ಯೆಶಾಯ 10:14 - ಪರಿಶುದ್ದ ಬೈಬಲ್14 ಒಬ್ಬನು ಹಕ್ಕಿಯ ಗೂಡಿನಿಂದ ಮೊಟ್ಟೆಗಳನ್ನು ತೆಗೆಯುವಂತೆ ನಾನು ಅವರ ಐಶ್ವರ್ಯವನ್ನು ತೆಗೆದುಕೊಂಡಿರುವೆನು. ಹಕ್ಕಿಯು ತನ್ನ ಗೂಡಿಗೆ ಯಾವ ಭದ್ರತೆಯನ್ನೂ ಮಾಡದೆ ಆಹಾರಕ್ಕಾಗಿ ಹೋಗುವದು, ರೆಕ್ಕೆಯಾಡಿಸಿ, ಬಾಯಿದೆರೆದು, ಕಿಚುಗುಟ್ಟಿ ಮೊಟ್ಟೆಯನ್ನು ಶತ್ರುವಿನಿಂದ ರಕ್ಷಿಸಲು ಅದು ಗೂಡಿನಲ್ಲಿರದು, ಆದ್ದರಿಂದ ಅದರ ಮೊಟ್ಟೆಗಳು ತೆಗೆಯಲ್ಪಡುವವು. ಅದೇ ರೀತಿಯಲ್ಲಿ ನಾನು ಭೂಮಿಯ ಮೇಲಿನ ಜನರನ್ನು ಕೈದಿಗಳನ್ನಾಗಿ ಮಾಡುವಾಗ ನನ್ನನ್ನು ತಡೆಯುವವರು ಇಲ್ಲವೇ ಇಲ್ಲ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಜನಗಳ ಆಸ್ತಿಪಾಸ್ತಿಯು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ. ಪಕ್ಷಿಯು ಇಟ್ಟುಹೋದ ಮೊಟ್ಟೆಗಳನ್ನು ಸಂಗ್ರಹಿಸಿಕೊಳ್ಳುವವನಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ. ರೆಕ್ಕೆಯಾಡಿಸಿ, ಬಾಯಿ ತೆರೆದು ಕಿಚುಗುಟ್ಟುವವರು ಯಾರೂ ಇಲ್ಲ” ಎಂದು ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 (ಬೇಡನು)ಹಕ್ಕಿಯ ಗೂಡನ್ನು ಕಂಡುಹಿಡಿಯುವಂತೆ ಜನಾಂಗಗಳ ಆಸ್ತಿಪಾಸ್ತಿಯನ್ನು ಹಿಡಿದುಕೊಂಡಿದ್ದೇನೆ. ಹಕ್ಕಿ ಬಿಟ್ಟುಹೋದ ಮೊಟ್ಟೆಗಳನ್ನು ಒಟ್ಟುಗೂಡಿಸಿಟ್ಟುಕೊಳ್ಳುವಂತೆ ಸಮಸ್ತ ರಾಷ್ಟ್ರಗಳನ್ನು ಒಟ್ಟುಗೂಡಿಸಿದ್ದೇನೆ. ರೆಕ್ಕೆಯಾಡಿಸಿ ಬೆದರಿಸಲು ಯಾರೂ ಇರಲಿಲ್ಲ. ಕೊಕ್ಕು ತೆರೆದು ಕೀಚುಗುಟ್ಟಲು ಯಾರೂ ಕಾಣಲಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಜನಗಳ ಆಸ್ತಿಪಾಸ್ತಿಯು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ; ಪಕ್ಷಿಯು ಇಟ್ಟುಹೋದ ಮೊಟ್ಟೆಗಳನ್ನು ಸಂಗ್ರಹಿಸಿಕೊಳ್ಳುವವನಂತೆ ಭೂವಿುಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾಡಿಸಿ ಬಾಯಿದೆರೆದು ಕೀಚುಗುಟ್ಟುವ ಯಾರೂ ಇರಲಿಲ್ಲ ಎಂದು ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಜನರ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ; ಹಕ್ಕಿ ಬಿಟ್ಟುಹೋದ ಮೊಟ್ಟೆಗಳನ್ನು ಕೂಡಿಸುವಂತೆ, ಸಮಸ್ತ ರಾಷ್ಟ್ರಗಳನ್ನು ಒಟ್ಟುಗೂಡಿಸಿದ್ದೇನೆ. ರೆಕ್ಕೆಯಾಡಿಸಿ ಬಾಯಿತೆರೆದು ಕೀಚುಗುಟ್ಟಲು ಯಾರೂ ಇರಲಿಲ್ಲ.’ ” ಅಧ್ಯಾಯವನ್ನು ನೋಡಿ |
ಎದೋಮೇ, ನೀನು ಬೇರೆ ಜನಾಂಗಗಳನ್ನು ಹೆದರಿಸಿದೆ. ಆದ್ದರಿಂದ ನೀನು ನಿನ್ನನ್ನೇ ಪ್ರಮುಖನೆಂದು ಭಾವಿಸಿಕೊಂಡೆ. ಆದರೆ ಅದು ನಿನ್ನ ಮೂರ್ಖತನ. ನಿನ್ನ ಅಹಂಭಾವ ನಿನಗೆ ಮೋಸಮಾಡಿದೆ. ಎದೋಮೇ, ನೀನು ಎತ್ತರದ ಬೆಟ್ಟಗಳಲ್ಲಿರುವೆ. ಬೆಟ್ಟಗುಡ್ಡಗಳಿಂದ ರಕ್ಷಿತವಾದ ಸ್ಥಳಗಳಲ್ಲಿ ನೀನು ವಾಸಿಸುವೆ. ಆದರೆ ರಣಹದ್ದು ಗೂಡುಕಟ್ಟುವಷ್ಟು ಎತ್ತರದ ಸ್ಥಳದಲ್ಲಿ ನೀನು ಮನೆಕಟ್ಟಿದರೂ ನಾನು ನಿನ್ನನ್ನು ಹಿಡಿಯುತ್ತೇನೆ. ಅಲ್ಲಿಂದ ನಿನ್ನನ್ನು ಕೆಳಗೆ ತರುತ್ತೇನೆ.” ಇದು ಯೆಹೋವನ ನುಡಿ.