Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:26 - ಪರಿಶುದ್ದ ಬೈಬಲ್‌

26 ಆ ಬಳಿಕ ಸರ್ವಶಕ್ತನಾದ ಯೆಹೋವನು ಕೊರಡೆಯಿಂದ ಅಶ್ಶೂರವನ್ನು ಹೊಡೆಯುವನು. ಹಿಂದಿನ ಕಾಲದಲ್ಲಿ ಓರೇಬ್ ಬಂಡೆಯ ಮೇಲೆ ಮಿದ್ಯಾನ್ಯರನ್ನು ಯೆಹೋವನು ಹೇಗೆ ಸೋಲಿಸಿದನೋ ಹಾಗೆಯೇ ಅಶ್ಶೂರವನ್ನು ಸೋಲಿಸುವನು. ಹಿಂದಿನ ಕಾಲದಲ್ಲಿ ಯೆಹೋವನು ಈಜಿಪ್ಟನ್ನು ಶಿಕ್ಷಿಸಿದನು. ಆತನು ಕೋಲನ್ನೆತ್ತಿ ಸಮುದ್ರ ಮಾರ್ಗವಾಗಿ ತನ್ನ ಜನರನ್ನು ಈಜಿಪ್ಟಿನಿಂದ ಹೊರನಡಿಸಿದನು. ಅದೇ ರೀತಿಯಲ್ಲಿ ಅಶ್ಶೂರದಿಂದ ಯೆಹೋವನು ತನ್ನ ಜನರನ್ನು ರಕ್ಷಿಸಿ ಬಿಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಸೇನಾಧೀಶ್ವರನಾದ ಯೆಹೋವನು ಓರೇಬ ಬಂಡೆಯ ಹತ್ತಿರ ಮಿದ್ಯಾನ್ಯರನ್ನು ಹತಮಾಡಿದಂತೆ, ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತರ ಮೇಲೆ ಎತ್ತಿದಂತೆ ಎತ್ತುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸೇನಾಧೀಶ್ವರ ಸರ್ವೇಶ್ವರಸ್ವಾಮಿಯಾದ ನಾನು, ಒಮ್ಮೆ ಓರೇಬನ ಬಂಡೆಯ ಬಳಿ ಮಿದ್ಯಾನರಿಗೆ ಮಾಡಿದಂತೆ, ಅಸ್ಸೀರಿಯದವರನ್ನು ಚಾಟಿಯಿಂದ ಥಳಿಸುವೆನು. ಕೆಂಪುಸಮುದ್ರದಲ್ಲಿ ಈಜಿಪ್ಟರನ್ನು ದಂಡಿಸಿದಂತೆ ಅಸ್ಸೀರಿಯದವರನ್ನು ದಂಡಿಸಲು ದೊಣ್ಣೆಯನ್ನೆತ್ತುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಸೇನಾಧೀಶ್ವರನಾದ ಯೆಹೋವನು ಓರೇಬನ ಬಂಡೆಯ ಹತ್ತಿರ ವಿುದ್ಯಾನ್ಯರನ್ನು ಹತಮಾಡಿದಂತೆ ಅವರ ಮೇಲೆಯೂ ಕೊರಡೆಯನ್ನು ಬೀಸುವನು; ಆತನು ದಂಡವನ್ನು ಸಮುದ್ರದ ಮೇಲೆ ಚಾಚಿ ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಸೇನಾಧೀಶ್ವರ ಯೆಹೋವ ದೇವರು ಓರೇಬ್ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ, ಅವರು ಕೋಲನ್ನು ಸಮುದ್ರದ ಮೇಲೆ ಚಾಚಿ, ಈಜಿಪ್ಟಿನವರ ಮೇಲೆ ಎತ್ತಿದಂತೆ ಎತ್ತುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:26
21 ತಿಳಿವುಗಳ ಹೋಲಿಕೆ  

ಯಾಕೆಂದರೆ ಅವರ ಮೇಲಿದ್ದ ಭಾರವನ್ನು ನೀನು ತೆಗೆದುಬಿಡುವೆ. ಅವರ ಬೆನ್ನಿನ ಮೇಲಿದ್ದ ಭಾರವಾದ ನೊಗವನ್ನು ನೀನು ತೆಗೆದುಹಾಕುವೆ; ವೈರಿಗಳು ನಿನ್ನ ಜನರನ್ನು ಶಿಕ್ಷಿಸಲು ಉಪಯೋಗಿಸುವ ಬೆತ್ತವನ್ನು ತೆಗೆದುಬಿಡುವೆ. ಆ ಸಮಯವು ನೀನು ಮಿದ್ಯಾನರನ್ನು ಸೋಲಿಸಿದ ಸಮಯದಂತಿರುವದು.


ಎಫ್ರಾಯೀಮ್ಯರು ಮಿದ್ಯಾನ್ಯರ ಇಬ್ಬರು ನಾಯಕರನ್ನು ಹಿಡಿದುಕೊಂಡರು. ಆ ಇಬ್ಬರು ನಾಯಕರುಗಳ ಹೆಸರುಗಳು ಓರೇಬ್ ಮತ್ತು ಜೇಬ್. ಎಫ್ರಾಯೀಮ್ಯರು ಓರೇಬನನ್ನು, ಓರೇಬ್ ಬಂಡೆಯ ಮೇಲೆಯೂ ಜೇಬನನ್ನು, ಜೇಬ್ ದ್ರಾಕ್ಷಿಯ ಆಲೆಯಲ್ಲಿಯೂ ಕೊಂದುಹಾಕಿದರು. ಎಫ್ರಾಯೀಮ್ಯರು ಮಿದ್ಯಾನ್ಯರನ್ನು ಬೆನ್ನಟ್ಟುತ್ತಲೇ ಹೋದರು. ಅವರು ಓರೇಬ್ ಮತ್ತು ಜೇಬನ ತಲೆಗಳನ್ನು ಕತ್ತರಿಸಿ ಅವುಗಳನ್ನು ತೆಗೆದುಕೊಂಡು ಜೋರ್ಡನ್ ನದಿಯ ಹಾಯಗಡದಲ್ಲಿದ್ದ ಗಿದ್ಯೋನನ ಬಳಿಗೆ ತೆಗೆದುಕೊಂಡು ಬಂದರು.


ಆ ರಾತ್ರಿ ಯೆಹೋವನ ದೂತನು ಹೊರಕ್ಕೆ ಹೋಗಿ, ಅಶ್ಶೂರದ ಶಿಬಿರದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಜನರನ್ನು ಕೊಂದುಹಾಕಿದನು. ಜನರು ಬೆಳಗಿನ ಜಾವದಲ್ಲಿ ಮೇಲಕ್ಕೆದ್ದಾಗ ಸತ್ತ ದೇಹಗಳನ್ನು ನೋಡಿದರು.


ನಿನ್ನ ಕೈಯಲ್ಲಿರುವ ಊರುಗೋಲನ್ನು ಕೆಂಪುಸಮುದ್ರದ ಮೇಲೆ ಚಾಚು. ಆಗ ಸಮುದ್ರವು ಇಬ್ಭಾಗವಾಗುವುದು. ಜನರು ಒಣನೆಲದ ಮೇಲೆ ಸಮುದ್ರವನ್ನು ದಾಟಬಹುದು.


ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹರಿತವಾದ ಕತ್ತಿಯೊಂದು ಹೊರಗೆ ಬರುತ್ತಿತ್ತು. ಆತನು ಜನಾಂಗಗಳನ್ನು ಸೋಲಿಸಲು ಈ ಕತ್ತಿಯನ್ನು ಬಳಸುತ್ತಾನೆ. ಆತನು ಕಬ್ಬಿಣದ ಕೋಲಿನಿಂದ ಜನಾಂಗಗಳನ್ನು ಆಳುತ್ತಾನೆ. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಿಯನ್ನು ಕಿವುಚಿ ಹಾಕುತ್ತಾನೆ.


ಲೋಕದ ಜನರು ಕೋಪಗೊಂಡಿದ್ದರು. ಆದರೆ ಇದು ನಿನ್ನ ಕೋಪದ ಸಮಯ. ಸತ್ತವರಿಗೆ ತೀರ್ಪು ನೀಡುವ ಸಮಯವಿದು. ನಿನ್ನ ಸೇವಕರಾದ ಪ್ರವಾದಿಗಳಿಗೂ ನಿನ್ನ ಪರಿಶುದ್ಧ ಜನರಿಗೂ ನಿನ್ನನ್ನು ಗೌರವಿಸುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲ ನೀಡುವ ಸಮಯವಿದು. ಲೋಕನಾಶಕರನ್ನು ನಾಶಪಡಿಸುವ ಸಮಯವಿದು.”


ಅಳಿದುಳಿದ ದೇವಜನರು ಅಶ್ಶೂರ ದೇಶವನ್ನು ಬಿಡಲು ಒಂದು ಮಾರ್ಗವಿರುವದು. ಅದು ದೇವರು ತನ್ನ ಜನರನ್ನು ಈಜಿಪ್ಟಿನಿಂದ ಬಿಡಿಸಿದ ಕಾಲದಂತಿರುವುದು.


ನನ್ನ ಒಡೆಯನೂ ಸರ್ವಶಕ್ತನೂ ಆದ ಯೆಹೋವನು ಹೇಳುವುದೇನೆಂದರೆ: “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಅಶ್ಶೂರಕ್ಕೆ ನೀವು ಭಯಪಡಬೇಡಿ. ಹಿಂದಿನ ಕಾಲದಲ್ಲಿ ಈಜಿಪ್ಟ್ ನಿಮ್ಮನ್ನು ಬಾಧಿಸಿದಂತೆ ಇವನೂ ನಿಮ್ಮನ್ನು ಬಾಧಿಸುವನು. ಅವನ ಬಾಧೆಯು ನಿಮ್ಮ ಬೆನ್ನಿನ ಮೇಲೆ ಬೆತ್ತದಿಂದ ಹೊಡೆದಂತೆ ಇರುವದು.


ದೇವರೇ, ಶತ್ರುಗಳ ನಾಯಕರುಗಳನ್ನು ಸೋಲಿಸು. ನೀನು ಓರೇಬ್ ಮತ್ತು ಜೇಬ್ ಪ್ರಾಂತ್ಯಗಳಿಗೆ ಮಾಡಿದಂತೆಯೇ ಅವರಿಗೆ ಮಾಡು. ನೀನು ಜೇಬಹ ಮತ್ತು ಚಲ್ಮುನ್ನ ಪ್ರಾಂತ್ಯಗಳಿಗೆ ಮಾಡಿದಂತೆಯೇ ಅವರಿಗೆ ಮಾಡು.


ಎಚ್ಚರಗೊಳ್ಳು! ಎದ್ದೇಳು! ನನ್ನ ದೇವರೇ, ಯೆಹೋವನೇ, ನನಗಾಗಿ ಹೋರಾಡು; ನನಗೆ ನ್ಯಾಯವನ್ನು ದೊರಕಿಸು.


ಯೆಹೋವನ ಸ್ವರವನ್ನು ಕೇಳುವಾಗ ಅಶ್ಶೂರವು ನಡುಗುವದು. ಆತನು ಕೋಲಿನಿಂದ ಅಶ್ಶೂರವನ್ನು ಹೊಡೆಯುವನು.


ದೇವರೇ, ಆ ದೇಶವನ್ನು ನೀನು ಅಭಿವೃದ್ಧಿಪಡಿಸುವೆ. ನೀನು ಆ ಜನರನ್ನು ಸಂತೋಷಪಡಿಸುವೆ. ಅವರು ತಮ್ಮ ಸಂತಸವನ್ನು ವ್ಯಕ್ತಪಡಿಸುವರು. ಅದು ಸುಗ್ಗಿಕಾಲದಲ್ಲಿರುವ ಸಂತಸದಂತೆಯೂ ಯುದ್ಧದಲ್ಲಿ ಗಳಿಸಿದ ಕೊಳ್ಳೆಯ ಪಾಲು ದೊರೆತಾಗ ಉಂಟಾಗುವ ಸಂತಸದಂತೆಯೂ ಇರುವುದು.


ಯೆಹೋವನು ತನ್ನ ಮಹಾಸ್ವರವನ್ನು ಜನರು ಕೇಳುವಂತೆ ಮಾಡುವನು. ತನ್ನ ಸಾಮರ್ಥ್ಯದ ಬಾಹುವು ಕೋಪದಿಂದ ನಡುಗುವದನ್ನು ಜನರು ನೋಡುವಂತೆ ಮಾಡುವನು. ಆ ಬಾಹುವು ಎಲ್ಲವನ್ನು ಸುಡುವ ದೊಡ್ಡ ಅಗ್ನಿಯಂತಿರುವದು. ಯೆಹೋವನ ಶಕ್ತಿಯು ಆಲಿಕಲ್ಲಿನಿಂದಲೂ ಮಳೆಯಿಂದಲೂ ಕೂಡಿರುವ ಬಿರುಗಾಳಿಯಂತಿರುವುದು.


ಅಶ್ಶೂರವನ್ನು ಆತನು ಹೊಡೆಯುವಾಗ ಹಾರ್ಪ್‌ವಾದ್ಯಗಳನ್ನು ಮತ್ತು ದಮ್ಮಡಿಗಳನ್ನು ಬಾರಿಸಿದಂತಾಗುವದು. ಯೆಹೋವನು ಅಶ್ಶೂರವನ್ನು ತನ್ನ ಮಹಾಶಕ್ತಿಯಿಂದ ಸೋಲಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು