತ್ತು ಜನರ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ!


ಕಪ್ಪಗಿರುವವನು ತನ್ನ ಚರ್ಮದ ಬಣ್ಣವನ್ನು ಬದಲಿಸಲಾರನು. ಚಿರತೆಯು ತನ್ನ ಮೈಮೇಲಿನ ಚುಕ್ಕೆಗಳನ್ನು ಬದಲಾಯಿಸಲಾರದು. ಅದೇ ರೀತಿ, ಜೆರುಸಲೇಮ್ ನಗರವೇ, ನೀನು ಸಹ ಮಾರ್ಪಾಟು ಹೊಂದಿ ಒಳ್ಳೆಯದನ್ನು ಮಾಡಲಾರೆ. ನೀನು ಯಾವಾಗಲೂ ಕೆಟ್ಟದ್ದನ್ನೇ ಮಾಡುವೆ.


“ಮನುಷ್ಯನ ಬುದ್ಧಿಯು ವಂಚನೆ ಮಾಡುತ್ತದೆ. ಆ ಬುದ್ಧಿಯು ಅತೀ ವ್ಯಾಧಿಗ್ರಸ್ತವಾಗಿರಬಹುದು, ಯಾರಿಂದಲೂ ಬುದ್ಧಿಯ ನಿಜವಾದ ಸ್ವರೂಪವನ್ನರಿಯಲಾಗುವದಿಲ್ಲ.


ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಅನೇಕ ಯೆಹೂದಿ ಸ್ತ್ರೀಯರು ಬೇರೆ ದೇವರುಗಳಿಗೆ ನೈವೇದ್ಯಗಳನ್ನು ಅರ್ಪಿಸುತ್ತಿದ್ದರು. ಅವರ ಗಂಡಂದಿರಿಗೆ ಅದು ಗೊತ್ತಿತ್ತು. ಆದರೆ ಅವರು ಅದನ್ನು ತಡೆಯಲಿಲ್ಲ. ಯೆಹೂದದ ಜನರ ಒಂದು ದೊಡ್ಡ ಗುಂಪು ಸೇರಿತ್ತು. ಅವರು ಈಜಿಪ್ಟಿನ ದಕ್ಷಿಣಭಾಗದಲ್ಲಿ ವಾಸಿಸುವ ಯೆಹೂದಿಗಳಾಗಿದ್ದರು. ಅನ್ಯದೇವರುಗಳಿಗೆ ನೈವೇದ್ಯವನ್ನು ಅರ್ಪಿಸುತ್ತಿದ್ದ ಸ್ತ್ರೀಯರ ಗಂಡಂದಿರು ಯೆರೆಮೀಯನಿಗೆ ಹೀಗೆಂದರು:


ಇವುಗಳ ದೆಸೆಯಿಂದಾಗಿ ನಮ್ಮ ಹೃದಯಗಳು ಎಡಬಿಡದೆ ನೋಯುತ್ತಿವೆ. ನಮ್ಮ ಕಣ್ಣುಗಳು ಸರಿಯಾಗಿ ಕಾಣದಂತಾಗಿವೆ.


ಆದರೆ ನೀವು ಬಲಹೀನ ಕುರಿಗಳನ್ನು ಬಲಪಡಿಸಲಿಲ್ಲ. ಕಾಯಿಲೆಯಲ್ಲಿರುವ ಕುರಿಗಳನ್ನು ನೀವು ಪರಾಂಬರಿಸಲಿಲ್ಲ. ಗಾಯಗೊಂಡ ಕುರಿಗಳಿಗೆ ಬಟ್ಟೆ ಸುತ್ತಲಿಲ್ಲ. ಕೆಲವು ಕುರಿಗಳು ದಾರಿತಪ್ಪಿ ದೂರ ಹೋದವು. ಆದರೆ ನೀವು ಅದರ ಬೆನ್ನ ಹಿಂದೆ ಹೋಗಿ ಹಿಂತಿರುಗಿ ಬರುವಂತೆ ಮಾಡಲಿಲ್ಲ. ತಪ್ಪಿಹೋದ ಕುರಿಗಳನ್ನು ನೀವು ಹುಡುಕಲಿಲ್ಲ. ನೀವು ಬಹಳ ಕ್ರೂರಿಗಳೂ ದಯೆ ಇಲ್ಲದವರೂ ಆಗಿದ್ದೀರಿ. ಆ ರೀತಿಯಾಗಿ ನೀವು ನಿಮ್ಮ ಕುರಿಗಳನ್ನು ನಡೆಸಿದಿರಿ.


“ಕಳೆದುಹೋದ ಕುರಿಗಳನ್ನು ನಾನು ಹುಡುಕುವೆನು. ಚದರಿಹೋಗಿದ್ದ ಕುರಿಗಳನ್ನು ಹಿಂದಕ್ಕೆ ತರುವೆನು. ಗಾಯಗೊಂಡ ಕುರಿಗಳನ್ನು ಬಟ್ಟೆಯಿಂದ ಸುತ್ತುವೆನು. ಬಲಹೀನ ಕುರಿಗಳನ್ನು ಬಲಶಾಲಿಯಾಗಿ ಮಾಡುವೆನು. ಆದರೆ ನಾನು ಕೊಬ್ಬಿದ, ಶಕ್ತಿಶಾಲಿಯಾದ ಕುರುಬರನ್ನು ನಾಶಮಾಡುವೆನು. ಯೋಗ್ಯವಾದ ಶಿಕ್ಷೆಯನ್ನು ಅವರಿಗೆ ಉಣಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು