ಯೆಶಾಯ 10:7 - ಪರಿಶುದ್ದ ಬೈಬಲ್7 “ಆದರೆ ನಾನು ಅಶ್ಶೂರವನ್ನು ಉಪಯೋಗಿಸುತ್ತೇನೆಂದು ಅದಕ್ಕೆ ತಿಳಿಯದು. ಅಶ್ಶೂರಕ್ಕೆ ತಾನು ನನ್ನ ಕೈಯಲ್ಲಿರುವ ಒಂದು ಸಾಧನವೆಂದು ಗೊತ್ತಿರದು. ಅನೇಕಾನೇಕ ಜನಾಂಗಗಳನ್ನು ನಾಶಮಾಡಲು ಅಶ್ಶೂರವು ಬಯಸುತ್ತದೆ ಮತ್ತು ಅದಕ್ಕಾಗಿ ಯೋಜನೆಗಳನ್ನು ಮಾಡುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವನ ಅಭಿಪ್ರಾಯವೋ, ಹಾಗಲ್ಲ. ಅನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲ ಮಾಡುವೆನೆಂಬುದೇ ಹೊರತು ಈ ಯೋಚನೆಯು ಅವನ ಮನಸ್ಸಿನಲ್ಲಿ ಇಲ್ಲವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆದರೆ ಅಸ್ಸೀರಿಯದ ಆಲೋಚನೆಯೇ ಬೇರೆ. ಅನೇಕಾನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲಮಾಡಬೇಕೆಂಬ ಯೋಜನೆ ಅದರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅದರ ಅಭಿಪ್ರಾಯವೋ ಹಾಗಲ್ಲ; ಅನೇಕಾನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲಮಾಡುವೆನೆಂಬದೇ ಹೊರತು ಈ ಯೋಚನೆಯು ಅದರ ಮನಸ್ಸಿನಲ್ಲಿ ಇಲ್ಲವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅದರ ಅಭಿಪ್ರಾಯವೋ ಹಾಗಲ್ಲ. ಅದರ ಹೃದಯವು ಈ ಪ್ರಕಾರ ಆಲೋಚಿಸುವುದಿಲ್ಲ. ಜನಾಂಗಗಳನ್ನು ಕಡಿದುಬಿಡುವುದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವುದು ಅದರ ಹೃದಯದ ಉದ್ದೇಶವು. ಅಧ್ಯಾಯವನ್ನು ನೋಡಿ |
ಆಗ ತೂರಿನ ಜನರು ಹೀಗೆನ್ನುವರು: “ಬಾಬಿಲೋನಿನವರು ನಮಗೆ ಸಹಾಯಮಾಡುವರು.” ಆದರೆ ಕಸ್ದೀಯರ ದೇಶವನ್ನು ನೋಡಿ. ಬಾಬಿಲೋನ್ ಈಗ ದೇಶವಲ್ಲ. ಬಾಬಿಲೋನನ್ನು ಅಶ್ಶೂರವು ವಶಪಡಿಸಿಕೊಂಡು ಅದರ ಸುತ್ತಲೂ ಕಾವಲು ಬುರುಜುಗಳನ್ನು ಕಟ್ಟಿಸಿದೆ. ಅಲ್ಲಿದ್ದ ಸುಂದರ ಮನೆಗಳಿಂದ ಸೈನಿಕರು ಎಲ್ಲವನ್ನು ದೋಚಿರುತ್ತಾರೆ. ಅಶ್ಶೂರ ಬಾಬಿಲೋನನ್ನು ಕಾಡುಪ್ರಾಣಿಗಳ ವಾಸಸ್ಥಳವನ್ನಾಗಿ ಮಾಡಿದೆ. ಅವರು ಬಾಬಿಲೋನನ್ನು ಪಾಳುಬಿದ್ದ ಅವಶೇಷವನ್ನಾಗಿ ಮಾಡಿದ್ದಾರೆ.