ಯೆಶಾಯ 10:23 - ಪರಿಶುದ್ದ ಬೈಬಲ್23 ಸರ್ವಶಕ್ತನೂ ಒಡೆಯನೂ ಆದ ಯೆಹೋವನು ಖಂಡಿತವಾಗಿಯೂ ಈ ದೇಶವನ್ನು ನಾಶಮಾಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಏಕೆಂದರೆ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಭೂಮಂಡಲದಲ್ಲೆಲ್ಲಾ ನಿಶ್ಚಯಿಸಲ್ಪಟ್ಟ ನಾಶನವನ್ನು ಉಂಟುಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಹೌದು, ಪ್ರಭುವಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿ, ತಮ್ಮ ಆಜ್ಞೆಯ ಪ್ರಕಾರ ನಾಡಿನಲ್ಲೆಲ್ಲಾ ಪೂರ್ಣ ವಿನಾಶವನ್ನು ಬರಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಲಯವನ್ನು ಉಂಟುಮಾಡುವನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಏಕೆಂದರೆ ಸೇನಾಧೀಶ್ವರ ಯೆಹೋವ ದೇವರೆಂಬ ಕರ್ತ ಆಗಿರುವವರು, ಎಲ್ಲಾ ದೇಶದ ಮಧ್ಯದಲ್ಲಿ ತಿಳಿಸಿದ ವಿನಾಶವನ್ನು ಉಂಟುಮಾಡುವರು. ಅಧ್ಯಾಯವನ್ನು ನೋಡಿ |
“ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.