ಯೆಶಾಯ 10:30 - ಪರಿಶುದ್ದ ಬೈಬಲ್30 ಬಾತ್‌ಗಲ್ಲೀಮ್‌ನವರೇ, ಚೀರಾಡಿರಿ! ಲಯೆಷವೇ, ಕಿವಿಗೊಡು. ಅನಾತೋತೇ, ನನಗೆ ಉತ್ತರಕೊಡು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಗಲ್ಲೀಮ್ ಗ್ರಾಮವೇ, ಕೂಗಿ ಅರಚಿಕೋ! ಲಯೆಷವೇ, ಕಿವಿಗೊಡು! ಅನಾತೋತೇ, ಪ್ರತಿಧ್ವನಿ ಕೊಡು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಗಲ್ಲೀಮ್ ಗ್ರಾಮಸ್ಥರೇ, ಕೂಗಿ ಕಿರಿಚಿಕೊಳ್ಳಿ. ಲಯೇಷದ ಜನರೇ, ಕಿವಿಗೊಡಿರಿ. ಅನಾತೋತಿನ ಜನರೇ, ಪ್ರತ್ಯುತ್ತರ ಕೊಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಸೌಲನ ಗಿಬೆಯ ಓಡಿಹೋಯಿತು; ಗಲ್ಲೀಮ್ ಗ್ರಾಮವೇ, ಕೂಗಿ ಕಿರಚಿಕೋ! ಲಯೆಷವೇ, ಕಿವಿಗೊಡು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಗಲ್ಲೀಮ್ ಮಗಳೇ, ನಿನ್ನ ಸ್ವರವೆತ್ತಿ ಕೂಗು; ಬಡ ಅನಾತೋತೇ, ಲಯೆಷಿನವರೆಗೂ ಕೇಳಿಸುವಂತೆ ಕೂಗು. ಅಧ್ಯಾಯವನ್ನು ನೋಡಿ |
ಆಗ ರಾಜನಾದ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನಾನು ನಿನ್ನನ್ನು ಕೊಲ್ಲಲೇಬೇಕು. ಆದರೆ ಅಣತೋತಿನಲ್ಲಿರುವ ನಿನ್ನ ಮನೆಗೆ ಹಿಂತಿರುಗಿ ಹೋಗಲು ನಿನಗೆ ಅವಕಾಶ ಕೊಡುತ್ತೇನೆ. ನಾನು ನಿನ್ನನ್ನು ಕೊಲ್ಲುವುದಿಲ್ಲ ಏಕೆಂದರೆ ನನ್ನ ತಂದೆಯಾದ ದಾವೀದನೊಂದಿಗೆ ನಡೆಯುವಾಗ ಯೆಹೋವನ ಪವಿತ್ರಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ನೀನು ಸಹಾಯ ಮಾಡಿದೆ. ನನ್ನ ತಂದೆಯ ಕಷ್ಟದ ದಿನಗಳಲ್ಲೆಲ್ಲಾ ನೀನೂ ಅವನ ಕಷ್ಟಗಳಲ್ಲಿ ಪಾಲುಗಾರನಾಗಿದ್ದದ್ದು ನನಗೆ ತಿಳಿದಿದೆ” ಎಂದು ಹೇಳಿದನು.
ಆ ಐದು ಜನರು ಹೊರಟರು. ಅವರು ಲಯಿಷ್ ನಗರಕ್ಕೆ ಬಂದರು. ಅಲ್ಲಿಯ ಜನರು ಸುರಕ್ಷಿತವಾಗಿರುವುದನ್ನು ಅವರು ನೋಡಿದರು. ಚೀದೋನ್ಯರು ಅವರನ್ನು ಆಳುತ್ತಿದ್ದರು. ಎಲ್ಲವೂ ಶಾಂತವಾಗಿತ್ತು; ಸಮಾಧಾನಕರವಾಗಿತ್ತು; ಸುಖಕರವಾಗಿತ್ತು. ಸಮೀಪದಲ್ಲಿ ಅವರನ್ನು ಪೀಡಿಸುವ ಶತ್ರುಗಳು ಇರಲಿಲ್ಲ. ಅವರು ಚೀದೋನ್ ನಗರದಿಂದ ಬಹಳ ದೂರ ಇದ್ದರು. ಅವರು ಆರಾಮಿನ ಜನರೊಡನೆ ಯಾವ ಒಪ್ಪಂದವನ್ನೂ ಇಟ್ಟುಕೊಂಡಿರಲಿಲ್ಲ.