Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:11 - ಪರಿಶುದ್ದ ಬೈಬಲ್‌

11 ನಾನು ಸಮಾರ್ಯವನ್ನೂ ಅದರ ವಿಗ್ರಹಗಳನ್ನೂ ನಾಶಮಾಡಿದೆ. ಈಗ ಜೆರುಸಲೇಮನ್ನೂ ಅದರ ಜನರು ಮಾಡಿರುವ ವಿಗ್ರಹಗಳನ್ನೂ ನಾನು ನಾಶಮಾಡುವೆನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸಮಾರ್ಯವನ್ನೂ, ಅದರ ವಿಗ್ರಹಗಳನ್ನೂ ನಾನು ಕೆಡವಿಬಿಟ್ಟ ಹಾಗೆ, ಯೆರೂಸಲೇಮನ್ನೂ ಅದರ ವಿಗ್ರಹಗಳನ್ನೂ ಕೆಡವಲಾರೆನೋ?” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸಮಾರ್ಯವನ್ನೂ ಅದರ ವಿಗ್ರಹಗಳನ್ನೂ ನಾಶಮಾಡಿದ ಪ್ರಕಾರ ಜೆರುಸಲೇಮನ್ನೂ ಅದರ ಮೂರ್ತಿಗಳನ್ನೂ ನಾಶಮಾಡುತ್ತೇನೆ” ಎಂದು ಅಸ್ಸೀರಿಯ ಕೊಚ್ಚಿಕೊಳ್ಳುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸಮಾರ್ಯವನ್ನೂ ಅದರ ವಿಗ್ರಹಗಳನ್ನೂ ನಾನು ಕೆಡವಿಬಿಟ್ಟಹಾಗೂ ಯೆರೂಸಲೇಮನ್ನೂ ಅದರ ಬೊಂಬೆಗಳನ್ನೂ ಕೆಡವಲಾರೆನೋ? ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾನು ಸಮಾರ್ಯ ಮತ್ತು ಅದರ ವಿಗ್ರಹಗಳಿಗೆ ಮಾಡಿದಂತೆಯೇ ಯೆರೂಸಲೇಮಿಗೆ ಮತ್ತು ಅದರ ವಿಗ್ರಹಗಳಿಗೆ ಮಾಡುತ್ತೇನೆಯೇ?’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:11
9 ತಿಳಿವುಗಳ ಹೋಲಿಕೆ  

ನಿಮ್ಮ ದೇಶವು ಕೈಯಿಂದ ಮಾಡಿದ ವಿಗ್ರಹಗಳಿಂದ ತುಂಬಿದ್ದು ಜನರು ಅವುಗಳನ್ನು ಆರಾಧಿಸುತ್ತಾರೆ.


ಬೇರೆ ಜನಾಂಗಗಳ ದೇವರುಗಳು ಅವರ ದೇಶಗಳನ್ನು ಅಶ್ಶೂರದ ರಾಜನಿಗೆ ಸಿಗದಂತೆ ರಕ್ಷಿಸಿದನೇ? ಇಲ್ಲ!


ಯೆಹೋವನೇ, ನೀನೇ ನಮ್ಮ ದೇವರು. ಆದರೆ ಹಿಂದಿನ ಕಾಲದಲ್ಲಿ ನಾವು ಇತರ ಪ್ರಭುಗಳನ್ನು ಅನುಸರಿಸಿದೆವು. ನಾವು ನಮ್ಮ ಒಡೆಯರುಗಳಿಗೆ ಸೇರಿದ್ದೆವು. ಆದರೆ ಈಗ ಜನರು ಒಂದೇ ಹೆಸರನ್ನು, ಅಂದರೆ ನಿನ್ನ ಹೆಸರನ್ನೇ ನೆನಪುಮಾಡಲಿ.


ಶೀಶಕನು ಯೆಹೂದ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಂಡು ಜೆರುಸಲೇಮಿನತ್ತ ನಡೆದನು.


“‘ಹಿಜ್ಕೀಯನು ತನ್ನ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ. ಅವನು, “ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ” ಎಂದು ಹೇಳುತ್ತಾನೆ. ನಾನು ನಿಮಗೆ ಒಂದು ಪ್ರಶ್ನೆ ಕೇಳುತ್ತೇನೆ. ಬೇರೆ ದೇಶದ ದೇವರುಗಳು ಅವರ ದೇಶವನ್ನು ಅಶ್ಶೂರದ ಅರಸನಿಂದ ಕಾಪಾಡಲು ಶಕ್ತರಾದರೋ? ಇಲ್ಲ!


ಅಶ್ಶೂರದ ಅರಸರು ಆ ಜನಾಂಗಗಳ ದೇವರುಗಳನ್ನು ಸುಟ್ಟುಹಾಕಿದರು. ಆದರೆ ಆ ದೇವರುಗಳು ಸತ್ಯವಾದುವುಗಳಲ್ಲ. ಅವುಗಳು ಮನುಷ್ಯರು ಕಲ್ಲಿನಿಂದ ಮತ್ತು ಮರದಿಂದ ಕೆತ್ತಿದ ವಿಗ್ರಹಗಳಾಗಿದ್ದವು. ಆದ್ದರಿಂದ ಅಶ್ಶೂರದ ಅರಸರು ಅವುಗಳನ್ನು ನಾಶಮಾಡಲು ಸಾಧ್ಯವಾಯಿತು.


ನಿನ್ನ ಅಕ್ಕ ಸಮಾರ್ಯಳು. ಆಕೆಯು ನಿನ್ನ ಉತ್ತರ ದಿಕ್ಕಿನಲ್ಲಿ ತನ್ನ ಹೆಣ್ಣು ಮಕ್ಕಳೊಂದಿಗೆ (ಪಟ್ಟಣಗಳು) ವಾಸ ಮಾಡಿದ್ದಳು. ನಿನ್ನ ತಂಗಿಯು ಸೊದೋಮಳು. ಆಕೆ ನಿನ್ನ ದಕ್ಷಿಣದಲ್ಲಿ ತನ್ನ ಹೆಣ್ಣುಮಕ್ಕಳೊಂದಿಗೆ (ಪಟ್ಟಣಗಳು) ವಾಸಿಸಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು