ಯೆಶಾಯ 1:7 - ಪರಿಶುದ್ದ ಬೈಬಲ್7 ನಿಮ್ಮ ದೇಶವು ಹಾಳಾಗಿದೆ; ನಿಮ್ಮ ನಗರಗಳು ಬೆಂಕಿಯಿಂದ ಸುಡಲ್ಪಟ್ಟಿವೆ. ನಿಮ್ಮ ಶತ್ರುಗಳು ನಿಮ್ಮ ದೇಶವನ್ನು ವಶಪಡಿಸಿಕೊಂಡಿದ್ದಾರೆ; ಅನ್ಯದೇಶವು ಶತ್ರುಸೈನ್ಯದಿಂದ ಹಾಳಾಗುವಂತೆಯೇ, ನಿಮ್ಮ ದೇಶವೂ ಹಾಳಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಿಮ್ಮ ನಾಡು ಹಾಳುಬಿದ್ದಿದೆ: ನಿಮ್ಮ ಪಟ್ಟಣಗಳು ಸುಟ್ಟು ಭಸ್ಮವಾಗಿವೆ. ನಿಮ್ಮ ಕಣ್ಮುಂದೆಯೆ ನಿಮ್ಮ ಭೂಮಿಯನ್ನು ಅನ್ಯಜನರು ಕಬಳಿಸುತ್ತಿದ್ದಾರೆ. ಅನ್ಯದೇಶಗಳು ನಾಶವಾದಂತೆಯೇ ನಿಮ್ಮ ನಾಡು ಹಾಳಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಸುಟ್ಟು ಹೋಗಿವೆ; ನಿಮ್ಮ ಭೂವಿುಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ; ಅನ್ಯದೇಶಗಳು ನಾಶನವಾದಂತೆಯೇ ನಿಮ್ಮ ಭೂವಿುಯೂ ಹಾಳಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ. ನಿಮ್ಮ ಹೊಲಗಳನ್ನು ಪರರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಇತರ ಜನರಿಂದ ಕೆಡವಿಬಿದ್ದು ಹಾಳಾಗಿದೆ. ಅಧ್ಯಾಯವನ್ನು ನೋಡಿ |
ಆಹಾಜನು ಪಾಪಮಾಡಿದ್ದರಿಂದ ದೇವರು ಅರಾಮ್ಯರನ್ನು ಅವನ ವಿರುದ್ಧವಾಗಿ ಕಳುಹಿಸಿ ಅವನು ಸೋತು ಹೋಗುವಂತೆ ಮಾಡಿದನು. ಅವರಲ್ಲಿ ಬಹುಮಂದಿ ಸೆರೆಹಿಡಿಯಲ್ಪಟ್ಟರು. ಅರಾಮ್ಯರ ಅರಸನು ಅವರನ್ನೆಲ್ಲಾ ದಮಸ್ಕಕ್ಕೆ ಒಯ್ದನು. ಇಸ್ರೇಲರ ಅರಸನಾದ ಪೆಕಹನು ಬಂದು ಆಹಾಜನನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಪೆಕಹನ ತಂದೆಯ ಹೆಸರು ರೆಮಲ್ಯ. ಪೆಕಹನೂ ಅವನ ಸೈನ್ಯವೂ ಯೆಹೂದ ಸೈನಿಕರಲ್ಲಿ ಒಂದೇ ದಿವಸದಲ್ಲಿ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ ಧೈರ್ಯಶಾಲಿ ಸೈನಿಕರನ್ನು ಕೊಂದರು. ಯೆಹೂದದ ಜನರನ್ನು ಪೆಕಹನು ಸೋಲಿಸಿದನು. ಯಾಕೆಂದರೆ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿಧೇಯರಾಗಲು ನಿರಾಕರಿಸಿದರು.
ಯೆಹೋವನು ವಾಗ್ದಾನವನ್ನು ಮಾಡಿರುತ್ತಾನೆ. ಆತನ ಸ್ವಂತ ಹೆಸರೇ ಅದಕ್ಕೆ ಸಾಕ್ಷಿಯಾಗಿದೆ. ಆತನು ತನ್ನ ಸಾಮರ್ಥ್ಯದಿಂದ ವಾಗ್ದಾನವನ್ನು ನೆರವೇರಿಸುವನು. ಯೆಹೋವನು ಹೇಳಿದ್ದೇನೆಂದರೆ, “ನಿನ್ನ ಆಹಾರವನ್ನು ನಾನು ನಿನ್ನ ವೈರಿಗಳಿಗೆ ಮತ್ತೆ ಕೊಡುವದಿಲ್ಲವೆಂದು ವಾಗ್ದಾನ ಮಾಡುತ್ತೇನೆ. ನೀನು ತಯಾರಿಸುವ ದ್ರಾಕ್ಷಾರಸವನ್ನು ಇನ್ನು ಮುಂದೆ ನಿನ್ನ ವೈರಿಗಳು ಸೇವಿಸುವದಿಲ್ಲವೆಂದು ನಾನು ವಾಗ್ದಾನ ಮಾಡುತ್ತೇನೆ.