Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:28 - ಪರಿಶುದ್ದ ಬೈಬಲ್‌

28 ಸೈನಿಕರು ಅಯ್ಯಾಥಿನ ಮೇಲೆ ಬಂದಿದ್ದಾರೆ; ಮಿಗ್ರೋನನ್ನು ಹಾದುಹೋಗಿದ್ದಾರೆ. ಮಿಕ್ಮಾಷಿನಲ್ಲಿ ತಮ್ಮ ಉಪಕರಣಗಳನ್ನಿಟ್ಟಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಶತ್ರುಗಳು ಅಯ್ಯಾಥಿನ ಮೇಲೆ ದಂಡೆತ್ತಿ ಬಂದಿದ್ದಾರೆ, ಮಿಗ್ರೋನನ್ನು ಹಾದುಹೋಗಿದ್ದಾರೆ; ಮಿಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಶತ್ರುಸೇನೆ ಅಯ್ಯಾಥಿನ ಮೇಲೆ ಬಂದು ಇಳಿದಿದೆ. ಮಿಗ್ರೋನನ್ನು ಹಾದುಹೋಗಿದೆ; ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಗಳನ್ನು ಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇಗೋ, ಬಂದರು, ಅಯ್ಯಾಥಿನ ಮೇಲೆ ಬಂದಿದ್ದಾರೆ, ವಿುಗ್ರೋನನ್ನು ಹಾದುಹೋಗಿದ್ದಾರೆ, ವಿುಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟುಬಿಟ್ಟಿದ್ದಾರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವರು ಅಯ್ಯಾಥಿಗೆ ಬಂದರು. ಮಿಗ್ರೋನನ್ನು ಹಾದು ಹೋಗಿ, ಮಿಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:28
12 ತಿಳಿವುಗಳ ಹೋಲಿಕೆ  

ಸೌಲನು ಮಿಗ್ರೋನಿನ ಬೆಟ್ಟದ ತುದಿಯಲ್ಲಿರುವ ಒಂದು ದಾಳಿಂಬೆ ಮರದ ಅಡಿಯಲ್ಲಿ ಕುಳಿತಿದ್ದನು. ಅದು ಆ ಸ್ಥಳದ ಕಣಕ್ಕೆ ಸಮೀಪವಾಗಿತ್ತು. ಸೌಲನ ಜೊತೆಯಲ್ಲಿ ಆರುನೂರು ಜನರಿದ್ದರು.


ಅವನು ಮೂರು ಸಾವಿರ ಇಸ್ರೇಲ್ ಗಂಡಸರನ್ನು ಆರಿಸಿಕೊಂಡನು. ಅವರಲ್ಲಿ ಎರಡು ಸಾವಿರ ಗಂಡಸರು ಗುಡ್ಡಗಾಡು ಪ್ರದೇಶವಾದ ಬೇತೇಲಿನಲ್ಲಿಯೂ ಮಿಕ್ಮಾಷಿನಲ್ಲಿಯೂ ಅವನೊಂದಿಗೆ ಇದ್ದರು. ಉಳಿದ ಒಂದು ಸಾವಿರ ಗಂಡಸರು ಬೆನ್ಯಾಮೀನನ ಗಿಬೆಯದಲ್ಲಿ ಯೋನಾತಾನನೊಂದಿಗೆ ಇದ್ದರು. ಸೌಲನು ಸೈನ್ಯದಲ್ಲಿದ್ದ ಇತರರನ್ನು ಅವರವರ ಮನೆಗಳಿಗೆ ಮರಳಿ ಕಳುಹಿಸಿದನು.


ಫಿಲಿಷ್ಟಿಯರು ಇಸ್ರೇಲರೊಡನೆ ಹೋರಾಡಲು ಒಟ್ಟುಗೂಡಿದರು. ಫಿಲಿಷ್ಟಿಯರಲ್ಲಿ ಮೂರು ಸಾವಿರ ರಥಗಳಿದ್ದವು; ಆರು ಸಾವಿರ ಅಶ್ವಸೈನಿಕರಿದ್ದರು. ಫಿಲಿಷ್ಟಿಯರಲ್ಲಿ ನದಿದಂಡೆಯ ಮರಳಿನ ಕಣಗಳಷ್ಟು ಯೋಧರಿದ್ದರು. ಫಿಲಿಷ್ಟಿಯರು ಬೇತಾವೆನಿನ ಪೂರ್ವ ದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡರು.


ಗೆಬದ ಬೆನ್ಯಾಮೀನ್ ಕುಲದ ಜನರು ಮಿಕ್ಮಾಷಿನಲ್ಲಿಯೂ, ಅಯ್ಯಾ, ಬೇತೇಲ್ ಮತ್ತು ಸುತ್ತಲಿದ್ದ ಸಣ್ಣ ಪಟ್ಟಣಗಳಲ್ಲಿಯೂ ನೆಲೆಸಿದರು.


ದಾವೀದನು ತಾನು ತಂದಿದ್ದವುಗಳನ್ನು ಕಾವಲುಗಾರನ ಬಳಿಯಲ್ಲಿಟ್ಟು ಇಸ್ರೇಲ್ ಸೈನಿಕರಿದ್ದ ಸ್ಥಳಕ್ಕೆ ಓಡಿಹೋಗಿ ತನ್ನ ಸಹೋದರರ ಬಗ್ಗೆ ವಿಚಾರಿಸಿದನು.


ಅಂದು ಇಸ್ರೇಲರು ಫಿಲಿಷ್ಟಿಯರನ್ನು ಸೋಲಿಸಿದರು. ಅವರು ಮಿಕ್ಮಾಷಿನಿಂದ ಅಯ್ಯಾಲೋನಿನವರೆಗೂ ದಾರಿಯುದ್ದಕ್ಕೂ ಹೋರಾಡಿದರು. ಆದಕಾರಣ ಜನರು ಬಹಳವಾಗಿ ಬಳಲಿದ್ದರು ಮತ್ತು ಹಸಿದಿದ್ದರು.


ಒಂದು ಬಂಡೆಗಲ್ಲು ಉತ್ತರದಿಕ್ಕಿನ ಮಿಕ್ಮಾಷಿನ ಕಡೆಗೂ ಇನ್ನೊಂದು ಬಂಡೆಗಲ್ಲು ದಕ್ಷಿಣದಿಕ್ಕಿನ ಗೆಬದ ಕಡೆಗೂ ಇದ್ದವು.


ಆಗ ದಾನ್ಯರ ಆರುನೂರು ಜನರು ಲೇವಿಯ ಯಾಜಕನೊಂದಿಗೆ ಮೀಕನ ಮನೆಯನ್ನು ಬಿಟ್ಟುಹೊರಟರು. ಅವರು ತಮ್ಮ ಹೆಂಡತಿಮಕ್ಕಳನ್ನೂ ತಮ್ಮ ದನಕರುಗಳನ್ನೂ ಎಲ್ಲಾ ವಸ್ತುಗಳನ್ನೂ ಮುಂದೆ ಕಳುಹಿಸಿದರು.


ಜೆರಿಕೊವನ್ನು ಸ್ವಾಧೀನಪಡಿಸಿಕೊಂಡ ಮೇಲೆ ಯೆಹೋಶುವನು ಕೆಲವು ಜನರನ್ನು “ಆಯಿ” ಎಂಬ ಪಟ್ಟಣಕ್ಕೆ ಕಳುಹಿಸಿದನು. “ಆಯಿ” ಬೇತಾವೆನಿನ ಸಮೀಪಕ್ಕೂ ಬೇತೇಲಿನ ಪೂರ್ವಕ್ಕೂ ಇತ್ತು. ಯೆಹೋಶುವನು “‘ಆಯಿ’ಗೆ ಹೋಗಿರಿ ಮತ್ತು ಆ ಪ್ರಾಂತ್ಯದ ದುರ್ಬಲತೆಗಳನ್ನು ಕಂಡುಹಿಡಿಯಿರಿ” ಎಂದು ಹೇಳಿದನು. ಆಗ ಅವರು ಆ ಪ್ರದೇಶದಲ್ಲಿ ಗೂಢಚರ್ಯ ಮಾಡುವುದಕ್ಕೆ ಹೋದರು.


ಫಿಲಿಷ್ಟಿಯರ ಸೈನ್ಯದ ಒಂದು ಗುಂಪು ಮಿಕ್ಮಾಷಿನ ಕಣಿವೆಗೆ ಕಾವಲಾಗಿತ್ತು.


ಆ ನೀರು ಹೊಳೆಯಿಂದಾಚೆ ಬಂದು ಯೆಹೂದದ ಮೇಲೆ ಹರಿಯುವುದು. ಆ ನೀರು ಏರುತ್ತಾಬಂದು ಯೆಹೂದವನ್ನು ಕುತ್ತಿಗೆಯ ತನಕ ಮುಳುಗಿಸುವದು ಮಾತ್ರವಲ್ಲ ಅದನ್ನು ಸಂಪೂರ್ಣವಾಗಿ ಮುಳುಗಿಸಿಬಿಡುವದು. “ಇಮ್ಮಾನುವೇಲನೇ, ಈ ಜಲಪ್ರವಾಹವು ಎಲ್ಲಾ ಕಡೆಗಳಿಗೆ ಹಬ್ಬುತ್ತಾ ನಿಮ್ಮ ದೇಶವನ್ನು ಪೂರ್ತಿಯಾಗಿ ಮುಚ್ಚಿಬಿಡುವದು.”


ಸಮಾರ್ಯದ ಗಾಯವು ವಾಸಿಯಾಗದು. ಆಕೆಯ ರೋಗವು (ಪಾಪ) ಯೆಹೂದಕ್ಕೆ ಹಬ್ಬಿಯದೆ. ಅದು ನನ್ನ ಜನರ ಪಟ್ಟಣದ ಹೆಬ್ಬಾಗಿಲಿನವರೆಗೆ ಹೋಗಿದೆ. ಜೆರುಸಲೇಮಿನ ತನಕ ಪಸರಿಸಿಯದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು