ಯೆಶಾಯ 10:1 - ಪರಿಶುದ್ದ ಬೈಬಲ್1 ಕೆಟ್ಟ ನಿಯಮವನ್ನು ಬರೆಯುವ ನ್ಯಾಯಶಾಸ್ತ್ರಿಗಳನ್ನು ನೋಡಿರಿ. ಆ ನ್ಯಾಯಶಾಸ್ತ್ರಿಗಳು ಜನರಿಗೆ ಕಷ್ಟವಾಗಿರುವ ನಿಯಮಗಳನ್ನೇ ಮಾಡುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅಯ್ಯೋ, ಅನ್ಯಾಯವಾದ ತೀರ್ಪುಗಳನ್ನು ತೀರಿಸಿ, ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅನ್ಯಾಯವಾದ ನಿಬಂಧನೆಗಳನ್ನು ಕ್ರೂರವಾದ ಕಾನೂನುಗಳನ್ನು ರಚಿಸುವ ನಿಮಗೆ ಧಿಕ್ಕಾರ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅಯ್ಯೋ, ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ ನನ್ನ ಜನರಲ್ಲಿನ ದರಿದ್ರರಿಗೆ ನ್ಯಾಯವನ್ನು ತಪ್ಪಿಸಬೇಕೆಂತಲೂ ವಿಧವೆಯರನ್ನು ಸೂರೆಮಾಡಿ ಅನಾಥರನ್ನು ಕೊಳ್ಳೆಹೊಡೆಯಬೇಕೆಂತಲೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಕಾನೂನುಗಳನ್ನು ಬರೆಯುವವರಿಗೆ ಕಷ್ಟ! ಅಧ್ಯಾಯವನ್ನು ನೋಡಿ |
“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮಲ್ಲಿರುವ ಪ್ರತಿಯೊಂದರಲ್ಲೂ ನಿಮ್ಮ ಪುದೀನ, ಸಬ್ಬಸ್ಸಿಗೆ ಸೊಪ್ಪು, ಜೀರಿಗೆ ಗಿಡಗಳಲ್ಲಿಯೂ ಸಹ ಹತ್ತರಲ್ಲೊಂದು ಪಾಲನ್ನು ದೇವರಿಗೆ ಕೊಡುತ್ತೀರಿ. ಆದರೆ ಧರ್ಮಶಾಸ್ತ್ರದ ಬೋಧನೆಗಳಲ್ಲಿ ನಿಜವಾಗಿಯೂ ಪ್ರಾಮುಖ್ಯವಾದ ಆಜ್ಞೆಗಳನ್ನು ಅಂದರೆ ನ್ಯಾಯವನ್ನೂ ಕರುಣೆಯನ್ನೂ ಯಥಾರ್ಥತೆಯನ್ನೂ ನೀವು ತೊರೆದುಬಿಟ್ಟಿದ್ದೀರಿ. ಈ ಆಜ್ಞೆಗಳಿಗೆ ನೀವು ಮೊದಲು ವಿಧೇಯರಾಗಿ, ಈಗ ಮಾಡುತ್ತಿರುವಂಥ ಕಾರ್ಯಗಳನ್ನು ಮಾಡಬೇಕಿತ್ತು.
ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”
ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.