Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:8 - ಪರಿಶುದ್ದ ಬೈಬಲ್‌

8 ಚೀಯೋನ್ ನಗರಿಯು ದ್ರಾಕ್ಷಿತೋಟದಲ್ಲಿರುವ ಜನಶೂನ್ಯವಾದ ಡೇರೆಯಂತಿದೆ; ಸೌತೆಯ ಹೊಲದಲ್ಲಿ ಪಾಳುಬಿದ್ದಿರುವ ಮನೆಯಂತಿದೆ; ಶತ್ರುಗಳಿಗೆ ಸೋತುಹೋದ ನಗರದಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆರೂಸಲೇಮಿನ ನಗರವೊಂದೇ ಉಳಿದು, ದ್ರಾಕ್ಷಿತೋಟದ ಮನೆಯಂತೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಲ್ಪಟ್ಟ ಪಟ್ಟಣದ ಹಾಗೆಯೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸಿಯೋನ್ ನಗರವೊಂದೇ ಮುತ್ತಿಗೆಗೆ ತುತ್ತಾದ ಪಟ್ಟಣದಂತೆ, ದ್ರಾಕ್ಷಾತೋಟದ ಅಟ್ಟಣಿಯಂತೆ, ಸೌತೆ ಹೊಲದ ಗುಡಿಸಿಲಿನಂತೆ ಸುರಕ್ಷತೆಯ ಅವಕಾಶವಿಲ್ಲದೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಚೀಯೋನ್ ನಗರಿಯೊಂದೇ ಉಳಿದು ದ್ರಾಕ್ಷೇತೋಟದ ಮಂಚಿಕೆಯಂತೆಯೂ ಸವುತೆಯ ಹೊಲದ ಗುಡಸಲಿನ ಹಾಗೂ ಮುತ್ತಿದ ಪಟ್ಟಣದೋಪಾದಿಯಲ್ಲಿಯೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಚೀಯೋನ್ ಪುತ್ರಿಯು ದ್ರಾಕ್ಷಿ ತೋಟದಲ್ಲಿರುವ ಮನೆಯ ಹಾಗೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಿರುವ ಪಟ್ಟಣದ ಹಾಗೆಯೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:8
21 ತಿಳಿವುಗಳ ಹೋಲಿಕೆ  

ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


“ಸಿಯೋನ್ ನಗರವೇ, ಭಯಪಡಬೇಡ! ನೋಡು! ನಿನ್ನ ರಾಜನು ಬರುತ್ತಿದ್ದಾನೆ. ಆತನು ಪ್ರಾಯದ ಕತ್ತೆಯ ಮೇಲೆ ಕುಳಿತುಕೊಂಡು ಬರುತ್ತಿದ್ದಾನೆ.”


ಯೆಹೋವನು ಹೀಗೆನ್ನುತ್ತಾನೆ, “ಚೀಯೋನೇ, ಆನಂದಿಸು, ಯಾಕೆಂದರೆ ನಾನು ಬಂದು ನಿಮ್ಮ ಪಟ್ಟಣದಲ್ಲಿ ವಾಸಿಸುವೆನು.


ಇಗೋ, ಯೆಹೋವನು ದೂರದೇಶಗಳವರಿಗೆ ಹೇಳುವುದೇನೆಂದರೆ, “ಚೀಯೋನಿನ ಜನರಿಗೆ ತಿಳಿಸಿರಿ: ‘ನೋಡು, ನಿನ್ನ ರಕ್ಷಕನು ಬರುತ್ತಿದ್ದಾನೆ. ತನ್ನ ಕೈಯಲ್ಲಿ ನಿನಗೆ ಪ್ರತಿಫಲವನ್ನು ತೆಗೆದುಕೊಂಡು ಬರುತ್ತಿದ್ದಾನೆ.’”


ಈ ದಿವಸ ನೋಬಿನಲ್ಲಿ ಸೈನ್ಯವು ತಂಗುವದು. ಜೆರುಸಲೇಮಿನ ಪರ್ವತವಾಗಿರುವ ಚೀಯೋನ್ ಪರ್ವತಕ್ಕೆ ವಿರುದ್ಧವಾಗಿ ಯುದ್ಧಮಾಡಲು ಸೈನ್ಯವು ಸಿದ್ಧವಾಗುವುದು.


ಯೆಹೋವನು ತನ್ನ ಸ್ವಂತ ಗುಡಾರವನ್ನು ಒಂದು ತೋಟವೋ ಎಂಬಂತೆ ಹಾಳುಮಾಡಿದ್ದಾನೆ. ಜನರು ಆತನನ್ನು ಆರಾಧಿಸಲು ಸೇರಿಬರುತ್ತಿದ್ದ ಸ್ಥಳವನ್ನು ನಾಶಪಡಿಸಿದ್ದಾನೆ. ಚೀಯೋನಿನಲ್ಲಿ ಜನರು ಮಹೋತ್ಸವಗಳನ್ನು ಮತ್ತು ವಿಶೇಷ ವಿಶ್ರಾಂತಿ ದಿನಗಳನ್ನು ಮರೆಯುವಂತೆ ಯೆಹೋವನು ಮಾಡಿದ್ದಾನೆ. ಯೆಹೋವನು ರಾಜನನ್ನು ಮತ್ತು ಯಾಜಕರನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಕಡುಕೋಪದಿಂದ ಅವರನ್ನು ತಿರಸ್ಕರಿಸಿದ್ದಾನೆ.


ಕೋಪೋದ್ರಿಕ್ತನಾದ ಯೆಹೋವನು ಚೀಯೋನಿನ ಮಗಳ ಮೇಲೆ ಹೇಗೆ ಕಾರ್ಮೋಡಗಳು ಕವಿಯುವಂತೆ ಮಾಡಿದ್ದಾನೆ ನೋಡಿರಿ. ಆತನು ಇಸ್ರೇಲಿನ ವೈಭವವನ್ನು ಆಕಾಶದಿಂದ ಭೂಮಿಗೆ ಎಸೆದಿದ್ದಾನೆ. ಯೆಹೋವನಿಗೆ ಕೋಪ ಬಂದಾಗ ಆತನು ಇಸ್ರೇಲ್ ತನ್ನ ಪಾದಪೀಠವೆಂಬುದನ್ನು ಗಮನಕ್ಕೆ ತಂದುಕೊಳ್ಳಲಿಲ್ಲ.


“ಸನ್ಹೇರೀಬನ ಕುರಿತು ಯೆಹೋವನ ಸಂದೇಶವಿದು: ‘ಅಶ್ಶೂರದ ಅರಸನೇ, ಚೀಯೋನಿನ ಕುಮಾರಿಯು ನಿನ್ನನ್ನು ಪ್ರಾಮುಖ್ಯವಾದವನೆಂದು ಎಣಿಸುವದಿಲ್ಲ. ಆಕೆ ನಿನ್ನನ್ನು ನೋಡಿ ಪರಿಹಾಸ್ಯ ಮಾಡುವಳು. ಜೆರುಸಲೇಮಿನ ಕುಮಾರಿಯು ನಿನ್ನ ಹಿಂದೆ ತಲೆಯಾಡಿಸುತ್ತಾ ನಿನ್ನನ್ನು ಹಾಸ್ಯ ಮಾಡುವಳು.


ಚೀಯೋನಿನ ಸ್ತ್ರೀಯರ ಕಲ್ಮಷವನ್ನು ಯೆಹೋವನು ತೊಳೆದುಬಿಡುವನು. ಆತನು ಜೆರುಸಲೇಮಿನ ಮಧ್ಯದಲ್ಲಿರುವ ರಕ್ತವನ್ನು ತೊಳೆದುಬಿಡುವನು. ಆತನು ನ್ಯಾಯನೀತಿಗಳಿಂದ ತೀರ್ಪುನೀಡುವನು; ದಹಿಸುವ ಆತ್ಮನಿಂದ ಎಲ್ಲವನ್ನು ಶುದ್ಧಗೊಳಿಸುವನು.


ಆಗ ಜೆರುಸಲೇಮಿನ ದ್ವಾರಗಳ ಬಳಿಯಲ್ಲಿ ನಿನ್ನನ್ನು ಸಂಕೀರ್ತಿಸುವೆನು. ನೀನು ನನ್ನನ್ನು ರಕ್ಷಿಸಿದ್ದರಿಂದ ಹರ್ಷಿಸುವೆನು.


ದುಷ್ಟನು ಕಟ್ಟುವ ಮನೆಯು ಜೇಡರ ಬಲೆಯಂತೆಯೂ ಕಾವಲುಗಾರನ ಗುಡಾರದಂತೆಯೂ ಕ್ಷಣಿಕವಾಗಿರುವುದು.


ಹೊಲವನ್ನು ಕಾಯುವ ಜನರಂತೆ ವೈರಿಗಳು ಜೆರುಸಲೇಮನ್ನು ಮುತ್ತಿಕೊಂಡಿದ್ದಾರೆ. ಯೆಹೂದವೇ, ನೀನು ನನಗೆ ತಿರುಗಿಬಿದ್ದೆ, ಅದಕ್ಕಾಗಿ ನಿನ್ನ ಮೇಲೆ ಶತ್ರುಗಳು ಬೀಳುತ್ತಿದ್ದಾರೆ” ಎಂದು ಯೆಹೋವನು ಹೇಳುವನು.


ಆ ನೀರು ಹೊಳೆಯಿಂದಾಚೆ ಬಂದು ಯೆಹೂದದ ಮೇಲೆ ಹರಿಯುವುದು. ಆ ನೀರು ಏರುತ್ತಾಬಂದು ಯೆಹೂದವನ್ನು ಕುತ್ತಿಗೆಯ ತನಕ ಮುಳುಗಿಸುವದು ಮಾತ್ರವಲ್ಲ ಅದನ್ನು ಸಂಪೂರ್ಣವಾಗಿ ಮುಳುಗಿಸಿಬಿಡುವದು. “ಇಮ್ಮಾನುವೇಲನೇ, ಈ ಜಲಪ್ರವಾಹವು ಎಲ್ಲಾ ಕಡೆಗಳಿಗೆ ಹಬ್ಬುತ್ತಾ ನಿಮ್ಮ ದೇಶವನ್ನು ಪೂರ್ತಿಯಾಗಿ ಮುಚ್ಚಿಬಿಡುವದು.”


ನಿಮ್ಮ ದೇಶವು ಹಾಳಾಗಿದೆ; ನಿಮ್ಮ ನಗರಗಳು ಬೆಂಕಿಯಿಂದ ಸುಡಲ್ಪಟ್ಟಿವೆ. ನಿಮ್ಮ ಶತ್ರುಗಳು ನಿಮ್ಮ ದೇಶವನ್ನು ವಶಪಡಿಸಿಕೊಂಡಿದ್ದಾರೆ; ಅನ್ಯದೇಶವು ಶತ್ರುಸೈನ್ಯದಿಂದ ಹಾಳಾಗುವಂತೆಯೇ, ನಿಮ್ಮ ದೇಶವೂ ಹಾಳಾಗಿದೆ.


ಆದರೆ ಸರ್ವಶಕ್ತನಾದ ಯೆಹೋವನು ಸ್ವಲ್ಪ ಮಂದಿಯನ್ನಾದರೂ ಉಳಿಸಿ ಅಲ್ಲಿ ವಾಸಿಸುವಂತೆ ಮಾಡಿದ್ದಾನೆ. ನಾವು ಸೊದೋಮ್ ಗೊಮೋರ ಪಟ್ಟಣಗಳಂತೆ ಸಂಪೂರ್ಣವಾಗಿ ನಾಶವಾಗಲಿಲ್ಲ.


ಆಗ ನೀನು ನಿನ್ನ ಮನಸ್ಸಿನೊಳಗೆ, ‘ಈ ಮಕ್ಕಳನ್ನೆಲ್ಲಾ ನನಗೆ ಯಾರು ಕೊಟ್ಟರು? ಇದು ಸಂತಸದ ಸಂಗತಿ! ನಾನು ಒಬ್ಬಂಟಿಗಳಾಗಿ ದುಃಖಿಸುತ್ತಿದ್ದೆನು. ನಾನು ಸೋಲಲ್ಪಟ್ಟವಳಾಗಿ ನನ್ನ ಜನರಿಂದ ದೂರವಿದ್ದೆನು. ಹೀಗಿರುವಾಗ ಈ ಮಕ್ಕಳನ್ನೆಲ್ಲಾ ಯಾರು ಕೊಟ್ಟರು? ನಾನು ಒಬ್ಬಂಟಿಗಳಾಗಿ ಇದ್ದೆನಲ್ಲಾ! ಇಷ್ಟೆಲ್ಲಾ ಮಕ್ಕಳನ್ನು ನನಗೆ ಕೊಟ್ಟವರು ಯಾರು?’” ಎಂದು ಅಂದುಕೊಳ್ಳುವಿ.


ಚೀಯೋನ್ ಕುಮಾರಿಯೇ, ನೀನು ಬಹು ಸುಂದರವಾಗಿಯೂ ಮೃದುವಾಗಿಯೂ ಇರುವೆ.


“ನಿನ್ನ ಸುತ್ತಲೂ ನಾನು ಸೈನ್ಯವನ್ನಿಟ್ಟಿದ್ದೇನೆ. ಅರೀಯೇಲೇ, ನಿನಗೆ ವಿರುದ್ಧವಾಗಿ ನಾನು ಯುದ್ಧದ ಬುರುಜನ್ನು ಕಟ್ಟಿಸಿರುತ್ತೇನೆ.


ಶತ್ರುವಿನಲ್ಲಿ ಒಬ್ಬನು ಬೆದರಿಸಿದರೆ ನಿಮ್ಮಲ್ಲಿರುವ ಸಾವಿರ ಮಂದಿ ಓಡುವರು. ಐದು ಮಂದಿ ವೈರಿಗಳು ಬೆದರಿಕೆ ಹಾಕಿದರೆ ನೀವೆಲ್ಲರೂ ಅವರ ಮುಂದಿನಿಂದ ಓಡಿಹೋಗುವಿರಿ. ಕೊನೆಗೆ ನಿಮ್ಮ ಸೈನ್ಯದಲ್ಲಿ ಉಳಿಯುವ ವಸ್ತು ಯಾವದೆಂದರೆ ಬೆಟ್ಟದ ಮೇಲೆ ನೆಟ್ಟಿರುವ ನಿಮ್ಮ ಧ್ವಜಸ್ತಂಭವೊಂದೇ.


ಅಶ್ಶೂರದ ಅರಸನು ತನ್ನ ಸೇನಾದಂಡನಾಯಕನು ನಮ್ಮ ಜೀವಸ್ವರೂಪನಾದ ದೇವರ ಬಗ್ಗೆ ಕೆಟ್ಟಮಾತುಗಳನ್ನು ಹೇಳಲು ಕಳುಹಿಸಿರುತ್ತಾನೆ. ನಿನ್ನ ದೇವರಾದ ಯೆಹೋವನು ಇದನ್ನೆಲ್ಲಾ ಕೇಳಿರುವನು. ವೈರಿಗಳು ನುಡಿದ ಆ ಮಾತುಗಳು ಸತ್ಯವಾದವುಗಳಲ್ಲ ಎಂಬುದನ್ನು ಆತನು ತೋರಿಸುವನು. ಆದ್ದರಿಂದ ಇನ್ನೂ ಜೀವದಿಂದ ಉಳಿದಿರುವವರಿಗಾಗಿ ಪ್ರಾರ್ಥಿಸು” ಎಂದು ಹಿಜ್ಕೀಯನು ಹೇಳಿದ್ದಾನೆ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು