Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:2 - ಪರಿಶುದ್ದ ಬೈಬಲ್‌

2 ಅವರು ಬಡವರಿಗೆ ನ್ಯಾಯವಂತರಾಗಿರುವುದಿಲ್ಲ. ಅವರು ಬಡಜನರ ಹಕ್ಕನ್ನು ತೆಗೆದುಬಿಡುವರು. ಜನರು ವಿಧವೆಯರಿಂದಲೂ ಅನಾಥರಿಂದಲೂ ಹಣ ಕಿತ್ತುಕೊಳ್ಳುವಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ, ದಿಕ್ಕಿಲ್ಲದವರಿಗೆ ನ್ಯಾಯವನ್ನು ತಪ್ಪಿಸಿ, ಅನಾಥರನ್ನು ಕೊಳ್ಳೆಹೊಡೆದು, ವಿಧವೆಯರನ್ನು ಸೂರೆಮಾಡಬೇಕೆಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನೀವು ದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತೀರಿ. ಬಡಬಗ್ಗರಿಂದ ಹಕ್ಕುಬಾಧ್ಯತೆಗಳನ್ನು ಕಸಿದುಕೊಳ್ಳುತ್ತೀರಿ. ವಿಧವೆಯರನ್ನು ಸೂರೆಮಾಡುತ್ತೀರಿ. ಅನಾಥರನ್ನು ಕೊಳ್ಳೆಹೊಡೆಯುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅನ್ಯಾಯವಾದ ತೀರ್ಪುಗಳನ್ನು ತೀರಿಸಿ ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇವರು ವಿಧವೆಯರನ್ನು ಸೂರೆಮಾಡಿ, ದಿಕ್ಕಿಲ್ಲದವರಿಂದ ಸುಲಿದುಕೊಂಡು ದೀನರಿಗೆ ನ್ಯಾಯವನ್ನು ತಪ್ಪಿಸಿ, ನನ್ನ ಜನರಲ್ಲಿ ಬಡವರ ನ್ಯಾಯವನ್ನು ತೆಗೆಯಬೇಕೆಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:2
24 ತಿಳಿವುಗಳ ಹೋಲಿಕೆ  

ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ನಾಯಕರಿಗೂ ಹಿರಿಯರಿಗೂ ಅವರು ಮಾಡಿದ ಕಾರ್ಯಗಳ ವಿರುದ್ಧವಾಗಿ ಆತನು ನ್ಯಾಯತೀರಿಸುವನು. ಯೆಹೋವನು ಹೇಳುವುದೇನೆಂದರೆ: “ನೀವು ದಾಕ್ಷಾತೋಟವನ್ನು (ಯೆಹೂದವನ್ನು) ಸುಟ್ಟುಹಾಕಿದ್ದೀರಿ; ಬಡಜನರಿಂದ ನೀವು ಕಿತ್ತುಕೊಂಡ ವಸ್ತುಗಳನ್ನು ಈಗಲೂ ನಿಮ್ಮ ಮನೆಗಳಲ್ಲಿ ಇಟ್ಟುಕೊಂಡಿದ್ದೀರಿ.


ಜೆರುಸಲೇಮಿನ ಜನರು ತಮ್ಮನ್ನು ಹೆತ್ತವರನ್ನು ಸನ್ಮಾನಿಸುವುದಿಲ್ಲ. ಪರದೇಶಸ್ಥರನ್ನು ಹಿಂಸಿಸುವರು. ಆ ಸ್ಥಳದಲ್ಲಿ ವಿಧೆವೆಯರಿಗೂ ಅನಾಥರಿಗೂ ಮೋಸ ಮಾಡುವರು.


(ಅವರು ನೀತಿವಂತರ ವಿಷಯವಾಗಿ ಸುಳ್ಳಾಡುವರು. ನ್ಯಾಯಾಲಯದಲ್ಲಿ ಜನರನ್ನು ಸಿಕ್ಕಿಸಿ ಹಾಕುವರು. ದೀನರನ್ನು ನಾಶಮಾಡಲು ಅವರು ಪ್ರಯತ್ನಿಸುವರು.)


ಅವರಿಗೆ ಹಣಕೊಟ್ಟರೆ, ಅಪರಾಧಿಯನ್ನೂ ಬಿಟ್ಟುಬಿಡುವರು; ಆದರೆ ಒಳ್ಳೆಯವರಿಗೆ ಸರಿಯಾದ ನ್ಯಾಯತೀರ್ಪು ದೊರಕಲು ಅವರು ಅವಕಾಶ ಕೊಡುವುದಿಲ್ಲ.


ನಿಮ್ಮನ್ನಾಳುವವರು ದಂಗೆಕೋರರಾಗಿದ್ದಾರೆ; ಕಳ್ಳರ ಮಿತ್ರರಾಗಿದ್ದಾರೆ; ಲಂಚಕೋರರಾಗಿದ್ದಾರೆ; ಹಣಕ್ಕಾಗಿ ಕೆಟ್ಟದ್ದನ್ನು ಮಾಡುತ್ತಾರೆ; ಹಣಕ್ಕಾಗಿ ಮೋಸ ಮಾಡುತ್ತಾರೆ. ಅನಾಥರಿಗೆ ಸಹಾಯ ಮಾಡದವರಾಗಿದ್ದಾರೆ; ವಿಧವೆಯರ ಅಗತ್ಯತೆಗಳಿಗೆ ಲಕ್ಷ್ಯ ಕೊಡದವರಾಗಿದ್ದಾರೆ.”


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.


ಆ ಬಡಜನರ ಮುಖವನ್ನು ನೆಲದ ಮೇಲೆ ದೂಡಿ ಅವರ ಮೇಲೆ ನಡೆದರು. ಕಷ್ಟ ಅನುಭವಿಸುವ ಜನರ ಮೊರೆಯನ್ನು ಅವರು ಲಾಲಿಸದೆ ಹೋದರು. ತಂದೆಗಳೂ ಗಂಡುಮಕ್ಕಳೂ ಒಬ್ಬ ತರುಣಿಯೊಂದಿಗೇ ಲೈಂಗಿಕ ಸಂಬಂಧವನ್ನಿಟ್ಟುಕೊಂಡರು. ನನ್ನ ಪವಿತ್ರನಾಮವನ್ನು ಹಾಳುಮಾಡಿದರು.


ಒಬ್ಬನು ಮತ್ತೊಬ್ಬನಿಗೆ ಅನ್ಯಾಯ ಮಾಡುವುದನ್ನು ಆತನು ಇಷ್ಟಪಡುವುದಿಲ್ಲ. ಆದರೆ ಕೆಲವರು ಆ ಕೆಟ್ಟಕಾರ್ಯಗಳನ್ನು ಮಹೋನ್ನತನಾದ ಯೆಹೋವನ ಎದುರಿನಲ್ಲಿಯೇ ಮಾಡುತ್ತಾರೆ.


ಅಪರಿಚಿತರೊಂದಿಗೂ ನೀವು ನ್ಯಾಯಬದ್ಧವಾಗಿ ವರ್ತಿಸಬೇಕು. ವಿಧವೆಯರಿಗೆ ಮತ್ತು ಅನಾಥರಿಗೆ ನೀವು ಒಳ್ಳೆಯದನ್ನು ಮಾಡಬೇಕು. ನಿರ್ದೋಷಿಗಳ ಕೊಲೆ ಮಾಡಬಾರದು; ಅನ್ಯ ದೇವರುಗಳನ್ನು ಸೇವಿಸಬಾರದು. ಏಕೆಂದರೆ ಅವುಗಳು ನಿಮ್ಮ ಜೀವನವನ್ನು ಹಾಳುಮಾಡುತ್ತವೆ.


ಸರ್ವಶಕ್ತನಾದ ಯೆಹೋವನ ದ್ರಾಕ್ಷಿತೋಟವೇ ಇಸ್ರೇಲ್ ದೇಶ. ಯೆಹೋವನು ಪ್ರೀತಿಸುವ ದ್ರಾಕ್ಷಿಬಳ್ಳಿಯೇ ಯೆಹೂದದ ಪ್ರಜೆ. ಯೆಹೋವನು ನ್ಯಾಯವನ್ನು ಅಪೇಕ್ಷಿಸಿದರೂ ಸಿಕ್ಕಿದ್ದು ನರಹತ್ಯವೇ. ಯೆಹೋವನು ಧರ್ಮವನ್ನು ಅಪೇಕ್ಷಿಸಿದರೂ ದೊರಕಿದ್ದು ಗೋಳಾಟವೇ.


ನಮ್ಮ ದೇಶದಲ್ಲಿ ವಾಸವಾಗಿರುವ ವಿಧವೆಯರನ್ನೂ ವಿದೇಶಿಯರನ್ನೂ ಆ ದುಷ್ಟರು ಕೊಲ್ಲುತ್ತಾರೆ. ಅವರು ಅನಾಥ ಮಕ್ಕಳನ್ನೂ ಕೊಲೆ ಮಾಡುವರು.


ನನ್ನ ಜನರನ್ನು ಕುಗ್ಗಿಸಲು ನಿಮಗೆ ಯಾವ ಅಧಿಕಾರವಿದೆ? ಬಡಜನರ ಮುಖವನ್ನು ಧೂಳಿನಲ್ಲಿ ಹಾಕಿ ಉಜ್ಜಲು ನಿಮಗೆ ಯಾವ ಅಧಿಕಾರವಿದೆ?” ಇದು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನ ನುಡಿಗಳು.


ದುಷ್ಟನು ದುಷ್ಟತೆಯ ಬಗ್ಗೆ ಮಾತನಾಡುವನು. ದುಷ್ಕೃತ್ಯಗಳನ್ನು ಮಾಡಲು ತನ್ನ ಹೃದಯದಲ್ಲಿ ಆಲೋಚಿಸುವನು. ದುಷ್ಟನು ಯೆಹೋವನ ಬಗ್ಗೆ ಕೆಟ್ಟವುಗಳನ್ನು ಹೇಳುತ್ತಾನೆ. ಹಸಿದವರಿಗೆ ಆಹಾರವನ್ನು ತಿನ್ನುವದಕ್ಕಾಗಲಿ ಬಾಯಾರಿದವರಿಗೆ ನೀರನ್ನು ಕುಡಿಯುವದಕ್ಕಾಗಲಿ ಅವನು ಬಿಡುವದಿಲ್ಲ.


ಸತ್ಯವು ಹೊರಟುಹೋಯಿತು. ಒಳ್ಳೆಯದನ್ನು ಮಾಡುವವರು ಲೂಟಿಗೆ ಗುರಿಯಾಗಿದ್ದಾರೆ. ಒಳ್ಳೆಯವರು ಇಲ್ಲದೆ ಇರುವುದನ್ನು ಕಂಡು ಯೆಹೋವನು ಬೇಸರಗೊಂಡಿದ್ದಾನೆ.


“ಬಡವರಿಗೆ ವ್ಯಾಜ್ಯದಲ್ಲಿ ನೀವು ಅನ್ಯಾಯವಾದ ತೀರ್ಪನ್ನು ಕೊಡಕೂಡದು.


“ಬಡಜನರಿಗೆ ಸಹಾಯಮಾಡಲು ನಾನೆಂದೂ ನಿರಾಕರಿಸಲಿಲ್ಲ; ವಿಧವೆಯರಿಗೆ ಬೇಕಾದದ್ದನ್ನೆಲ್ಲ ನಾನು ಒದಗಿಸಿಕೊಟ್ಟೆನು.


ಅಸಹಾಯಕರಾದ ಬಡವರಿಂದ ಕದ್ದುಕೊಳ್ಳಬೇಡ; ನ್ಯಾಯಾಲಯದಲ್ಲಿ ಅವರಿಗೆ ಅನ್ಯಾಯಮಾಡಬೇಡ.


ಖಡ್ಗಗಳಂತಿರುವ ಹಲ್ಲುಗಳನ್ನು ಹೊಂದಿರುವ ಜನರಿದ್ದಾರೆ. ಅವರ ಕೋರೆಗಳು ಕತ್ತಿಗಳಂತಿವೆ. ಅವರು ಬಡಜನರಲ್ಲಿ ಇರುವುದನ್ನೆಲ್ಲಾ ತಮ್ಮಿಂದಾದಷ್ಟು ದೋಚಿಕೊಳ್ಳಲು ತಮ್ಮ ಸಮಯವನ್ನು ಉಪಯೋಗಿಸುವರು.


ಒಳ್ಳೆಯದನ್ನೇ ಮಾಡಲು ಅಭ್ಯಾಸಮಾಡಿಕೊಳ್ಳಿರಿ. ಬೇರೆಯವರೊಂದಿಗೆ ನ್ಯಾಯವಂತರಾಗಿರಿ; ಕೆಡುಕರಿಗೆ ದಂಡನೆ ವಿಧಿಸಿರಿ; ಅನಾಥರಿಗೆ ಸಹಾಯಮಾಡಿರಿ; ವಿಧವೆಯರಿಗೂ ಸಹಾಯಮಾಡಿರಿ.”


ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ಇಸ್ರೇಲನ್ನು ನಾನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ಸ್ವಲ್ಪ ಬೆಳ್ಳಿಗಾಗಿ ಒಳ್ಳೆಯವರನ್ನೂ ಮತ್ತು ನಿರಪರಾಧಿಗಳನ್ನೂ ಮಾರಿದರು; ಒಂದು ಜೊತೆ ಕೆರಗಳ ಕ್ರಯಕ್ಕೆ ಬಡ ಜನರನ್ನು ಮಾರಿದರು.


ಆಗ ನೀವು ಸಿಂಹದ ಬಾಯಿಂದ ತಪ್ಪಿಸಿಕೊಂಡು ಕರಡಿಯ ಬಾಯಿಗೆ ಬೀಳುವ ಮನುಷ್ಯನಂತಿರುವಿರಿ. ಆಗ ನೀವು ನಿಮ್ಮ ಮನೆಯ ಆಶ್ರಯಕ್ಕೆ ಓಡಿಹೋಗಿ ಗೋಡೆಗೆ ಒರಗಿ ನಿಂತಾಗ ಒಂದು ಹಾವಿನಿಂದ ಕಚ್ಚಿಸಿಕೊಂಡವರಂತೆ ಇರುವಿರಿ.


ಆಗ ನಾನು ಹೇಳಿದ್ದೇನೆಂದರೆ, “ಯಾಕೋಬಿನ ನಾಯಕರೇ, ಇಸ್ರೇಲಿನ ಅಧಿಪತಿಗಳೇ, ನನ್ನ ಮಾತನ್ನು ಕೇಳಿರಿ. ನ್ಯಾಯ ಏನು ಎಂದು ನಿಮಗೆ ತಿಳಿದಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು