“ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.