Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:4 - ಪರಿಶುದ್ದ ಬೈಬಲ್‌

4 ನೀವು ಕೈದಿಗಳಂತೆ ತಲೆತಗ್ಗಿಸುವಿರಿ, ಸತ್ತಹೆಣಗಳಂತೆ ನೆಲದ ಮೇಲೆ ಬೀಳುವಿರಿ. ಆದರೆ ಅದರಿಂದ ನಿಮಗೆ ಪ್ರಯೋಜನವಾಗದು. ದೇವರು ನಿಮ್ಮ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ನಿಮ್ಮನ್ನು ಇನ್ನೂ ಶಿಕ್ಷಿಸಲು ಸಿದ್ಧನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಖೈದಿಗಳೊಂದಿಗೆ ಕಾರಾಗೃಹವನ್ನು ಸೇರುವಿರಿ; ಇಲ್ಲವೆ, ಇತರರ ಸಮೇತ ಹತರಾಗುವಿರಿ. ಇದೇ ನಿಮ್ಮ ಗತಿ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕೈದಿಗಳ [ಕಾಲ] ಕೆಳಗೆ ಮುದುರಿಕೊಂಡು ಹತರಾದವರ ಕೆಳಗೆ ಬಿದ್ದಿರುವದೇ ಇವರ ಗತಿ! ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ, ಇಷ್ಟೆಲ್ಲಾ ಆದರೂ ಅವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:4
19 ತಿಳಿವುಗಳ ಹೋಲಿಕೆ  

ಆದ್ದರಿಂದ ಯೆಹೋವನು ತನ್ನ ಜನರ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ಯೆಹೋವನು ತನ್ನ ಕೈಗಳನ್ನೆತ್ತಿ ಅವರನ್ನು ಶಿಕ್ಷಿಸುವನು. ಆಗ ಪರ್ವತಗಳೂ ಹೆದರಿಕೊಳ್ಳುವವು; ಹೆಣಗಳು ಕಸದಂತೆ ರಸ್ತೆಗಳಲ್ಲಿ ಬಿದ್ದುಕೊಂಡಿರುವವು. ಆದರೆ ದೇವರು ಅವರ ಮೇಲೆ ಕೋಪಿಸಿಕೊಂಡೇ ಇರುವನು. ಜನರನ್ನು ಶಿಕ್ಷಿಸಲು ಆತನ ಕೈಗಳು ಮೇಲೆತ್ತಲ್ಪಟ್ಟಿರುವವು.


ಜೆರುಸಲೇಮಿನ ಜನರೇ, ನಿಮ್ಮ ಮೇಲೆ ಧಾಳಿ ಮಾಡುವ ಬಾಬಿಲೋನಿನ ಎಲ್ಲಾ ಸೈನಿಕರನ್ನು ನೀವು ಸೋಲಿಸಿದರೂ ಅವರ ಗುಡಾರದಲ್ಲಿ ಕೆಲವು ಜನ ಗಾಯಗೊಂಡವರು ಉಳಿದಿರುತ್ತಾರೆ. ಆ ಗಾಯಾಳುಗಳೇ ತಮ್ಮ ಗುಡಾರದಿಂದ ಹೊರಬಂದು ಜೆರುಸಲೇಮನ್ನು ಸುಟ್ಟುಹಾಕುವರು.’”


ಯೆಹೋವನು ಪೂರ್ವದಿಂದ ಅರಾಮ್ಯರನ್ನೂ ಪಶ್ಚಿಮದಿಂದ ಫಿಲಿಷ್ಟಿಯರನ್ನೂ ಕರೆತರುವನು. ಆ ಶತ್ರುಗಳು ಇಸ್ರೇಲರನ್ನು ಅವರ ಸೈನ್ಯದೊಂದಿಗೆ ಸೋಲಿಸಿಬಿಡುವರು. ಆದರೆ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡಿರುವುದರಿಂದ ಅವರನ್ನು ಶಿಕ್ಷಿಸಲು ಇನ್ನೂ ಸಿದ್ಧನಾಗಿರುವನು.


ಒಬ್ಬನು ಸಾವಿರ ಮಂದಿಯನ್ನು ಓಡಿಸಬಲ್ಲನೇ? ಇಬ್ಬರು ಹತ್ತು ಸಾವಿರ ಮಂದಿಯನ್ನು ಓಡಿಸುವರೇ? ಯೆಹೋವನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುವಾಗ ಹಾಗೆಯೇ ಆಗುವುದು, ಅವರ ಬಂಡೆಯಾದ ದೇವರು ಅವರನ್ನು ಗುಲಾಮರನ್ನಾಗಿ ಮಾರುವನು;


ಒಂದುವೇಳೆ ಇಸ್ರೇಲರಿಗೆ ಮಕ್ಕಳು ಹುಟ್ಟಿದರೂ ಪ್ರಯೋಜನವಿಲ್ಲ. ಯಾಕೆಂದರೆ ಆ ಮಕ್ಕಳನ್ನು ಅವರಿಂದ ತೆಗೆದುಬಿಡುವೆನು. ನಾನು ಅವರನ್ನು ತೊರೆದುಬಿಡುವೆನು. ಆಗ ಅವರಿಗೆ ಸಂಕಟದ ಮೇಲೆ ಸಂಕಟವು ಪ್ರಾಪ್ತಿಯಾಗುವದು.”


ಯೆಹೋವನು ಜನರಿಗೆ ನ್ಯಾಯತೀರ್ಪು ಮಾಡುವನು. ಆ ಬಳಿಕ ಯೆಹೋವನು ಜನರನ್ನು ಬೆಂಕಿಯಿಂದಲೂ ಖಡ್ಗದಿಂದಲೂ ನಾಶಮಾಡುವನು. ಯೆಹೋವನು ಅನೇಕಾನೇಕ ಜನರನ್ನು ನಾಶಮಾಡುವನು.


ಅವರ ಹೆಣಗಳು ಹೊರಗೆ ಬಿಸಾಡಲ್ಪಡುವವು. ದುರ್ವಾಸನೆಯು ಹರಡುವದು, ರಕ್ತವು ಪರ್ವತದಿಂದ ಹರಿಯುವುದು.


ಅನೇಕ ಮಂದಿ ಒಟ್ಟು ಸೇರುವರು. ಕೆಲವರು ಗುಂಡಿಯಲ್ಲಿ ಸಿಕ್ಕಿಹಾಕಿಕೊಳ್ಳುವರು. ಕೆಲವರು ಸೆರೆಹಿಡಿಯಲ್ಪಡುವರು. ಆಮೇಲೆ ಸ್ವಲ್ಪ ಕಾಲದ ನಂತರ ಅವರ ನ್ಯಾಯವಿಚಾರಣೆ ನಡಿಯುವದು.


ಹಿಂದಿನ ಕಾಲದಲ್ಲಿ ಈ ನಗರವು ಅತ್ಯಂತ ಜನಸಂದಣಿಯಿಂದ ಕೂಡಿತ್ತು. ಈ ನಗರದಲ್ಲಿ ಗದ್ದಲವೂ ಜನರ ಸಂತಸದ ಧ್ವನಿಯೂ ತುಂಬಿತ್ತು. ಆದರೆ ಈಗ ಎಲ್ಲವೂ ಬದಲಾಯಿತು. ನಿಮ್ಮ ಜನರು ಸತ್ತದ್ದು ಖಡ್ಗದಿಂದಲ್ಲ. ಯುದ್ಧದಲ್ಲಿ ಸಾಯದೆ ಬೇರೆ ರೀತಿಯಲ್ಲಿ ಸತ್ತರು.


ಇದರರ್ಥವೇನೆಂದರೆ ಮನಸ್ಸೆಯು ಎಫ್ರಾಯೀಮನೊಡನೆ ಯುದ್ಧ ಮಾಡುವನು ಮತ್ತು ಎಫ್ರಾಯೀಮನು ಮನಸ್ಸೆಯೊಂದಿಗೆ ಯುದ್ಧಮಾಡುವನು. ಆಮೇಲೆ ಅವರಿಬ್ಬರೂ ಸೇರಿ ಯೆಹೂದದೊಂದಿಗೆ ಯುದ್ಧ ಮಾಡುವರು. ಯೆಹೋವನು ಇಸ್ರೇಲರ ಮೇಲೆ ಇನ್ನೂ ಕೋಪದಿಂದಿದ್ದಾನೆ; ತನ್ನ ಜನರನ್ನು ಇನ್ನೂ ಶಿಕ್ಷಿಸಲು ಸಿದ್ಧನಾಗಿದ್ದಾನೆ.


ಜನರೆಲ್ಲರೂ ದುಷ್ಟರಾಗಿದ್ದಾರೆ. ಆದ್ದರಿಂದ ಯೆಹೋವನು ಯುವಕರಲ್ಲಿ ಸಂತೋಷಿಸುವದಿಲ್ಲ. ಅವರ ವಿಧವೆಯರಿಗೆ ಮತ್ತು ಅನಾಥರಿಗೆ ದೇವರು ದಯೆ ತೋರಿಸುವುದಿಲ್ಲ; ಯಾಕೆಂದರೆ ಎಲ್ಲಾ ಜನರು ದುಷ್ಟರಾಗಿದ್ದಾರೆ. ಅವರು ದೇವರಿಗೆ ವಿರುದ್ಧವಾಗಿ ನಡೆಯುತ್ತಾರೆ. ಅವರು ಸುಳ್ಳಾಡುತ್ತಾರೆ. ಆದ್ದರಿಂದ ದೇವರು ಅವರ ಮೇಲೆ ಕೋಪದಿಂದಲೇ ಇರುವನು; ಅವರನ್ನು ದಂಡಿಸುತ್ತಲೇ ಇರುವನು.


ನಾನು ನಿಮಗೆ ವಿಮುಖನಾಗಿರುವುದರಿಂದ ಆ ವೈರಿಗಳು ನಿಮ್ಮನ್ನು ಸೋಲಿಸುವರು. ಆ ವೈರಿಗಳು ನಿಮ್ಮನ್ನು ದ್ವೇಷಿಸುವರು ಮತ್ತು ನಿಮ್ಮನ್ನು ಆಳುವರು. ಯಾರೂ ನಿಮ್ಮನ್ನು ಬೆನ್ನಟ್ಟದಿದ್ದರೂ ಹೆದರಿಕೊಂಡು ಓಡುವಿರಿ.


ಆದ್ದರಿಂದ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ದೊಡ್ಡ ಧ್ವನಿಯಿಂದ ಗೋಳಾಡಿರಿ. ಏಕೆಂದರೆ ಯೆಹೋವನು ನಮ್ಮ ಮೇಲೆ ತುಂಬ ಕೋಪಗೊಂಡಿದ್ದಾನೆ.


ಹೀಗೆ ಯೆಹೋವನು ಇಸ್ರೇಲಿಗೆ ವಿರುದ್ಧವಾಗಿ ಯುದ್ಧ ಮಾಡುವವರನ್ನು ಕಂಡುಹಿಡಿಯುವನು. ಯೆಹೋವನು ರೆಚೀನನ ವೈರಿಗಳನ್ನು ಅವರಿಗೆ ವಿರುದ್ಧವಾಗಿ ಎಬ್ಬಿಸುವನು.


ಜನರಿಗೆ ಮಾರ್ಗದರ್ಶನ ಮಾಡುವ ನಾಯಕರು ಜನರನ್ನು ತಪ್ಪುದಾರಿಯಲ್ಲಿ ನಡಿಸುತ್ತಿದ್ದಾರೆ. ಅವರನ್ನು ಹಿಂಬಾಲಿಸುವ ಜನರು ನಾಶವಾಗುವರು.


ಜನರು ತಮ್ಮ ಬಲಗಡೆಯಲ್ಲಿರುವದನ್ನು ಕಿತ್ತುಕೊಳ್ಳುವರು. ಆದರೆ ಅದು ಅವರ ಹಸಿವೆಯನ್ನು ನೀಗುವುದಿಲ್ಲ. ಜನರು ಎಡಬದಿಯಲ್ಲಿರುವದನ್ನು ತಿನ್ನುವರು; ಆದರೆ ಅವರ ಹೊಟ್ಟೆತುಂಬುವದಿಲ್ಲ. ಆ ಬಳಿಕ ಪ್ರತಿಯೊಬ್ಬನು ತನ್ನ ಶರೀರವನ್ನೇ ತಿನ್ನಲು ಪ್ರಾರಂಭಿಸುವನು.


‘ನಾವು ಎಲ್ಲಿಗೆ ಹೋಗಬೇಕು’ ಎಂದು ಅವರು ಕೇಳಬಹುದು. ಯೆಹೋವನು ಹೀಗೆ ಹೇಳಿದ್ದಾನೆ ಎಂದು ನೀನು ಅವರಿಗೆ ಹೇಳು. “‘ಕೆಲವು ಜನರು ಮರಣಹೊಂದಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಮರಣಹೊಂದುತ್ತಾರೆ. ಕೆಲವು ಜನರು ಖಡ್ಗಗಳಿಂದ ಕೊಲ್ಲಲ್ಪಡಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಖಡ್ಗಗಳಿಗೆ ಬಲಿಯಾಗುತ್ತಾರೆ. ಕೆಲವು ಜನರು ಹೊಟ್ಟೆಗೆ ಅನ್ನವಿಲ್ಲದೆ ಸಾಯಬೇಕು ಎಂದು ನಾನು ಗೊತ್ತುಮಾಡಿದ್ದೇನೆ. ಅವರು ಹಸಿವಿನಿಂದ ಸಾಯುತ್ತಾರೆ. ಕೆಲವು ಜನರನ್ನು ಶತ್ರುಗಳು ಸೆರೆಹಿಡಿದು ಪರದೇಶಕ್ಕೆ ತೆಗೆದುಕೊಂಡು ಹೋಗಲಿ ಎಂದು ಗೊತ್ತುಮಾಡಿದ್ದೇನೆ. ಅವರು ಪರದೇಶದಲ್ಲಿ ಸೆರೆಯಾಳುಗಳಾಗಿ ಇರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು