10 ನಾನು ಆ ದುಷ್ಟರಾಜ್ಯಗಳನ್ನು ಸೋಲಿಸಿಬಿಟ್ಟೆನು, ಈಗ ನಾನು ಅವುಗಳನ್ನು ಆಳುತ್ತಿದ್ದೇನೆ. ಆ ಜನರು ಪೂಜಿಸುವ ವಿಗ್ರಹಗಳು ಜೆರುಸಲೇಮ್ ಮತ್ತು ಸಮಾರ್ಯಗಳಲ್ಲಿರುವ ವಿಗ್ರಹಗಳಿಗಿಂತ ವಿಶೇಷವಾಗಿವೆ.
ಒಬ್ಬನು ಹಕ್ಕಿಯ ಗೂಡಿನಿಂದ ಮೊಟ್ಟೆಗಳನ್ನು ತೆಗೆಯುವಂತೆ ನಾನು ಅವರ ಐಶ್ವರ್ಯವನ್ನು ತೆಗೆದುಕೊಂಡಿರುವೆನು. ಹಕ್ಕಿಯು ತನ್ನ ಗೂಡಿಗೆ ಯಾವ ಭದ್ರತೆಯನ್ನೂ ಮಾಡದೆ ಆಹಾರಕ್ಕಾಗಿ ಹೋಗುವದು, ರೆಕ್ಕೆಯಾಡಿಸಿ, ಬಾಯಿದೆರೆದು, ಕಿಚುಗುಟ್ಟಿ ಮೊಟ್ಟೆಯನ್ನು ಶತ್ರುವಿನಿಂದ ರಕ್ಷಿಸಲು ಅದು ಗೂಡಿನಲ್ಲಿರದು, ಆದ್ದರಿಂದ ಅದರ ಮೊಟ್ಟೆಗಳು ತೆಗೆಯಲ್ಪಡುವವು. ಅದೇ ರೀತಿಯಲ್ಲಿ ನಾನು ಭೂಮಿಯ ಮೇಲಿನ ಜನರನ್ನು ಕೈದಿಗಳನ್ನಾಗಿ ಮಾಡುವಾಗ ನನ್ನನ್ನು ತಡೆಯುವವರು ಇಲ್ಲವೇ ಇಲ್ಲ.”
ಅಶ್ಶೂರದ ಅರಸರು ಆ ಜನಾಂಗಗಳ ದೇವರುಗಳನ್ನು ಸುಟ್ಟುಹಾಕಿದರು. ಆದರೆ ಆ ದೇವರುಗಳು ಸತ್ಯವಾದುವುಗಳಲ್ಲ. ಅವುಗಳು ಮನುಷ್ಯರು ಕಲ್ಲಿನಿಂದ ಮತ್ತು ಮರದಿಂದ ಕೆತ್ತಿದ ವಿಗ್ರಹಗಳಾಗಿದ್ದವು. ಆದ್ದರಿಂದ ಅಶ್ಶೂರದ ಅರಸರು ಅವುಗಳನ್ನು ನಾಶಮಾಡಲು ಸಾಧ್ಯವಾಯಿತು.